• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕೆರಿಯರ್
  • /ರೈಲ್ವೆಯಲ್ಲಿ 2,861 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೆ ಆಯ್ಕೆ!

ರೈಲ್ವೆಯಲ್ಲಿ 2,861 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೆ ಆಯ್ಕೆ!

ಈ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳನ್ನ ಆಧರಿಸಿ ಮೆರಿಟ್ ಪಟ್ಟಿಯನ್ನ ಸಿದ್ಧಪಡಿಸಲಾಗುತ್ತದೆ. ನಂತರ ಮೀಸಲಾತಿ ನಿಯಮಗಳ ಅನುಸಾರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದ ಅರ್ಹ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.

Written ByPuttaraj K Alur
Published: Nov 21, 2026, 15:51 IST|Updated: Nov 21, 2026, 16:03 IST
joinshare
ರೈಲ್ವೆಯಲ್ಲಿ 2,861 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೆ ಆಯ್ಕೆ!
Image Credit: Railway Recruitment 2026

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Railway Recruitment 2026: ರೈಲ್ವೆ ಇಲಾಖೆಯಲ್ಲಿ ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವೊಂದು ಲಭ್ಯವಾಗಿದೆ. ರೈಲ್ವೆ ನೇಮಕಾತಿ ಕೋಶ (RRC), ಮುಂಬೈ, ಕೇಂದ್ರ ರೈಲ್ವೆಯ ವಿವಿಧ ಘಟಕಗಳು ಮತ್ತು ಕಾರ್ಯಾಗಾರಗಳಲ್ಲಿ ಖಾಲಿ ಇರುವ ಒಟ್ಟು 2,861 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನಾಂಕವಾಗಿದೆ.

ಈ ನೇಮಕಾತಿಯ ವಿಶೇಷವೆಂದರೆ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸಲಾಗುವುದಿಲ್ಲ. ಬದಲಾಗಿ 10ನೇ ತರಗತಿ ಮತ್ತು ಐಟಿಐನಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು 9,600 ರೂಪಾಯಿ ಸ್ಟೈಫಂಡ್ ಕೂಡ ದೊರೆಯಲಿದೆ.

ಯಾವ ವಿಭಾಗಗಳಲ್ಲಿ ಎಷ್ಟು ಹುದ್ದೆಗಳು?

ಕೇಂದ್ರ ರೈಲ್ವೆಯ ವ್ಯಾಪ್ತಿಯಲ್ಲಿ ಬರುವ ಐದು ಕ್ಲಸ್ಟರ್‌ಗಳಲ್ಲಿ ಒಟ್ಟು 2,861 ಹುದ್ದೆಗಳನ್ನ ಹಂಚಿಕೆ ಮಾಡಲಾಗಿದೆ. ಈ ಪೈಕಿ ಮುಂಬೈ ಕ್ಲಸ್ಟರ್‌ನಲ್ಲಿ ಅತಿ ಹೆಚ್ಚು 1,712 ಹುದ್ದೆಗಳು ಖಾಲಿ ಇವೆ. ಭೂಸಾವಲ್ ಕ್ಲಸ್ಟರ್‌ನಲ್ಲಿ 500, ಪುಣೆ ಕ್ಲಸ್ಟರ್‌ನಲ್ಲಿ 271, ನಾಗ್ಪುರ ಕ್ಲಸ್ಟರ್‌ನಲ್ಲಿ 221 ಹಾಗೂ ಸೋಲಾಪುರ ಕ್ಲಸ್ಟರ್‌ನಲ್ಲಿ 157 ಹುದ್ದೆಗಳನ್ನ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳು ವಿವಿಧ ಐಟಿಐ ಟ್ರೇಡ್‌ಗಳಿಗೆ ಸಂಬಂಧಿಸಿವೆ. ಫಿಟ್ಟರ್, ಮೆಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ವೆಲ್ಡರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಮೆಕ್ಯಾನಿಕ್ ಮೆಷಿನ್ ಟೂಲ್ಸ್ ನಿರ್ವಹಣೆ, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಂ ಅಸಿಸ್ಟೆಂಟ್ (COPA), ಮೆಕ್ಯಾನಿಕ್ ಹಾಗೂ ಪೇಂಟರ್ ವಿಭಾಗಗಳಲ್ಲಿ ಅವಕಾಶಗಳಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಕ್ಲಸ್ಟರ್‌ಗಳ ಅಡಿಯಲ್ಲಿ ಬರುವ ಕಾರ್ಯಾಗಾರಗಳು, ಡಿಪೋಗಳು ಮತ್ತು ಇತರ ವಿಭಾಗಗಳಲ್ಲಿ ಒಂದು ವರ್ಷದ ತರಬೇತಿ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಕನಿಷ್ಠ ಶೇ.50 ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರ ಜೊತೆಗೆ ಸಂಬಂಧಪಟ್ಟ ಟ್ರೇಡ್‌ನಲ್ಲಿ ಐಟಿಐ ಪೂರ್ಣಗೊಳಿಸಿರಬೇಕು ಹಾಗೂ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ (NTC) ಹೊಂದಿರಬೇಕು. ಎಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಹರಾಗಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ ಎಷ್ಟಿರಬೇಕು?

ಅಭ್ಯರ್ಥಿಗಳ ವಯಸ್ಸನ್ನ 2026ರ ನವೆಂಬರ್ 3ರ ಆಧಾರದಲ್ಲಿ ಪರಿಗಣಿಸಲಾಗುತ್ತದೆ. ಅದರಂತೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗಲಿದೆ.

ಅರ್ಜಿ ಶುಲ್ಕದ ವಿವರ

ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ, ದಿವ್ಯಾಂಗರು (PwBD) ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದಲ್ಲಿ ಆಯ್ಕೆ

ಈ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳನ್ನ ಆಧರಿಸಿ ಮೆರಿಟ್ ಪಟ್ಟಿಯನ್ನ ಸಿದ್ಧಪಡಿಸಲಾಗುತ್ತದೆ. ನಂತರ ಮೀಸಲಾತಿ ನಿಯಮಗಳ ಅನುಸಾರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದ ಅರ್ಹ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ

ಕೇಂದ್ರ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಒಟ್ಟು 2,861 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ಮಾಸಿಕ 9,600 ರೂಪಾಯಿ ಸ್ಟೈಫಂಡ್ ನೀಡಲಾಗುತ್ತದೆ.

Add Zee News as a Preferred Source
TAGS:
Job
Kannada News