• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಜ್ಯೋತಿಷ್ಯ
  • /ದಿನ ಭವಿಷ್ಯ 10-10-2026: ಮಹಾಲಯ ಅಮಾವಾಸ್ಯೆಯಂದು ಐಂದ್ರ ಯೋಗ.. ಯಾರಿಗೆ ಲಾಭ? ಯಾರಿಗೆ ನಷ್ಟ?

ದಿನ ಭವಿಷ್ಯ 10-10-2026: ಮಹಾಲಯ ಅಮಾವಾಸ್ಯೆಯಂದು ಐಂದ್ರ ಯೋಗ.. ಯಾರಿಗೆ ಲಾಭ? ಯಾರಿಗೆ ನಷ್ಟ?

Today Horoscope 10th October 2026: 10 ಅಕ್ಟೋಬರ್ 2026ರಂದು ಪಿತೃ ಪಕ್ಷದ ಕೊನೆಯ ದಿನ ಮಹಾಲಯ ಅಮಾವಾಸ್ಯೆ ಇರಲಿದೆ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written ByYashaswini V
Published: Oct 10, 2026, 06:38 AM IST|Updated: Oct 10, 2026, 06:40 AM IST
joinshare
ದಿನ ಭವಿಷ್ಯ 10-10-2026: ಮಹಾಲಯ ಅಮಾವಾಸ್ಯೆಯಂದು ಐಂದ್ರ ಯೋಗ.. ಯಾರಿಗೆ ಲಾಭ? ಯಾರಿಗೆ ನಷ್ಟ?

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬೆಂಗಳೂರು ವಾಹನ ಸವಾರರೇ ಗಮನಿಸಿ: ಅ. 10ರಿಂದ ಬಸವನಗರ ಮುಖ್ಯರಸ್ತೆಯಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು ವಾಹನ ಸವಾರರೇ ಗಮನಿಸಿ: ಅ. 10ರಿಂದ ಬಸವನಗರ ಮುಖ್ಯರಸ್ತೆಯಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ

2

ಯುಜಿ ನೀಟ್: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಸ್ಟ್ರೇ ವೇಕೆನ್ಸಿ ಸುತ್ತಿನ ವೇಳಾಪಟ್ಟಿ ಪ್ರಕಟ

3

ದಿನ ಭವಿಷ್ಯ 10-10-2026: ಮಹಾಲಯ ಅಮಾವಾಸ್ಯೆಯಂದು ಐಂದ್ರ ಯೋಗ.. ಯಾರಿಗೆ ಲಾಭ? ಯಾರಿಗೆ ನಷ್ಟ?

4

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ!

5

42ನೇ ವಯಸ್ಸಿನಲ್ಲೂ ಮಿಸ್ಟರ್‌ 360 ರೌದ್ರಾವತಾರ: 11 ಸಿಕ್ಸರ್, 40 ಎಸೆತಗಳಲ್ಲಿ 111 ರನ್ ಚಚ್ಚಿದ ಎಬಿಡಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Shanivara 10th October 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಶನಿವಾರದ ಈ ದಿನ ಹಸ್ತ ನಕ್ಷತ್ರ, ಐಂದ್ರ ಯೋಗ, ಚತುಷ್ಪಾದ ಕರಣ ಇರಲಿದೆ. ಮಹಾಲಯ ಅಮಾವಾಸ್ಯೆಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.

ಮೇಷ ರಾಶಿ:
ಮಹಾಲಯ ಅಮಾವಾಸ್ಯೆಯಂದು ಐಂದ್ರ ಯೋಗವು ಮೇಷ ರಾಶಿಯ ಜನರಿಗೆ ಮಿಶ್ರ ಫಲಗಳನ್ನು ನೀಡಲಿದೆ. ಇಂದು ನಿಮಗೆ ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದ್ದು, ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಿ. ಕುಟುಂಬದಲ್ಲಿ ವಾತಾವರಣ ತಿಳಿಯಾಗಿರಲಿದೆ. ಪ್ರೇಮ ಜೀವನದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ.

ವೃಷಭ ರಾಶಿ: 
ಮಹಾಲಯ ಅಮಾವಾಸ್ಯೆಯು ವೃಷಭ ರಾಶಿಯ ಜನರಿಗೆ ಶುಭಪ್ರದವಾಗಿದ್ದು ಇಂದು ನೀವು ಮಾಡುವ ಎಲ್ಲಾ ಕೆಲಸಗಳಲ್ಲೂ ಜಯ ಸಿಗಲಿದೆ. ಉದ್ಯೋಗಸ್ಥರಿಗೆ ಬಡ್ತಿ ನಿರೀಕ್ಷೆ ಇದ್ದು, ನಿರುದ್ಯೋಗಿಗಳಿಗೆ ಕೆಲಸ ಸಿಗುವ ಸಾಧ್ಯತೆಯೂ ಇದೆ. ಹಣಕಾಸಿನ ಪರಿಸ್ಥಿತಿಯೂ ಉತ್ತಮವಾಗಿರಲಿದೆ.

ಮಿಥುನ ರಾಶಿ: 
ಮಹಾಲಯ ಅಮಾವಾಸ್ಯೆಯು ಮಿಥುನ ರಾಶಿಯ ಜನರಿಗೆ ಧನಾತ್ಮಕ ಫಲಿತಾಂಶಗಳನ್ನು ಹೆಚ್ಚಿಸಲಿದೆ. ಈ ಅವಧಿಯಲ್ಲಿ ವೃತ್ತಿ, ವ್ಯವಹಾರಗಳು ಫಲಪ್ರದವಾಗಿ ಮುಂದುವರೆಯಲಿದ್ದು ಅಪಾರ ಧನ ಸಂಪತ್ತನ್ನು ಪಡೆಯುವ ನಿರೀಕ್ಷೆ ಇದೆ. ಕುಟುಂಬ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ.

ಕರ್ಕಾಟಕ ರಾಶಿ:
ಮಹಾಲಯ ಅಮಾವಾಸ್ಯೆಯ ದಿನ ಕರ್ಕಾಟಕ ರಾಶಿಯವರಿಗೆ ಬಂಪರ್‌ ಧನ ಯೋಗ ಎನ್ನಲಾಗುತ್ತಿದೆ. ಇಂದು ವೃತ್ತಿ ಬದುಕಿನಲ್ಲಿ ಪ್ರಗತಿಯ ಅವಕಾಶಗಳಿದ್ದು ಇದು ನಿಮ್ಮ ಮನಸ್ಸಿಗೆ ನೆಮ್ಮದಿಯನ್ನು ತರಲಿದೆ. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶಗಳು ಸಿಗಬಹುದು.

ಸಿಂಹ ರಾಶಿ:
ಸಿಂಹ ರಾಶಿಯ ಜನರು ಇಂದು ಹೂಡಿಕೆಗೆ ಸಂಬಂಧಿಸಿದ ವಿಚಾರಗಳಲ್ಲಿ ಯೋಚಿಸಿ ನಿರ್ಧರಿಸಿ. ಹಣಕಾಸಿನ ವಿಚಾರಗಳು ಸುಧಾರಣೆ ಕಾಣಲಿವೆ. ನೀವು ಮಾಡಲು ಹೊರಟಿರುವ ಪ್ರಮುಖ ಕೆಲಸಗಳಲ್ಲಿ ಉತ್ತಮ ಫಲಿತಾಂಶ ಪಡೆಯುವಿರಿ. ಹೊಸ ಆದಾಯದ ಮೂಲಗಳು ಹೆಚ್ಚಾಗಲಿವೆ. ಆರೋಗ್ಯದ ವಿಚಾರದಲ್ಲಿ ಕಾಳಜಿ ಅಗತ್ಯವಾಗಿದೆ.

ಕನ್ಯಾ ರಾಶಿ:
ಮಹಾಲಯ ಅಮಾವಾಸ್ಯೆ ಅಮಾವಾಸ್ಯೆಯಂದು ಕನ್ಯಾ ರಾಶಿಯವರಿಗೆ ಶನಿ ಮಹಾತ್ಮನ ವಿಶೇಷ ಆಶೀರ್ವಾದ ಇರಲಿದ್ದು ಜೀವನದಲ್ಲಿ ಧನಾತ್ಮಕ ಫಲಿತಾಂಶಗಳು ಹೆಚ್ಚಾಗಲಿವೆ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿರುವವರಿಗೆ ಉತ್ತಮ ಸಮಯ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಬರಬಹುದು.

ತುಲಾ ರಾಶಿ: 
ಮಹಾಲಯ ಅಮಾವಾಸ್ಯೆಯು ತುಲಾ ರಾಶಿಯವರಿಗೆ ಉತ್ತಮ ಫಲಿತಾಂಶಗಳನ್ನು ನೀಡಲಿದೆ. ಈ ಸಮಯದಲ್ಲಿ ಹಳೆಯ ಸಾಲಗಳಿಂದ ಮುಕ್ತಿಯನ್ನು ಪಡೆಯುವಿರಿ. ಕುಟುಂಬಸ್ಥರೊಂದಿಗೆ ಸಂತೋಷದಿಂದ ಕಾಲ ಕಳೆಯುವಿರಿ. ಮನಸ್ಸು ಶಾಂತವಾಗಿರುತ್ತದೆ. ಮಾಡುವ ಪ್ರತಿ ಕೆಲಸದಲ್ಲೂ ಯಶಸ್ಸು ಕೈ ಹಿಡಿಯಲಿದೆ.

ವೃಶ್ಚಿಕ ರಾಶಿ:
ಮಹಾಲಯ ಅಮಾವಾಸ್ಯೆಯ ದಿನ ವೃಶ್ಚಿಕ ರಾಶಿಯವರಿಗೆ ಖರ್ಚುಗಳು ಹೆಚ್ಚಾಗಬಹುದು. ದಾಂಪತ್ಯದಲ್ಲಿ ಸುಖ ಹೆಚ್ಚಾಗಲಿದೆ. ಕುಟುಂಬದಲ್ಲಿ ಉತ್ತಮ ವಾತಾವರಣ ಇರಲಿದೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಚ್ಚರಿಕೆವಹಿಸಿ.

ಧನು ರಾಶಿ:
ಧನು ರಾಶಿಯ ಜನರಿಗೆ ಮಹಾಲಯ ಅಮಾವಾಸ್ಯೆಯು ಶುಭ ಫಲಗಳನ್ನು ನೀಡಲಿದೆ. ಇಂದು ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಕುಟುಂಬ ಸದಸ್ಯರ ಆರೋಗ್ಯಕ್ಕಾಗಿ ಸ್ವಲ್ಪ ಹಣ ಖರ್ಚು ಮಾಡಬೇಕಾಗಬಹುದು. ಪ್ರೇಮ ಜೀವನವು ಆನಂದದಿಂದ ಕೂಡಿರಲಿದೆ. ಮನೆಯಲ್ಲಿ ಶುಭ ಕಾರ್ಯಗಳ ಬಗ್ಗೆ ಯೋಚಿಸಬಹುದು.

ಮಕರ ರಾಶಿ:
ಮಹಾಲಯ ಅಮಾವಾಸ್ಯೆಯು ಮಕರ ರಾಶಿಯ ಜನರಿಗೆ ಶುಭಕರವಾಗಿರುತ್ತದೆ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಉತ್ತಮಗೊಳ್ಳಲಿದೆ. ವಿವಾಹ ಜೀವನದಲ್ಲಿ ಸುಖ-ಸಂತೋಷ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವ ಅವಕಾಶಗಳು ಸಿಗಲಿವೆ. ಪ್ರೀತಿ ಜೀವನವು ಸುಖಕರವಾಗಿರುತ್ತದೆ.

ಕುಂಭ ರಾಶಿ:
ಮಹಾಲಯ ಅಮಾವಾಸ್ಯೆಯು ಕುಂಭ ರಾಶಿಯ ಜನರಿಗೆ ಶನಿ ದೇವನ ವಿಶೇಷ ಆಶೀರ್ವಾದವನ್ನು ನೀಡಲಿದೆ. ಕುಟುಂಬ ಸದಸ್ಯರೊಂದಿಗೆ ಸಂಬಂಧಗಳು ಬಲಗೊಳ್ಳುತ್ತವೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲ ಪಡೆಯುವ ಸಾಧ್ಯತೆ ಇದೆ.

ಮೀನ ರಾಶಿ:
ಮಹಾಲಯ ಅಮಾವಾಸ್ಯೆಯ ದಿನ ಮೀನ ರಾಶಿಯ ಜನರು ನಿಮ್ಮ ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಈ ಹಿಂದೆ ಮಾಡಿರುವ ಕೆಲಸಗಳಿಗೆ ಇಂದು ಪ್ರತಿಫಲವನ್ನು ಪಡೆಯುವ ನಿರೀಕ್ಷೆ ಇದೆ. ವ್ಯವಹಾರ ವಿಸ್ತರಣೆಗೆ ಪ್ರಯತ್ನಿಸುತ್ತಿರುವವರಿಗೆ ಯತ್ನ ಕಾರ್ಯಾಧಿಗಳಲ್ಲಿ ಯಶಸ್ಸು ಸಿಗಲಿದೆ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
 

Add Zee News as a Preferred Source
TAGS:
Dina Bhavishya
Horoscope Today