SOCIAL MEDIA

Newsletter

PARTNER SITES
Select Language Select State

ರೈಲ್ವೆ ಇಲಾಖೆಯಲ್ಲಿ 1,215 ಸ್ಟೇಷನ್ ಮಾಸ್ಟರ್ ಹುದ್ದೆಗಳ ನೇಮಕಾತಿ! ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ

ರೈಲ್ವೆ ನೇಮಕಾತಿ ಮಂಡಳಿ (RRB) 1,215 ಸ್ಟೇಷನ್ ಮಾಸ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ತಿಂಗಳಿಗೆ ₹35,400 ವೇತನ ನೀಡಲಾಗುತ್ತದೆ. 2027ರ ಜನವರಿ 1ರ ವೇಳೆಗೆ ಅಭ್ಯರ್ಥಿಗಳ ವಯಸ್ಸು 22ರಿಂದ 33 ವರ್ಷಗಳೊಳಗಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳು ಸೇರಿವೆ. ಅರ್ಜಿ ಸಲ್ಲಿಸಲು ನವೆಂಬರ್ 25, 2026 ಕೊನೆಯ ದಿನಾಂಕವಾಗಿದೆ.

Written By Puttaraj K Alur
Published: Oct 31, 2026, 06:13 PM IST | Updated: Oct 31, 2026, 06:30 PM IST
Image Credit: RRB Recruitment
Join

RRB Recruitment 2026: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ಸ್ಟೇಷನ್ ಮಾಸ್ಟರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನ ಆಹ್ವಾನಿಸಿದೆ. ಒಟ್ಟು 1,215 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹35,400 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 27, 2026ರಿಂದ ಆರಂಭವಾಗಿದ್ದು, ನವೆಂಬರ್ 25, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

1,215 ಹುದ್ದೆಗಳಿಗೆ ನೇಮಕಾತಿ

ಈ ನೇಮಕಾತಿಯನ್ನ ರೈಲ್ವೆ ನೇಮಕಾತಿ ಮಂಡಳಿ ನಡೆಸುತ್ತಿದೆ. ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಉದ್ಯೋಗ ಪಡೆಯಲು ಅವಕಾಶ ಹೊಂದಿರುತ್ತಾರೆ. ಹುದ್ದೆಗಳ ಸಂಖ್ಯೆ 1,215 ಆಗಿದ್ದು, ವೇತನ ಶ್ರೇಣಿ ಪೇ ಲೆವೆಲ್ 6ರ ಅಡಿಯಲ್ಲಿ ತಿಂಗಳಿಗೆ ₹35,400 ಎಂದು ತಿಳಿಸಲಾಗಿದೆ.

ವಿದ್ಯಾರ್ಹತೆ ಏನಿರಬೇಕು?

ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಬಿಕಾಂ, ಬಿಇ ಅಥವಾ ಬಿಟೆಕ್ ಸೇರಿದಂತೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು.

ವಯೋಮಿತಿ ಮತ್ತು ಸಡಿಲಿಕೆ

2027ರ ಜನವರಿ 1ರ ವೇಳೆಗೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 22 ವರ್ಷ ಹಾಗೂ ಗರಿಷ್ಠ 33 ವರ್ಷಗಳಿರಬೇಕು. ಮೀಸಲಾತಿ ಮತ್ತು ಇತರ ನಿಗದಿತ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ (NCL) ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. SC/ST ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ನೀಡಲಾಗುತ್ತದೆ. ಪಿಡಬ್ಲ್ಯೂಬಿಡಿ ವಿಭಾಗದಲ್ಲಿ ಯುಆರ್/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 10 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕದ ವಿವರ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾಗಿ ಶುಲ್ಕ ಪಾವತಿಸಬೇಕು. SC/ST, ಮಹಿಳೆಯರು, ಟ್ರಾನ್ಸ್‌ಜೆಂಡರ್, ಮಾಜಿ ಸೈನಿಕರು, ಅಲ್ಪಸಂಖ್ಯಾತ ಸಮುದಾಯಗಳು, ಇಬಿಸಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಇತರ ಎಲ್ಲಾ ಅಭ್ಯರ್ಥಿಗಳಿಗೆ ₹500 ಶುಲ್ಕ ವಿಧಿಸಲಾಗುತ್ತದೆ. ಶುಲ್ಕವನ್ನ ಆನ್‌ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ?

ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನ ಹಲವು ಹಂತಗಳಲ್ಲಿ ನಡೆಸಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಕಂಪ್ಯೂಟರ್ ಆಧಾರಿತ ಸಾಮರ್ಥ್ಯ ಪರೀಕ್ಷೆ (CBAT), ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಆಯ್ಕೆ ಪ್ರಕ್ರಿಯೆಯ ಭಾಗಗಳಾಗಿವೆ. ವೈದ್ಯಕೀಯ ಪರೀಕ್ಷೆಗೆ A-2 ಮಾನದಂಡವನ್ನ ಉಲ್ಲೇಖಿಸಲಾಗಿದೆ. ಅಧಿಸೂಚನೆಯಲ್ಲಿ ಸಂದರ್ಶನವನ್ನೂ ಆಯ್ಕೆ ಪ್ರಕ್ರಿಯೆಯ ಹಂತವಾಗಿ ತಿಳಿಸಲಾಗಿದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವಿವರ

CBT ಪರೀಕ್ಷೆಯ ಅವಧಿ 120 ನಿಮಿಷಗಳಾಗಿದ್ದು, ಒಟ್ಟು 100 ಪ್ರಶ್ನೆಗಳನ್ನ ಕೇಳಲಾಗುತ್ತದೆ. ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳ ವ್ಯವಸ್ಥೆ ಇರಲಿದೆ. ಪ್ರತಿ ತಪ್ಪು ಉತ್ತರಕ್ಕೆ 1/3 ಅಂಕ ಕಡಿತಗೊಳಿಸಲಾಗುತ್ತದೆ. ಪರೀಕ್ಷೆಯನ್ನ ಹಲವು ಪಾಳಿಗಳಲ್ಲಿ ನಡೆಸಿದರೆ, ಅಂಕಗಳ ಸಾಮಾನ್ಯೀಕರಣ ಪ್ರಕ್ರಿಯೆಯನ್ನ ಅನುಸರಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು RRB ನೇಮಕಾತಿ 2026ರ ಅಧಿಕೃತ ಅಧಿಸೂಚನೆಯನ್ನ ಸಂಪೂರ್ಣವಾಗಿ ಓದಿ, ತಮ್ಮ ಅರ್ಹತೆಯನ್ನ ಖಚಿತಪಡಿಸಿಕೊಳ್ಳಬೇಕು. ಅರ್ಜಿಯಲ್ಲಿ ಬಳಸಲು ವ್ಯಾಲಿಡ್ ಇಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನ ಸಿದ್ಧವಾಗಿಟ್ಟುಕೊಳ್ಳಬೇಕು. ಗುರುತಿನ ಪುರಾವೆ, ವಯಸ್ಸಿನ ದಾಖಲೆ, ಶೈಕ್ಷಣಿಕ ಅರ್ಹತೆಯ ಪ್ರಮಾಣಪತ್ರಗಳು, ರೆಸ್ಯೂಮ್ ಹಾಗೂ ಅನ್ವಯಿಸಿದರೆ ಅನುಭವದ ದಾಖಲೆಗಳನ್ನ ಸಿದ್ಧಪಡಿಸಿಕೊಳ್ಳಬೇಕು. ನಂತರ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ವಿವರಗಳನ್ನ ಭರ್ತಿ ಮಾಡಿ, ಸೂಚಿಸಿದಂತೆ ಇತ್ತೀಚಿನ ಛಾಯಾಚಿತ್ರ ಮತ್ತು ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನ ಅಪ್‌ಲೋಡ್ ಮಾಡಬೇಕು. ಕೊನೆಯಲ್ಲಿ ತಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನ ಆನ್‌ಲೈನ್ ಮೂಲಕ ಪಾವತಿಸಬೇಕು.

ಪ್ರಮುಖ ದಿನಾಂಕಗಳು

- ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 27, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 25, 2026
- ಅರ್ಜಿ ತಿದ್ದುಪಡಿ ಅವಧಿ: ನವೆಂಬರ್ 28ರಿಂದ ಡಿಸೆಂಬರ್ 7, 2026ರವರೆಗೆ

ಒಟ್ನಲ್ಲಿ RRB ಸ್ಟೇಷನ್ ಮಾಸ್ಟರ್ ನೇಮಕಾತಿಯಲ್ಲಿ 1,215 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನಿಗದಿತ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನ ಪೂರ್ಣಗೊಳಿಸಬೇಕು.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES