SOCIAL MEDIA

Newsletter

PARTNER SITES
Select Language Select State

ದಿನ ಭವಿಷ್ಯ 22-10-2026: ಗುರುವಾರದಂದು ವೃದ್ಧಿ ಯೋಗ.. ಈ ರಾಶಿಯವರಿಗೆ ದಿಢೀರ್‌ ಧನಲಾಭ

Today Horoscope 22nd October 2026: 22 ಅಕ್ಟೋಬರ್ 2026ರ ಗುರುವಾರದಂದು ವೃದ್ಧಿ ಯೋಗ ಇರಲಿದ್ದು, ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written By Yashaswini V
Published: Oct 22, 2026, 08:40 AM IST | Updated: Oct 22, 2026, 08:42 AM IST
Join

Guruvara 22nd October 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಗುರುವಾರದ ಈ ದಿನ ಶತಭಿಷಾ ನಕ್ಷತ್ರ, ವೃದ್ಧಿ ಯೋಗ, ಬವ ಕರಣ ಇರಲಿದೆ.

ಮೇಷ ರಾಶಿ:
ಗುರುವಾರದಂದು ವೃದ್ಧಿ ಯೋಗವು ಮೇಷ ರಾಶಿಯ ಜನರಿಗೆ ಅಷ್ಟು ಉತ್ತಮವಾಗಿಲ್ಲ. ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇದಕ್ಕಾಗಿ ಮಾನಸಿಕವಾಗಿ ಸಿದ್ಧವಾಗಿರಿ. ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನ ಪರಿಸ್ಥಿತಿಗಳು ಸುಧಾರಿಸಲಿವೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ.

ವೃಷಭ ರಾಶಿ: 
ಗುರುವಾರದಂದು ವೃದ್ಧಿ ಯೋಗದ ಪ್ರಭಾವದಿಂದ ವೃಷಭ ರಾಶಿಯ ಜನರಿಗೆ ಅದೃಷ್ಟದ ಬಾಗಿಲುಗಳು ತೆರೆಯಲಿವೆ. ಕೆಲಸದಲ್ಲಿ ಉತ್ತಮ ಫಲಿತಾಂಶಗಳು ಸಿಗಲಿವೆ. ಪೋಷಕರಿಂದ ಅಗತ್ಯ ಬೆಂಬಲ ಸಹಕಾರ ಸಿಗಲಿದೆ. ಉದ್ಯಮಿಗಳಿಗೆ ಉತ್ತಮ ಲಾಭಾಂಶದ ಸಾಧ್ಯತೆ ಇದೆ. ಬಹು ದಿನಗಳ ನಿಮ್ಮ ಆಸೆ ಈಡೇರುವ ಸಮಯ ಇದಾಗಿದೆ.

ಮಿಥುನ ರಾಶಿ: 
ಮಿಥುನ ರಾಶಿಯವರು ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವೃದ್ಧಿ ಯೋಗದ ಪ್ರಭಾವದಿಂದ ಸಕಾರಾತ್ಮಕ ಫಲಿತಾಂಶಗಳು ಹೆಚ್ಚಾಗಲಿವೆ. ಆದಾಗ್ಯೂ, ಕೆಲವು ಮಾನಸಿಕ ಸಮಸ್ಯೆಗಳು ನಿಮ್ಮನ್ನು ಬಾಧಿಸಬಹುದು. ಇಂತಹ ಸಮಯದಲ್ಲಿ ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯ ಜನರಿಗೆ ಇಂದು ಆತ್ಮವಿಶ್ವಾಸ ಹೆಚ್ಚಾಗಲಿದೆ. ಸರಿಯಾದ ಯೋಜನೆಯೊಂದಿಗೆ ಕೆಲಸಗಳಲ್ಲಿ ಮುಂದುವರೆಯುವುದು ಒಳ್ಳೆಯದು. ಅನಿರೀಕ್ಷಿತ ವೆಚ್ಚಗಳು ನಿಮ್ಮ ಬಜೆಟ್‌ ಅನ್ನು ತೊಂದರೆಗೊಳಿಸಬಹುದು. ಕೌಟುಂಬಿಕ ಜೀವನದಲ್ಲಿ ಅನುಕೂಲಕರವಾದ ವಾತಾವರಣ ಇರುತ್ತದೆ.

ಸಿಂಹ ರಾಶಿ:
ಗುರುವಾರದಂದು ವೃದ್ಧಿ ಯೋಗವು ಸಿಂಹ ರಾಶಿಯ ಜನರಿಗೆ ಶುಭದಾಯಕವಾಗಿರುತ್ತದೆ. ಉದ್ಯಮಿಗಳು ಉತ್ತಮ ಫಲಿತಾಂಶವನ್ನು ಪಡೆಯಲಿದ್ದಾರೆ. ಬಾಕಿ ಇರುವ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ. ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ವ್ಯಾಪಾರಸ್ಥರಿಗೆ ದಿಢೀರ್‌ ಧನಲಾಭ ನಿಮ್ಮ ಹಣಕಾಸಿನ ಪರಿಸ್ಥಿತಿಯನ್ನು ಸುಧಾರಿಸಲಿದೆ.

ಕನ್ಯಾ ರಾಶಿ:
ಕನ್ಯಾ ರಾಶಿಯ ಜನರಿಗೆ ಇಂದಿನ ದಿನವು ಫಲಪ್ರದವಾಗಿದೆ. ಉದ್ಯಮಿಗಳಿಗೆ ಉತ್ತಮ ಲಾಭ ನಿರೀಕ್ಷೆ ಇದೆ. ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ. ದೀರ್ಘಾವಧಿಯಿಂದ ಬಾಕಿ ಉಳಿದಿರುವ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ರಹಸ್ಯ ಶತ್ರುಗಳ ಬಗ್ಗೆ ಜಾಗರೂಕರಾಗಿರಿ.

ತುಲಾ ರಾಶಿ: 
ಗುರುವಾರದಂದು ವೃದ್ಧಿ ಯೋಗವು ತುಲಾ ರಾಶಿಯ ಜನರಿಗೆ ಅನುಕೂಲಕರವಾಗಿರಲಿದೆ. ಸ್ನೇಹಿತರೊಂದಿಗೆ ಆಹ್ಲಾದಕರವಾದ ಸಮಯವನ್ನು ಕಳೆಯುವಿರಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಪ್ರಶಂಸೆಯನ್ನು ಪಡೆಯುವ ನಿರೀಕ್ಷೆ ಇದೆ. ಮನೆಯಲ್ಲಿ ಸಂತೋಷದಾಯಕ ವಾತಾವರಣ ಇರಲಿದೆ.

ವೃಶ್ಚಿಕ ರಾಶಿ:
ವೃದ್ಧಿ ಯೋಗವು ವೃಶ್ಚಿಕ ರಾಶಿಯ ಜನರಿಗೆ ತುಂಬಾ ಶುಭಕರ ದಿನ ಎಂದು ಸಾಬೀತುಪಡಿಸಲಿದೆ. ವೈಯಕ್ತಿಕ ಜೀವನದಲ್ಲಿ ಸುಧಾರಣೆಯನ್ನು ಕಾಣುವಿರಿ. ನೀವು ಕೈ ಹಾಕುವ ಪ್ರತಿ ಕೆಲಸದಲ್ಲೂ ಉತ್ತಮ ಫಲಿತಾಂಶವನ್ನು ಪಡೆಯುವಿರಿ. ನಿಮ್ಮ ಮಾತಿನಿಂದ ಎಲ್ಲರನ್ನೂ ಮೆಚ್ಚಿಸುವಿರಿ. ಬಂಪರ್‌ ಧನಲಾಭದ ನಿರೀಕ್ಷೆಯೂ ಇದೆ.

ಧನು ರಾಶಿ:
ಧನು ರಾಶಿಯವರಿಗೆ ಇಂದು ಆದಾಯಕ್ಕಿಂತ ಖರ್ಚು ಹೆಚ್ಚಾಗಬಹುದು. ಇಂದು ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಜೀವನವು ಅನುಕೂಲಕರವಾಗಿರುತ್ತದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಮನೆಯಲ್ಲಿ ಶುಭ ಕಾರ್ಯಗಳು ಜರುಗುವ ನಿರೀಕ್ಷೆ ಇದೆ.

ಮಕರ ರಾಶಿ:
ಗುರುವಾರದಂದು ವೃದ್ಧಿ ಯೋಗವು ಮಕರ ರಾಶಿಯವರಿಗೆ ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳಲಿದೆ. ಇಂದು ಅನಿರೀಕ್ಷಿತ ಧನಲಾಭವು ನಿಮ್ಮ ಸಂತೋಷವನ್ನು ಹೆಚ್ಚಿಸಲಿದೆ. ಪ್ರೀತಿಪಾತ್ರರಿಗಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ. ಮಾಡುವ ಪ್ರಮುಖ ಕೆಲಸಗಳಲ್ಲಿ ಸಂಬಂಧಿಕರ ಬೆಂಬಲ ಸಿಗಲಿದೆ.

ಕುಂಭ ರಾಶಿ:
ಕುಂಭ ರಾಶಿಯ ಜನರಿಗೆ ಇಂದಿನ ದಿನವು ಲಾಭದಾಯಕವಾಗಿರುತ್ತದೆ. ನಿಮ್ಮ ಕೆಲಸದಲ್ಲಿ ಪ್ರಾಮಾಣಿಕತೆ ಹೆಚ್ಚಾಗಲಿದೆ. ವೈಯಕ್ತಿಕ ಜೀವನದಲ್ಲಿ ಸುಧಾರಣೆಯನ್ನು ಕಾಣುವಿರಿ. ನಿಮ್ಮ ಗುರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಹೊಸ ಕೆಲಸಗಳನ್ನು ಮಾಡುವಾಗ ಹೆಚ್ಚು ವಿಶ್ವಾಸದಿಂದ ಇರುವುದನ್ನು ಖಚಿತಪಡಿಸಿಕೊಳ್ಳಿ.

ಮೀನ ರಾಶಿ:
ಗುರುವಾರದಂದು ವೃದ್ಧಿ ಯೋಗವು ಮೀನ ರಾಶಿಯ ಜನರಿಗ ಮಿಶ್ರ ಫಲಗಳನ್ನು ನೀಡಲಿದೆ. ನಿಮ್ಮ ಖರ್ಚುಗಳನ್ನು ಸರಿಯಾಗಿ ನಿಭಾಯಿಸದಿದ್ದರೆ ಹಣಕಾಸಿನ ಪರಿಸ್ಥಿತಿ ಹದಗೆಡಬಹುದು. ನಿಮ್ಮ ದೀರ್ಘ ಸಮಯದ ಆಸೆಗಳು ಕೈಗೂಡಬಹುದು. ವ್ಯವಹಾರದಲ್ಲಿ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ತಾಳ್ಮೆಯಿಂದ ಯೋಚಿಸಿ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES