• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕೆರಿಯರ್
  • /ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ : ‘ಜ್ಞಾನ ಸೇತು’ ಹೆಸರಲ್ಲಿ ಲ್ಯಾಪ್‌ಟಾಪ್‌ ಭಾಗ್ಯ!

ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ : ‘ಜ್ಞಾನ ಸೇತು’ ಹೆಸರಲ್ಲಿ ಲ್ಯಾಪ್‌ಟಾಪ್‌ ಭಾಗ್ಯ!

ರಾಜ್ಯದ ಸರ್ಕಾರಿ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ‘ಜ್ಞಾನ ಸೇತು’ ಯೋಜನೆಯಡಿ ಲೈಸೆನ್ಸ್‌ ಸಾಫ್ಟ್‌ವೇರ್‌ ಹೊಂದಿರುವ 250 ಲ್ಯಾಪ್‌ಟಾಪ್‌ಗಳನ್ನು ಈ ವರ್ಷ ವಿತರಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ರೋಟರಿ ಇಂಟರ್‌ನ್ಯಾಷನಲ್‌ ಸಹಯೋಗದಲ್ಲಿ ಜಾರಿಯಾಗುತ್ತಿರುವ ಈ ಯೋಜನೆಯು ವಿದ್ಯಾರ್ಥಿಗಳ ತಾಂತ್ರಿಕ ಹಾಗೂ ಪ್ರಾಯೋಗಿಕ ಕಲಿಕೆಗೆ ನೆರವಾಗಲಿದೆ. ಇದರ ಜೊತೆಗೆ ‘ನಿಪುಣ ಕರ್ನಾಟಕ’ ಯೋಜನೆಯ ಅಡಿ 568 ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ ತರಬೇತಿಯನ್ನೂ ನೀಡಲಾಗುತ್ತಿದೆ.

Written ByYashaswini V
Published: Nov 03, 2026, 10:13 AM IST|Updated: Nov 03, 2026, 10:16 AM IST
joinshare
ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ : ‘ಜ್ಞಾನ ಸೇತು’ ಹೆಸರಲ್ಲಿ ಲ್ಯಾಪ್‌ಟಾಪ್‌ ಭಾಗ್ಯ!

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ತೆಂಗಿನಮರವೊಂದರಲ್ಲಿ ಒಂದಲ್ಲ.. ಎರಡಲ್ಲ.. ಐದು ಸುಳಿ ಪತ್ತೆ!!.. ಪ್ರಕೃತಿ ವಿಸ್ಮಯ

ತೆಂಗಿನಮರವೊಂದರಲ್ಲಿ ಒಂದಲ್ಲ.. ಎರಡಲ್ಲ.. ಐದು ಸುಳಿ ಪತ್ತೆ!!.. ಪ್ರಕೃತಿ ವಿಸ್ಮಯ

2

ಬೈಟ್‌ಡ್ಯಾನ್ಸ್ ಸಹ-ಸಂಸ್ಥಾಪಕನನ್ನು ಹಿಂದಿಕ್ಕಿ ಮತ್ತೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್‌ ಅಂಬಾನಿ

3

ಬಿಗ್‌ಬಾಸ್ ಮನೆಯಲ್ಲಿ ಭಾವುಕ ಕ್ಷಣ.. ಕುಟುಂಬದವರ ಪತ್ರ ನೋಡಿ ಕಣ್ಣೀರಿಟ್ಟ ಸ್ಪರ್ಧಿಗಳು!

4

ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ : ‘ಜ್ಞಾನ ಸೇತು’ ಹೆಸರಲ್ಲಿ ಲ್ಯಾಪ್‌ಟಾಪ್‌ ಭಾಗ್ಯ!

5

ಮೊದಲ ODIಗೂ ಮುನ್ನ ಗಿಲ್ ಪಡೆಗೆ ಡಬಲ್ ಖುಷಿ.. ಕಿವೀಸ್‌ಗೆ ಬಿಗ್ ಶಾಕ್! ಏನಿದು ಹೊಸ ಬೆಳವಣಿಗೆ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಉನ್ನತ ಶಿಕ್ಷಣ ಇಲಾಖೆ ಹಾಗೂ ರೋಟರಿ ಇಂಟರ್‌ನ್ಯಾಷನಲ್‌ ಸಂಸ್ಥೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ಈ ಒಪ್ಪಂದದ ಭಾಗವಾಗಿ ಜ್ಞಾನ ಸೇತು ಎಂಬ ಯೋಜನೆಯ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲೈಸೆನ್ಸ್‌ ಹೊಂದಿರುವ ಸಾಫ್ಟ್‌ವೇರ್‌ ಅಳವಡಿಸಿದ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗುತ್ತಿದೆ.

ಈ ಯೋಜನೆಯ ಅಡಿ ಸರ್ಕಾರಿ ಕಾಲೇಜುಗಳಲ್ಲಿ ತಂತ್ರಜ್ಣಾನ ಆಧಾರಿತ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪ್ರಯೋಗಾಲಯದ ಕೆಲಸಗಳನ್ನು ಸುಲಭವಾಗಿ  ನಿರ್ವಹಿಸಲು ಅಗತ್ಯವಿರುವ ಲೈಸೆನ್ಸ್‌ ಸಾಫ್ಟ್‌ವೇರ್‌ಗಳನ್ನು ಒದಗಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಜ್ಞಾನವನ್ನೂ ಪಡೆದುಕೊಳ್ಳಲು ಸಾಧ್ಯವಾಗಲಿದೆ.

ಈ ವರ್ಷ 250 ಲ್ಯಾಪ್‌ಟಾಪ್‌ ವಿತರಣೆ: 
ಈ ವರ್ಷವು ‘ಜ್ಞಾನ ಸೇತು’ ಯೋಜನೆಯಡಿ 250 ಲ್ಯಾಪ್‌ಟಾಪ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ಲ್ಯಾಪ್‌ಟಾಪ್‌ಗಳಲ್ಲಿ ಅಗತ್ಯವಿರುವ ಲೈಸೆನ್ಸ್‌ ಸಾಫ್ಟ್‌ವೇರ್‌ಗಳನ್ನು ಅಳವಡಿಸಲಾಗಿರುತ್ತದೆ. ಅಂತೆಯೇ ಸೋಮವಾರವು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ತುಮಕೂರಿನ ಪ್ರಥಮ ದರ್ಜೆ ಕಾಲೇಜು ಹಾಗೂ ಕೆ.ಆರ್. ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ್ದಾರೆ.

ಇನ್ನು ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ,  ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ 550ಕ್ಕೂ ಹೆಚ್ಚು ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ಅಂದಾಜು 5 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ‘ಜ್ಞಾನ ಸೇತು’ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ.

 

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಡಿಜಿಟಲ್ ಸ್ಪರ್ಶ ರೋಟರಿ ಸಂಸ್ಥೆಯೊಂದಿಗೆ 'ಜ್ಞಾನ ಸೇತು' ಒಡಂಬಡಿಕೆ! ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆ ಹಾಗೂ ರೋಟರಿ ಅಂತರಾಷ್ಟ್ರೀಯ ಸಂಸ್ಥೆ ನಡುವೆ ಮೂರು ವರ್ಷಗಳ 'ಜ್ಞಾನ ಸೇತು' ಯೋಜನೆಗೆ (MoU) ಸಹಿ ಹಾಕಲಾಯಿತು. ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ​ಈ ಒಡಂಬಡಿಕೆಯ ಪ್ರಮುಖ ಅಂಶಗಳು: ಉಚಿತ ಲ್ಯಾಪ್‌ಟಾಪ್ ವಿತರಣೆ: ಮೊದಲ ಹಂತವಾಗಿ 250 ಲ್ಯಾಪ್‌ಟಾಪ್‌ಗಳನ್ನು ಲೈಸೆನ್ಸ್ಡ್ ಸಾಫ್ಟ್‌ವೇರ್‌ನೊಂದಿಗೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಡಿಜಿಟಲ್ ಕಲಿಕಾ ಕೇಂದ್ರಗಳು: ಸರ್ಕಾರಿ ಕಾಲೇಜುಗಳಲ್ಲಿ ಕಂಪ್ಯೂಟರ್ ಲ್ಯಾಬ್ ಹಾಗೂ ಡಿಜಿಟಲ್ ಲರ್ನಿಂಗ್ ಸೆಂಟರ್ ಸ್ಥಾಪನೆ. ಬೃಹತ್ ಕೊಡುಗೆ: ಮೈಕ್ರೋಸಾಫ್ಟ್‌ನಿಂದ 500 ಹಾಗೂ ಕಾಗ್ನಿಸೆಂಟ್‌ನಿಂದ 1,000 ಡೆಸ್ಕ್‌ಟಾಪ್‌ಗಳನ್ನು ಶೀಘ್ರವೇ ವಿತರಿಸಲಾಗುವುದು. ಇದರ ಸಾಗಣೆ ಮತ್ತು ಸಾಫ್ಟ್‌ವೇರ್ ವೆಚ್ಚವನ್ನು ರೋಟರಿಯೇ ಭರಿಸಲಿದೆ. ಸರ್ವಾಂಗೀಣ ಅಭಿವೃದ್ಧಿ: ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ, ಇ-ತ್ಯಾಜ್ಯ ನಿರ್ವಹಣೆ, ತ್ಯಾಜ್ಯ ನೀರಿನ ಸಂಸ್ಕರಣೆಗೂ ರೋಟರಿ ಸಂಸ್ಥೆ ಸಹಕಾರ ನೀಡಲಿದೆ. ​ರಾಜ್ಯದ 550ಕ್ಕೂ ಹೆಚ್ಚು ಕಾಲೇಜುಗಳ ಸುಮಾರು 5 ಲಕ್ಷ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಸೌಲಭ್ಯ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಕೈಜೋಡಿಸಿದ ರೋಟರಿ ಸಂಸ್ಥೆಗೆ ತುಂಬು ಹೃದಯದ ಧನ್ಯವಾದಗಳು. ​ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀ ಹೆಚ್. ಎನ್. ಗೋಪಾಲಕೃಷ್ಣ, ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೆ. ಹರೀಶ್ ಕುಮಾರ್, ರೋಟರಿ ಸಂಸ್ಥೆ/ಸ್ನೇಹಸೇತು ಉಪಾಧ್ಯಕ್ಷರಾದ ಶ್ರೀ ಜಯರಾಮನ್ ಎಸ್. ಹಾಗೂ ರೋಟರಿ ಪದಾಧಿಕಾರಿಗಳಾದ ಶ್ರೀ ಸುರೇಶ್ ಹರಿ, ಶ್ರೀ ಅನಿಲ್ ಗುಪ್ತ, ಶ್ರೀ ಕೆ. ಪಿ. ನಾಗೇಶ್ ಸೇರಿದಂತೆ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

— Basavaraj Rayareddi (@Rayaraddi_B) November 2, 2026

 ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಪರಿಚಯ ಮಾಡಿಸುವುದರ ಜೊತೆಗೆ, ಉದ್ಯೋಗ ಮಾರುಕಟ್ಟೆಗೆ ಅಗತ್ಯವಿರುವ ಕೌಶಲಗಳನ್ನು ಬೆಳೆಸಲು ಈ ಯೋಜನೆ ಸಹಕಾರಿಯಾಗಲಿದೆ. ವಿಶೇಷವಾಗಿ ಕಂಪ್ಯೂಟರ್‌ ಮತ್ತು ಸಾಫ್ಟ್‌ವೇರ್‌ ಆಧಾರಿತ ಕಲಿಕೆಗೆ ಅವಕಾಶ ಸಿಗುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಹೆಚ್ಚಲಿದೆ ಎಂಬ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

 

568 ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ ತರಬೇತಿ: 
ಇದೇ ಸಂದರ್ಭದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ತರಬೇತಿ ನೀಡುವ ಮತ್ತೊಂದು ಮಹತ್ವದ ಕಾರ್ಯಕ್ರಮವೂ ಆಯೋಜಿಸಲಾಗಿದೆ. FUEL SkillTech University ಸಂಸ್ಥೆಯು ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ (KDEM) ಸಹಯೋಗದಲ್ಲಿ ‘ನಿಪುಣ ಕರ್ನಾಟಕ’ (NIPUNA Karnataka) ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಉದ್ಯೋಗ ಕೌಶಲ ತರಬೇತಿ ನೀಡುತ್ತಿದೆ.
ಈ ಉಪಕ್ರಮದಡಿ ಮೂರು ಉನ್ನತ ಶಿಕ್ಷಣ ಸಂಸ್ಥೆಗಳ ಒಟ್ಟು 568 ವಿದ್ಯಾರ್ಥಿಗಳಿಗೆ ತರಬೇತಿ ಒದಗಿಸಲಾಗುತ್ತಿದೆ. ಉದ್ಯೋಗ ಕ್ಷೇತ್ರದಲ್ಲಿ ಅಗತ್ಯವಿರುವ ತಾಂತ್ರಿಕ ಜ್ಞಾನ, ಕೌಶಲ ಹಾಗೂ ಉದ್ಯೋಗ ಪಡೆಯಲು ಬೇಕಾದ ಸಾಮರ್ಥ್ಯವನ್ನು ಬೆಳೆಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಒಟ್ಟಿನಲ್ಲಿ, ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, ಆಧುನಿಕ ಸಾಫ್ಟ್‌ವೇರ್‌ ಹಾಗೂ ಉದ್ಯೋಗಾಧಾರಿತ ಕೌಶಲ ತರಬೇತಿ ಒದಗಿಸುವ ಈ ಪ್ರಯತ್ನಗಳು ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ನಾಂದಿ ಹಾಡುವ ನಿರೀಕ್ಷೆಯಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ತಂತ್ರಜ್ಞಾನ ಆಧಾರಿತ ಶಿಕ್ಷಣದ ಅವಕಾಶ ಕಲ್ಪಿಸುವ ಮೂಲಕ ಡಿಜಿಟಲ್‌ ಅಂತರವನ್ನು ಕಡಿಮೆ ಮಾಡಲು ಈ ಯೋಜನೆ ಸಹಕಾರಿಯಾಗಬಹುದು.
 

Add Zee News as a Preferred Source
TAGS:
Govt Schemes
Education