SOCIAL MEDIA

Newsletter

PARTNER SITES
Select Language Select State

ದಿನ ಭವಿಷ್ಯ 14-11-2026: ಶನಿವಾರದಂದು ಶೂಲ ಯೋಗ.. ಈ ರಾಶಿಯವರಿಗೆ ಎಚ್ಚರಿಕೆ ಅಗತ್ಯ

Today Horoscope 14th November 2026: 14 ನವೆಂಬರ್ 2026ರಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written By Yashaswini V
Published: Nov 14, 2026, 06:07 IST | Updated: Nov 14, 2026, 07:10 IST
Join

Shanivara 14th November 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಹೇಮಂತ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ, ಪಂಚಮಿ ತಿಥಿ, ಶನಿವಾರದ ಈ ದಿನ ಪೂ.ಷಾ. ನಕ್ಷತ್ರ, ಶೂಲ ಪೂರ್ಣ ಯೋಗ, ಬವ ಕರಣ ಇರಲಿದೆ.

ಮೇಷ ರಾಶಿ:
ಶನಿವಾರದಂದು ಶೂಲ ಯೋಗವು ಮೇಷ ರಾಶಿಯ ಜನರಿಗೆ ಆದಾಯದ ಮೂಲಗಳನ್ನು ಹೆಚ್ಚಿಸಲಿದೆ. ಕುಟುಂಬದಲ್ಲಿ ಆಹ್ಲಾದಕರ ವಾತಾವರಣ ಇರಲಿದೆ. ಪ್ರೀತಿಯ ಜೀವನವು ಆಹ್ಲಾದಕರವಾಗಿರುತ್ತದೆ. ಸಂಗಾತಿಯೊಂದಿಗೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸೂಚನೆಗಳಿದ್ದರೂ, ನೀವು ತಾಳ್ಮೆಯಿಂದ ವರ್ತಿಸಿದರೆ ಎಲ್ಲವನ್ನು ಸುಲಭವಾಗಿ ನಿಭಾಯಿಸುವಿರು.

ವೃಷಭ ರಾಶಿ: 
ವೃಷಭ ರಾಶಿಯ ಜನರು ಇಂದು ನಿಮ್ಮ ಹಣಕಾಸಿನ ಬಗ್ಗೆ ಸೂಕ್ಷ್ಮವಾಗಿ ನಿಗಾವಹಿಸಿ. ಇಲ್ಲವೇ, ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದ್ದು, ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿ ಎದುರಾಗಬಹುದು. ಯೋಜಿಸಿ ಕೆಲಸ ಮಾಡುವುದರಿಂದ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ.

ಮಿಥುನ ರಾಶಿ: 
ಮಿಥುನ ರಾಶಿಯವರಿಗೆ ಇಂದಿನ ದಿನವು ಅನುಕೂಲಕರವಾಗಿದೆ. ಕೆಲಸದ ಮೇಲೆ ಸರಿಯಾಗಿ ಗಮನವಹಿಸುವುದು ಒಳ್ಳೆಯದು. ಇಲ್ಲವೇ, ಸಣ್ಣ ನಿರ್ಲಕ್ಷ್ಯವೂ ಸಹ ಭವಿಷ್ಯದಲ್ಲಿ ದೊಡ್ಡ ತೊಂದರೆಗಳಿಗೆ ಕಾರಣವಾಗಬಹುದು. ಸಮಾಜಿಕ ಕಲ್ಯಾಣಕ್ಕಾಗಿ ನಿಮ್ಮ ಕೈಲಾದಷ್ಟು ಸಹಾಯವನ್ನು ಮಾಡಿ.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯವರಿಗೆ ಇಂದು ಶೂಲ ಯೋಗವು ಶುಭಕರವೆಂದು ಸಾಬೀತುಪಡಿಸಲಿದೆ. ಅದೃಷ್ಟದ ಬಲ ಇಂದು ಸಂಪೂರ್ಣ ನಿಮ್ಮ ಕಡೆಗಿದ್ದು ಸರ್ಕಾರಿ ಕೆಲಸಗಳಲ್ಲಿ ಪ್ರಗತಿಯನ್ನು ಕಾಣುವಿರಿ. ವ್ಯವಹಾರಗಳಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಕುಟುಂಬದಲ್ಲಿ ಉತ್ತಮ ವಾತಾವರಣ ಇರಲಿದೆ.

ಸಿಂಹ ರಾಶಿ:
ಸಿಂಹ ರಾಶಿಯವರಿಗೆ ಇಂದು ಮಿಶ್ರ ಫಲಗಳ ಸೂಚನೆ ಇದೆ. ಹೊಸ ಯೋಜನೆಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ವ್ಯವಹಾರಗಳಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನಿರೀಕ್ಷಿಸಬಹುದು. ವಿದೇಶ ವ್ಯವಹಾರಗಳಲ್ಲಿ ಉತ್ತಮ ಲಾಭ ಸಿಗಲಿದೆ. ಆದರೆ, ಆರೋಗ್ಯದ ಬಗ್ಗೆ ಗಮನವಹಿಸಿ.

ಕನ್ಯಾ ರಾಶಿ:
ಕನ್ಯಾ ರಾಶಿಯವರಿಗೆ ಇಂದಿನ ದಿನ ತುಂಬಾ ಮಹತ್ವದ್ದಾಗಿದ್ದು, ಅನಗತ್ಯ ವೆಚ್ಚಗಳನ್ನು ತಪ್ಪಿಸದಿದ್ದರೆ ಆರ್ಥಿಕ ಮುಗ್ಗಟ್ಟನ್ನು ಎದುರಿಸಬೇಕಾಗಬಹುದು. ಉದ್ಯಮಿಗಳಿಗೆ ಪ್ರಗತಿಯ ಸೂಚನೆಗಳಿದ್ದು, ಹೊಸ ಒಪ್ಪಂದಗಳಿಗೆ ಸಹಿ ಹಾಕುವಾಗ ಎಚ್ಚರಿಕೆಯಿಂದ ಇರಿ. ಪ್ರೀತಿಯ ಜೀವನದಲ್ಲಿ ಉದ್ವಿಗ್ನತೆ ಇರಬಹುದು.

ತುಲಾ ರಾಶಿ: 
ತುಲಾ ರಾಶಿಯವರಿಗೆ ಶನಿವಾರ ಶೂಲ ಯೋಗವ ಶುಭ ಫಲಗಳನ್ನು ತರಲಿದೆ. ಇಂದು ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುವ ಸೂಚನೆಗಳಿವೆ. ಮಾನಸಿಕ ಒತ್ತಡದಿಂದ ಪರಿಹಾರ ಪಡೆಯಲು ಧ್ಯಾನವನ್ನು ಅನುಸರಿಸಿ. ವ್ಯವಹಾರದಲ್ಲಿ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಕುಟುಂಬದಲ್ಲಿ ಘರ್ಷಣೆ ಸಾಧ್ಯತೆ ಇದೆ.

ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯವರಿಗೆ ಇಂದು ಶುಭ ದಿನವಾಗಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಕೆಲಸಕ್ಕೆ ಮೇಲಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಲಿದ್ದಾರೆ. ಹೊಸ ಕೆಲಸ ಆರಂಭಿಸಲು ಇದು ತುಂಬಾ ಪ್ರಾಶಸ್ತ್ಯವಾದ ಸಮಯ. ಕುಟುಂಬದಲ್ಲಿ ಪ್ರೀತಿ ಅರಳುತ್ತದೆ. ಆರೋಗ್ಯದಲ್ಲೂ ಸುಧಾರಣೆಯನ್ನು ಕಾಣಬಹುದು. ಹಣಕಾಸಿನ ಮೂಲಗಳು ಹೆಚ್ಚಾಗಲಿವೆ.

ಧನು ರಾಶಿ:
ಧನು ರಾಶಿಯವರಿಗೆ ಇಂದು ಅನುಕೂಲಕರ ದಿನವಾಗಿರುತ್ತದೆ. ಪ್ರೀತಿ ಜೀವನದಲ್ಲಿ ಶುಭ ಫಲಗಳನ್ನು ನಿರೀಕ್ಷಿಸಬಹುದು. ಸಂಗಾತಿಯೊಂದಿಗೆ ವಿಹಾರಕ್ಕೆ ಯೋಜಿಸಬಹುದು. ಹೊಸ ವ್ಯಕ್ತಿಗಳ ಪರಿಚಯವಾಗಬಹುದು. ವ್ಯಾವಹಾರಿಕವಾಗಿ ಮುಂದಿನ ದಿನಗಳಲ್ಲಿ ಅವರಿಂದ ಪ್ರಯೋಜನವಾಗಲಿದೆ. ಸ್ನೇಹಿತರೊಂದಿಗೆ ತಪ್ಪುಗ್ರಹಿಕೆ ದೂರವಾಗಲಿದೆ.

ಮಕರ ರಾಶಿ:
ಮಕರ ರಾಶಿಯವರಿಗೆ ಇಂದಿನ ದಿನವು ಅತ್ಯುತ್ತಮವಾಗಿದೆ. ಸ್ನೇಹಿತರೊಂದಿಗೆ ಮೂಡಿದ್ದ  ಭಿನ್ನಾಭಿಪ್ರಾಯದ ಮೋಡ ಕರಗಲಿದೆ. ಇಂದು ನಿಮ್ಮ ಕೋಪವನ್ನು ನಿಯಂತ್ರಿಸುವುದು ಹೆಚ್ಚು ಸೂಕ್ತವಾಗಿದೆ. ಇಲ್ಲವೇ, ಅನಗತ್ಯ ಸಮಸ್ಯೆಗಳನ್ನು ಮೈ ಮೇಲೆ ಎಳೆದುಕೊಂಡಂತ ಪರಿಸ್ಥಿತಿ ನಿರ್ಮಾಣವಾಗಲಿದೆ.  

ಕುಂಭ ರಾಶಿ:
ಕುಂಭ ರಾಶಿಯವರಿಗೆ ಇಂದಿನ ದಿನ ಸಾಮಾನ್ಯವಾಗಿರಲಿದೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಬಾಧಿಸಬಹುದು. ಇದನ್ನು ನಿರ್ಲಕ್ಷಿಸದೇ ಇರುವುದು ಒಳ್ಳೆಯದು. ಕುಟುಂಬದಲ್ಲಿ ವಾತಾವರಣ ಉತ್ತಮವಾಗಿರುತ್ತದೆ. ವ್ಯವಹಾರದಲ್ಲಿ ಯಶಸ್ಸು ಕಾಣುವಿರಿ. ದೀರ್ಘಾವಧಿಯಿಂದ ಬೇರೆಡೆ ಸಿಲುಕಿರುವ ಹಣ ಕೈ ಸೇರಲಿದೆ.

ಮೀನ ರಾಶಿ:
ಮೀನ ರಾಶಿಯವರಿಗೆ ಇಂದು ಅನುಕೂಲಕರ ದಿನವಾಗಿದ್ದು, ಬಹಳ ಸಮಯದಿಂದ ಬಾಧಿಸುತ್ತಿದ್ದ ಚಿಂತೆಗಳಿಂದ ಪರಿಹಾರ ಪಡೆಯುವಿರಿ. ಕೆಲಸಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಹೊಸತನ್ನು ಕಲಿಯಲು ಪ್ರಯತ್ನಿಸುವಿರಿ. ಉದ್ಯೊಗಸ್ಥರಿಗೆ ಬಡ್ತಿ ಸೂಚನೆಗಳಿವೆ. ದಿಢೀರ್‌ ಧನಾಗಮನವು ಮನಸ್ಸಿನ ಚಿಂತೆಯನ್ನು ದೂರ ಮಾಡಲಿದೆ.  

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES