SOCIAL MEDIA

Newsletter

PARTNER SITES
Select Language Select State

ರಮ್ಯಾ ಕೃಷ್ಣನ್ ವಿಚ್ಛೇದನ ನಿಜವೇ? ಕೊನೆಗೂ ಮೌನ ಮುರಿದ ನಟಿ ಹೇಳಿದ್ದೇನು?

Ramya Krishnan Divorce Rumours: ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಾ ಕೃಷ್ಣನ್ ಮತ್ತು ನಿರ್ದೇಶಕ ಕೃಷ್ಣ ವಂಶಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿದೆ.

Written By Chetana Devarmani
Published: Nov 16, 2026, 22:38 IST | Updated: Nov 16, 2026, 22:43 IST
Image Credit: ನಟಿ ರಮ್ಯಾ ಕೃಷ್ಣನ್ ಮತ್ತು ನಿರ್ದೇಶಕ ಕೃಷ್ಣ ವಂಶಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿದೆ.
Join

Ramya Krishnan Divorce Rumours: ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಾ ಕೃಷ್ಣನ್ ಮತ್ತು ನಿರ್ದೇಶಕ ಕೃಷ್ಣ ವಂಶಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ, ಇಬ್ಬರೂ ವಿಚ್ಛೇದನ ಪಡೆದಿದ್ದಾರೆ ಎಂಬ ಸುದ್ದಿಗಳು ಹಲವು ವರ್ಷಗಳಿಂದ ಹರಿದಾಡುತ್ತಿವೆ. ಇಬ್ಬರೂ ಬೇರೆ ಬೇರೆ ನಗರಗಳಲ್ಲಿ ವಾಸಿಸುತ್ತಿರುವುದೇ ಇಂತಹ ವದಂತಿಗಳಿಗೆ ಪ್ರಮುಖ ಕಾರಣವಾಗಿತ್ತು. ಇದೀಗ ಈ ಊಹಾಪೋಹಗಳಿಗೆ ನಟಿ ರಮ್ಯಾ ಕೃಷ್ಣನ್ ತೆರೆ ಎಳೆದಿದ್ದು, ತಮ್ಮ ವೈವಾಹಿಕ ಜೀವನದ ಬಗ್ಗೆ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ‘ರಾ ಟಾಕ್ಸ್ ವಿತ್ ವಿಕೆ’ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ರಮ್ಯಾ ಕೃಷ್ಣನ್, ಪತಿ ಕೃಷ್ಣ ವಂಶಿ ಜೊತೆಗಿನ ಸಂಬಂಧದ ಕುರಿತು ಮಾತನಾಡಿದ್ದಾರೆ. “ನಾವಿಬ್ಬರೂ ಈಗಲೂ ಶೇ.100ರಷ್ಟು ಪತಿ-ಪತ್ನಿಯಾಗಿಯೇ ಇದ್ದೇವೆ. ನಮ್ಮ ಅನುಕೂಲಕ್ಕೆ ತಕ್ಕಂತೆ ಸಂತೋಷದಿಂದ ಬೇರೆ ಬೇರೆ ನಗರಗಳಲ್ಲಿ ವಾಸಿಸುತ್ತಿದ್ದೇವೆ. ನಮ್ಮ ನಡುವೆ ಯಾವುದೇ ಸಮಸ್ಯೆಯಿಲ್ಲ” ಎಂದು ಹೇಳುವ ಮೂಲಕ ವಿಚ್ಛೇದನದ ಸುದ್ದಿಗಳನ್ನು ತಳ್ಳಿಹಾಕಿದ್ದಾರೆ.

ಬೇರೆ ಬೇರೆ ನಗರಗಳಲ್ಲಿ ವಾಸಿಸುತ್ತಿರುವುದರ ಹಿಂದಿನ ಕಾರಣವನ್ನೂ ಅವರು ವಿವರಿಸಿದ್ದಾರೆ. ಮಗನ ಶಿಕ್ಷಣದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ನಟಿ ತಿಳಿಸಿದ್ದಾರೆ. ಟಿವಿ ಕಾರ್ಯಕ್ರಮದ ಚಿತ್ರೀಕರಣ ಆರಂಭವಾದ ಸಂದರ್ಭದಲ್ಲಿ ಮಗ ಚಿಕ್ಕವನಾಗಿದ್ದ. ಆಗ ಕುಟುಂಬ ಹೈದರಾಬಾದ್‌ನಲ್ಲಿ ನೆಲೆಸಿತ್ತು. ಆದರೆ ತೆಲಂಗಾಣ ಚಳವಳಿಯ ಸಂದರ್ಭದಲ್ಲಿ ಆಗಾಗ್ಗೆ ಮುಷ್ಕರಗಳು ನಡೆಯುತ್ತಿದ್ದವು. ಶಾಲೆಗಳಿಗೆ ರಜೆ ಘೋಷಣೆಯಾಗುತ್ತಿದ್ದರಿಂದ ಮಗನ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿತ್ತು. ಅಲ್ಲದೆ, ತಾವು ಚಿತ್ರೀಕರಣಕ್ಕಾಗಿ ಹೊರಗಿದ್ದಾಗ ಮಗ ಅನಾರೋಗ್ಯಕ್ಕೆ ಒಳಗಾಗುತ್ತಿದ್ದ. ಈ ಎಲ್ಲ ಕಾರಣಗಳಿಂದ ಆತನನ್ನು ಚೆನ್ನೈ ಶಾಲೆಗೆ ಸೇರಿಸುವ ನಿರ್ಧಾರ ಮಾಡಿದ್ದಾಗಿ ರಮ್ಯಾ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮದುವೆ ವ್ಯವಸ್ಥೆಯ ಬಗ್ಗೆಯೂ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಮದುವೆಗೆ ಸಮಾಜದಲ್ಲಿ ಕೆಲವೊಮ್ಮೆ ಅಗತ್ಯಕ್ಕಿಂತ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಪ್ರತಿಯೊಂದು ಸಂಬಂಧಕ್ಕೂ ಮದುವೆಯ ಮುದ್ರೆ ಅನಿವಾರ್ಯವಲ್ಲ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

“ಕೃಷ್ಣ ವಂಶಿ ಅವರು ಆಗಲೇ ಮದುವೆ ಯಾಕೆ? ನಾವಿಬ್ಬರೂ ಲಿವ್-ಇನ್ ಸಂಬಂಧದಲ್ಲಿರೋಣ ಎಂದು ಹೇಳುತ್ತಿದ್ದರು. ಬಹುಶಃ ಅಂದೇ ಅವರ ಮಾತಿಗೆ ಒಪ್ಪಿಕೊಳ್ಳಬೇಕಿತ್ತು ಎನಿಸುತ್ತದೆ. ಮದುವೆಯಾದ ಬಳಿಕ ಇಬ್ಬರ ಕುಟುಂಬಗಳು ಮತ್ತು ಸುತ್ತಮುತ್ತಲಿನ ಜನರು ಕೂಡ ಸಂಬಂಧದ ಭಾಗವಾಗುತ್ತಾರೆ. ಆಗ ಸಂಗಾತಿಯ ಜೊತೆಗೆ ಇತರ ಸಂಬಂಧಗಳಿಗೂ ಉತ್ತರದಾಯಿಗಳಾಗಬೇಕಾಗುತ್ತದೆ. ಆದರೆ, ವಂಶಿ ಮತ್ತು ನನ್ನ ನಡುವಿನ ಸಂಬಂಧ ಚೆನ್ನಾಗಿದೆ. ನಮ್ಮ ಸಂಬಂಧ ಯಾವಾಗಲೂ ಹೀಗೆಯೇ ಇರಲಿದೆ ಎಂಬ ನಂಬಿಕೆ ನನಗಿದೆ” ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಅಂದಹಾಗೆ, ರಮ್ಯಾ ಕೃಷ್ಣನ್ ಮತ್ತು ಕೃಷ್ಣ ವಂಶಿ 2003ರಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನ ‘ಗುಲಾಬಿ’, ‘ನಿನ್ನೆ ಪೆಲ್ಲಾಡತ’ ಮತ್ತು ‘ಸಿಂಧೂರಂ’ ಸಿನಿಮಾಗಳ ಮೂಲಕ ಇಬ್ಬರಿಗೂ ಪರಿಚಯವಾಗಿತ್ತು. ಬಳಿಕ ‘ಚಂದ್ರಲೇಖ’ (1998), ‘ಶ್ರೀ ಆಂಜನೇಯಂ’ (2004) ಹಾಗೂ ‘ರಂಗ ಮಾರ್ತಾಂಡ’ (2023) ಸೇರಿದಂತೆ ಹಲವು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಈ ದಂಪತಿಗೆ ರಿತ್ವಿಕ್ ವಂಶಿ ಎಂಬ ಪುತ್ರನಿದ್ದು, 2005ರಲ್ಲಿ ಜನಿಸಿದ್ದಾರೆ.

ಒಟ್ಟಿನಲ್ಲಿ, ಬೇರೆ ಬೇರೆ ನಗರಗಳಲ್ಲಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ದಂಪತಿ ವಿಚ್ಛೇದನ ಪಡೆದಿದ್ದಾರೆ ಎನ್ನುವ ವದಂತಿಗಳು ಹರಿದಾಡುತ್ತಿದ್ದವು. ಆದರೆ ಇದೀಗ ರಮ್ಯಾ ಕೃಷ್ಣನ್ ನೀಡಿರುವ ಸ್ಪಷ್ಟನೆಯಿಂದ ಈ ಸುದ್ದಿಗಳಿಗೆ ಪೂರ್ಣವಿರಾಮ ಬಿದ್ದಿದೆ. ತಮ್ಮ ವೈಯಕ್ತಿಕ ನಿರ್ಧಾರಗಳು ಮತ್ತು ಮಗನ ಶಿಕ್ಷಣದ ಕಾರಣದಿಂದ ಪ್ರತ್ಯೇಕ ನಗರಗಳಲ್ಲಿ ನೆಲೆಸಿದ್ದೇವೆ ಹೊರತು, ದಾಂಪತ್ಯದಲ್ಲಿ ಯಾವುದೇ ಬಿರುಕು ಇಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES