• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕೆರಿಯರ್
  • /ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್: ಶುಲ್ಕ ಪಾವತಿ ಗಡುವು ವಿಸ್ತರಣೆ

ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್: ಶುಲ್ಕ ಪಾವತಿ ಗಡುವು ವಿಸ್ತರಣೆ

medical admission fee deadline: ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ಮಹತ್ವದ ಗುಡ್‌ನ್ಯೂಸ್‌ ಸಿಕ್ಕಿದೆ. ಶುಲ್ಕ ಪಾವತಿಸಲು ನೀಡಲಾಗಿದ್ದ ಗಡುವನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳಿಗೆ ಅಗತ್ಯ ಶುಲ್ಕ ಪಾವತಿಸಲು ಹೆಚ್ಚುವರಿ ಸಮಯ ಲಭ್ಯವಾಗಿದೆ. ಈ ಅವಕಾಶವನ್ನು ಬಳಸಿಕೊಂಡು ಅಭ್ಯರ್ಥಿಗಳು ನಿಗದಿತ ವಿಸ್ತರಿತ ಗಡುವಿನೊಳಗೆ ಶುಲ್ಕ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

Reported ByChetana DevarmaniEdited ByChetana Devarmani
Published: Sep 20, 2026, 12:53 PM IST|Updated: Sep 20, 2026, 12:54 PM IST
joinshare
ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್: ಶುಲ್ಕ ಪಾವತಿ ಗಡುವು ವಿಸ್ತರಣೆ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಮನವಿ ಹಿನ್ನೆಲೆಯಲ್ಲಿ ಶುಲ್ಕ ಪಾವತಿಸುವ ಗಡುವನ್ನು ಸೆಪ್ಟೆಂಬರ್ 21ರ ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಸೀಟು ಪಡೆದಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಈ ಹಿಂದೆ ನಿಗದಿಪಡಿಸಿದ್ದ ಅವಧಿಯನ್ನು ಇದೀಗ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಹೆಚ್ಚಿನ ಸಮಯ ನೀಡಬೇಕು ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಪದೇ ಪದೇ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಕೆಇಎ ಈ ನಿರ್ಧಾರ ಕೈಗೊಂಡಿದೆ.

ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 21ರಂದು ಸಂಜೆ 5 ಗಂಟೆಯೊಳಗೆ ಶುಲ್ಕ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಇದು ಕಡೆಯ ಬಾರಿಗೆ ವಿಸ್ತರಿಸಿರುವ ಅವಧಿಯಾಗಿದ್ದು, ಅಭ್ಯರ್ಥಿಗಳು ಮತ್ತಷ್ಟು ಸಮಯಾವಕಾಶದ ನಿರೀಕ್ಷೆ ಇಟ್ಟುಕೊಳ್ಳದೆ ನಿಗದಿತ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಶುಲ್ಕ ಪಾವತಿ ಮಾಡಿದ ಬಳಿಕ ಅಭ್ಯರ್ಥಿಗಳು ತಮ್ಮ ಸೀಟು ಖಾತರಿ ಚೀಟಿಯನ್ನು (Seat Confirmation Slip) ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಸಂಬಂಧಪಟ್ಟ ಕಾಲೇಜಿಗೆ ತೆರಳಿ ಕಡ್ಡಾಯವಾಗಿ ಪ್ರವೇಶ ಪಡೆಯಬೇಕಾಗುತ್ತದೆ.

ಶುಲ್ಕ ಪಾವತಿಯ ಜೊತೆಗೆ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನೂ ಅಭ್ಯರ್ಥಿಗಳು ಪೂರ್ಣಗೊಳಿಸಬೇಕು. ಸೆಪ್ಟೆಂಬರ್ 21 ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಕೊನೆಯ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಹೀಗಾಗಿ ಎರಡನೇ ಸುತ್ತಿನಲ್ಲಿ ವೈದ್ಯಕೀಯ ಅಥವಾ ದಂತ ವೈದ್ಯಕೀಯ ಸೀಟು ಪಡೆದಿರುವ ಅಭ್ಯರ್ಥಿಗಳು ಶುಲ್ಕ ಪಾವತಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಹಾಗೂ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳುವ ಪ್ರಕ್ರಿಯೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ಅಗತ್ಯವಾಗಿದೆ.

ಕೆಇಎ ನೀಡಿರುವ ಈ ವಿಸ್ತರಣೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹೆಚ್ಚುವರಿ ಸಮಯ ಒದಗಿಸಿದಂತಾಗಿದೆ. ಆದರೆ ಇದು ಕಡೆಯ ಬಾರಿಗೆ ವಿಸ್ತರಿಸಿರುವ ಅವಧಿ ಎಂದು ತಿಳಿಸಲಾಗಿದ್ದು, ಸೆಪ್ಟೆಂಬರ್ 21ರ ಸಂಜೆ 5 ಗಂಟೆಯೊಳಗೆ ಶುಲ್ಕ ಪಾವತಿಸದಿದ್ದರೆ ಪ್ರವೇಶ ಪ್ರಕ್ರಿಯೆಯಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಯಾವುದೇ ವಿಳಂಬ ಮಾಡದೆ ಕೆಇಎ ಸೂಚಿಸಿರುವ ನಿಯಮಗಳಂತೆ ಶುಲ್ಕ ಪಾವತಿ ಮತ್ತು ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

Add Zee News as a Preferred Source
TAGS:
Education