• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಜ್ಯೋತಿಷ್ಯ
  • /ದಿನ ಭವಿಷ್ಯ 29-10-2026: ಗುರುವಾರದಂದು ಪರಿಘ ಯೋಗ.. ಈ ರಾಶಿಯವರಿಗೆ ಧನ ಯೋಗ

ದಿನ ಭವಿಷ್ಯ 29-10-2026: ಗುರುವಾರದಂದು ಪರಿಘ ಯೋಗ.. ಈ ರಾಶಿಯವರಿಗೆ ಧನ ಯೋಗ

Today Horoscope 29th October 2026: 29 ಅಕ್ಟೋಬರ್ 2026ರಂದು ರೋಹಿಣಿ ನಕ್ಷತ್ರದಲ್ಲಿ ಪರಿಘ ಯೋಗ ಇರಲಿದ್ದು, ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written ByYashaswini V
Published: Oct 29, 2026, 09:50 AM IST|Updated: Oct 29, 2026, 09:54 AM IST
joinshare
ದಿನ ಭವಿಷ್ಯ 29-10-2026: ಗುರುವಾರದಂದು ಪರಿಘ ಯೋಗ.. ಈ ರಾಶಿಯವರಿಗೆ ಧನ ಯೋಗ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ದಿನ ಭವಿಷ್ಯ 29-10-2026: ಗುರುವಾರದಂದು ಪರಿಘ ಯೋಗ.. ಈ ರಾಶಿಯವರಿಗೆ ಧನ ಯೋಗ

ದಿನ ಭವಿಷ್ಯ 29-10-2026: ಗುರುವಾರದಂದು ಪರಿಘ ಯೋಗ.. ಈ ರಾಶಿಯವರಿಗೆ ಧನ ಯೋಗ

2

WPL 2027 Auction: ₹1.10 ಕೋಟಿಗೆ ಸೋಫಿ ಮೊಲಿನ್ಯೂ ಖರೀದಿಸಿದ ಯುಪಿ ವಾರಿಯರ್ಸ್, ಆರ್‌ಸಿಬಿಗೆ ನಿರಾಸೆ!

3

ಐದು ವರ್ಷಗಳಾದರೂ ಮಾಸದ ಅಪ್ಪು ನೆನಪು.. ಪುಣ್ಯಸ್ಮರಣೆ ದಿನ ಕಂಠೀರವದಲ್ಲಿ ಅಭಿಮಾನಿಗಳ ಮಹಾಪೂರ!

4

ಬುಧನ ನಕಾರಾತ್ಮಕ ಪ್ರಭಾವವೇ ಜಾಕ್‌ಪಾಟ್ ಆಗುತ್ತಾ? ಉದ್ಯೋಗ, ಆರ್ಥಿಕ ಲಾಭದ ಯೋಗ ಯಾರಿಗೆ?

5

ಕೂದಲಿಗೆ ಎಣ್ಣೆ ಹಚ್ಚಲು ಉತ್ತಮ ಸಮಯ ಯಾವುದು? ಬೆಳಿಗ್ಗೆ ಅಥವಾ ರಾತ್ರಿ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Guruvara 29th October 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಅಶ್ವಯುಜ ಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ಗುರುವಾರದ ಈ ದಿನ ರೋಹಿಣಿ ನಕ್ಷತ್ರ, ಪರಿಘ ಯೋಗ, ಬವ ಕರಣ ಇರಲಿದೆ.

ಮೇಷ ರಾಶಿ:
ಪರಿಘ ಯೋಗವು ಮೇಷ ರಾಶಿಯ ಜನರಿಗೆ ತುಂಬಾ ಶುಭಪ್ರದವಾಗಿರುತ್ತದೆ. ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವ ಸಾಧ್ಯತೆ ಇದ್ದು, ದೀರ್ಘಾವಧಿಯಿಂದ ಬಾಕಿ ಉಳಿದಿರುವ ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸುವ ನಿರೀಕ್ಷೆ ಇದೆ. ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಬೆಂಬಲ ಸಿಗಲಿದೆ.

ವೃಷಭ ರಾಶಿ: 
ಪರಿಘ ಯೋಗವು ವೃಷಭ ರಾಶಿಯವರಿಗೆ ಸಂತೋಷದಾಯಕವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಆನಂದದಾಯಕ ವಾತಾವರಣ ಇರಲಿದೆ. ವ್ಯವಹಾರದಲ್ಲಿ ಲಾಭಾಂಶಗಳು ಹೆಚ್ಚಾಗಲಿವೆ. ಉದ್ಯೋಗಸ್ಥರಿಗೆ ಉತ್ತಮ ಫಲ ಸಿಗಲಿದೆ. ವೃತ್ತಿಯಲ್ಲಿ ಪ್ರಗತಿಯ ಅವಕಾಶಗಳಿವೆ.

ಮಿಥುನ ರಾಶಿ: 
ಮಿಥುನ ರಾಶಿಯ ಜನರಿಗೆ ಇಂದು ಹಲವು ವಿಚಾರಗಳು ಪ್ರಯೋಜನಕಾರಿ ಆಗಿರಲಿದೆ. ಹೊಸ ವಿಚಾರಗಳು ಅನುಕೂಲಕರ ಫಲವನ್ನು ತರಲಿದೆ. ಕಚೇರಿಯಲ್ಲಿ ಉತ್ತಮ ವಾತಾವರಣ ಇರಲಿದೆ. ಉದ್ಯೋಗಿಗಳಿಗೆ ಸಕಾರಾತ್ಮಕ ವಾತಾವರಣ ಇರಲಿದೆ. ವೃತ್ತಿ ಜೀವನದಲ್ಲಿ ಪ್ರಗತಿಯ ಅವಕಾಶಗಳಿವೆ.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯ ಉದ್ಯೋಗಿಗಳಿಗೆ ಪರಿಘ ಯೋಗವು ಫಲಪ್ರದವಾಗಿದೆ. ಇಂದು ಉದ್ಯಮಿಗಳಿಗೂ ದಿನ ಲಾಭದಾಯಕವಾಗಿರುತ್ತದೆ. ದಿಢೀರ್‌ ದೂರ ಪ್ರಯಾಣ ನಿರೀಕ್ಷೆ ಇದೆ. ಆದಾಗ್ಯೂ, ಪ್ರಯಾಣವು ಲಾಭದಾಯಕವಾಗಿರುತ್ತದೆ. ಅಧಿಕ ವೆಚ್ಚಗಳನ್ನು ನಿಭಾಯಿಸಲು ಪ್ರಯತ್ನಿಸಿ. ಕುಟುಂಬ ಸದಸ್ಯರೊಂದಿಗೆ ಗುಣಮಟ್ಟದ ಸಮಯ ಕಳೆಯುವಿರಿ.

ಸಿಂಹ ರಾಶಿ:
ಸಿಂಹ ಋಾಶಿಯ ಜನರಿಗೆ ಪರಿಘ ಯೋಗವು ಲಾಭದಾಯಕವಾಗಿರುತ್ತದೆ. ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಕೆಲಸದಲ್ಲಿ ಪ್ರಗತಿಯ ಸೂಚನೆಗಳಿವೆ. ಉದ್ಯೋಗದಲ್ಲಿ ಬಡ್ತಿಯನ್ನು ಕಾಣಬಹುದು. ಪ್ರಮುಖ ಪ್ರಾಜೆಕ್ಟ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಸಹೋದ್ಯೋಗಿಗಳ ಬೆಂಬಲ ಸಹಕಾರ ಸಿಗಲಿದೆ.

ಕನ್ಯಾ ರಾಶಿ:
ಪರಿಘ ಯೋಗವು ಕನ್ಯಾ ರಾಶಿಯವರಿಗೆ ಅನುಕೂಲಕರವಾಗಿರಲಿದೆ. ಇಂದು ಕೆಲಸದಲ್ಲಿ ಶಿಸ್ತು, ಏಕಾಗ್ರತೆ ಹೆಚ್ಚಾಗಲಿದೆ. ಹೊಸ ಯೋಜನೆಗಳು ಕೈಸೇರವ ನಿರೀಕ್ಷೆ ಇದೆ. ಬಾಕಿ ಇರುವ ಕೆಲಸಗಳಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವಿರಿ.

ತುಲಾ ರಾಶಿ: 
ಪರಿಘ ಯೋಗವು ತುಲಾ ರಾಶಿಯ ಜನರಿಗೆ ಫಲಪ್ರದವಾಗಿರಲಿದೆ. ಇಂದು ಕುಟುಂಬದಲ್ಲಿ ಉತ್ತಮ ವಾತಾವರಣ ಇರಲಿದೆ. ಉದ್ಯೋಗಿಗಳಿಗೆ ಸಹೋದ್ಯೋಗಿಗಳಿಂದ ಅಗತ್ಯ ಬೆಂಬಲ, ಸಹಕಾರ ಸಿಗಲಿದೆ. ವ್ಯಾಪಾರಸ್ಥರಿಗೆ ಭರ್ಜರಿ ಧನ ಲಾಭ ನಿರೀಕ್ಷೆ ಇದ್ದು, ಬ್ಯಾಂಕ್‌ ಬ್ಯಾಲೆನ್ಸ್‌ ಹೆಚ್ಚಾಗಲಿದೆ.

ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯವರಿಗೆ ಧನ ಯೋಗವು ಇಂದು ಫಲಪ್ರದವಾಗಿರಲಿದೆ. ಹಣಕಾಸಿನ ವಿಚಾರದಲ್ಲಿ ಸಾಕ್ಷಾತ್‌ ಲಕ್ಷ್ಮಿ ದೇವಿಯ ಅನುಗ್ರಹ ಇರಲಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಸಂತಸದ ವಾತಾವರಣ ಇರಲಿದೆ. ಕುಟುಂಬ ಜೀವನದಲ್ಲಿ ಅನುಕೂಲಕರ ವಾತಾವರಣ ಇರಲಿದೆ. ಆರೋಗ್ಯದ ವಿಚಾರದಲ್ಲೂ ಸುಧಾರಣೆಯನ್ನು ಕಾಣುವಿರಿ.

ಧನು ರಾಶಿ:
ಪರಿಘ ಯೋಗವು ಧನು ರಾಶಿಯ ಜನರಿಗೆ ಹಣಕಾಸಿನ ಪರಿಸ್ಥಿತಿಯನ್ನು ಸುಧಾರಿಸಲಿದೆ. ಅನಿರೀಕ್ಷಿತ ಧನ ಲಾಭವು ನಿಮ್ಮನ್ನು ಆರ್ಥಿಕ ಸಂಕಷ್ಟದಿಂದ ಹೊರತರುವಲ್ಲಿ ಪರಿಣಾಮಕಾರಿ ಆಗಿದೆ. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳು ಸಿಗಬಹುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಆಯೋಜಿಸುವ ಬಗ್ಗೆ ಯೋಚಿಸಬಹುದು.

ಮಕರ ರಾಶಿ:
ಮಕರ ರಾಶಿಯವರಿಗೆ ಪರಿಘ ಯೋಗವು ಧನಾತ್ಮಕ ಫಲಗಳನ್ನೇ ತರಲಿದೆ. ಆದರೆ, ಯಾವುದೇ ವ್ಯವಹಾರದಲ್ಲಿ ಆತುರರಾಗಿ ನಿರ್ಧಾರ ಕೈಗೊಳ್ಳುವುದನ್ನು ತಪ್ಪಿಸಬೇಕು. ಕುಟುಂಬದಲ್ಲಿ ಸಂಬಂಧಿಕರ ಬೆಂಬಲ ಸಿಗಲಿದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ವ್ಯವಹಾರ ನಿಮಿತ್ತ ಪ್ರಯಾಣ ಸಾಧ್ಯತೆ ಇದೆ.

ಕುಂಭ ರಾಶಿ:
ಪರಿಘ ಯೋಗವು ಕುಂಭ ರಾಶಿಯವರಿಗೆ ಪ್ರೇಮ ಜೀವನದಲ್ಲಿ ಸಂತೋಷವನ್ನು ಹೆಚ್ಚಿಸಲಿದೆ ಇಂದು ಕೆಲಸಗಳು ಸುಸೂತ್ರವಾಗಿ ಜರುಗಲಿದ್ದು, ಹೊಸ ಯೋಜನೆಗಳಲ್ಲಿ ಶುಭ ಫಲಗಳನ್ನು ನಿರೀಕ್ಷಿಸಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಔತಣಕೂಟಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಮೀನ ರಾಶಿ:
ಮೀನ ರಾಶಿಯವರಿಗೆ ಇಂದು ಶುಭ ಸಮಾಚಾರ ಸಿಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಸಂತೋಷದ ವಾತಾವರಣ ಇರಲದೆ. ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಮನ್ನಣೆ ನೀಡುವರು. ವ್ಯವಹಾರಸ್ಥರಿಗೆ ಆದಾಯಕ ಮೂಲಗಳು ಹೆಚ್ಚಾಗಲಿವೆ. ಸಂಗಾತಿಯೊಟ್ಟಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
 

Add Zee News as a Preferred Source
TAGS:
Dina Bhavishya
Horoscope Today