SOCIAL MEDIA

Newsletter

PARTNER SITES
Select Language Select State

ದಿನ ಭವಿಷ್ಯ 19-10-2026: ಸೋಮವಾರದಂದು ಧೃತಿ ಯೋಗ.. ಇಂದಿನ ನಿಮ್ಮ ಭವಿಷ್ಯ ಹೇಗಿದೆ

Today Horoscope 19th October 2026: 19 ಅಕ್ಟೋಬರ್ 2026ರಂದು ಸೋಮವಾರದಂದು ಧೃತಿ ಯೋಗ ಇರಲಿದ್ದು, ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written By Yashaswini V
Published: Oct 19, 2026, 10:03 AM IST | Updated: Oct 19, 2026, 10:05 AM IST
Join

Somavara 19th October 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ಸೋಮವಾರದ ಈ ದಿನ ಉ.ಷಾ. ನಕ್ಷತ್ರ, ಧೃತಿ ಯೋಗ, ಬಾಲವ ಕರಣ ಇರಲಿದೆ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.

ಮೇಷ ರಾಶಿ:
ಸೋಮವಾರದಂದು ಧೃತಿ ಯೋಗವು ಮೇಷ ರಾಶೀಯ ಜನರಿಗೆ ಉತ್ತಮ ಫಲಿತಾಂಶಗಳನ್ನು ತರಲಿದೆ. ಇಂದು ಸಮಯ ಎಲ್ಲಾ ರೀತಿಯಲ್ಲೂ ನಿಮಗೆ ಅನುಕೂಲಕರವಾಗಿದ್ದು, ಹಣಕಾಸಿನ ಸಮಸ್ಯೆಗಳಿಂದಲೂ ಪರಿಹಾರ ಪಡೆಯುವಿರಿ. ಕುಟುಂಬ ಜೀವನವು ಆಹ್ಲಾದಕರವಾಗಿರುತ್ತದೆ.

ವೃಷಭ ರಾಶಿ: 
ಸೋಮವಾರದಂದು ಧೃತಿ ಯೋಗವು ವೃಷಭ ರಾಶಿಯ ಜನರಿಗೆ ಉತ್ತಮ ಫಲಗಳನ್ನು ನೀಡಲಿದೆ. ಇಂದು ಹಣಕಾಸಿನ ಫಲಿತಾಂಶಗಳು ಸಕಾರಾತ್ಮವಾಗಿರಲಿವೆ. ಉದ್ಯಮಿಗಳಿಗೆ ತಮ್ಮ ವ್ಯವಹಾರವನ್ನು ವಿಸ್ತರಿಸಲು ಅನುಕೂಲಕರವಾದ ಸಮಯ. ಕುಟುಂಬ ಜೀವನವು ಸಂತೋಷದಿಂದ ಕೂಡಿರಲಿದೆ.

ಮಿಥುನ ರಾಶಿ: 
ಮಿಥುನ ರಾಶಿಯ ಜನರಿಗೆ ಇಂದು ಸಂತೋಷದಿಂದ ಕೂಡಿದ ದಿನವಾಗಿದೆ. ಉದ್ಯೋಗಸ್ಥರಿಗೆ ಶುಭ ಸುದ್ದಿ ಸಿಗುವ ನಿರೀಕ್ಷೆ ಇದೆ. ಉದ್ಯಮಿಗಳು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಹೊರಗಿನ ಆಹಾರದ ಬಗ್ಗೆ ಜಾಗರೂಕರಾಗಿರಿ. ಆರೋಗ್ಯ ಸುಧಾರಣೆಯತ್ತ ಗಮನಹರಿಸಿ.

ಕರ್ಕಾಟಕ ರಾಶಿ:
ಸೋಮವಾರದಂದು ಧೃತಿ ಯೋಗವು ಕರ್ಕಾಟಕ ರಾಶಿಯ ಜನರಿಗೆ ಅಷ್ಟು ಉತ್ತಮವಾಗಿಲ್ಲ. ಇಂದು ನಕಾರಾತ್ಮಕ ಫಲಿತಾಂಶಗಳೇ ಹೆಚ್ಚಾಗಬಹುದು. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.

ಸಿಂಹ ರಾಶಿ:
ಸಿಂಹ ರಾಶಿಯ ಜನರಿಗೆ ಇಂದಿನ ದಿನವು ಶುಭದಾಯಕವಾಗಿದ್ದು, ಉದ್ಯೋಗಿಗಳಿಗೆ ಪ್ರಮೋಷನ್‌ ನಿರೀಕ್ಷೆ ಇದೆ. ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳು ಸುಸೂತ್ರವಾಗಿ ಬಗೆಹರಿಯಲಿವೆ. ವೈವಾಹಿಕ ಬದುಕು ಆನಂದದಾಯಕವಾಗಿರುತ್ತದೆ. ಹೂಡಿಕೆ ಮಾಡಲು ಇಂದು ಅನುಕೂಲಕರ ಸಮಯ.

ಕನ್ಯಾ ರಾಶಿ:
ಸೋಮವಾರದಂದು ಧೃತಿ ಯೋಗವು ಕನ್ಯಾ ರಾಶಿಯ ಜನರಿಗೆ ವಿಶೇಷವಾಗಿ ಲಾಭದಾಯಕವಾಗಿರಲಿದೆ. ಕುಟುಂಬದಲ್ಲಿ ಅನುಕೂಲಕರ ವಾತಾವರಣ ಇರಲಿದೆ. ಅನಗತ್ಯ ಖರ್ಚುಗಳ ಬಗ್ಗೆ ಜಾಗರೂಕರಾಗಿರಿ. ಆದಾಯದ ಹೊಸ ಮೂಲಗಳು ಸೃಷ್ಟಿ ಆಗಬಹುದು. ಉದ್ಯೋಗದಲ್ಲಿ ಉತ್ತಮ ಫಲಿತಾಂಶಗಳು ಸಿಗಬಹುದು.

ತುಲಾ ರಾಶಿ: 
ಸೋಮವಾರದಂದು ಧೃತಿ ಯೋಗವು ತುಲಾ ರಾಶಿಯ ಜನರಿಗೆ ಉತ್ತಮ ಫಲವನ್ನು ನೀಡಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಉತ್ತಮ ಕ್ಷಣಗಳನ್ನು ಕಳೆಯುವ ಅವಕಾಶಗಳು ಸಿಗಬಹುದು. ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುವಿರಿ.

ವೃಶ್ಚಿಕ ರಾಶಿ:
ಸೋಮವಾರದಂದು ಧೃತಿ ಯೋಗವು ವೃಶ್ಚಿಕ ರಾಶಿಯ ಜನರಿಗೆ ಮಿಶ್ರ ಫಲಿತಾಂಶಗಳನ್ನು ನೀಡಲಿದೆ. ಇಂದು ನಿಮ್ಮ ಖರ್ಚುಗಳು ಹೆಚ್ಚಾಗುವ ನಿರೀಕ್ಷೆ ಇರುವುದರಿಂದ ಹಣಕಾಸಿನ ವಿಚಾರಗಳಲ್ಲಿ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಉದ್ಯೋಗಿಗಳೂ ಕಚೇರಿಯಲ್ಲಿ ನಿಮ್ಮ ಆಲೋಚನೆಗಳನ್ನು ಪರಿಣಾಮಕಾರಿ ಆಗಿ ವ್ಯಕ್ತಪಡಿಸುವಿರಿ.

ಧನು ರಾಶಿ:
ಸೋಮವಾರದಂದು ಧೃತಿ ಯೋಗದ ಪರಿಣಾಮವಾಗಿ ಧನು ರಾಶಿಯವರ ಬದುಕಿನಲ್ಲಿ ಸಕಾರಾತ್ಮಕತೆ ಹೆಚ್ಚಾಗಲಿದೆ. ಆದಾಗ್ಯೂ, ಹಣಕಾಸಿನ ವಿಚಾರಗಳಲ್ಲಿ ಜಾಗರೂಕರಾಗಿರುವುದು ಅಗತ್ಯ. ಉಳಿತಾಯದ ಬಗ್ಗೆ ಗಮನವಹಿಸಿ. ಮಾಡುವ ಕೆಲಸಗಳನ್ನು ಎಚ್ಚರಿಕೆಯಿಂದ ಮಾಡಿ. ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಿ.

ಮಕರ ರಾಶಿ:
ಧೃತಿ ಯೋಗವು ಮಕರ ರಾಶಿಯ ಜನರಿಗೆ ಕೆಲಸದಲ್ಲಿ ಶಕ್ತಿ, ಸಾಮರ್ಥ್ಯವನ್ನು ಹೆಚ್ಚಿಸಲಿದೆ. ಹಣಕಾಸಿನ ವಿಚಾರದಲ್ಲಿ ಇಂದು ಹೆಚ್ಚು ಪ್ರಯೋಜನಕಾರಿ ಆಗಿದೆ. ನಿಮ್ಮ ಪ್ರೀತಿಪಾತ್ರರಿಂದ ಶುಭ ಸಮಾಚಾರವನ್ನು ಕೇಳುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳು ಸಿಗಬಹುದು. ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣ ಇರುತ್ತದೆ.

ಕುಂಭ ರಾಶಿ:
ಕುಂಭ ರಾಶಿಯ ಜನರಿಗೆ ಸೋಮವಾರದಂದು ಧೃತಿ ಯೋಗವು ಆದಾಯದ ಮೂಲಗಳನ್ನು ಹೆಚ್ಚಿಸಲಿದೆ. ಇಂದು ಕೆಲಸದ ಹೊರೆ ಹೆಚ್ಚಾಗಬಹುದು. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ಪ್ರೇಮ ಜೀವನದಲ್ಲಿ ಉತ್ತಮ ವಾತಾವರಣ ಇರಲಿದೆ.

ಮೀನ ರಾಶಿ:
ಸೋಮವಾರದಂದು ಧೃತಿ ಯೋಗವು ಮೀನ ರಾಶಿಯ ಜನರಿಗೆ ಅನುಕೂಲಕರವಾಗಿದ್ದು ಉದ್ಯೋಗದಲ್ಲಿ ಸಕಾರಾತ್ಮಕತೆ ಹೆಚ್ಚಾಗಲಿದೆ. ಬಾಕಿ ಉಳಿದಿರುವ ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸುವಿರಿ. ಸ್ನೇಹಿತರಿಂದ ಶುಭ ಸುದ್ದಿ ನಿರೀಕ್ಷಿಸಬಹುದು. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES