SOCIAL MEDIA

Newsletter

PARTNER SITES
Select Language Select State

ಟ್ರಂಪ್‌ಗೆ ಅಮೆರಿಕ ಮಧ್ಯಂತರ ಚುನಾವಣೆ ಶಾಕ್; ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ! ಇಂದಿನ ದರ ತಿಳಿಯಿರಿ

ಅಮೆರಿಕ ಮಧ್ಯಂತರ ಚುನಾವಣೆಯಲ್ಲಿ ಡೆಮೋಕ್ರಾಟ್ ಪಕ್ಷ ಮುನ್ನಡೆ ಸಾಧಿಸಿರುವುದು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ರಾಜಕೀಯ ಹಿನ್ನಡೆಯಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇ.2.4ರಷ್ಟು ಏರಿಕೆಯಾಗಿದೆ. ಚಿನ್ನದ ಬೆಲೆ ಏರಿಕೆ ಗ್ರಾಹಕರು ಮತ್ತು ಹೂಡಿಕೆದಾರರ ಗಮನ ಸೆಳೆದಿದೆ.

Written By Puttaraj K Alur
Published: Nov 04, 2026, 02:22 PM IST | Updated: Nov 04, 2026, 03:03 PM IST
Image Credit: Gold Rate Today
Join

Gold Rate Today: ಅಮೆರಿಕದ ಮಧ್ಯಂತರ ಚುನಾವಣೆ ಫಲಿತಾಂಶವು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ರಾಜಕೀಯ ಹಿನ್ನಡೆ ಉಂಟುಮಾಡಿದೆ. ಡೆಮೋಕ್ರಾಟ್ ಪಕ್ಷವು ಅಮೆರಿಕದ ಪ್ರತಿನಿಧಿಗಳ ಸಭೆ (ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್) ಮತ್ತು ಸೆನೆಟ್ ಎರಡರಲ್ಲೂ ಬಹುಮತ ಗಳಿಸುವ ಮೂಲಕ ಗಮನಾರ್ಹ ಗೆಲುವು ಸಾಧಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಮಹತ್ವದ ಬದಲಾವಣೆಗಳು ಕಂಡುಬಂದಿದ್ದು, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ದಾಖಲಾಗಿದೆ.

ಅಮೆರಿಕದ ಮಧ್ಯಂತರ ಚುನಾವಣೆ ಫಲಿತಾಂಶವು ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿ ಪರಿಣಮಿಸಿದೆ. ಡೆಮೋಕ್ರಾಟ್ ಪಕ್ಷದ ಅಭ್ಯರ್ಥಿಗಳು ಹಲವು ಪ್ರಮುಖ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ರಿಪಬ್ಲಿಕನ್ ಪಕ್ಷದ ಪ್ರಾಬಲ್ಯವಿದ್ದ ಕೆಲವು ಪ್ರದೇಶಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಸೆನೆಟ್ ಮತ್ತು ಹೌಸ್ ಎರಡರಲ್ಲೂ ಡೆಮೋಕ್ರಾಟ್‌ಗಳು ಹಿಡಿತ ಸಾಧಿಸಿರುವುದು ಟ್ರಂಪ್ ಅವರ ಮುಂದಿನ ಆಡಳಿತಾತ್ಮಕ ನಿರ್ಧಾರಗಳಿಗೆ ಸವಾಲಾಗುವ ಸಾಧ್ಯತೆಯಿದೆ.

ಚುನಾವಣೆಯಲ್ಲಿ ಮತದಾರರು ಹಣದುಬ್ಬರ, ಜೀವನ ವೆಚ್ಚದ ಏರಿಕೆ, ಸರ್ಕಾರದ ಕಾರ್ಯವೈಖರಿ ಮತ್ತು ಇರಾನ್‌ನೊಂದಿಗಿನ ಯುದ್ಧ ಸೇರಿದಂತೆ ಹಲವು ವಿಚಾರಗಳನ್ನ ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಿದ್ದಾರೆ. ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಟ್ರಂಪ್ ಅವರ ರಾಜಕೀಯ ಕಾರ್ಯತಂತ್ರಕ್ಕೆ ಹಿನ್ನಡೆಯಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಚಿನ್ನದ ಬೆಲೆಯಲ್ಲಿ ಭಾರೀ ಜಿಗಿತ!

ಅಮೆರಿಕದ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ಡೆಮೋಕ್ರಾಟ್‌ಗಳ ಗೆಲುವಿನಿಂದ ಅಮೆರಿಕದ ರಾಜಕೀಯ ವಾತಾವರಣದಲ್ಲಿ ಅನಿಶ್ಚಿತತೆ ಹೆಚ್ಚಾಗಬಹುದು ಎಂಬ ನಿರೀಕ್ಷೆ ಹೂಡಿಕೆದಾರರಲ್ಲಿ ಮೂಡಿದೆ. ಇದರ ಪರಿಣಾಮ ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸಲಾಗುವ ಚಿನ್ನದತ್ತ ಹೂಡಿಕೆದಾರರು ಆಸಕ್ತಿ ತೋರಿಸಿದ್ದಾರೆ.

ಅಮೆರಿಕದ ಡಾಲರ್ ಮೌಲ್ಯ ದುರ್ಬಲಗೊಂಡಿರುವುದು ಮತ್ತು ಬಾಂಡ್ ಇಳುವರಿಯಲ್ಲಿ ಇಳಿಕೆ ಕಂಡುಬಂದಿರುವುದು ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ವರದಿಗಳ ಪ್ರಕಾರ, ಬುಧವಾರ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇ.2.4ರಷ್ಟು ಏರಿಕೆಯಾಗಿ ಪ್ರತಿ ಔನ್ಸ್‌ಗೆ 4,022 ಡಾಲರ್ ಮಟ್ಟ ತಲುಪಿದೆ. ಅಮೆರಿಕದ ಚಿನ್ನದ ಫ್ಯೂಚರ್ಸ್ ದರದಲ್ಲಿಯೂ ಏರಿಕೆ ದಾಖಲಾಗಿದೆ.

ದೇಶದಲ್ಲಿ ಇಂದಿನ ಚಿನ್ನದ ದರ ಎಷ್ಟಿದೆ?

ಜಾಗತಿಕ ಮಾರುಕಟ್ಟೆಯಲ್ಲಿನ ಏರಿಕೆಯ ನಡುವೆ ಚಿನ್ನದ ದರದಲ್ಲಿ ಏರಿಕೆ ದಾಖಲಾಗಿದೆ. ನವೆಂಬರ್ 4, 2026ರ ಲಭ್ಯ ದರದ ಪ್ರಕಾರ 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ ನೋಡಿ..

ದೆಹಲಿಯಲ್ಲಿ ಇಂದಿನ ಚಿನ್ನದ ದರ 

- 24 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹141,740 (2.52% ಏರಿಕೆ).
- 22 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹129,830 (2.53% ಏರಿಕೆ)

ಮುಂಬೈನಲ್ಲಿ ಇಂದಿನ ಚಿನ್ನದ ದರ

- 24 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹141,870 (2.62% ಏರಿಕೆ)
- 22 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹129,960 (2.63% ಏರಿಕೆ)

 ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರ

- 24 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹ 141,740 (2.52% ಏರಿಕೆ)
- 22 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹129,830 (2.53% ಏರಿಕೆ)

ಚಿನ್ನದ ದರದಲ್ಲಿ ಎಷ್ಟು ಏರಿಕೆಯಾಗಿದೆ..?

ದೇಶದಲ್ಲಿ ಬುಧವಾರ (ಅಕ್ಟೋಬರ್‌ 4) ಒಂದು ಗ್ರಾಂನ ಲೆಕ್ಕದಲ್ಲಿ 24 ಕ್ಯಾರೆಟ್ ಚಿನ್ನಕ್ಕೆ ₹14,174 ಹಾಗೂ 22 ಕ್ಯಾರೆಟ್ ಚಿನ್ನಕ್ಕೆ ₹12,983 ದರವಿದೆ. ಹಿಂದಿನ ದಿನಕ್ಕೆ ಹೋಲಿಸಿದರೆ 24 ಕ್ಯಾರೆಟ್ ಚಿನ್ನದ 1 ಗ್ರಾಂ ದರದಲ್ಲಿ ₹349 ಮತ್ತು 22 ಕ್ಯಾರೆಟ್ ಚಿನ್ನದ ದರದಲ್ಲಿ ₹320 ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ ಚಿನ್ನದ 10 ಗ್ರಾಂ ದರದಲ್ಲಿ ₹3,490 ಮತ್ತು 22 ಕ್ಯಾರೆಟ್ ಚಿನ್ನದ ಗ್ರಾಂ ದರದಲ್ಲಿ ₹3,200 ಏರಿಕೆಯಾಗಿದೆ.

ಚಿನ್ನ ಖರೀದಿಸುವವರಿಗೆ ಮಹತ್ವದ ಮಾಹಿತಿ

ಚಿನ್ನದ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಭರಣ ಖರೀದಿಸಲು ಯೋಜಿಸುತ್ತಿರುವ ಗ್ರಾಹಕರು ಇಂದಿನ ದರದ ಬಗ್ಗೆ ಮಾಹಿತಿ ಪಡೆದುಕೊಳ್ಳುವುದು ಅಗತ್ಯವಾಗಿದೆ. ಇಲ್ಲಿ ನೀಡಿರುವುದು ದೆಹಲಿ, ಮುಂಬೈ ಮತ್ತು ಬೆಂಗಳೂರಿನ ಸೂಚಕ ಮಾರುಕಟ್ಟೆ ದರವಾಗಿದ್ದು, ಆಭರಣಗಳ ಅಂತಿಮ ಬೆಲೆಯಲ್ಲಿ ಜಿಎಸ್‌ಟಿ, ಮೇಕಿಂಗ್ ಚಾರ್ಜ್ ಮತ್ತು ಇತರ ಶುಲ್ಕಗಳು ಹೆಚ್ಚುವರಿಯಾಗಿ ಅನ್ವಯಿಸುತ್ತವೆ.

ಒಟ್ನಲ್ಲಿ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮೋಕ್ರಾಟ್ ಪಕ್ಷದ ಗೆಲುವು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ರಾಜಕೀಯ ಹಿನ್ನಡೆ ತಂದಿದೆ. ಇದರ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇ.2.4ರಷ್ಟು ಏರಿಕೆಯಾಗಿರುವುದು ಹೂಡಿಕೆದಾರರು ಮತ್ತು ಚಿನ್ನದ ಗ್ರಾಹಕರ ಗಮನ ಸೆಳೆದಿದೆ. ಮುಂದಿನ ದಿನಗಳಲ್ಲಿ ಅಮೆರಿಕದ ರಾಜಕೀಯ ಬೆಳವಣಿಗೆಗಳು ಹಾಗೂ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಚಿನ್ನದ ಮಾರುಕಟ್ಟೆಯ ಮೇಲೆ ಯಾವ ರೀತಿಯ ಪರಿಣಾಮ ಬೀರಲಿವೆ ಎಂಬುದನ್ನ ಕಾದು ನೋಡಬೇಕಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES