Actor Darshan wife vijayalaxmshi visit kariyamma temple: ಜೈಲಿನಲ್ಲಿ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್‌ಗಾಗಿ ಪತ್ನಿ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದಾರೆ. ದರ್ಶನ್ ಆರೋಗ್ಯ ಸುಧಾರಿಸಬೇಕು, ಬೆನ್ನು ನೋವಿನ ಸಮಸ್ಯೆ ದೂರವಾಗಬೇಕು ಹಾಗೂ ಆದಷ್ಟು ಬೇಗ ಜೈಲಿನಿಂದ ಬಿಡುಗಡೆಯಾಗಬೇಕು ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನ ಕರಿಕಲ್ಲಮ್ಮ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ವಿಶೇಷ ಪೂಜೆ ಸಲ್ಲಿಸಿದ್ದು, ದರ್ಶನ್ ಜಾಮೀನಿನ ಮೇಲೆ ಬಿಡುಗಡೆಯಾದರೆ ಪತಿ ಸಮೇತ ದೇವಸ್ಥಾನಕ್ಕೆ ಬರುವುದಾಗಿ ಹರಕೆ ಹೊತ್ತಿದ್ದಾರೆ ಎನ್ನಲಾಗಿದೆ.
ನಟ ದರ್ಶನ್ ಜೈಲಿನಿಂದ ಯಾವಾಗ ಹೊರ ಬರ್ತಾರೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ.. ಮತ್ತೊಂದೆಡೆ ಪತಿಯ ಆರೋಗ್ಯದ ಬಗ್ಗೆ ಚಿಂತಿತರಾಗಿರುವ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದಾರೆ.. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಚೌಲಿಹಳ್ಳಿ ಗ್ರಾಮದ ಶ್ರೀ ಕರಿಕಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ..
ಕಳೆದ 12 ವರ್ಷಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಇತ್ತೀಚಿನ ದಿನಗಳಲ್ಲಿ ನೋವು ತೀವ್ರಗೊಂಡಿದೆ ಎನ್ನಲಾಗಿದೆ.. ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.. ಈ ಹಿನ್ನೆಲೆಯಲ್ಲಿ ಪತಿಯ ಆರೋಗ್ಯ ಸುಧಾರಿಸಲಿ, ಬೆನ್ನು ನೋವು ನಿವಾರಣೆಯಾಗಲಿ ಎಂದು ವಿಜಯಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ..
ಅಷ್ಟೇ ಅಲ್ಲ.. ದರ್ಶನ್‌ಗೆ ಜಾಮೀನು ಸಿಕ್ಕಿ ಆದಷ್ಟು ಬೇಗ ಜೈಲಿನಿಂದ ಬಿಡುಗಡೆಯಾಗಲಿ ಎಂದು ಪ್ರಾರ್ಥಿಸಿದ್ದಾರೆ.. ದರ್ಶನ್ ಬಿಡುಗಡೆಯಾದರೆ ಪತಿ ಸಮೇತ ದೇವಸ್ಥಾನಕ್ಕೆ ಬಂದು ಮತ್ತೊಮ್ಮೆ ಪೂಜೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದಾರೆ ಎನ್ನಲಾಗಿದೆ..
ಇನ್ನು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ಡಿ ಬಾಸ್ ಅಭಿಮಾನಿಗಳು ದೇವಸ್ಥಾನದ ಬಳಿ ಜಮಾಯಿಸಿದ್ದಾರೆ.. ವಿಜಯಲಕ್ಷ್ಮಿ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ..ಪತಿಯ ಆರೋಗ್ಯ ಮತ್ತು ಬಿಡುಗಡೆಗಾಗಿ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದು, ದರ್ಶನ್ ಶೀಘ್ರದಲ್ಲೇ ಸಂಕಷ್ಟದಿಂದ ಹೊರಬರಲಿ ಎಂಬುದು ಅಭಿಮಾನಿಗಳ ಪ್ರಾರ್ಥನೆಯಾಗಿದೆ..
ದರ್ಶನ್‌ಗೆ ಬೆನ್ನುನೋವಿನ ಸಂಕಷ್ಟ!!
ನಟ ದರ್ಶನ್‌ಗೆ ಮತ್ತೆ ಆರೋಗ್ಯ ಸಮಸ್ಯೆ ಎದುರಾಗಿದೆ. ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್‌ಗೆ ನೋವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆಯಂತೆ. ಈಗಾಗಲೇ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಚಿಕಿತ್ಸೆ ಹಾಗೂ ಫಿಸಿಯೋಥೆರಪಿ ಅಗತ್ಯವಿದೆ ಎನ್ನಲಾಗ್ತಿದೆ. ಹಾಗಾದ್ರೆ ದರ್ಶನ್ ಆರೋಗ್ಯ ಸ್ಥಿತಿ ಹೇಗಿದೆ? ಜೈಲಿನಲ್ಲಿ ದರ್ಶನ್‌ಗೆ ಸೂಕ್ತ ಚಿಕಿತ್ಸೆ ಸಿಗ್ತಿದ್ಯಾ
ದರ್ಶನ್‌ಗೆ ಬೆನ್ನುನೋವಿನ ಸಂಕಷ್ಟ.. ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ ಆರೋಗ್ಯ ಸಮಸ್ಯೆ.. ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನುನೋವಿನಿಂದ ದರ್ಶನ್ ಬಳಲುತ್ತಿದ್ದಾರೆ ಎನ್ನಲಾಗಿದೆ. ಬೆನ್ನು ನೋವಿನಿಂದಾಗಿ ದೈನಂದಿನ ಚಟುವಟಿಕೆಗಳಿಗೂ ತೊಂದರೆಯಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಈ ಹಿಂದೆಯೂ ದರ್ಶನ್ ಬೆನ್ನುನೋವಿನ ಸಮಸ್ಯೆ ಎದುರಿಸಿದ್ದರು. ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಫಿಸಿಯೋಥೆರಪಿ ಸೇರಿದಂತೆ ಅಗತ್ಯ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದರು. ಇದೀಗ ಮತ್ತೆ ಬೆನ್ನುನೋವು ಕಾಣಿಸಿಕೊಂಡಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಒಂದೆಡೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕಾನೂನು ಹೋರಾಟ.. ಮತ್ತೊಂದೆಡೆ ಆರೋಗ್ಯ ಸಮಸ್ಯೆ.. ಹೀಗೆ ದರ್ಶನ್‌ಗೆ ಸಂಕಷ್ಟಗಳ ಸರಮಾಲೆಯೇ ಎದುರಾಗಿದೆ. ಸದ್ಯ ದರ್ಶನ್ ಆರೋಗ್ಯದ ಬಗ್ಗೆ ಅಧಿಕೃತವಾಗಿ ಲಭ್ಯವಾಗುವ ಮಾಹಿತಿ ಹಾಗೂ ವೈದ್ಯಕೀಯ ವರದಿಗಳ ಮೇಲೆ ಎಲ್ಲರ ಗಮನ ನೆಟ್ಟಿದೆ.
ನಟ ದರ್ಶನ್ ಜೈಲಿನಿಂದ ಯಾವಾಗ ಹೊರ ಬರ್ತಾರೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ.. ಮತ್ತೊಂದೆಡೆ ಪತಿಯ ಆರೋಗ್ಯದ ಬಗ್ಗೆ ಚಿಂತಿತರಾಗಿರುವ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದಾರೆ.. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಚೌಲಿಹಳ್ಳಿ ಗ್ರಾಮದ ಶ್ರೀ ಕರಿಕಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ..
ಕಳೆದ 12 ವರ್ಷಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಇತ್ತೀಚಿನ ದಿನಗಳಲ್ಲಿ ನೋವು ತೀವ್ರಗೊಂಡಿದೆ ಎನ್ನಲಾಗಿದೆ.. ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.. ಈ ಹಿನ್ನೆಲೆಯಲ್ಲಿ ಪತಿಯ ಆರೋಗ್ಯ ಸುಧಾರಿಸಲಿ, ಬೆನ್ನು ನೋವು ನಿವಾರಣೆಯಾಗಲಿ ಎಂದು ವಿಜಯಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ..
ಒಟ್ಟಾರೆಯಾಗಿ ಪತಿಯ ಆರೋಗ್ಯ ಮತ್ತು ಬಿಡುಗಡೆಗಾಗಿ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದು, ದರ್ಶನ್ ಶೀಘ್ರದಲ್ಲೇ ಸಂಕಷ್ಟದಿಂದ ಹೊರಬರಲಿ ಎಂಬುದು ಅಭಿಮಾನಿಗಳ ಪ್ರಾರ್ಥನೆಯಾಗಿದೆ..