• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಜ್ಯೋತಿಷ್ಯ
  • /ದಿನ ಭವಿಷ್ಯ 31-10-2026: ಶನಿವಾರದಂದು ಸಿದ್ಧ ಯೋಗ.. ಈ ರಾಶಿಯವರಿಗೆ ಕನಸು ನನಸಾಗುವ ಸಮಯ

ದಿನ ಭವಿಷ್ಯ 31-10-2026: ಶನಿವಾರದಂದು ಸಿದ್ಧ ಯೋಗ.. ಈ ರಾಶಿಯವರಿಗೆ ಕನಸು ನನಸಾಗುವ ಸಮಯ

Today Horoscope 31st October 2026: 31 ಅಕ್ಟೋಬರ್ 2026ರ ಶನಿವಾರದಂದು ಅರ್ದ್ರಾ ನಕ್ಷತ್ರದಲ್ಲಿ ಸಿದ್ಧ ಯೋಗ ಇರಲಿದ್ದು ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.

Written ByYashaswini V
Published: Oct 31, 2026, 06:26 AM IST|Updated: Oct 31, 2026, 07:29 AM IST
joinshare
ದಿನ ಭವಿಷ್ಯ 31-10-2026: ಶನಿವಾರದಂದು ಸಿದ್ಧ ಯೋಗ.. ಈ ರಾಶಿಯವರಿಗೆ ಕನಸು ನನಸಾಗುವ ಸಮಯ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
“ವಾರ್ಡ್ ಒನ್” ಅಭಿಯಾನಕ್ಕೆ ಚಾಲನೆ! ಇಂದಿನಿಂದ ಖಾತಾ ಮೇಳ ಆರಂಭ

“ವಾರ್ಡ್ ಒನ್” ಅಭಿಯಾನಕ್ಕೆ ಚಾಲನೆ! ಇಂದಿನಿಂದ ಖಾತಾ ಮೇಳ ಆರಂಭ

2

ಕರ್ನಾಟಕದಲ್ಲಿ ಮತ್ತೊಂದು ಬೆಲೆ ಏರಿಕೆ ಶಾಕ್: ಲೀಟರ್ ಮೊಸರಿನ ದರ ಬರೋಬ್ಬರಿ 14 ರೂ. ಹೆಚ್ಚಳ!

3

ಬಾಗಲಕೋಟೆಯಲ್ಲಿ ರೈತರ ಬಂದ್‌ ಕರೆ: ರಾಷ್ಟ್ರೀಯ ಹೆದ್ದಾರಿ ತಡೆ ಹಿನ್ನಲೆ BNS 163 ನಿಷೇದಾಜ್ಞೆ ಜಾರಿ

4

ದಿನ ಭವಿಷ್ಯ 31-10-2026: ಶನಿವಾರದಂದು ಸಿದ್ಧ ಯೋಗ.. ಈ ರಾಶಿಯವರಿಗೆ ಕನಸು ನನಸಾಗುವ ಸಮಯ

5

Bigg Boss Kannada 13: ತಾಂಡವ್ vs ಜಗದೀಶ್; ಈ ವಾರದ ಕ್ಯಾಪ್ಟನ್ ಪಟ್ಟ ಯಾರಿಗೆ? ರೋಚಕ ಹಣಾಹಣಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Shanivara 31st October 2026 Dina Bhavishya In Kannada: ಶ್ರೀ ಶಾಲಿವಾಹನ ಶಕೆ 1948, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಅಶ್ವಯುಜ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಶನಿವಾರದ ಈ ದಿನ ಆರ್ದ್ರಾ ನಕ್ಷತ್ರ, ಸಿದ್ಧ ಯೋಗ, ವಿಷ್ಟಿ ಕರಣ ಇರಲಿದೆ.

ಮೇಷ ರಾಶಿ:
ಸಿದ್ಧ ಯೋಗವು ಮೇಷ ರಾಶಿಯ ಜನರಿಗೆ ಸಕಾರಾತ್ಮಕ ಫಲಿತಾಂಶಗಳನ್ನು ಹೆಚ್ಚಿಸಲಿದೆ. ವೃತ್ತಿ ಜೀವನದಲ್ಲಿ ಪ್ರಗತಿಯ ಅವಕಾಶಗಳಿವೆ ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸೂಕ್ತ ಮನ್ನಣೆ, ಸಹಕಾರ ಸಿಗಲಿದೆ. ಉದ್ಯಮಿಗಳಿಗೂ ಉತ್ತಮ ಲಾಭಾಂಶವನ್ನು ನಿರೀಕ್ಷಿಸಬಹುದಾದ ದಿನ.

ವೃಷಭ ರಾಶಿ: 
ವೃಷಭ ರಾಶಿಯವರು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯುವ ಸೂಚನೆಗಳಿವೆ. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳಲಿದೆ. ಕುಟುಂಬ ಜೀವನದಲ್ಲಿ ಸಂತಸದ ವಾತಾವರಣ ಇರಲಿದೆ. ಮಾಡುವ ಕೆಲಸಗಳಲ್ಲಿ ಸಂಗಾತಿಯಿಂದ ಅಗತ್ಯ ಬೆಂಬಲ ಸಹಕಾರ ಸಿಗಲಿದೆ. ಸಂಬಂಧಿಕರಿಂದ ಶುಭ ಸಮಾಚಾರ ಸಿಗಲಿದೆ.

ಮಿಥುನ ರಾಶಿ: 
ಸಿದ್ಧ ಯೋಗವು ಮಿಥುನ ರಾಶಿಯವರಿಗೆ ನಿಮ್ಮ ಬಹುದಿನಗಳ ಕನಸನ್ನು ನನಸಾಗಿಸಲಿದೆ. ಉದ್ಯೋಗಸ್ಥರಿಗೆ ನಿರೀಕ್ಷಿತ ಶುಭ ಸಮಾಚಾರ ಕೇಳುವ ಅವಕಾಶಗಳಿವೆ. ವ್ಯವಹಾರಸ್ಥರಿಗೆ ದೀರ್ಘಾವಧಿಯಿಂದ ಸ್ಥಗಿತಗೊಂಡಿದ್ದ ಕೆಲಸಗಳು ಪ್ರಗತಿಯನ್ನು ಕಾಣಲಿವೆ. ಮಕ್ಕಳಿಂದ ಸಹಕಾರ ಸಿಗಲಿದೆ.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯ ಜನರಿಗೆ ಇಂದು ಸಂಪತ್ತು ಹೆಚ್ಚಾಗುವ ಸೂಚನೆಗಳಿವೆ. ನಿಮ್ಮ ಹಣಕಾಸಿನ ಪರಿಸ್ಥಿತಿ ಬಲಗೊಳ್ಳಲಿದೆ. ಉದ್ಯಮಿಗಳಿಗೆ ಆದಾಯದ ಮೂಲಗಳು ಹೆಚ್ಚಾಗಲಿವೆ. ವಿದೇಶ ವ್ಯವಹಾರದ ನಿಮ್ಮ ಕನಸು ನನಸಾಗುವ ಸುವರ್ಣ ಸಮಯ ಎಂದು ಸಾಬೀತುಪಡಿಸಲಿದೆ.

ಸಿಂಹ ರಾಶಿ:
ಸಿದ್ಧ ಯೋಗವು ಸಿಂಹ ರಾಶಿಯವರಿಗೆ ಇಂದು ಸಕಾರಾತ್ಮಕ ಫಲಗಳನ್ನು ಹೆಚ್ಚಿಸಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯನ್ನು ಕಾಣುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಸಂಬಂಧಿಕರಿಂದ ಪ್ರಮುಖ ವ್ಯವಹಾರಗಳಲ್ಲಿ ಉತ್ತಮ ಸಹಕಾರವನ್ನು ಪಡೆಯುವಿರಿ.

ಕನ್ಯಾ ರಾಶಿ:
ಕನ್ಯಾ ರಾಶಿಯವರಿಗೆ ಇಂದು ವೃತ್ತಿ ಬದುಕಿನಲ್ಲಿ ಪ್ರಗತಿಯ ಅವಕಾಶಗಳಿವೆ. ಹೊಸ ಕೆಲಸಗಳನ್ನು ಪ್ರಾರಂಭಿಸಲು ಯೋಜಿಸುತ್ತಿರುವವರಿಗೆ ಅನುಕೂಲಕರ ಸಮಯ ಇದಾಗಿದೆ. ದೀರ್ಘಾವಧಿಯಿಂದ ಬಾಕಿ ಇರುವ ಕೆಲಸಗಳಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ನಿರೀಕ್ಷಿಸಬಹುದು.

ತುಲಾ ರಾಶಿ: 
ತುಲಾ ರಾಶಿಯವರಿಗೆ ಇಂದು ಆದಾಯದ ಮೂಲಗಳು ಹೆಚ್ಚಾಗುವ ನಿರೀಕ್ಷೆ ಇದ್ದು, ನಿಮ್ಮ ಬಹುದಿನಗಳ ಆಸೆಗಳು ನೆರವೇರಲಿವೆ. ಉದ್ಯಮಿಗಳಿಗೆ ಅಧಿಕ ಲಾಭಾಂಶಗಳನ್ನು ನಿರೀಕ್ಷಿಸಬಹುದಾದ ದಿನ. ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯವೂ ಉತ್ತಮವಾಗಿರಲಿದೆ.

ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯವರಿಗೆ ಇಂದು ಅದೃಷ್ಟದ ದಿನವಾಗಿದ್ದು ನಿಮ್ಮ ಕೆಲಸಗಳಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವಿರಿ. ವಿರೋಧಿಗಳ ವಿರುದ್ಧ ಜಯ ಸಾಧಿಸುವಿರಿ. ಕುಟುಂಬ ಜೀವನದಲ್ಲಿ ಸ್ವಲ್ಪ ಸಂಯಮವನ್ನು ಕಾಪಾಡಿಕೊಳ್ಳಿ. ಬಹಳ ದಿನಗಳಿಂದ ಅನುಭವಿಸುತ್ತಿದ್ದ ಮಾನಸಿಕ ಒತ್ತಡ ಕಡಿಮೆ ಆಗಲಿದೆ.

ಧನು ರಾಶಿ:
ಧನು ರಾಶಿಯ ಜನರಿಗೆ ಮಾಡುವ ಪ್ರತಿ ಕೆಲಸದಲ್ಲೂ ಅದೃಷ್ಟ ಕೈ ಹಿಡಿಯಲಿದ್ದು ಉದ್ಯೋಗಿಗಳಿಗೆ ಉನ್ನತ ಹುದ್ದೆಯನ್ನು ಅಲಂಕರಿಸುವ ಅವಕಾಶಗಳಿವೆ. ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಮಯ ಸಿಗಲಿದೆ. ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ.

ಮಕರ ರಾಶಿ:
ಮಕರ ರಾಶಿಯವರು ಇಂದು ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ಉದ್ಯೋಗಿಗಳಿಗೆ ಕೆಲಸದಲ್ಲಿ ಒತ್ತಡದ ವಾತಾವರಣ ಇರಬಹುದು. ವ್ಯವಹಾರಸ್ಥರಿಗೆ ಕೆಲಸದಲ್ಲಿ ಅಡೆತಡೆಗಳು ನಿವಾರಣೆ ಆಗಲಿವೆ.

ಕುಂಭ ರಾಶಿ:
ಸಿದ್ಧ ಯೋಗವು ಕುಂಭ ರಾಶಿಯ ಜನರಿಗೆ ಉತ್ತಮ ಫಲಿತಾಂಶಗಳನ್ನು ನೀಡಲಿದೆ. ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಅಗತ್ಯ ಬೆಂಬಲ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಕುಟುಂಬ ಜೀವನದಲ್ಲಿ ವಾತಾವರಣ ಅನುಕೂಲಕರವಾಗಿರಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡುವರು.

ಮೀನ ರಾಶಿ:
ಮೀನ ರಾಶಿಯವರು ಇಂದು ತುಂಬಾ ಜಾಗರೂಕರಾಗಿರಬೇಕು. ಅಪಾಯಕಾರಿ ಹೂಡಿಕೆಗಳನ್ನು ತಪ್ಪಿಸಿ. ರಾಜಕೀಯ ಜೀವನದಲ್ಲಿ ಇರುವವರಿಗೆ ಉತ್ತಮ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಹಿರಿಯರ ಬೆಂಬಲ ಸಹಕಾರ ಸಿಗಲಿದೆ. ನಿಮ್ಮ ಆರೋಗ್ಯದದ ಬಗ್ಗೆ ವಿಶೇಷ ಕಾಳಜಿ ವಹಿಸಿ.

ಸೂಚನೆ :  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
 

Add Zee News as a Preferred Source
TAGS:
Dina Bhavishya
Horoscope Today