SOCIAL MEDIA

Newsletter

PARTNER SITES
Select Language Select State

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್

ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ಅನಂತ್ ನಾಗ್ ಅವರು ಮಾತನಾಡಿದ ವೇಳೆ ಸಭಾಂಗಣದಲ್ಲಿ ಹಾಜರಿದ್ದ ಗಣ್ಯರು ಎದ್ದು ನಿಂತು ಗೌರವ ಸಲ್ಲಿಸಿದರು.

Reported By Chetana Devarmani Written By Chetana Devarmani
Published: Sep 22, 2026, 09:13 PM IST | Updated: Sep 22, 2026, 09:16 PM IST
Join

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತೀಯ ಚಿತ್ರರಂಗದಲ್ಲಿ ಅತ್ಯುನ್ನತ ಗೌರವಗಳಲ್ಲಿ ಒಂದೆಂದು ಪರಿಗಣಿಸಲಾಗುವ ಈ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಅನಂತ್ ನಾಗ್ ಅವರು ಮನಮುಟ್ಟುವ ರೀತಿಯಲ್ಲಿ ಮಾತನಾಡಿದ್ದಾರೆ. ತಮ್ಮ ಐದು ದಶಕಗಳಿಗೂ ಹೆಚ್ಚಿನ ಸಿನಿಪಯಣವನ್ನು ನೆನಪಿಸಿಕೊಂಡ ಅವರು, ಈ ಗೌರವಕ್ಕೆ ಕಾರಣರಾದವರನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ಅನಂತ್ ನಾಗ್ ಅವರು ಮಾತನಾಡಿದ ವೇಳೆ ಸಭಾಂಗಣದಲ್ಲಿ ಹಾಜರಿದ್ದ ಗಣ್ಯರು ಎದ್ದು ನಿಂತು ಗೌರವ ಸಲ್ಲಿಸಿದರು. ಬಾಲಿವುಡ್, ಕಾಲಿವುಡ್, ಮಾಲಿವುಡ್ ಸೇರಿದಂತೆ ವಿವಿಧ ಚಿತ್ರರಂಗಗಳ ಗಣ್ಯರು ಅನಂತ್ ನಾಗ್ ಅವರ ಸಾಧನೆಯನ್ನು ಗೌರವಿಸಿದರು. ಪ್ರಶಸ್ತಿ ಪ್ರದಾನಕ್ಕೂ ಮುನ್ನ ಅವರ ಸುದೀರ್ಘ ಸಿನಿಮಾ ಜರ್ನಿಯನ್ನು ಪರಿಚಯಿಸುವ ವಿಶೇಷ ವಿಡಿಯೋವನ್ನು ಪ್ರದರ್ಶಿಸಲಾಯಿತು. ಅವರ ಹಲವು ಪ್ರಮುಖ ಚಿತ್ರಗಳು ಮತ್ತು ಪಾತ್ರಗಳ ತುಣುಕುಗಳು ಈ ವಿಡಿಯೋದಲ್ಲಿ ಕಾಣಿಸಿಕೊಂಡವು. ‘ಕೆಜಿಎಫ್’, ‘ಗಾಳಿಪಟ’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯವನ್ನು ನೆನಪಿಸಲಾಯಿತು.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಬಳಿಕ ಅನಂತ್ ನಾಗ್ ಅವರು ಈ ಗೌರವವನ್ನು ತಮ್ಮ ಅಭಿಮಾನಿಗಳು, ಚಿತ್ರರಂಗದ ತಂತ್ರಜ್ಞರು ಮತ್ತು ನಿರ್ದೇಶಕರಿಗೆ ಅರ್ಪಿಸಿದರು. “ಈ ಪ್ರಶಸ್ತಿ ಸಿಗಲು ಕೇವಲ ಕರ್ನಾಟಕ ಮತ್ತು ಕನ್ನಡಿಗರು ಮಾತ್ರ ಕಾರಣ. ಕಳೆದ 55 ವರ್ಷಗಳಿಂದ ನನ್ನನ್ನು ಪ್ರೀತಿಯಿಂದ ಸಲಹಿದ ಸಮಸ್ತ ಕರ್ನಾಟಕದ ಪ್ರೇಕ್ಷಕರಿಗೆ, ಚಿತ್ರರಂಗದ ತಂತ್ರಜ್ಞರಿಗೆ ಮತ್ತು ನಿರ್ದೇಶಕರಿಗೆ ನಾನು ಈ ಅತ್ಯುನ್ನತ ಗೌರವವನ್ನು ಅರ್ಪಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ತಮ್ಮ ಸಿನಿಮಾ ಪಯಣದಲ್ಲಿ ಪ್ರೇಕ್ಷಕರು ನೀಡಿದ ಪ್ರೀತಿ ಮತ್ತು ಬೆಂಬಲವನ್ನು ಅನಂತ್ ನಾಗ್ ಅವರು ವಿಶೇಷವಾಗಿ ಸ್ಮರಿಸಿದರು. ನಟನಾಗಿ ತಮಗೆ ಸಿಕ್ಕಿರುವ ಗೌರವದ ಹಿಂದೆ ಅನೇಕರು ನೀಡಿದ ಪ್ರೋತ್ಸಾಹವಿದೆ ಎಂಬುದನ್ನು ಅವರು ತಮ್ಮ ಮಾತುಗಳ ಮೂಲಕ ವ್ಯಕ್ತಪಡಿಸಿದರು.

ಭಾಷಣದ ವೇಳೆ ಅನಂತ್ ನಾಗ್ ಅವರು ತಮ್ಮ ಜನ್ಮಭೂಮಿ, ಕರ್ಮಭೂಮಿ ಮತ್ತು ಧರ್ಮಭೂಮಿಯನ್ನು ಸ್ಮರಿಸಿ ಗೌರವ ಸಲ್ಲಿಸಿದರು. ತಮ್ಮ ಬದುಕು ಹಾಗೂ ವೃತ್ತಿಜೀವನದಲ್ಲಿ ಈ ನೆಲಗಳ ಮಹತ್ವವನ್ನು ಅವರು ನೆನಪಿಸಿಕೊಂಡರು. ಇದೇ ವೇಳೆ “ಉದರನಿಮಿತ್ತಂ ಬಹುಕೃತವೇಷಂ” ಎಂಬ ಸಾಲನ್ನೂ ಅವರು ಉಲ್ಲೇಖಿಸಿದರು. ಜೀವನ ನಿರ್ವಹಣೆಗಾಗಿ ಮನುಷ್ಯ ಹಲವು ರೀತಿಯ ಪಾತ್ರಗಳನ್ನು ನಿರ್ವಹಿಸುತ್ತಾನೆ ಎಂಬ ಅರ್ಥವನ್ನು ಈ ಮಾತಿನ ಮೂಲಕ ಅವರು ಸರಳವಾಗಿ ವಿವರಿಸಿದರು. 55 ವರ್ಷಗಳ ಕಲಾ ಪಯಣದ ಬಳಿಕ ದೊರೆತ ಈ ಅತ್ಯುನ್ನತ ಗೌರವವನ್ನು ಕನ್ನಡಿಗರು ಮತ್ತು ಕರ್ನಾಟಕದ ಪ್ರೇಕ್ಷಕರಿಗೆ ಅರ್ಪಿಸಿರುವ ಅನಂತ್ ನಾಗ್ ಅವರ ಮಾತುಗಳು ಕಾರ್ಯಕ್ರಮದ ಪ್ರಮುಖ ಕ್ಷಣವಾಗಿ ಗಮನ ಸೆಳೆದವು.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES