• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಜ್ಯೋತಿಷ್ಯ
  • /ದಿನ ಭವಿಷ್ಯ 18-09-2026: ಶುಕ್ರವಾರದಂದು ಪ್ರೀತಿ ಯೋಗ.. ಈ ರಾಶಿಯವರಿಗೆ ಸಾಕ್ಷಾತ್‌ ಲಕ್ಷ್ಮಿ ಅನುಗ್ರಹ

ದಿನ ಭವಿಷ್ಯ 18-09-2026: ಶುಕ್ರವಾರದಂದು ಪ್ರೀತಿ ಯೋಗ.. ಈ ರಾಶಿಯವರಿಗೆ ಸಾಕ್ಷಾತ್‌ ಲಕ್ಷ್ಮಿ ಅನುಗ್ರಹ

Today Horoscope 18th September 2026: 18 ಸೆಪ್ಟೆಂಬರ್ 2026ರ ಇಂದು ಶುಕ್ರವಾರದ ದಿನ ಸಪ್ತಮಿ ತಿಥಿಯಂದು ಪ್ರೀತಿ ಯೋಗ ಇರಲಿದ್ದು ಕೆಲವು ರಾಶಿಯವರಿಗೆ ಅಮ್ಮ ಲಕ್ಷ್ಮಿಯ ಅನುಗ್ರಹ ಇರಲಿದೆ ಎನ್ನಲಾಗುತ್ತಿದೆ. ಇಂದಿನ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written ByYashaswini V
Published: Sep 18, 2026, 07:54 AM IST|Updated: Sep 18, 2026, 08:00 AM IST
joinshare
ದಿನ ಭವಿಷ್ಯ 18-09-2026: ಶುಕ್ರವಾರದಂದು ಪ್ರೀತಿ ಯೋಗ.. ಈ ರಾಶಿಯವರಿಗೆ ಸಾಕ್ಷಾತ್‌ ಲಕ್ಷ್ಮಿ ಅನುಗ್ರಹ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Shukravara 18th September 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಶುಕ್ರವಾರದ ಈ ದಿನ ಜ್ಯೇಷ್ಠಾ ನಕ್ಷತ್ರ, ಪ್ರೀತಿ ಯೋಗ, ವಿಷ್ಟಿ ಕರಣ ಇರಲಿದೆ.

ಮೇಷ ರಾಶಿಯವರ ಭವಿಷ್ಯ (Aries Horoscope):  
ಪ್ರೀತಿ ಯೋಗವು ಮೇಷ ರಾಶಿಯ ಜನರಿಗೆ ಇಂದು ಮಿಶ್ರ ಫಲಗಳನ್ನು ನೀಡಲಿದೆ. ಈ ದಿನ ಯಾವುದೇ ರೀತಿಯ ವ್ಯವಹಾರಗಳಲ್ಲಿ ನಿರ್ಧಾರ ಕೈಗೊಳ್ಳುವಾಗ ತುಂಬಾ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ವ್ಯಾಜ್ಯಗಳು ಉದ್ಭವಿಸಬಹುದು ಈ ಬಗ್ಗೆ ಜಾಗರೂಕರಾಗಿರಿ.

ವೃಷಭ ರಾಶಿಯವರ ಭವಿಷ್ಯ (Taurus Horoscope):  
ವೃಷಭ ರಾಶಿಯವರಿಗೆ ಇಂದು ಕಮಾಂಡರ್‌ ಗ್ರಹ ಮೂರನೇ ಮನೆಯಲ್ಲಿ ಇರುವುದರಿಂದ ಮಿಶ್ರ ಫಲಗಳನ್ನು ನೀಡಲಿದ್ದಾನೆ. ಈ ದಿನ ಕುಟುಂಬಸ್ಥರೊಂದಿಗೆ ಮಾತನಾಡುವಾಗ ಜಾಗರೂಕರಾಗಿರಬೇಕು. ಆದಾಗ್ಯೂ, ವೈವಾಹಿಕ ಜೀವನ ಸಂತೋಷದಿಂದ ಕೂಡಿರಲಿದೆ. ಉದ್ಯಮಿಗಳಿಗೆ ಲಾಭದಾಯಕವಾದ ದಿನ ಇದಾಗಿರಲಿದೆ.

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಮಿಥುನ ರಾಶಿಯವರಿಗೆ ಇಂದು ಋಣಾತ್ಮಕ ಫಲಗಳು ಹೆಚ್ಚಾಗುವ ನಿರೀಕ್ಷೆ ಇದೆ. ಇಂದು ಯಾವುದೇ ವ್ಯವಹಾರಕ್ಕೆ ಸಹಿ ಹಾಕದಿರುವುದು ಒಳ್ಳೆಯದು. ನಿಮ್ಮ ಮಾತಿನ ಮೇಲೆ ನಿಯಂತ್ರಣ ಅಗತ್ಯವಾಗಿರುತ್ತದೆ. ಆರೋಗ್ಯದ ವಿಚಾರದಲ್ಲೂ ನಿರ್ಲಕ್ಷ್ಯವನ್ನು ತಪ್ಪಿಸಿ. ಹೊರಗಿನ ಆಹಾರ ಸೇವನೆ ತಪ್ಪಿಸುವುದು ಒಳ್ಳೆಯದು.

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಕರ್ಕಾಟಕ ರಾಶಿಯ ಜನರಿಗೆ ಇಂದು ಪ್ರೀತಿ ಯೋಗವು ವಿಶೇಷವಾಗಿ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಇಂದಿನ ದಿನ ನೀವು ವೈವಾಹಿಕ ಬದುಕಿನಲ್ಲಿ ಸಂತೋಷವನ್ನು ಕಾಣುವಿರಿ. ಉದ್ಯಮಿಗಳಿಗೆ ನಿರೀಕ್ಷೆಗೂ ಮೀರಿದ ಲಾಭಾಂಶ ದೊರೆಯಬಹುದು. ಉದ್ಯೋಗಿಗಳು ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ.

ಇದನ್ನೂ ಓದಿ-

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಸಿಂಹ ರಾಶಿಯ ಜನರಿಗೆ ಇಂದಿನ ದಿನ ಧನಾತ್ಮಕತೆಯಿಂದ ಕೂಡಿರಲಿದೆ. ಈ ಅವಧಿಯಲ್ಲಿ ಉದ್ಯೋಗಿಗಳಿಗೆ ಉತ್ತಮ ಯಶಸ್ಸು ದೊರೆಯಲಿದ್ದು, ಸಾಕ್ಷಾತ್‌ ಲಕ್ಷ್ಮಿ ಅನುಗ್ರಹದಿಂದ ಸ್ವಂತ ವ್ಯವಹಾರ ಮಾಡುವವರಿಗೆ ಸಂಪತ್ತಿನ ಸುರಿಮಳೆಯೇ ಸುರಿಯಲಿದೆ. ಬ್ಯುಸಿನೆಸ್‌ ಸಂಬಂಧಿತ ಪ್ರಯಾಣವು ಲಾಭದಾಯಕವಾಗಿರಲಿದೆ.

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಕನ್ಯಾ ರಾಶಿಯ ಜನರಿಗೆ ಪ್ರೀತಿ ಯೋಗದ ಪ್ರಭಾವದಿಂದ ಇಂದು ಸಾಕ್ಷಾತ್‌ ಲಕ್ಷ್ಮಿಯ ವಿಶೇಷ ಆಶೀರ್ವಾದ ಸಿಗಲಿದೆ. ಕುಟುಂಬಸ್ಥರೊಂದಿಗೆ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ. ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ನೀವಿಂದು ಅನುಭವಿಸುವಿರಿ. ಮಕ್ಕಳ ಕಡೆಯಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುವಿರಿ.

ತುಲಾ ರಾಶಿಯವರ ಭವಿಷ್ಯ (Libra Horoscope): 
ಪ್ರೀತಿ ಯೋಗವು ತುಲಾ ರಾಶಿಯ ಜನರಿಗೆ ಫಲಪ್ರದವಾಗಿರಲಿದೆ. ಇಂದು ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿಶೇಷವಾಗಿ ಪ್ರಯೋಜನಕಾರಿ ಆದ ದಿನವಾಗಿರುತ್ತದೆ. ಕೆಲಸದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಉದ್ಯೋಗಿಗಳು ಕಚೇರಿಯಲ್ಲಿ ಸಹೋದ್ಯೋಗಿಗಳಿಂದ ಅಗತ್ಯ ಬೆಂಬಲ ಸಹಕಾರವನ್ನು ಪಡೆಯುವಿರಿ.

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ರಾಶಿಯಾಧಿಪತಿ ಮಂಗಳ ಗುರುವಿನೊಂದಿಗೆ ಸಂಯೋಗ ಹೊಂದಿರುವುದರಿಂದ ವೃಶ್ಚಿಕ ರಾಶಿಯವಿರಗೆ ಇಂದು ಹೆಜ್ಜೆ ಇಟ್ಟಲ್ಲೆಲ್ಲಾ ಯಶಸ್ಸು ಕೈ ಹಿಡಿಯಲಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಉತ್ತಮ ಫಲಿತಾಂಶಗಳು ಸಿಗುವ ನಿರೀಕ್ಷೆ ಇದೆ. ನಿಮ್ಮ ಕಠಿಣ ಪರಿಶ್ರಮ ಸಂಪೂರ್ಣ ಫಲವನ್ನು ಅನುಭವಿಸುವಿರಿ. ನೀವು ದೀರ್ಘ ಸಮಯದಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ.

ಇದನ್ನೂ ಓದಿ-

ಧನು ರಾಶಿಯವರ ಭವಿಷ್ಯ (Sagittarius Horoscope):  
ಧನು ರಾಶಿಯ ಜನರಿಗೆ ಇಂದಿನ ದಿನ ಶುಭದಾಯಕವಾಗಿರಲಿದೆ. ಉದ್ಯಮಿಗಳಿಗೆ ಯತ್ನ ಕಾರ್ಯಾಧಿಗಳಲ್ಲಿ ಯಶಸ್ಸು ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಪ್ರೀತಿ ಯೋಗದ ಪ್ರಭಾವದಿಂದ ಕುಟುಂಬ ಜೀವನವು ಸಂತೋಷದಿಂದ ಕೂಡಿರಲಿದೆ. ಉದ್ಯಮಿಗಲೀಗೆ ಶುಭದಾಯಕ ದಿನ.

ಮಕರ ರಾಶಿಯವರ ಭವಿಷ್ಯ (Capricorn Horoscope):  
ಮಕರ ರಾಶಿಯ ಉದ್ಯಮಿಗಳು ಇಂದು ಜಾಗರೂಕರಾಗಿ ಇರುವುದು ಒಳ್ಳೆಯದು. ನೀವು ಮಾಡುವ ಕೆಲಸಗಳಲ್ಲಿ ನಿರಾಶೆ ನಿಮ್ಮನ್ನು ಕಾಡಬಹುದು. ಹಣಕಾಸಿನ ಪರಿಸ್ಥಿತಿ ಹದಗೆಡುವ ಸಾಧ್ಯತೆ ಇರುವುದರಿಂದ ಖರ್ಚು ಮಾಡುವಾಗ ನಿಮ್ಮ ಬಜೆಟ್‌ ಬಗ್ಗೆ ನಿಗಾ ಇರಲಿ. ಹೂಡಿಕೆಗಳನ್ನು ಮಾಡುವಾಗ ಎಚ್ಚರಿಕೆ ಅಗತ್ಯ.

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಶುಭ ಶುಕ್ರವಾರ ಪ್ರೀತಿ ಯೋಗವು ಕುಂಭ ರಾಶಿಯ ಜನರಿಗೆ ವಿಶೇಷವಾಗಿ ಅನುಕೂಲಕರ ದಿನ ಎಂದು ಸಾಬೀತುಪಡಿಸಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ನಿರೀಕ್ಷೆ ಇದೆ. ಲಕ್ಷ್ಮಿ ಅನುಗ್ರಹದಿಂದ ಹಣಕಾಸಿನ ಹರಿವು ಉತ್ತಮವಾಗಿರಲಿದ್ದು ಬ್ಯಾಂಕ್‌ ಬ್ಯಾಲೆನ್ಸ್‌ ವೃದ್ಧಿಯಾಗಲಿದೆ.

ಮೀನ ರಾಶಿಯವರ ಭವಿಷ್ಯ (Pisces Horoscope): 
ಮೀನ ರಾಶಿಯ ಜನರಿಗೆ ವಿಶೇಷವಾಗಿ ಫಲಪ್ರದವಾದ ದಿನ ಇದಾಗಿರಲಿದೆ. ಇಂದು ಕೆಲಸಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಉದ್ಯೋಗಿಗಳಿಗೆ ಪ್ರಮೋಷನ್‌ ಭಾಗ್ಯವಿದೆ. ನೆಟ್‌ವರ್ಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
 

Add Zee News as a Preferred Source
TAGS:
Horoscope Today
Lucky Zodiac Signs