SOCIAL MEDIA

Newsletter

PARTNER SITES
Select Language Select State

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಇದೆ, ಇದನ್ನು ಎಲ್ಲರೂ ಒಪ್ಪಿಕೊಳ್ಳಬೇಕು; ನಟಿ ರಮ್ಯಾ ಕೃಷ್ಣನ್

Ramya Krishnan Latest News : ನಟಿ ರಮ್ಯಾ ಕೃಷ್ಣನ್ ಈ ವಿಚಾರವಾಗಿ ಮಾತನಾಡಿದ್ದು, ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಅಸ್ತಿತ್ವದಲ್ಲಿರುವುದನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

Written By Chetana Devarmani
Published: Nov 17, 2026, 21:37 IST | Updated: Nov 17, 2026, 21:39 IST
Join

Ramya Krishnan Casting Couch : ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ವಿಚಾರ ಆಗಾಗ್ಗೆ ಚರ್ಚೆಗೆ ಬರುತ್ತಲೇ ಇರುತ್ತದೆ. ಕೆಲವರು ಚಿತ್ರರಂಗದಲ್ಲಿ ಇಂತಹ ಶೋಷಣೆ ಇದೆ ಎಂದು ಬಹಿರಂಗವಾಗಿ ಹೇಳಿಕೊಂಡರೆ, ಇನ್ನು ಕೆಲವರು ಈ ಆರೋಪಗಳನ್ನು ನಿರಾಕರಿಸುತ್ತಾರೆ. ಇದೀಗ ಹಿರಿಯ ನಟಿ ರಮ್ಯಾ ಕೃಷ್ಣನ್ ಈ ವಿಚಾರವಾಗಿ ಮಾತನಾಡಿದ್ದು, ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಅಸ್ತಿತ್ವದಲ್ಲಿರುವುದನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ರಮ್ಯಾ ಕೃಷ್ಣನ್, ಮಹಿಳೆಯರು ಹೆಚ್ಚು ಸ್ವಾತಂತ್ರ್ಯ ಹೊಂದಿರುವ ಅಮೆರಿಕದಂತಹ ದೇಶದಲ್ಲಿಯೂ ಇಂತಹ ಘಟನೆಗಳು ನಡೆಯುತ್ತವೆ. ಹಾಗಿರುವಾಗ ಭಾರತದಲ್ಲಿ ಇಂತಹ ಪ್ರಕರಣಗಳು ನಡೆಯುವುದರಲ್ಲಿ ಅಚ್ಚರಿಯೇನಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಮಾತಿಗೆ ಉದಾಹರಣೆಯಾಗಿ ಅಮೆರಿಕದ ಎಪ್‌ಸ್ಟೀನ್ ಫೈಲ್ಸ್ ಪ್ರಕರಣವನ್ನೂ ಉಲ್ಲೇಖಿಸಿದ್ದಾರೆ.

ಈ ಹಿಂದೆ ಇಂತಹ ಶೋಷಣೆಗಳು ನಡೆದಿವೆ, ಈಗಲೂ ನಡೆಯುತ್ತಿವೆ ಮತ್ತು ಮುಂದೆಯೂ ನಡೆಯಬಹುದು. ಆದರೆ ಕೆಲವು ಸಂದರ್ಭಗಳಲ್ಲಿ ಬಲವಂತದ ಮೂಲಕ, ಇನ್ನು ಕೆಲವು ಸಂದರ್ಭಗಳಲ್ಲಿ ಒಪ್ಪಿಗೆಯೊಂದಿಗೆ ಇಂತಹ ಘಟನೆಗಳು ನಡೆಯುತ್ತವೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಕಾಸ್ಟಿಂಗ್ ಕೌಚ್ ಎಂಬ ಪದವನ್ನು ಕೇವಲ ಸಿನಿಮಾ ಅವಕಾಶಗಳಿಗಾಗಿ ನಡೆಯುವ ಶೋಷಣೆಗೆ ಮಾತ್ರ ಸೀಮಿತಗೊಳಿಸುವುದು ಸರಿಯಲ್ಲ ಎಂದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಚಾರ ಇರುವುದರಿಂದ ಇಲ್ಲಿನ ಘಟನೆಗಳು ಸಾರ್ವಜನಿಕರ ಗಮನಕ್ಕೆ ಬೇಗ ಬರುತ್ತವೆ. ಆದರೆ ಕುಟುಂಬ, ಕಚೇರಿ ಸೇರಿದಂತೆ ವಿವಿಧ ಕೆಲಸದ ಸ್ಥಳಗಳಲ್ಲಿಯೂ ಮಹಿಳೆಯರು ಕಿರುಕುಳ ಎದುರಿಸುತ್ತಾರೆ. ಇಂತಹ ಸಮಸ್ಯೆಗಳು ಸಮಾಜದ ಹಲವು ಕ್ಷೇತ್ರಗಳಲ್ಲಿ ಅಸ್ತಿತ್ವದಲ್ಲಿವೆ ಎಂದು ಹೇಳಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲು 2017ರಲ್ಲಿ ನ್ಯಾಯಮೂರ್ತಿ ಕೆ. ಹೇಮಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. 2024ರ ಆಗಸ್ಟ್‌ನಲ್ಲಿ ವರದಿ ಬಹಿರಂಗಗೊಂಡ ಬಳಿಕ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ, ತಾರತಮ್ಯ ಮತ್ತು ಶೋಷಣೆಯ ಕುರಿತು ದೇಶಾದ್ಯಂತ ಚರ್ಚೆ ಆರಂಭವಾಗಿತ್ತು. ಈ ವರದಿಯು ಮಲಯಾಳಂ ಚಿತ್ರರಂಗದಲ್ಲಿನ ಹಲವು ಸಮಸ್ಯೆಗಳನ್ನು ಬೆಳಕಿಗೆ ತಂದಿತ್ತು.

ದಕ್ಷಿಣ ಭಾರತದ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ರಮ್ಯಾ ಕೃಷ್ಣನ್, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅವರು, ಅದರ ಮುಂದುವರಿದ ಭಾಗ ‘ಜೈಲರ್ 2’ನಲ್ಲಿಯೂ ವಿಜಯಾ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗಿದೆ. ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಅಸ್ತಿತ್ವದ ಕುರಿತು ರಮ್ಯಾ ಕೃಷ್ಣನ್ ನೀಡಿರುವ ಹೇಳಿಕೆ ಮತ್ತೊಮ್ಮೆ ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಶೋಷಣೆಯ ವಿಚಾರವಾಗಿ ಚರ್ಚೆಯನ್ನು ಮುನ್ನೆಲೆಗೆ ತಂದಿದೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES