SOCIAL MEDIA

Newsletter

PARTNER SITES
Select Language Select State

ದಿನ ಭವಿಷ್ಯ 13-10-2026: ಮಂಗಳವಾರದಂದು ಪ್ರೀತಿ ಯೋಗ.. ಈ ರಾಶಿಯವರಿಗೆ ಶುಭ

Today Horoscope 13th October 2026: 13 ಅಕ್ಟೋಬರ್ 2026ರ ಮಂಗಳವಾರದಂದು ಪ್ರೀತಿ ಯೋಗ ಇರಲಿದ್ದು, ಇಂದಿನ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written By Yashaswini V
Published: Oct 13, 2026, 10:23 AM IST | Updated: Oct 13, 2026, 10:24 AM IST
Join

Mangalavara 13th October 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷ, ತೃತೀಯಾ ತಿಥಿ, ಮಂಗಳವಾರದ ಈ ದಿನ ವಿಶಾಖಾ ನಕ್ಷತ್ರ, ಪ್ರೀತಿ ಯೋಗ, ತೈತಿಲ ಕರಣ ಇರಲಿದೆ.

ಮೇಷ ರಾಶಿ:
ಪ್ರೀತಿ ಯೋಗವು ಮೇಷ ರಾಶಿಯ ಜನರಿಗೆ ಹೂಡಿಕೆಗೆ ಉತ್ತಮ ಲಾಭ ಎಂದು ಸಾಬೀತುಪಡಿಸಲಿದೆ. ವಿದೇಶ ಪ್ರವಾಸ ಮಾಡಲು ಅದ್ಭುತ ಅವಕಾಶಗಳು ಸಿಗಬಹುದು. ಉದ್ಯಮಿಗಳಿಗೆ ಉತ್ತಮ ಲಾಭ ಸಿಗಬಹುದು. ಉದ್ಯೋಗ ಬದಲಾಯಿಸಲು ಯೋಚಿಸುತ್ತಿರುವವರಿಗೆ ಅತ್ಯುತ್ತಮ ಸಮಯ.

ವೃಷಭ ರಾಶಿ: 
ವೃಷಭ ರಾಶಿಯ ಜನರಿಗೆ ಇಂದು ಹಣಕಾಸಿ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗಿಗಳಿಗೆ ಪ್ರಮುಖ ಕಚೇರಿ ಕೆಲಸಗಳಲ್ಲಿ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ. ಕುಟುಂಬ ಜೀವನವು ಆಹ್ಲಾದಕರವಾಗಿರುತ್ತದೆ. ಉದ್ಯಮಿಗಳಿಗೆ ಉತ್ತಮ ಲಾಭ ಸಿಗಲಿದೆ. ಪ್ರೀತಿ ಜೀವನವು ಅನುಕೂಲಕರವಾಗಿರುತ್ತದೆ.

ಮಿಥುನ ರಾಶಿ: 
ಮಿಥುನ ರಾಶಿಯ ಜನರಿಗೆ ಇಂದು ಆದಾಯದ ಹೊಸ ಮೂಲಗಳು ಸೃಷ್ಟಿ ಆಗಲಿವೆ. ಉದ್ಯಮಿಗಳಿಗೆ ಲಾಭಾಂಶಗಳು ಹೆಚ್ಚಾಗಲಿವೆ. ಕುಟುಂಬ ಜೀವನದಲ್ಲಿ ಶಾಂತಿಯುತ ವಾತಾವರಣ ಇರಲಿದೆ. ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದರಿಂದ ಆರೋಗ್ಯ ಸುಧಾರಿಸಲಿದೆ.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯ ಜನರಿಗೆ ಹಲವು ಕ್ಷೇತ್ರಗಳಲ್ಲಿ ಸಾಕಾರಾತ್ಮಕ ಫಲಗಳು ಹೆಚ್ಚಾಗಲಿವೆ. ಕೆಲಸದಲ್ಲಿ ಉತ್ತಮ ಯಶಸ್ಸು ಸಿಗಿಲದೆ. ಪ್ರೀತಿ ಯೋಗದ ಪ್ರಭಾವದಿಂದ ಉದ್ಯಮಿಗಳು ಉತ್ತಮ ಲಾಭವನ್ನು ಪಡೆಯಲಿದ್ದಾರೆ. ವೃತ್ತಿ ಜೀವನದಲ್ಲಿ ಪ್ರಗತಿಯ ಅವಕಾಶಗಳಿವೆ. ಹೂಡಿಕೆ ಮಾಡಲು ಅನುಕೂಲಕರವಾದ ಸಮಯ.

ಸಿಂಹ ರಾಶಿ:
ಸಿಂಹ ರಾಶಿಯ ಜನರಿಗೆ ಇಂದು ಕೆಲಸದಲ್ಲಿ ತಾಳ್ಮೆ ಅಗತ್ಯವಾಗಿದೆ. ಹಣಕಾಸಿನ ಪರಿಸ್ಥಿತಿ ಬಲಗೊಳ್ಳಲಿದೆ. ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಅವಕಾಶವಿದೆ. ಹಣಕಾಸಿನ ಹರಿವು ಹೆಚ್ಚಾಗಲಿದ್ದು, ಭವಿಷ್ಯಕ್ಕಾಗಿ ಉತ್ತಮ ಮೊತ್ತವನ್ನು ಕಲೆಹಾಕುವಿರಿ. ಕುಟುಂಬದಲ್ಲಿ ಶಾಂತಿ ನೆಲೆಸಲಿದೆ.

ಕನ್ಯಾ ರಾಶಿ:
ಕನ್ಯಾ ರಾಶಿಯವರಿಗೆ ಇಂದು ಬಹಳ ಮುಖ್ಯವಾದ ದಿನವಾಗಿರುತ್ತದೆ. ಇಂದು ತಾಯಿ ದುರ್ಗೆಯ ಆಶೀರ್ವಾದದಿಂದ ಕೆಲಸದಲ್ಲಿ ಯಶಸ್ಸು ಕಾಣುವಿರಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಮನೆಯಲ್ಲಿ ಸುಖ ಶಾಂತಿ ನೆಲೆಸಲಿದೆ. ಒಡಹುಟ್ಟಿದವರೊಂದಿಗೆ ಸಂಬಂಧ ಬಲಗೊಳ್ಳುತ್ತದೆ.  

ತುಲಾ ರಾಶಿ: 
ತುಲಾ ರಾಶಿಯವರಿಗೆ ಇಂದು ವ್ಯಾಪಾರ ವಿಸ್ತರಣೆಯ ಅವಕಾಶಗಳು ಸಿಗುವ ನಿರೀಕ್ಷೆ ಇದೆ. ಆದಾಯದ ಮೂಲಗಳು ಹೆಚ್ಚಾಗಲಿದ್ದು, ಉದ್ಯಮಿಗಳಿಗೆ ಲಾಭಾಂಶ ಹೆಚ್ಚಾಗಲಿದೆ. ಸಮಾಜದಲ್ಲಿ ನಿಮ್ಮ ಕೀರ್ತಿ ಗೌರವ ಹೆಚ್ಚಾಗಲಿದೆ. ಪ್ರೀತಿ ಜೀವನ ಆಹ್ಲಾದಕರವಾಗಿರುತ್ತದೆ. ಹೊಸ ವ್ಯವಹಾರ ಆರಂಭಿಸಲು ಅತ್ಯುತ್ತಮ ಸಮಯ.

ವೃಶ್ಚಿಕ ರಾಶಿ:
ಪ್ರೀತಿ ಯೋಗವು ವೃಶ್ಚಿಕ ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ. ಈ ಸಮಯದಲ್ಲಿ ವೈಯಕ್ತಿಕ ಜೀವನದಲ್ಲಿ ಅನುಕೂಲಕರ ವಾತಾವರಣ ಇರಲಿದ್ದು, ಕೆಲಸದಲ್ಲಿ ಸಕಾರಾತ್ಮಕ ಬದಲಾವಣೆಗಳ ಸಾಧ್ಯತೆ ಇದೆ. ನಿಮ್ಮ ಆದಾಯವೂ ಸಹ ಗಮನಾರ್ಹವಾಗಿ ಹೆಚ್ಚಾಗಲಿದೆ. ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುವಿರಿ. ಮಕ್ಕಳ ಬಗ್ಗೆ ಶುಭ ಸುದ್ದಿ ಕೇಳುವಿರಿ.

ಧನು ರಾಶಿ:
ಪ್ರೀತಿ ಯೋಗವು ಧನು ರಾಶಿಯ ಜನರಿಗೆ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಿದೆ. ಆದಾಗ್ಯೂ, ಇಂದು ಆದಾಯಕ್ಕಿಂತ ಖರ್ಚು ಹೆಚ್ಚಾಗುವ ನಿರೀಕ್ಷೆ ಇರುವುದರಿಂದ ಅನಾವಶ್ಯಕ ಖರ್ಚುಗಳ ಬಗ್ಗೆ ನಿಗಾವಹಿಸಿ. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಬಾಕಿ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ.

ಮಕರ ರಾಶಿ:
ಮಕರ ರಾಶಿಯವರಿಗೆ ಇಂದು ಉತ್ತಮ ಫಲಿತಾಂಶಗಳು ಸಿಗುವ ನಿರೀಕ್ಷೆ ಇದೆ. ಇಂದು ನೀವು ಕೈಗೊಳ್ಳುವ ಪ್ರತಿ ಕೆಲಸದಲ್ಲೂ ಯಶಸ್ಸು ಕೈ ಹಿಡಿಯಲಿದೆ. ಆದಾಯದ ಮೂಲಗಳು ಹೆಚ್ಚಾಗುವ ನಿರೀಕ್ಷೆ ಇದ್ದು, ಹಣಕಾಸಿನ ಸಮಸ್ಯೆಗಳಿಂದ ಪರಿಹಾರ ಪಡೆಯುವಿರಿ. ಭೂಮಿ ಖರೀದಿ ಬಗ್ಗೆ ಯೋಚಿಸುತ್ತಿರುವವರಿಗೆ ಅನುಕೂಲಕರ ಸಮಯ.

ಕುಂಭ ರಾಶಿ:
ಪ್ರೀತಿ ಯೋಗದ ಪ್ರಭಾವದಿಂದ ಕುಂಭ ರಾಶಿಯ ಜನರ ಜೀವನದಲ್ಲಿ ಇಂದು ಸಕಾರಾತ್ಮಕ ಫಲಿತಾಂಶಗಳು ಹೆಚ್ಚಾಗಲಿವೆ. ಇಂದು ಸಂಗಾತಿಯೊಂದಿಗೆ ಆಹ್ಲಾದಕರ ಸಮಯವನ್ನು ಕಳೆಯುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣಲಿದೆ. ಕುಟುಂಬ ಜೀವನದಲ್ಲಿ ಅನುಕೂಲಕರ ವಾತಾವರಣ ಇರಲಿದೆ.

ಮೀನ ರಾಶಿ:
ಮೀನ ರಾಶಿಯವರಿಗೆ ಇಂದು ಧನ ಯೋಗವಿದ್ದು ಆರ್ಥಿಕ ಸಂಕಷ್ಟಗಳಿಂದ ಹೊರಬರುವಲ್ಲಿ ಯಶಸ್ವಿ ಆಗುವಿರಿ. ಕುಟುಂಬ ಜೀವನವು ಸಂತೋಷದಿಂದ ಕೂಡಿರಲಿದೆ. ಸಂಗಾತಿ ಜೊತೆಗಿನ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ. ವೈವಾಹಿಕ ಜೀವನವು ಸಂತೋಷದಿಂದ ಕೂಡಿರಲಿದೆ. ಆರೋಗ್ಯದಲ್ಲೂ ಸುಧಾರಣೆ ಕಾಣುವಿರಿ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES