• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕೆರಿಯರ್
  • /ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌! FDA, SDA ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ!

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌! FDA, SDA ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ!

ಕರ್ನಾಟಕದ 33 ಇಲಾಖೆಗಳಲ್ಲಿ ಖಾಲಿ ಇರುವ 5,431 ಎಫ್‌ಡಿಎ, ಎಸ್‌ಡಿಎ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಗಡುವನ್ನ ಕೆಇಎ ನವೆಂಬರ್‌ 30ರವರೆಗೆ ವಿಸ್ತರಿಸಿದೆ. ಈ ಹಿಂದೆ ನವೆಂಬರ್‌ 25 ಕೊನೆಯ ದಿನವಾಗಿತ್ತು. ಅರ್ಜಿ ಸಲ್ಲಿಕೆ ಜೊತೆಗೆ ಪರೀಕ್ಷಾ ಶುಲ್ಕ ಪಾವತಿಗೂ ನವೆಂಬರ್‌ 30ರವರೆಗೆ ಅವಕಾಶ ನೀಡಲಾಗಿದೆ. ಆದರೆ ಲಿಖಿತ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Written ByPuttaraj K Alur
Published: Nov 25, 2026, 08:51 IST|Updated: Nov 25, 2026, 08:58 IST
joinshare
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌! FDA, SDA ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ!
Image Credit: KEA Recruitment

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌! FDA, SDA ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ!

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌! FDA, SDA ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ!

2

ಬಂಗಾಳ ಕೊಲ್ಲಿಯಲ್ಲಿ ಹವಾಮಾನ ಬದಲಾವಣೆ; ಮುಂದಿನ 5 ದಿನ ರಾಜ್ಯದಲ್ಲಿ ಗುಡುಗು ಸಹಿತಿ ಭಾರೀ ಮಳೆ!

3

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

4

ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆಯಲ್ಲಿ ಕುದಿಸಿ ಹಚ್ಚಿ... ಒಂದೇ ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸುತ್ತೆ !

5

ಈ ಖ್ಯಾತ ನಟಿ ಯಾರು ನೆನಪಿದೆಯೇ? ಪುನೀತ್‌ ಜೊತೆ ನಟಿಸಿದ ಬ್ಯೂಟಿ ದಿಢೀರ್‌ ನಾಪತ್ತೆ ಆಗಿದ್ದೆಲ್ಲಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

KEA Recruitment 2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿರುವ 5,431 ಎಫ್‌ಡಿಎ (FDA), ಎಸ್‌ಡಿಎ (SDA) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನ ನವೆಂಬರ್‌ 30ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ನವೆಂಬರ್‌ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳಿಗೆ ಇನ್ನೂ ಐದು ದಿನಗಳ ಹೆಚ್ಚುವರಿ ಅವಕಾಶ ಸಿಕ್ಕಿದೆ.

ಕೆಇಎ ಈ ಕುರಿತು ನವೆಂಬರ್‌ 24ರಂದು ಆದೇಶ ಹೊರಡಿಸಿದ್ದು, ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅವರು ಗಡುವು ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿಯನ್ನ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದರು. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ ಅವಧಿ ಮಾತ್ರವಲ್ಲದೆ, ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನೂ ನವೆಂಬರ್‌ 30ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ನವೆಂಬರ್‌ 25 ಕೊನೆಯ ದಿನವಾಗಿದ್ದರೆ, ಶುಲ್ಕ ಪಾವತಿಗೆ ನವೆಂಬರ್‌ 26 ಅಂತಿಮ ದಿನವಾಗಿತ್ತು. ಈಗ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ಎರಡಕ್ಕೂ ನವೆಂಬರ್‌ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಇನ್ನೂ ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳು ಈ ಹೆಚ್ಚುವರಿ ಅವಧಿಯನ್ನ ಬಳಸಿಕೊಳ್ಳಬಹುದಾಗಿದೆ.

ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ 5,431 ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಇದರಲ್ಲಿ ಪ್ರಥಮ ದರ್ಜೆ ಸಹಾಯಕರು (FDA), ದ್ವಿತೀಯ ದರ್ಜೆ ಸಹಾಯಕರು (SDA) ಸೇರಿದಂತೆ ವಿವಿಧ ಹುದ್ದೆಗಳು ಸೇರಿವೆ. ನೇಮಕಾತಿಗೆ ಸಂಬಂಧಿಸಿದ ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್‌ 30ರಂದು ಆರಂಭವಾಗಿತ್ತು. ಆರಂಭದಲ್ಲಿ ನವೆಂಬರ್‌ 25ರೊಳಗೆ ಅರ್ಜಿ ಸಲ್ಲಿಸಿ, ನವೆಂಬರ್‌ 26ರೊಳಗೆ ಶುಲ್ಕ ಪಾವತಿಸುವಂತೆ ಸೂಚಿಸಲಾಗಿತ್ತು.

ಇದೀಗ ಗಡುವು ವಿಸ್ತರಣೆಯಾಗಿರುವುದರಿಂದ ಅರ್ಜಿ ಸಲ್ಲಿಸಲು ಬಾಕಿ ಉಳಿಸಿಕೊಂಡಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ದೊರೆತಂತಾಗಿದೆ. ಆದರೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯ ಹೊರತಾಗಿ ನೇಮಕಾತಿ ಪ್ರಕ್ರಿಯೆಯ ಇತರ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಕೆಇಎ ಸ್ಪಷ್ಟಪಡಿಸಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರವೇ ಲಿಖಿತ ಪರೀಕ್ಷೆ ನಡೆಯಲಿದೆ. ಅಂದರೆ ಅರ್ಜಿ ಸಲ್ಲಿಕೆಗೆ ಹೆಚ್ಚುವರಿ ಸಮಯ ನೀಡಲಾಗಿದೆಯೇ ಹೊರತು ಪರೀಕ್ಷೆಯ ದಿನಾಂಕದಲ್ಲಿ ಬದಲಾವಣೆ ಮಾಡಿಲ್ಲ.

ಆದ್ದರಿಂದ ಎಫ್‌ಡಿಎ, ಎಸ್‌ಡಿಎ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನವೆಂಬರ್‌ 30ರೊಳಗೆ ತಮ್ಮ ಅರ್ಜಿ ಪ್ರಕ್ರಿಯೆಯನ್ನ ಪೂರ್ಣಗೊಳಿಸಬೇಕಿದೆ. ಅರ್ಜಿ ಸಲ್ಲಿಸುವುದರ ಜೊತೆಗೆ ನಿಗದಿತ ಪರೀಕ್ಷಾ ಶುಲ್ಕವನ್ನೂ ಅದೇ ದಿನಾಂಕದೊಳಗೆ ಪಾವತಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ಎರಡೂ ಪೂರ್ಣಗೊಂಡ ನಂತರವೇ ಪ್ರಕ್ರಿಯೆ ಪೂರ್ಣವಾಗಲಿದೆ ಎಂಬುದನ್ನ ಅಭ್ಯರ್ಥಿಗಳು ಗಮನಿಸಬೇಕು.

ಕೊನೆಯ ದಿನದವರೆಗೆ ಕಾಯುವುದರಿಂದ ಸರ್ವರ್‌ ಸಮಸ್ಯೆ ಅಥವಾ ಇತರ ತಾಂತ್ರಿಕ ತೊಂದರೆಗಳು ಎದುರಾಗುವ ಸಾಧ್ಯತೆ ಇರುವುದರಿಂದ, ಅಭ್ಯರ್ಥಿಗಳು ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿಸುವಂತೆ ಕೆಇಎ ಸಲಹೆ ನೀಡಿದೆ. ಒಟ್ನಲ್ಲಿ ರಾಜ್ಯದ 33 ಇಲಾಖೆಗಳಲ್ಲಿ ಖಾಲಿ ಇರುವ 5,431 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವವರಿಗೆ ನವೆಂಬರ್‌ 30ರವರೆಗೆ ಕಾಲಾವಕಾಶ ದೊರೆತಿದ್ದು, ಈ ದಿನಾಂಕದೊಳಗೆ ಅರ್ಜಿ ಹಾಗೂ ಶುಲ್ಕ ಪಾವತಿ ಪೂರ್ಣಗೊಳಿಸುವುದು ಅಗತ್ಯವಾಗಿದೆ. 

Add Zee News as a Preferred Source
TAGS:
Job
Kannada News