• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ವ್ಯಾಪಾರ
  • /WION Iconic Tourism Summit: ದೆಹಲಿ ಪ್ರವಾಸೋದ್ಯಮಕ್ಕೆ ಹೊಸ ರೂಪ; ಉದ್ಯಮದ ಸಹಭಾಗಿತ್ವಕ್ಕೆ ಸಚಿವ ಕಪಿಲ್ ಮಿಶ್ರಾ ಆಹ್ವಾನ

WION Iconic Tourism Summit: ದೆಹಲಿ ಪ್ರವಾಸೋದ್ಯಮಕ್ಕೆ ಹೊಸ ರೂಪ; ಉದ್ಯಮದ ಸಹಭಾಗಿತ್ವಕ್ಕೆ ಸಚಿವ ಕಪಿಲ್ ಮಿಶ್ರಾ ಆಹ್ವಾನ

ದೆಹಲಿಯನ್ನು ಜಾಗತಿಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಉದ್ಯಮದವರಿಂದ ಹೊಸ ಆಲೋಚನೆಗಳು ಮತ್ತು ಸಲಹೆಗಳನ್ನು ಸರ್ಕಾರ ಸ್ವೀಕರಿಸಲು ಸಿದ್ಧವಾಗಿದೆ. ಪ್ರವಾಸಿಗರಿಗೆ ಹೊಸ ಅನುಭವಗಳನ್ನು ಒದಗಿಸುವ ಮಾರ್ಗಗಳ ಕುರಿತು ಸರ್ಕಾರ ಗಮನಹರಿಸುತ್ತಿದೆ ಎಂದು ದೆಹಲಿ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ ತಿಳಿಸಿದ್ದಾರೆ.

Reported ByPuttaraj K AlurEdited ByPuttaraj K Alur
Published: Sep 23, 2026, 01:14 PM IST|Updated: Sep 23, 2026, 01:22 PM IST
joinshare
WION Iconic Tourism Summit: ದೆಹಲಿ ಪ್ರವಾಸೋದ್ಯಮಕ್ಕೆ ಹೊಸ ರೂಪ; ಉದ್ಯಮದ ಸಹಭಾಗಿತ್ವಕ್ಕೆ ಸಚಿವ ಕಪಿಲ್ ಮಿಶ್ರಾ ಆಹ್ವಾನ
Image Credit: Minister Kapil Mishra

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

WION Iconic Tourism Summit and Awards 2026: ದೆಹಲಿ ಪ್ರವಾಸೋದ್ಯಮವನ್ನು ಜಾಗತಿಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಹೊಸ ಯೋಜನೆಗಳನ್ನು ರೂಪಿಸುತ್ತಿದೆ ಎಂದು ದೆಹಲಿ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ ಹೇಳಿದ್ದಾರೆ. ನವದೆಹಲಿಯಲ್ಲಿ ಸೆಪ್ಟೆಂಬರ್ 23ರಂದು ನಡೆದ WION Iconic Tourism Summit and Awards 2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೆಹಲಿಯ ಪ್ರವಾಸೋದ್ಯಮದ ಮುಂದಿನ ಹಂತದ ಅಭಿವೃದ್ಧಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಉದ್ಯಮಿಗಳು ಹಾಗೂ ಸಂಬಂಧಿತ ವಲಯಗಳು ಪಾಲುದಾರರಾಗಬೇಕು ಎಂದು ಆಹ್ವಾನ ನೀಡಿದರು.

VFS Global ಪ್ರಸ್ತುತಪಡಿಸಿದ ಹಾಗೂ Red Hat Communications ಸಹಯೋಗದಲ್ಲಿ ನಡೆದ ಈ ಶೃಂಗಸಭೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಭಾಗಗಳ ಪ್ರಮುಖರು ಭಾಗವಹಿಸಿದ್ದರು. ಪ್ರವಾಸೋದ್ಯಮ ಕ್ಷೇತ್ರದ ಭವಿಷ್ಯ, ಹೊಸ ಅವಕಾಶಗಳು, ಬದಲಾಗುತ್ತಿರುವ ಪ್ರವಾಸಿ ಪ್ರವೃತ್ತಿಗಳು ಹಾಗೂ ಕ್ಷೇತ್ರದ ಬೆಳವಣಿಗೆಗೆ ಎದುರಾಗಬಹುದಾದ ಸವಾಲುಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚೆ ನಡೆಯಿತು. ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರೆ, ಕಪಿಲ್ ಮಿಶ್ರಾ ಗೌರವ ಅತಿಥಿಯಾಗಿದ್ದರು.

ಸಮ್ಮೇಳನದಲ್ಲಿ ಮಾತನಾಡಿದ ಕಪಿಲ್ ಮಿಶ್ರಾ, ದೇಶದಾದ್ಯಂತ ಪ್ರವಾಸೋದ್ಯಮವನ್ನು ವಿಸ್ತರಿಸಲು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೈಗೊಳ್ಳುತ್ತಿರುವ ಪ್ರಯತ್ನಗಳಿಗೆ ಧನ್ಯವಾದ ಸಲ್ಲಿಸಿದರು. ದೆಹಲಿ ಈಗ ಬದಲಾವಣೆಯ ಹಂತದಲ್ಲಿದ್ದು, ರಾಜಧಾನಿಯನ್ನು ಜಾಗತಿಕ ಪ್ರವಾಸಿ ತಾಣವಾಗಿ ರೂಪಿಸುವ ಪ್ರಯತ್ನದಲ್ಲಿ ಪ್ರವಾಸೋದ್ಯಮ ಉದ್ಯಮವೂ ಕೈಜೋಡಿಸಬೇಕು ಎಂದು ಹೇಳಿದರು.

 

Delhi Tourism and Art & Culture Minister Kapil Mishra said India’s civilisational strength would be central to its rise on the world stage.

Speaking at the WION Iconic Tourism Summit & Awards 2026, Mishra said, "It is India’s culture that will make India a superpower. Our… pic.twitter.com/qK5S52DwsO

— WION (@WIONews) September 23, 2026

 ದೆಹಲಿಯನ್ನು ಜಾಗತಿಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಉದ್ಯಮದವರಿಂದ ಹೊಸ ಆಲೋಚನೆಗಳು ಮತ್ತು ಸಲಹೆಗಳನ್ನು ಸರ್ಕಾರ ಸ್ವೀಕರಿಸಲು ಸಿದ್ಧವಾಗಿದೆ ಎಂದು ಮಿಶ್ರಾ ಹೇಳಿದರು. ಪ್ರವಾಸಿಗರಿಗೆ ಹೊಸ ಅನುಭವಗಳನ್ನು ಒದಗಿಸುವ ಮಾರ್ಗಗಳ ಕುರಿತು ಸರ್ಕಾರ ಗಮನಹರಿಸುತ್ತಿದೆ ಎಂದು ತಿಳಿಸಿದರು.

 

ಇದರ ಭಾಗವಾಗಿ ಪ್ರವಾಸಿಗರಿಗೆ ವಿಭಿನ್ನ ಅನುಭವ ನೀಡುವ ಉದ್ದೇಶದಿಂದ ಐಕಾನಿಕ್ ಟೌನ್ ಹಾಲ್ ಅನ್ನು ಅನುಭವ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಯೋಜನೆಯಲ್ಲೂ ಉದ್ಯಮದವರು ಭಾಗವಹಿಸಬೇಕು ಎಂದು ಅವರು ಆಹ್ವಾನ ನೀಡಿದರು. ಸರ್ಕಾರ ಮತ್ತು ಪ್ರವಾಸೋದ್ಯಮ ಕ್ಷೇತ್ರದ ನಡುವೆ ಸಹಭಾಗಿತ್ವದ ಮೂಲಕ ದೆಹಲಿಗೆ ಹೊಸ ಪ್ರವಾಸೋದ್ಯಮ ಅನುಭವಗಳನ್ನು ರೂಪಿಸುವ ಉದ್ದೇಶವಿದೆ ಎಂದು ಅವರು ಹೇಳಿದರು.

ಇದೇ ವೇಳೆ ಪಿತಾಂಪುರ ಹಾಟ್ ಅನ್ನು ‘ಪಿಎಂ ಯೂನಿಟಿ ಹಬ್’ ಆಗಿ ಪರಿವರ್ತಿಸಲಾಗುವುದು ಎಂದು ಕಪಿಲ್ ಮಿಶ್ರಾ ಘೋಷಿಸಿದರು. ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಉದ್ದೇಶದಿಂದ ಗಾರ್ಡನ್ ಆಫ್ ಫೈವ್ ಸೆನ್ಸಸ್ ಅನ್ನು ಕೂಡ ಹೊಸ ರೂಪದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

“ಈಗ ಉದ್ಯಮದವರು ಸರ್ಕಾರದೊಂದಿಗೆ ಕೈಜೋಡಿಸಿ, ಕುಳಿತು ಚರ್ಚಿಸಿ, ಮುಂದಿನ ಯೋಜನೆಗಳನ್ನು ರೂಪಿಸುವ ಸಮಯ” ಎಂದು ಕಪಿಲ್ ಮಿಶ್ರಾ ಹೇಳಿದರು. ದೆಹಲಿ ಪ್ರವಾಸೋದ್ಯಮದ ಮುಂದಿನ ಹಂತದ ಬೆಳವಣಿಗೆಗಾಗಿ ಉದ್ಯಮದ ಪಾಲುದಾರರು ಸರ್ಕಾರದೊಂದಿಗೆ ಚರ್ಚಿಸಿ ಹೊಸ ಯೋಜನೆಗಳನ್ನು ರೂಪಿಸಬೇಕು ಎಂದು ಕರೆ ನೀಡಿದರು.

ದೆಹಲಿ ನಗರದ ಐತಿಹಾಸಿಕ ಪರಂಪರೆಯ ವೈವಿಧ್ಯತೆಯ ಬಗ್ಗೆಯೂ ಸಚಿವರು ಮಾತನಾಡಿದರು. ನಗರದ ಇತಿಹಾಸದಲ್ಲಿ ಸಿಖ್ ಸಮುದಾಯದ ಕೊಡುಗೆ, ಮರಾಠರ ಇತಿಹಾಸ ಹಾಗೂ ಜಾಟ್ ಸಮುದಾಯದ ಸಾಹಸ ಸೇರಿದಂತೆ ಹಲವು ಪ್ರಮುಖ ಅಧ್ಯಾಯಗಳಿವೆ ಎಂದು ಅವರು ಉಲ್ಲೇಖಿಸಿದರು. ದೆಹಲಿಯ ನಿರ್ಮಾಣದಲ್ಲಿ ಅನಂಗಪಾಲ ತೋಮರ್ ಅವರ ಪಾತ್ರವೂ ಪ್ರಮುಖವಾಗಿದೆ ಎಂದು ಹೇಳಿದರು.

ಈ ಐತಿಹಾಸಿಕ ವ್ಯಕ್ತಿಗಳು ಹಾಗೂ ಸಮುದಾಯಗಳ ಕೊಡುಗೆಯನ್ನು ಗುರುತಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಸ್ಮಾರಕಗಳನ್ನು ನಿರ್ಮಿಸಲು ಸಿದ್ಧತೆ ನಡೆಯುತ್ತಿದೆ ಎಂದು ಮಿಶ್ರಾ ತಿಳಿಸಿದರು. ದೆಹಲಿಯ ಇತಿಹಾಸದ ಹಲವು ಆಯಾಮಗಳನ್ನು ದೇಶ ಮತ್ತು ಜಗತ್ತಿಗೆ ಪರಿಚಯಿಸುವ ಉದ್ದೇಶವಿದೆ ಎಂದು ಹೇಳಿದರು.

ಭಾರತದ ಸಂಸ್ಕೃತಿಯೇ ದೇಶದ ಜಾಗತಿಕ ಪ್ರಭಾವವನ್ನು ಹೆಚ್ಚಿಸುವ ಪ್ರಮುಖ ಶಕ್ತಿಯಾಗಲಿದೆ ಎಂಬ ಅಭಿಪ್ರಾಯವನ್ನೂ ಕಪಿಲ್ ಮಿಶ್ರಾ ವ್ಯಕ್ತಪಡಿಸಿದರು. ದೆಹಲಿ ಬದಲಾಗುತ್ತಿದೆ ಎಂದು ಹೇಳಿದ ಅವರು, ಈ ಬದಲಾವಣೆಯ ಭಾಗವಾಗಿ ಪ್ರವಾಸೋದ್ಯಮ ಉದ್ಯಮವೂ ಪಾಲುದಾರನಾಗಬೇಕು ಎಂದು ಕರೆ ನೀಡಿದರು.

ಒಟ್ನಲ್ಲಿ ಪ್ರವಾಸಿಗರಿಗೆ ಹೊಸ ಅನುಭವಗಳನ್ನು ಒದಗಿಸುವ ಯೋಜನೆಗಳು, ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ದೆಹಲಿಯ ವೈವಿಧ್ಯಮಯ ಐತಿಹಾಸಿಕ ಪರಂಪರೆಯನ್ನು ಪರಿಚಯಿಸುವ ಪ್ರಯತ್ನಗಳ ಮೂಲಕ ರಾಜಧಾನಿಯ ಪ್ರವಾಸೋದ್ಯಮಕ್ಕೆ ಹೊಸ ರೂಪ ನೀಡುವ ಬಗ್ಗೆ WION Iconic Tourism Summitನಲ್ಲಿ ಕಪಿಲ್ ಮಿಶ್ರಾ ವಿವರಿಸಿದರು.

Add Zee News as a Preferred Source
TAGS:
Business
Kannada News