• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಜ್ಯೋತಿಷ್ಯ
  • /ಹಸ್ತ ನಕ್ಷತ್ರದಲ್ಲಿ ಸೂರ್ಯ ಸಂಚಾರ: ಆರು ರಾಶಿಯವರ ಅದೃಷ್ಟವೇ ಬದಲು.. ಮಣ್ಣೂ ಹೊನ್ನಾಗುವ ಪರ್ವಕಾಲ

ಹಸ್ತ ನಕ್ಷತ್ರದಲ್ಲಿ ಸೂರ್ಯ ಸಂಚಾರ: ಆರು ರಾಶಿಯವರ ಅದೃಷ್ಟವೇ ಬದಲು.. ಮಣ್ಣೂ ಹೊನ್ನಾಗುವ ಪರ್ವಕಾಲ

ಸೆಪ್ಟೆಂಬರ್‌ 27, 2026ರಂದು ಸೂರ್ಯ ನಕ್ಷತ್ರ ಪರಿವರ್ತನೆ ಹೊಂದಲಿದ್ದು ಇದರೊಂದಿಗೆ 6 ರಾಶಿಯವರಿಗೆ ಭಾಗ್ಯೋದಯವಾಗಲಿದೆ. ಅವರು ಮಾಡುವ ಕೆಲಸಗಳಲ್ಲಿ ಯಶಸ್ಸು ಸಿಗಲಿದುದ ಸಂಪತ್ತಿನ ಒಡೆಯ ಕುಬೇರನ ಖಜಾನೆಯೇ ಅವರ ಕೈ ಸೇರಲಿದೆ ಎನ್ನಲಾಗುತ್ತಿದೆ.

Written ByYashaswini V
Published: Sep 26, 2026, 05:42 AM IST|Updated: Sep 26, 2026, 05:42 AM IST
joinshare
ಹಸ್ತ ನಕ್ಷತ್ರದಲ್ಲಿ ಸೂರ್ಯ ಸಂಚಾರ: ಆರು ರಾಶಿಯವರ ಅದೃಷ್ಟವೇ ಬದಲು.. ಮಣ್ಣೂ ಹೊನ್ನಾಗುವ ಪರ್ವಕಾಲ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಜ್ಯೋತಿಷ್ಯ ಶಾಸ್ತ್ರದಲ್ಲಿ ನವಗ್ರಹಗಳ ಅಧಿಪತಿ ಎನ್ನಲಾಗುವ ಸೂರ್ಯ ದೇವ ಶೀಘ್ರದಲ್ಲೇ ತನ್ನ ಪಥ ಬದಲಾಯಿಸಲಿದ್ದಾನೆ. ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಇದೇ ಸೆಪ್ಟೆಂಬರ್ 27, 2026 ರವಿವಾರದ ದಿನ ಮಧ್ಯಾಹ್ನ 1:25ರ ಸುಮಾರಿಗೆ ಹಸ್ತ ನಕ್ಷತ್ರವನ್ನು ಪ್ರವೇಶಿಸಲಿರುವ ಸೂರ್ಯ ಅಕ್ಟೋಬರ್ 10, 2026ರ ಬೆಳಗಿನ ಜಾವ 2:24 ರವರೆಗೂ ಅದೇ ನಕ್ಷತ್ರದಲ್ಲಿ ವಿರಾಜಮಾನನಾಗಲಿದ್ದಾನೆ. ಈ ರೀತಿಯಾಗಿ 13 ದಿನಗಳ ಕಾಲ ಹಸ್ತ ನಕ್ಷತ್ರದಲ್ಲಿ ಸಂಚರಿಸಲಿರುವ ಸೂರ್ಯನ ಪ್ರಭಾವ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ಹೀಗೆ ದ್ವಾದಶ ರಾಶಿಗಳ ಮೇಲೂ ಕಂಡು ಬರುತ್ತದೆ. ಆದರೂ, ಈ ಅವಧಿಯನ್ನು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎನ್ನಲಾಗುತ್ತಿದೆ.

ಸೂರ್ಯ ನಕ್ಷತ್ರ ಪರಿವರ್ತನೆಯಿಂದ ʼಆರುʼ ರಾಶಿಯವರಿಗೆ ಭಾಗ್ಯೋದಯ:
ಹಸ್ತ ನಕ್ಷತ್ರದಲ್ಲಿ ಸೂರ್ಯ ಸಂಚಾರದ ಶುಭ ಫಲಗಳು ʼಆರುʼ ರಾಶಿಯ ಜನರ ಮೇಲೆ ಕಂಡು ಬರುತ್ತದೆ. ಈ ಸಮಯದಲ್ಲಿ ಆ ಆರೂ ರಾಶಿಯ ಜನರ ಬದುಕಿನಲ್ಲಿ ಭಾಗ್ಯೋದಯವಾಗಲಿದ್ದು, ಅವರ ದೀರ್ಘ ಕಾಲದ ಕನಸುಗಳು ನನಸಾಗಲಿವೆ. ವೃತ್ತಿ, ವ್ಯವಹಾರದಲ್ಲಿ ಪ್ರಗತಿಯ ಅವಕಾಶಗಳು ತೆರೆದುಕೊಳ್ಳಲಿದ್ದು, ಸಾಕ್ಷಾತ್‌ ಸಂಪತ್ತಿನ ಒಡೆಯನಾದ ಕುಬೇರ ದೇವನ ಸಂಪತ್ತೇ ಅವರ ಕೈ ಸೇರಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...

ಮೇಷ ರಾಶಿ:
ಸೂರ್ಯ ನಕ್ಷತ್ರ ಪರಿವರ್ತನೆಯು ಮೇಷ ರಾಶಿಯ ಜನರ ಜೀವನದಲ್ಲಿ ಸಕಾರಾತ್ಮಕತೆಯನ್ನು ಹೆಚ್ಚಿಸಲಿದೆ. ಈ ಅವಧಿಯಲ್ಲಿ ಆದಾಯದ ಮೂಲಗಳು ಹೆಚ್ಚಳವಾಗಲಿದ್ದು, ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಬಯಸಿದ ಸ್ಥಳಕ್ಕೆ ವರ್ಗಾವಣೆ, ದೀರ್ಘ ಸಮಯದಿಂದ ಕಾಯುತ್ತಿದ್ದ ಬಡ್ತಿಯ ಬಗ್ಗೆ ಶುಭ ಸುದ್ದಿಗಳನ್ನು ಕೇಳುವ ನಿರೀಕ್ಷೆ ಇದೆ. ಹೊಸ ವ್ಯವಹಾರಗಳನ್ನು ಆರಂಭಿಸಲು ಯೋಚಿಸುತ್ತಿರುವವರಿಗೆ ಸಹೋದರ ವರ್ಗದಿಂದ ಅಗತ್ಯ ಬೆಂಬಲ ಸಿಗಲಿದೆ. ಆರ್ಥಿಕ ಸ್ಥಿತಿಯೂ ಉತ್ತಮವಾಗಿರಲಿದೆ.

ಸಿಂಹ ರಾಶಿ: 
ಸೂರ್ಯ ನಕ್ಷತ್ರ ಪರಿವರ್ತನೆಯು ಸಿಂಹ ರಾಶಿಯ ಜನರಿಗೆ ಸರ್ಕಾರಿ ಯೋಜನೆಗಳಲ್ಲಿ ಶುಭ ಫಲಿತಾಂಶಗಳನ್ನು ನೀಡಲಿದೆ. ಉದ್ಯೋಗಸ್ಥರಿಗೆ ನಿಮ್ಮ ಕಾರ್ಯಕ್ಷಮತೆ ಸುಧಾರಿಸಲಿದ್ದು ಮೇಲಧಿಕಾರಿಗಳು ನಿಮ್ಮ ಕೆಲಸವನ್ನು ಮೆಚ್ಚುವರು. ಪ್ರಮುಖ ಯೋಜನೆಗಳಲ್ಲಿ ಕೆಲಸ ಮಾಡುವವರಿಗೆ ಸಹೋದ್ಯೋಗಿಗಳ ಬೆಂಬಲ ಸಹಕಾರ ಸಿಗಲಿದೆ. ಆಡಳಿತ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉನ್ನತ ಹುದ್ದೆಯನ್ನು ಅಲಂಕರಿಸುವ ಅವಕಾಶಗಳಿವೆ. ಹಣಕಾಸಿನ ಸೌಕರ್ಯಗಳು ಹೆಚ್ಚಾಗಲಿದ್ದು ಸುಖದ ಸುಪ್ಪತ್ತಿಗೆಯಲ್ಲೇ ಜೀವನ ನಡೆಸುವಿರಿ.

ಕನ್ಯಾ ರಾಶಿ:
ಹಸ್ತ ನಕ್ಷತ್ರದಲ್ಲಿ ಸೂರ್ಯ ಸಂಚಾರವು ಕನ್ಯಾ ರಾಶಿಯ ಜನರಿಗೆ ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಹಣಕಾಸಿನ ಪ್ರಯತ್ನಗಳನ್ನು ಯಶಸ್ವಿಗೊಳಿಸಲಿದೆ. ಈ ಅವಧಿಯಲ್ಲಿ ಉದ್ಯಮಿಗಳಿಗೆ ತಮ್ಮ ದೈನಂದಿನ ಆದಾಯವನ್ನು ಹೆಚ್ಚಿಸಲಿದ್ದು, ಸರ್ಕಾರಿ ಯೋಜನೆಗಳಲ್ಲಿ ಪ್ರಯೋಜನವನ್ನು ಪಡೆಯುವ ಅವಕಾಶಗಳಿವೆ. ವೃತ್ತಿಪರರರಿಗೆ ಕೆಲಸದಲ್ಲಿ ನಿಮ್ಮ ಪ್ರಾಮುಖ್ಯತೆ ಹೆಚ್ಚಾಗಲಿದ್ದು ಹೊಸ ಯೋಜನೆಗಳು ಕೈ ಸೇರಲಿವೆ. ದೀರ್ಘಾವಧಿಯಿಂದ ಕಾಡುತ್ತಿದ್ದ ಕೌಟುಂಬಿಕ ಸಮಸ್ಯೆಗಳಿಂದ ನೀವು ಪರಿಹಾರವನ್ನು ನೀಡುವಿರಿ.

ವೃಶ್ಚಿಕ ರಾಶಿ:
ಸೂರ್ಯ ಹಸ್ತ ನಕ್ಷತ್ರದಲ್ಲಿ ಪದಾರ್ಪಣೆ ಮಾಡುವುದರಿಂದ ವೃಶ್ಚಿಕ ರಾಶಿಯ ಜನರಿಗೆ ಮಾಡುವ ಕೆಲಸಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಪಿತ್ರಾರ್ಜಿತ ಆಸ್ತಿಗಳಿಂದ ಭರ್ಜರಿ ಲಾಭವನ್ನು ನಿರೀಕ್ಷಿಸಬಹುದಾಗಿದೆ. ಹಿರಿಯರ ಆಶೀರ್ವಾದದಿಂದ ಪ್ರಮುಖ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಉದ್ಯೋಗಸ್ಥರಿಗೆ ಬಡ್ತಿಯ ಅವಕಾಶಗಳಿದ್ದು, ಸಮಾಜದಲ್ಲಿ ನಿಮ್ಮ ಕೀರ್ತಿಯೂ ಹೆಚ್ಚಾಗಲಿದೆ. ನೀವು ತುಂಬಾ ಸಮಯದಿಂದ ಪ್ರಯತ್ನಿಸುತ್ತಿದ್ದ ದೊಡ್ಡ ಪ್ರಾಜೆಕ್ಟ್‌ ಕುರಿತಂತೆ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಸಂತಸದ ಸುದ್ದಿ ಕೇಳಬಹುದು. ಹಣಕಾಸಿನ ಪರಿಸ್ಥಿತಿಯು ಉತ್ತಮಗೊಳ್ಳಲಿದ್ದು ಜೀವನದಲ್ಲಿ ಸುಖ ಸೌಕರ್ಯಗಳು ಹೆಚ್ಚಾಗಲಿವೆ.

ಧನು ರಾಶಿ:
ಸೂರ್ಯ ನಕ್ಷತ್ರ ಪರಿವರ್ತನೆಯು ಧನು ರಾಶಿಯ ಜನರಿಗೆ ಹಣಕಾಸಿನ ಸಮಸ್ಯೆಗಳನ್ನು ಬಗೆಹರಿಸಲಿದೆ. ಸರ್ಕಾರಿ ಯೋಜನೆಗಳಲ್ಲಿ ಕೆಲಸ ಮಾಡುವವರಿಗೆ ಆದಾಯದ ಮೂಲಗಳು ಹೆಚ್ಚಾಗಲಿದ್ದು, ಹಠಾತ್‌ ಧನಲಾಭದ ಸಾಧ್ಯತೆ ಇದೆ. ವ್ಯವಹಾರಗಳಲ್ಲಿ ತಂದೆಯ ಸಹಕಾರ ಸಿಗಲಿದ್ದು ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳುವಿರಿ. ಉದ್ಯೋಗದಲ್ಲಿ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಮನ್ನಣೆ ನೀಡುವುದರಿಂದ ಪ್ರಮೋಷನ್‌ ಸಾಧ್ಯತೆ ಇದೆ. ಹಣದ ಸುರಿಮಳೆಯೇ ಸುರಿಯಲಿದ್ದು ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.

ಮೀನ ರಾಶಿ:
ಸೂರ್ಯ ನಕ್ಷತ್ರ ಪರಿವರ್ತನೆಯು ಮೀನ ರಾಶಿಯ ಜನರಿಗೆ ಲಾಭದಾಯಕವಾಗಿದ್ದು, ಪೂರ್ವಿಕರ ಆಸ್ತಿಯಿಂದ ಪ್ರಯೋಜನವಾಗಲಿದೆ. ಕೋರ್ಟ್‌ ಕಚೇರಿಯಲ್ಲಿ ಆಸ್ತಿ ವ್ಯಾಜ್ಯಗಳು ಬಗೆಹರಿಯಲಿದ್ದು, ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ಹಣಕಾಸಿನ ಪರಿಸ್ಥಿತಿ ಮೊದಲಿಗಿಂತ ಸುಧಾರಿಸಲಿದೆ. ಆತ್ಮ ವಿಶ್ವಾಸ ಹೆಚ್ಚಾಗಲಿದ್ದು, ಉದ್ಯೋಗದಲ್ಲಿ ಪ್ರಗತಿಯ ಹೊಸ ಹಾದಿ ತೆರೆದುಕೊಳ್ಳಲಿದ್ದು ರಾಜಯೋಗವನ್ನು ಅನುಭವಿಸುವ ಲಕ್ಷಣಗಳಿವೆ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
 

Add Zee News as a Preferred Source
TAGS:
Rajayoga
Grah Gochar
Astro Tips
Lucky Zodiac Signs