• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕೆರಿಯರ್
  • /India Post Recruitment 2026: 23,757 ಹುದ್ದೆಗಳಿಗೆ ಅರ್ಜಿ ಆಹ್ವಾನ! ಪರೀಕ್ಷೆಯೇ ಇಲ್ಲದೆ ಕೇಂದ್ರ ಸರ್ಕಾರಿ ನೌಕರಿ

India Post Recruitment 2026: 23,757 ಹುದ್ದೆಗಳಿಗೆ ಅರ್ಜಿ ಆಹ್ವಾನ! ಪರೀಕ್ಷೆಯೇ ಇಲ್ಲದೆ ಕೇಂದ್ರ ಸರ್ಕಾರಿ ನೌಕರಿ

ಭಾರತೀಯ ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕ (GDS) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ಆಯ್ಕೆಯನ್ನು 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಸಿದ್ಧಪಡಿಸುವ ಮೆರಿಟ್‌ ಪಟ್ಟಿಯ ಮೂಲಕ ಮಾಡಲಾಗುತ್ತದೆ.

Reported ByPuttaraj K AlurEdited ByPuttaraj K Alur
Published: Sep 13, 2026, 11:25 AM IST|Updated: Sep 17, 2026, 03:59 PM IST
joinshare
India Post Recruitment 2026: 23,757 ಹುದ್ದೆಗಳಿಗೆ ಅರ್ಜಿ ಆಹ್ವಾನ! ಪರೀಕ್ಷೆಯೇ ಇಲ್ಲದೆ ಕೇಂದ್ರ ಸರ್ಕಾರಿ ನೌಕರಿ
Image Credit: India Post Recruitment

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

India Post GDS Recruitment 2026: ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ (GDS) ನೇಮಕಾತಿಗೆ ಬೃಹತ್‌ ಅವಕಾಶ ಕಲ್ಪಿಸಲಾಗಿದೆ. ದೇಶದಾದ್ಯಂತ ಒಟ್ಟು 23,757 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ 1,116 ಹುದ್ದೆಗಳು ಲಭ್ಯವಿವೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಪ್ರಮುಖ ವಿಶೇಷತೆ ಎಂದರೆ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ.

10ನೇ ತರಗತಿ ಅಂಕಗಳೇ ಆಯ್ಕೆಗೆ ಆಧಾರ

ಭಾರತೀಯ ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕ (GDS) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ಆಯ್ಕೆಯನ್ನು 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಸಿದ್ಧಪಡಿಸುವ ಮೆರಿಟ್‌ ಪಟ್ಟಿಯ ಮೂಲಕ ಮಾಡಲಾಗುತ್ತದೆ. ಅಂದರೆ ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಎದುರಿಸುವ ಅಗತ್ಯವಿಲ್ಲ. 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಅರ್ಹತೆಯನ್ನು ಪರಿಗಣಿಸಲಾಗುತ್ತದೆ.

ಕರ್ನಾಟಕದಲ್ಲಿ 1,116 ಹುದ್ದೆಗಳು

ದೇಶದಾದ್ಯಂತ 23,757 ಹುದ್ದೆಗಳು ಲಭ್ಯವಿದ್ದು, ಕರ್ನಾಟಕಕ್ಕೆ 1,116 ಹುದ್ದೆಗಳನ್ನು ಮೀಸಲಿಡಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಈ ಹುದ್ದೆಗಳು ಹಂಚಿಕೆಯಾಗಿವೆ. ಕರ್ನಾಟಕದ ಪ್ರಮುಖ ಹುದ್ದೆಗಳ ವಿವರದಲ್ಲಿ ಉಡುಪಿ 1,691, ಬಾಗಲಕೋಟೆ 1,762, ಬೆಳಗಾವಿ 1,098, ದಾವಣಗೆರೆ 1,450, ರಾಯಚೂರು 1,009, ಹಾವೇರಿ 87, ಉತ್ತರ ಕನ್ನಡ 452, ಬೆಳಗಾವಿ ವಿಭಾಗ 762, ಹೀಗೆ ವಿವಿಧ ವಿಭಾಗಗಳಲ್ಲಿ ಹುದ್ದೆಗಳು ಲಭ್ಯವಿವೆ. ಇದರೊಂದಿಗೆ ಹಾಸನ, ಬೆಂಗಳೂರು, ಬೀದರ್‌, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ, ಗದಗ, ಕಲಬುರಗಿ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಇರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ ಎಷ್ಟು?

GDS ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18ರಿಂದ 40 ವರ್ಷಗಳೊಳಗೆ ಇರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಅರ್ಜಿ ಶುಲ್ಕ ಎಷ್ಟು?

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆದರೆ ಮಹಿಳಾ ಅಭ್ಯರ್ಥಿಗಳು ಸೇರಿದಂತೆ ನಿಯಮಾನುಸಾರ ಶುಲ್ಕ ವಿನಾಯಿತಿ ಪಡೆಯುವ ವರ್ಗಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ತಮ್ಮ ಅರ್ಹತೆ, ವಯೋಮಿತಿ, ಶುಲ್ಕ ಹಾಗೂ ಇತರ ನಿಯಮಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸುವುದು ಸೂಕ್ತ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 19-09-2026 ಎಂದು ಪ್ರಕಟಿಸಲಾಗಿದೆ. ಆನ್‌ಲೈನ್‌ ಶುಲ್ಕ ಪಾವತಿಗೆ ಸೆಪ್ಟೆಂಬರ್‌ 20ರಿಂದ 21ರವರೆಗೆ ಅವಕಾಶವಿದೆ. ಅರ್ಜಿ ತಿದ್ದುಪಡಿಗೆ ಸೆಪ್ಟೆಂಬರ್‌ 23ರಿಂದ 24ರವರೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಉತ್ತಮ.

ಹೇಗೆ ಅರ್ಜಿ ಸಲ್ಲಿಸಬೇಕು?

ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ GDS ನೇಮಕಾತಿಗೆ ಸಂಬಂಧಿಸಿದ ಆನ್‌ಲೈನ್‌ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವೈಯಕ್ತಿಕ ಮಾಹಿತಿ, ಶೈಕ್ಷಣಿಕ ವಿವರಗಳು ಹಾಗೂ ಅಗತ್ಯ ದಾಖಲೆಗಳನ್ನು ಸರಿಯಾಗಿ ನಮೂದಿಸಬೇಕು.

ಅಧಿಕೃತ ವೆಬ್‌ಸೈಟ್: indiapost.gov.in/gdsonlineengagement

ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ 10ನೇ ತರಗತಿ ಉತ್ತೀರ್ಣ ಅಭ್ಯರ್ಥಿಗಳಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಿದೆ. ವಿಶೇಷವಾಗಿ ಲಿಖಿತ ಪರೀಕ್ಷೆ ಇಲ್ಲದೆ 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಮೆರಿಟ್‌ ಮೂಲಕ ಆಯ್ಕೆ ನಡೆಯುತ್ತಿರುವುದು ಈ ನೇಮಕಾತಿಯ ಪ್ರಮುಖ ಆಕರ್ಷಣೆಯಾಗಿದೆ.

ಭಾರತೀಯ ಅಂಚೆ ಇಲಾಖೆಯ ಈ ನೇಮಕಾತಿ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದ್ದು, ವಿಶೇಷವಾಗಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಗಮನಹರಿಸಬೇಕಾಗಿದೆ. ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆಯ ಬದಲಾಗಿ 10ನೇ ತರಗತಿ ಅಂಕಗಳ ಆಧಾರದ ಮೇಲೆ ಮೆರಿಟ್‌ ಪಟ್ಟಿ ಸಿದ್ಧಪಡಿಸುವ ಮೂಲಕ ನಡೆಯುವ ಸಾಧ್ಯತೆ ಇರುವುದರಿಂದ, ಪರೀಕ್ಷಾ ತಯಾರಿಯ ಒತ್ತಡವಿಲ್ಲದೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಮ್ಮ ಶೈಕ್ಷಣಿಕ ಅರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ದಾಖಲೆಗಳು ಹಾಗೂ ಸ್ಥಳೀಯ ಭಾಷೆಯ ಅರ್ಹತೆ ಸೇರಿದಂತೆ ಎಲ್ಲಾ ನಿಯಮಗಳನ್ನು ಪರಿಶೀಲಿಸಬೇಕು. ಕರ್ನಾಟಕದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ರಾಜ್ಯಕ್ಕೆ ಸಂಬಂಧಿಸಿದ ಸ್ಥಳೀಯ ಭಾಷಾ ಅರ್ಹತೆಯ ನಿಯಮಗಳನ್ನೂ ಗಮನಿಸುವುದು ಮುಖ್ಯ. ಅಂಚೆ ಇಲಾಖೆಯ ಗ್ರಾಮೀಣ ಪ್ರದೇಶಗಳಲ್ಲಿನ ಸೇವಾ ಜಾಲವನ್ನು ಬಲಪಡಿಸುವ ಉದ್ದೇಶದಿಂದ ಇಂತಹ ಹುದ್ದೆಗಳು ಪ್ರಮುಖವಾಗಿವೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಂಚೆ ವಿತರಣೆ, ಗ್ರಾಹಕ ಸೇವೆ ಮತ್ತು ಅಂಚೆ ಕಚೇರಿಗೆ ಸಂಬಂಧಿಸಿದ ವಿವಿಧ ಜವಾಬ್ದಾರಿಗಳು ದೊರೆಯಬಹುದು. ಹೀಗಾಗಿ 10ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಯುವಜನರಿಗೆ ಇದು ಸರ್ಕಾರಿ ವಲಯಕ್ಕೆ ಪ್ರವೇಶ ಪಡೆಯಲು ಉತ್ತಮ ಅವಕಾಶವಾಗಬಹುದು. ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಪ್ಪಾದ ಮಾಹಿತಿ ನೀಡದಂತೆ ಹಾಗೂ ದಾಖಲೆಗಳಲ್ಲಿ ಇರುವ ವಿವರಗಳನ್ನೇ ನಮೂದಿಸುವಂತೆ ಎಚ್ಚರಿಕೆ ವಹಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯನ್ನು ಹಾಗೂ ಅಗತ್ಯ ದಾಖಲೆಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಕೂಡ ಮುಖ್ಯ.

ಒಟ್ನಲ್ಲಿ ಭಾರತೀಯ ಅಂಚೆ ಇಲಾಖೆಯ GDS ನೇಮಕಾತಿಯಲ್ಲಿ ದೇಶದಾದ್ಯಂತ 23,757 ಹುದ್ದೆಗಳು ಹಾಗೂ ಕರ್ನಾಟಕದಲ್ಲಿ 1,116 ಹುದ್ದೆಗಳು ಲಭ್ಯವಿರುವುದರಿಂದ, ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು ಸೂಕ್ತ.

ಪ್ರಮುಖ ದಿನಾಂಕಗಳು

ನೋಂದಣಿ (Registration) ಆರಂಭ: ಆಗಸ್ಟ್ 31, 2026
ನೋಂದಣಿಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 19, 2026
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಸೆಪ್ಟೆಂಬರ್ 21, 2026 (ಸಂಜೆ 5:00 ರವರೆಗೆ)
ತಿದ್ದುಪಡಿ ವಿಂಡೋ (Correction Window): ಸೆಪ್ಟೆಂಬರ್ 23 ರಿಂದ 24, 2026

Add Zee News as a Preferred Source
TAGS:
Sarkari Naukri
Job