• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಜ್ಯೋತಿಷ್ಯ
  • /ದಿನ ಭವಿಷ್ಯ 05-10-2026: ಸೋಮವಾರದಂದು ಶಿವ ಯೋಗ.. ಈ ರಾಶಿಯವರಿಗೆ ಪರಮೇಶ್ವರನ ಕೃಪೆ

ದಿನ ಭವಿಷ್ಯ 05-10-2026: ಸೋಮವಾರದಂದು ಶಿವ ಯೋಗ.. ಈ ರಾಶಿಯವರಿಗೆ ಪರಮೇಶ್ವರನ ಕೃಪೆ

Today Horoscope 05th October 2026: 05 ಅಕ್ಟೋಬರ್ 2026ರಂದು ಶಿವ ಯೋಗವು ಕೆಲವು ರಾಶಿಯವರಿಗೆ ಸಾಕ್ಷಾತ್‌ ಪರಮೇಶ್ವನ ವಿಶೇಷ ಆಶೀರ್ವಾದ ನೀಡಲಿದ್ದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಇಂದಿನ ರಾಶಿಫಲ ಹೇಗಿದೆ ತಿಳಿಯಿರಿ.

Written ByYashaswini V
Published: Oct 05, 2026, 09:10 AM IST|Updated: Oct 05, 2026, 09:12 AM IST
joinshare
ದಿನ ಭವಿಷ್ಯ 05-10-2026: ಸೋಮವಾರದಂದು ಶಿವ ಯೋಗ.. ಈ ರಾಶಿಯವರಿಗೆ ಪರಮೇಶ್ವರನ ಕೃಪೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ದಿನ ಭವಿಷ್ಯ 05-10-2026: ಸೋಮವಾರದಂದು ಶಿವ ಯೋಗ.. ಈ ರಾಶಿಯವರಿಗೆ ಪರಮೇಶ್ವರನ ಕೃಪೆ

ದಿನ ಭವಿಷ್ಯ 05-10-2026: ಸೋಮವಾರದಂದು ಶಿವ ಯೋಗ.. ಈ ರಾಶಿಯವರಿಗೆ ಪರಮೇಶ್ವರನ ಕೃಪೆ

2

ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿದ ಮ್ಯೂಸಿಕ್‌ ಮಾಂತ್ರಿಕ ಎ. ಆರ್.‌ ರೆಹಮಾನ್..‌ ವಿಡಿಯೋ ವೈರಲ್

3

ಎಷ್ಟೇ ದುಡಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಚಾಣಕ್ಯರ ಈ 4 ಸರಳ ಸಲಹೆ ಪಾಲಿಸಿ

4

KPSC ನೇಮಕಾತಿ ಅಕ್ರಮ ತನಿಖೆ: ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲು

5

ಆರ್ಯನ್ ಖಾನ್ ಡೇಟಿಂಗ್ ಮಾಡ್ತಿರೋ ಈ ಬ್ರೆಜಿಲ್ ಸುಂದರಿ ಯಾರು ಗೊತ್ತೇ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Somavara 05th October 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಸೋಮವಾರದ ಈ ದಿನ ಪುಷ್ಯ ನಕ್ಷತ್ರ, ಶಿವ ಯೋಗ, ವಣಿಜ ಕರಣ ಇರಲಿದೆ.

ಮೇಷ ರಾಶಿ:
ಸೋಮವಾರದಂದು ಶಿವ ಯೋಗವು ಮೇಷ ರಾಶಿಯವರಿಗೆ ಅತ್ಯುತ್ತಮವಾಗಿದ್ದು ಇಂದು ಕಚೇರಿಯಲ್ಲಿ ಎದುರಾಗಿದ್ದ ಸಮಸ್ಯೆಗಳಿಂದ ಪರಿಹಾರ ಪಡೆಯುವ ನಿರೀಕ್ಷೆ ಇದೆ. ಹಣಕಾಸಿನ ವಿಚಾರಗಳು ಸುಗಮವಾಗಿ ಸಾಗಲಿವೆ. ವ್ಯವಹಾರದಲ್ಲಿ ಯಾವುದೇ ರೀತಿಯ ಭಾವನಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ನಿಗಾವಹಿಸಿ.

ವೃಷಭ ರಾಶಿ: 
ವೃಷಭ ರಾಶಿಯವರು ಈ ಸಮಯದಲ್ಲಿ ತಾಳ್ಮೆಯಿಂದ ಇರುವುದು ಒಳ್ಳೆಯದು. ಇಂದು ಯಾವುದೇ ಪ್ರಮುಖ ವ್ಯವಹಾರಗಳಿಗೆ ಸಹಿ ಹಾಕುವುದನ್ನು ತಪ್ಪಿಸಿ. ನಿಮ್ಮ ಮಾತುಗಳಲ್ಲಿ ಸಂಯಮವನ್ನು ಕಾಪಾಡಿಕೊಳ್ಳಿ. ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣಬಹುದು. ಮಕ್ಕಳಿಗೆ ಉತ್ತಮ ದಿನ.

ಮಿಥುನ ರಾಶಿ: 
ಮಿಥುನ ರಾಶಿಯವರಿಗೆ ಇಂದು ಮನೋವೇದನೆಯಿಂದ ಪರಿಹಾರ ಸಿಗಲಿದ್ದು ಶಾಂತಿಯನ್ನು ಅನುಭವಿಸುವಿರಿ. ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ಹೊಸ ಜನರ ಪರಿಚಯವಾಗಲಿದ್ದು ಅವರಿಂದ ನೀವು ನಿರೀಕ್ಷಿಸದ ರೀತಿಯಲ್ಲಿ ಸಹಾಯವನ್ನು ಪಡೆಯುವಿರಿ. ಇಂದು ನಿಮ್ಮ ಕೆಲಸಗಳಲ್ಲೂ ಉತ್ತಮ ಫಲವನ್ನು ನಿರೀಕ್ಷಿಸಬಹುದು.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯವರು ಇಂದು ದೈಹಿಕ ಮತ್ತು ಮಾನಸಿಕ ಒತ್ತಡವನ್ನು ಅನುಭವಿಸಬಹುದು. ಆದರೆ, ವ್ಯವಹಾರಗಳು ಸುಗಮವಾಗಿ ಸಾಗಲಿದ್ದು ಸಂಪತ್ತು, ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ವಿರೋಧಿಗಳ ವಿರುದ್ದ ಜಯ ಸಾಧಿಸುವ ಅವಕಾಶಗಳನ್ನು ಪಡೆಯುವಿರಿ. ಉದ್ಯಮಿಗಳಿಗೆ ಇಂದು ಭರ್ಜರಿ ಜಾಕ್‌ಪಾಟ್‌ ಎಂತಲೇ ಹೇಳಲಾಗುತ್ತಿದೆ.

ಸಿಂಹ ರಾಶಿ:
ಸಿಂಹ ರಾಶಿಯ ಜನರಿಗೆ ಇಂದು ಎಲ್ಲಾ ಆಯಾಮಗಳಲ್ಲೂ ಸಕಾರಾತ್ಮಕ ಫಲಗಳು ಹೆಚ್ಚಾಗಲಿವೆ. ನಿಮ್ಮ ಕೆಲಸದಲ್ಲಿ ಜಯ ಸಾಧಿಸುವಿರಿ. ಸಮಾಜದಲ್ಲಿ ನಿಮ್ಮ ಕೀರ್ತಿ, ಗೌರವ ಹೆಚ್ಚಾಗಲಿದೆ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ವೃದ್ಧಿಯಾಗಲಿದೆ. ಪ್ರಯಾಣವು ಆಹ್ಲಾದಕರವಾಗಿರುತ್ತದೆ. ಆರೋಗ್ಯವೂ ಉತ್ತಮವಾಗಿರಲಿದೆ.

ಕನ್ಯಾ ರಾಶಿ:
ಸೋಮವಾರ ಶಿವ ಯೋಗವು ಕನ್ಯಾ ರಾಶಿಯ ಜನರಿಗೆ ಖರ್ಚುಗಳನ್ನು ಹೆಚ್ಚಿಸಬಹುದು. ಆದಾಗ್ಯೂ, ಉದ್ಯಮಿಗಳು ಇಂದು ಉತ್ತಮ ಲಾಭವನ್ನು ಗಳಿಸುವರು. ಆಹಾರದ ಬಗ್ಗೆ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಿ. ಅನಗತ್ಯ ಖರ್ಚುಗಳ ಬಗ್ಗೆ ಜಾಗರೂಕರಾಗಿರಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಉತ್ತಮ ವಾತಾವರಣ ಇರಲಿದೆ.

ತುಲಾ ರಾಶಿ: 
ಶಿವ ಯೋಗವು ತುಲಾ ರಾಶಿಯ ಜನರಿಗೆ ಶುಭ ಫಲಿತಾಂಶಗಳನ್ನು ಹೆಚ್ಚಿಸಲಿದೆ. ರಾಜಕೀಯ ಜೀವನದಲ್ಲಿರುವವರಿಗೆ ಇಂದು ಮಾಡುವ ಕೆಲಸಗಳಲ್ಲಿ ಯಶಸ್ಸು ಕೈ ಹಿಡಿಯಲಿವೆ. ಸಮಾಜದಲ್ಲಿ ಶಿಷ್ಟಾಚಾರವನ್ನು ಅನುಭವಿಸುವಿರಿ. ನಿಮ್ಮ ಆದಾಯದ ಮೂಲಗಳು ಹೆಚ್ಚಾಗಲಿವೆ. ಆದಾಗ್ಯೂ, ವೆಚ್ಚಗಳನ್ನು ಕಡಿಮೆ ಮಾಡುವುದು ಒಳ್ಳೆಯದು.

ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯ ಜನರಿಗೆ ಇಂದು ಶಿವ ಯೋಗವು ಶುಭಪ್ರದವಾಗಿದ್ದು, ಜೀವನದಲ್ಲಿ ಸಕಾರಾತ್ಮಕ ಫಲಗಳು ಹೆಚ್ಚಾಗಲಿವೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಸರ್ಕಾರಿ ಕೆಲಸಗಳಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಇಂದು ನಿಮ್ಮ ಕೆಲಸಗಳನ್ನು ಹಿರಿಯ ಅಧಿಕಾರಿಗಳು ಗುರುತಿಸುವರು. ನಿಮ್ಮ ಪರಿಶ್ರಮಕ್ಕೆ ಮನ್ನಣೆ ಸಿಗಲಿದೆ.

ಧನು ರಾಶಿ:
ಶಿವ ಯೋಗವು ಧನು ರಾಶಿಯ ಜನರಿಗೆ ಹಣಕಾಸಿನ ಪರಿಸ್ಥಿತಿಯನ್ನು ಸುಧಾರಿಸಲಿದೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಲಿದೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಕಾಳಜಿ ಅಗತ್ಯವಾಗಿದೆ. ವ್ಯವಹಾರದಲ್ಲಿ ಲಾಭಾಂಶ ಹೆಚ್ಚಾಗಲಿದೆ. ಕುಟುಂಬ ವ್ಯವಹಾರಗಳಲ್ಲಿ ಸಂಬಂಧಿಕರಿಂದ ಉತ್ತಮ ಫಲವನ್ನು ನಿರೀಕ್ಷಿಸಬಹುದು.

ಮಕರ ರಾಶಿ:
ಶಿವ ಯೋಗವು ಮಕರ ರಾಶಿಯ ಉದ್ಯಮಿಗಳಿಗೆ ಉತ್ತಮ ಫಲಗಳನ್ನು ನೀಡಲಿದೆ. ಆದರೆ, ಕೆಲಸದಲ್ಲಿ ಉದ್ಯೋಗಿಗಳಿಗೆ ಕೆಲವು ಅನಿರೀಕ್ಷಿತ ಸಮಸ್ಯೆಗಳು ಎದುರಾಗಬಹುದು. ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶಗಳನ್ನು ಪಡೆಯುವ ಸೂಚನೆಗಳಿವೆ. ವ್ಯವಹಾರಸ್ಥರು ವಿರೋಧಿಗಳ ವಿರುದ್ಧ ಜಯ ಸಾಧಿಸುವರು.

ಕುಂಭ ರಾಶಿ:
ಕುಂಭ ರಾಶಿಯ ನಿರುದ್ಯೋಗಿಗಳಿಗೆ ಇಂದು ಉತ್ತಮ ಕೆಲಸ ಸಿಗುವ ನಿರೀಕ್ಷೆ ಇದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಆಹಾರ ಪದ್ಧತಿಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಿ. ಇಲ್ಲವೇ ಆರೋಗ್ಯ ಏರುಪೇರಾಗುವ ಸೂಚನೆಗಳಿವೆ. ಕುಟುಂಬದಲ್ಲಿ ವಾತಾವರಣವು ಅನುಕೂಲಕರವಾಗಿ ಇರಲಿದೆ. ಮಕ್ಕಳ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ.

ಮೀನ ರಾಶಿ:
ಮೀನ ರಾಶಿಯವರಿಗೆ ಸಮಾಜದಲ್ಲಿ ಇಂದು ನಿಮ್ಮ ಗೌರವ ಹೆಚ್ಚಾಗಲಿದೆ. ಕುಟುಂಬದವರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ. ಶಿವನ ಅನುಗ್ರಹದಿಂದ ಬಾಕಿ ಉಳಿದಿದ್ದ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಸಂಬಂಧಗಳಲ್ಲಿ ಇದ್ದ ವೈಮನಸ್ಯಗಳು ದೂರವಾಗುವ ಲಕ್ಷಣಗಳಿವೆ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
 

Add Zee News as a Preferred Source