SOCIAL MEDIA

Newsletter

PARTNER SITES
Select Language Select State

ಮೊಬೈಲ್ ಬಳಸಿ VAO ಪರೀಕ್ಷೆ ಬರೆದ ಅಭ್ಯರ್ಥಿ ಅರೆಸ್ಟ್..!

ಕೆಇಎ ನಡೆಸಿದ VAO ಪರೀಕ್ಷೆಯಲ್ಲಿ ಹಾವೇರಿಯಲ್ಲಿ ಮೊಬೈಲ್ ಬಳಸಿ ಪರೀಕ್ಷೆ ಬರೆದ VAO ಪರೀಕ್ಷಾರ್ಥಿ ಶಂಕರ ಬಸವರಾಜ ಬನ್ನೂರು ವಿರುದ್ಧದ ಎಫ್‌ಐಆರ್‌ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.

Written By Yashaswini V
Published: Nov 02, 2026, 03:16 PM IST | Updated: Nov 02, 2026, 03:18 PM IST
Join

ಹಾವೇರಿಯಲ್ಲಿ ಕೆಇಎ ನಡೆಸಿದ ವಿಎಒ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಆರೋಪದ ಮೇಲೆ ಅಭ್ಯರ್ಥಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಯಾರಿಗೂ ಗೊತ್ತಾಗದಂತೆ ಮೊಬೈಲ್ ತೆಗೆದುಕೊಂಡು ಹೋಗಿ, ಪ್ರಶ್ನೆಪತ್ರಿಕೆಯ ಫೋಟೋ ತೆಗೆದು ಉತ್ತರ ಹುಡುಕಿ ಪರೀಕ್ಷೆ ಬರೆದಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರ ಬನ್ನೂರು ಎಂಬ ಅಭ್ಯರ್ಥಿಯ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಬೆಳಗ್ಗೆ, ಮಧ್ಯಾಹ್ನ ಎರಡೂ ಪರೀಕ್ಷೆಗಳಲ್ಲಿ ಅಕ್ರಮ: 
ಹೌದು, ರಾಜ್ಯದಲ್ಲಿ ಮೊದಲ ಬಾರಿಗೆ VAO ಪರೀಕ್ಷೆಯಲ್ಲಿ ಗೋಲ್ಮಾಲ್ ಮಾಡಿ ಈಗ ಕಾನೂನಿನ ಕುಣಿಕೆಗೆ ಸಿಲುಕಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. KEA ಪರೀಕ್ಷೆಯಲ್ಲಿ ಈ ಅಭ್ಯರ್ಥಿ ಪರೀಕ್ಷೆಯನ್ನ ಅಕ್ರಮ ಎಸಗಿದ ಆರೋಪದ ಮೇಲೆ ಶಂಕರ ಬನ್ನೂರು ಎಂಬಾತನ ವಿರುದ್ಧ ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ZKannada news ಗೆ ಆರೋಪಿ ಶಂಕರ ಬನ್ನೂರು ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರತಿ ಲಭ್ಯವಾಗಿದೆ. ಸವಣೂರು ಉಪವಿಭಾಗಾಧಿಕಾರಿ ಸಮೀರ್ ಪ್ರಕಾಶ್ ಖೋಡೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಾರಿಗೂ ಗೊತ್ತಾಗದಂತೆ ಪರೀಕ್ಷಾ ಕೊಠಡಿಗೆ ಮೊಬೈಲ್‌ ಕೊಂಡೊಯ್ದಿದ್ದ ಆರೋಪಿ:
ಮಾಮ್ಲೇದೇಸಾಯಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 12ನೇ ಕೊಠಡಿಯಲ್ಲಿ VAO ಪರೀಕ್ಷೆ ಬರೆದಿದ್ದ ಶಂಕರ ಬನ್ನೂರು, ಯಾರಿಗೂ ಗೊತ್ತಾಗದಂತೆ ಮೊಬೈಲ್ ಫೋನ್ ಅನ್ನು ಪರೀಕ್ಷಾ ಕೊಠಡಿಯೊಳಗೆ ಕೊಂಡೊಯ್ದಿದ್ದಾನೆ ಎನ್ನಲಾಗಿದೆ. ಬೆಳಗ್ಗೆ ಹಾಗೂ ಮಧ್ಯಾಹ್ನ ನಡೆದ ಎರಡೂ ಪರೀಕ್ಷೆಗಳಲ್ಲೂ ಮೊಬೈಲ್ ಬಳಸಿ ಅಕ್ರಮ ಎಸಗಿರುವ ಬಗ್ಗೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಮೊಬೈಲ್ ಮೂಲಕ ಪ್ರಶ್ನೆಪತ್ರಿಕೆಯ ಫೋಟೋ ತೆಗೆದು, ಅದಕ್ಕೆ ಉತ್ತರಗಳನ್ನು ಹುಡುಕಿ ಪರೀಕ್ಷೆ ಬರೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನಗಳ ತಡೆ) ಕಾಯ್ದೆ 2023ರ ಸೆಕ್ಷನ್ 10ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಬಿಎನ್‌ಎಸ್ 316(2), 318(4) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 66(D) ಅಡಿಯಲ್ಲೂ ಕೇಸ್ ದಾಖಲಿಸಲಾಗಿದೆ. ಸದ್ಯ ಆರೋಪಿ ಶಂಕರ ಬನ್ನೂರನ್ನು ಶಿಗ್ಗಾವಿ ಪೊಲೀಸರು ಬಂಧಿಸಿದ್ದು, ಪರೀಕ್ಷಾ ಅಕ್ರಮದ ಹಿಂದಿನ ಸಂಪೂರ್ಣ ಜಾಲದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಒಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆಯಬೇಕಾದ ಅಭ್ಯರ್ಥಿಗಳ ನಡುವೆ ಇಂತಹ ಅಕ್ರಮಗಳು ನಡೆದಿರುವುದು ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತಾಗಿದೆ. ಪ್ರಕರಣದ ತನಿಖೆಯಿಂದ ಇನ್ನಷ್ಟು ಸತ್ಯಾಂಶ ಹೊರಬರಬೇಕಿದೆ.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES