• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಜ್ಯೋತಿಷ್ಯ
  • /ದಿನ ಭವಿಷ್ಯ 26-11-2026: ಗುರುವಾರದಂದು ಮೃಗಶಿರಾ ನಕ್ಷತ್ರದಲ್ಲಿ ಸಿದ್ಧ ಯೋಗ.. ಈ ರಾಶಿಯವರಿಗೆ ಕಂಕಣ ಭಾಗ್ಯ

ದಿನ ಭವಿಷ್ಯ 26-11-2026: ಗುರುವಾರದಂದು ಮೃಗಶಿರಾ ನಕ್ಷತ್ರದಲ್ಲಿ ಸಿದ್ಧ ಯೋಗ.. ಈ ರಾಶಿಯವರಿಗೆ ಕಂಕಣ ಭಾಗ್ಯ

Today Horoscope 26th November 2026: 26 ನವೆಂಬರ್ 2026ರ ಗುರುವಾರದಂದು ಸಿದ್ಧ ಯೋಗ ಇರಲಿದ್ದು ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written ByYashaswini V
Published: Nov 26, 2026, 10:05 IST|Updated: Nov 26, 2026, 10:07 IST
joinshare
ದಿನ ಭವಿಷ್ಯ 26-11-2026: ಗುರುವಾರದಂದು ಮೃಗಶಿರಾ ನಕ್ಷತ್ರದಲ್ಲಿ ಸಿದ್ಧ ಯೋಗ.. ಈ ರಾಶಿಯವರಿಗೆ ಕಂಕಣ ಭಾಗ್ಯ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ನವೆಂಬರ್ 27ರಿಂದ ಸತತ 3 ದಿನ ಬ್ಯಾಂಕ್ ಬಂದ್‌.. ಹಣಕಾಸಿನ ಕೆಲಸವಿದ್ರೆ ಇಂದೇ ಮುಗಿಸಿಕೊಳ್ಳಿ!

ನವೆಂಬರ್ 27ರಿಂದ ಸತತ 3 ದಿನ ಬ್ಯಾಂಕ್ ಬಂದ್‌.. ಹಣಕಾಸಿನ ಕೆಲಸವಿದ್ರೆ ಇಂದೇ ಮುಗಿಸಿಕೊಳ್ಳಿ!

2

ದಿನ ಭವಿಷ್ಯ 26-11-2026: ಗುರುವಾರದಂದು ಮೃಗಶಿರಾ ನಕ್ಷತ್ರದಲ್ಲಿ ಸಿದ್ಧ ಯೋಗ.. ಈ ರಾಶಿಯವರಿಗೆ ಕಂಕಣ ಭಾಗ್ಯ

3

ಬೆಂಗಳೂರು, ಕರಾವಳಿ ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಮುನ್ಸೂಚನೆ

4

ಆಂಧ್ರದಲ್ಲಿ ಪಂಚಾಯತ್ ಚುನಾವಣೆ ಕಾವು.. ಬೆಳಗ್ಗೆಯಿಂದಲೇ ಮತದಾನ ಬಿರುಸು!

5

ಮಗನ ಕೊ*ಲೆಗೆ ನ್ಯಾಯ ಕೇಳಿದ್ದ ತಾಯಿ, ರೋಚಕ ಸತ್ಯ ಬಿಚ್ಚಿಟ್ಟ CCTV : ಅಮ್ಮನೇ ಇಲ್ಲಿ ಯಮ.. ಏನಾಯ್ತು?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Guruvara 26th November 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಹೇಮಂತ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ, ದ್ವಿತೀಯಾ ತಿಥಿ, ಗುರುವಾರದ ಈ ದಿನ ಮೃಗಶಿರಾ ನಕ್ಷತ್ರ, ಸಿದ್ಧ ಯೋಗ, ವಣಿಜ ಕರಣ ಇರಲಿದೆ.

ಮೇಷ ರಾಶಿ:
ಸಿದ್ಧ ಯೋಗವು ಮೇಷ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಆದಾಯ ವೃದ್ಧಿಯಿಂದ ಮನೆಯಲ್ಲಿ ಶಾಂತಿ ನೆಲೆಸಲಿದೆ. ಈ ಸಮಯದಲ್ಲಿ ವಿವಾಹ ಪ್ರಯತ್ನಗಳು ಉತ್ತಮ ಫಲವನ್ನು ನೀಡಲಿದೆ. ಸಮಾಜದಲ್ಲಿ ನಿಮ್ಮ ಮಾತಿನ ಮೌಲ್ಯ ಹೆಚ್ಚಾಗಲಿದೆ. ಸಂಬಂಧಿಕರೊಂದಿಗೆ ಗೌರವವು ಬಲಗೊಳ್ಳುತ್ತದೆ.

ವೃಷಭ ರಾಶಿ: 
ವೃಷಭ ರಾಶಿಯವರಿಗೆ ಇಂದು ಆದಾಯದ ಮೂಲಗಳು ಹೆಚ್ಚಾಗಲಿದ್ದು, ಹಠಾತ್‌ ಪ್ರವಾಸ ಸಾಧ್ಯತೆಯೂ ಇದೆ. ಈ ದಿನ ನಿಮ್ಮೆಲ್ಲಾ ಪ್ರಯತ್ನಗಳಿಗೆ ಸಕಾರಾತ್ಮಕ ಫಲಗಳು ಹೆಚ್ಚಾಗಲಿವೆ. ಆಸ್ತಿ ವಿಚಾರದಲ್ಲಿ ಎಚ್ಚರಿಕೆ ಅಗತ್ಯವಾಗಿದೆ. ಸಂಬಂಧಿಕರು, ಸ್ನೇಹಿತರಿಂದ ನಿರೀಕ್ಷಿತ ಸಹಾಯ ಸಿಗಲಿದೆ. ಸಂಪರ್ಕಗಳು ಉತ್ತಮಗೊಳ್ಳಲಿವೆ.

ಮಿಥುನ ರಾಶಿ: 
ಗುರುವಾರದಂದು ಸಿದ್ಧ ಯೋಗವು ಮಿಥುನ ರಾಶಿಯವರಿಗೆ ಆದಾಯ ವೃದ್ಧಿ ಸಾಧ್ಯತೆ ಇದೆ. ಹಣಕಾಸಿನ ಪರಿಸ್ಥಿತಿಯು ಇಂದು ಅನುಕೂಲಕರವಾಗಿದೆ. ಉದ್ಯೋಗದಲ್ಲಿ ಉನ್ನತ ಸ್ಥಾನಕ್ಕೆ ಸ್ಥಳಾಂತರಗೊಳ್ಳವ ನಿರೀಕ್ಷೆ ಇದೆ. ಕುಟುಂಬದಲ್ಲಿ ಸುಖ-ಸಂತೋಷ ಹೆಚ್ಚಾಗಲಿದೆ. ಆದಾಯದ ಪ್ರಯತ್ನಗಳು ಉತ್ತಮ ಫಲವನ್ನು ನೀಡಲಿವೆ.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯ ಜನರಿಗೆ ಇಂದು ಕೆಲಸದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ವ್ಯವಹಾರದಲ್ಲಿ ಸ್ಥಿರ ಲಾಭ ಮುಂದುವರೆಯಲಿದೆ. ಕೆಲಸದಲ್ಲಿ ನಿಮ್ಮ ಕಾರ್ಯಕ್ಷಮತೆ ಸುಧಾರಿಸಲಿದೆ. ವ್ಯವಹಾರದಲ್ಲಿ ಇತರರನ್ನು ಅವಲಂಬಿಸದೇ ಇರುವುದು ಒಳ್ಳೆಯದು. ಹಿಂದೆ ನಿಮ್ಮಿಂದ ಸಹಾಯ ಪಡೆದವರು ಇಂದು ನಿಮ್ಮ ಸಹಾಯಕ್ಕೆ ಬರದೇ ಇರಬಹುದು.

ಸಿಂಹ ರಾಶಿ:
ಸಿಂಹ ರಾಶಿಯವರಿಗೆ ಕೆಲಸದಲ್ಲಿ ಇಂದು ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ. ವೃತ್ತಿ, ವ್ಯವಹಾರದಲ್ಲಿ ಲಾಭದ ಕೊರತೆ ಇರುವುದಿಲ್ಲ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಆದಾಯವು ಸ್ಥಿರವಾಗಿರುತ್ತದೆ. ಇಂದು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ಅನಾರೋಗ್ಯವನ್ನು ನಿರ್ಲಕ್ಷಿಸದೇ ಇರುವುದು ಒಳಿತು.

ಕನ್ಯಾ ರಾಶಿ:
ಕನ್ಯಾ ರಾಶಿಯವರಿಗೆ ಇಂದು ಕೆಲಸದಲ್ಲಿ ಒತ್ತಡ ಹೆಚ್ಚಾಗಹುದು. ವೃತ್ತಿ, ವ್ಯವಹಾರದಲ್ಲಿ ಅನುಕೂಲಕರ ಸಮಯ ಇದಾರಿಗಲಿದೆ. ಜೀವನ ಸಂಗಾತಿಯೊಂದಿಗಿನ ಭಿನ್ನಾಭಿಪ್ರಯಗಳು ಬಗೆಹರಿಯಲಿವೆ. ನೆರೆಹೊರೆಯವರೊಂದಿಗೆ ಅನಗತ್ಯ ವಾದಗಳಿಂದ ದೂರವಿರಿ. ಕೌಟುಂಬಿಕ ವಿಷಯಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.

ತುಲಾ ರಾಶಿ: 
ತುಲಾ ರಾಶಿಯವರಿಗೆ ಇಂದು ಕೆಲಸದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ವ್ಯವಹಾರದಲ್ಲಿ ಅಭಿವೃದ್ಧಿಯನ್ನು ಕಾಣುವ ಲಕ್ಷಣಗಳಿವೆ. ಆದಾಯದ ಮೂಲಗಳು ಹೆಚ್ಚಾಗಲಿವೆ. ವ್ಯರ್ಥ ಖರ್ಚುಗಳನ್ನು ಕಡಿಮೆ ಮಾಡುವುದು ಉತ್ತಮವಾಗಿರಲಿವೆ. ಕುಟುಂಬದಲ್ಲಿ ಪರಿಸ್ಥಿತಿ ಉತ್ತಮವಾಗಿರುತ್ತದೆ.

ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯ ಜನರಿಗೆ ಆರ್ಥಿಕ ಪರಿಸ್ಥಿತಿ ಇಂದು ತೃಪ್ತಿದಾಯಕವಾಗಿರುತ್ತದೆ. ಆದಾಯವು ಗಮನಾರ್ಹವಾಗಿ ಹೆಚ್ಚಾಗಲಿದೆ. ಹೂಡಿಕೆಗೆ ಇದು ಅನುಕೂಲಕರ ಸಮಯವಾಗಿದೆ. ಪ್ರಮುಖ ಕೆಲಸಗಳು ಪೂರ್ಣಗೊಳ್ಳಲಿವೆ. ವೈಯಕ್ತಿಕ ಸಮಸ್ಯೆಗಳಿಂದ ಪರಿಹಾರ ಪಡೆಯುವಿರಿ. ಉದ್ಯೋಗ ರಂಗದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಗಳಿಸುವಿರಿ.

ಧನು ರಾಶಿ:
ಧನು ರಾಶಿಯವರಿಗೆ ಇಂದು ಕಂಕಣ ಭಾಗ್ಯ ಕೂಡಿ ಬರುವ ನಿರೀಕ್ಷೆ ಇದೆ. ಹಣಕಾಸಿನ ವಿಚಾರಗಳಲ್ಲಿ ನಿಮ್ಮ ಸ್ವಂತ ನಿರ್ಧಾರಗಳು ಫಲಪ್ರದವಾಗಿರಲಿವೆ. ವಿದೇಶ ವ್ಯವಹಾರದಲ್ಲಿ ಅನುಕೂಲಕರ ಸ್ಥಿತಿ ಇರಲಿದೆ. ಕೆಲಸದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮಗೊಳ್ಳಲಿವೆ.

ಮಕರ ರಾಶಿ:
ಮಕರ ರಾಶಿಯ ಉದ್ಯೋಗಿಗಳಿಗೆ ಕೆಲಸದಲ್ಲಿ ನಿಮ್ಮ ಪ್ರಾಮುಖ್ಯತೆ ಹೆಚ್ಚಾಗಲಿದೆ. ಅಧಿಕಾರಿಗಳಿಂದ ಅಪೇಕ್ಷಿತ ಪ್ರೋತ್ಸಾಹ ಸಿಗುವ ನಿರೀಕ್ಷೆ ಇದೆ. ವ್ಯವಹಾರದಲ್ಲಿ ಹಲವು ರೀತಿಯ ಬದಲಾವಣೆಗಳಿಗೆ ಇಂದಿನ ದಿನ ಸಾಕ್ಷಿ ಆಗಲಿದೆ. ಮನೆಯಲ್ಲಿ ಶುಭ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ.

ಕುಂಭ ರಾಶಿ:
ಕುಂಭ ರಾಶಿಯವರಿಗೆ ಇಂದು ನಿಮ್ಮ ಪ್ರಯತ್ನಗಳಿಗೆ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಅನುಕೂಲಕರ ಪರಿಸ್ಥಿತಿ ಇರಲಿದೆ. ಉದ್ಯೋಗದಲ್ಲಿ ನಿಮ್ಮ ಪ್ರತಿಭೆಗೆ ಅಪೇಕ್ಷಿತ ಪ್ರತಿಫಲ ಸಿಗಬಹುದು. ಆಸ್ತಿ ವಿವಾದಗಳು ಸುಸೂತ್ರವಾಗಿ ಬಗೆಹರಿಯಲಿದೆ. ಹೆತ್ತವರ ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣಬಹುದು.

ಮೀನ ರಾಶಿ:
ಮೀನ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ನಿಮ್ಮ ಪ್ರಾಮುಖ್ಯತೆ ಹೆಚ್ಚಾಗಲಿದೆ. ವೃತ್ತಿ, ವ್ಯವಹಾರಗಳು ಉತ್ತಮವಾಗಿ ನಡೆಯುತ್ತವೆ. ವ್ಯವಹಾರದಲ್ಲಿ ಹೂಡಿಕೆಗಳು ಹೆಚ್ಚಾಗುವ ನಿರೀಕ್ಷೆ ಇದೆ. ಹಠಾತ್‌ ಪ್ರಯಾಣದ ನಿರೀಕ್ಷಿ ಇದೆ. ಕುಟುಂಬಸ್ಥರೊಂದಿಗೆ ದೇವಾಲಯಕ್ಕೆ ತೆರಳುವ ನಿರೀಕ್ಷೆ ಇದೆ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
 

Add Zee News as a Preferred Source
TAGS:
Dina Bhavishya
Horoscope Today