• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಹಸೆಮಣೆ ಏರಲು ಸಜ್ಜಾದ ಕಾವ್ಯಾ ಮಾರನ್‌ ರಿಯಲ್‌ ವಯಸ್ಸು ಎಷ್ಟು ಗೊತ್ತಾ?

ಹಸೆಮಣೆ ಏರಲು ಸಜ್ಜಾದ ಕಾವ್ಯಾ ಮಾರನ್‌ ರಿಯಲ್‌ ವಯಸ್ಸು ಎಷ್ಟು ಗೊತ್ತಾ?

Kavya Maran and Anirudh wedding date: ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ಅವರ ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕುತೂಹಲ ಹೆಚ್ಚಾಗಿದೆ.

Written ByChetana Devarmani
Published: Oct 17, 2026, 08:10 PM IST|Updated: Oct 17, 2026, 08:38 PM IST
joinshare
ಹಸೆಮಣೆ ಏರಲು ಸಜ್ಜಾದ ಕಾವ್ಯಾ ಮಾರನ್‌ ರಿಯಲ್‌ ವಯಸ್ಸು ಎಷ್ಟು ಗೊತ್ತಾ?

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ರಾಖಿ ಸಾವಂತ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್‌ ವಾರೆಂಟ್‌ ಜಾರಿ..! 16 ವರ್ಷದ ಹಳೆ ಕೇಸ್‌ಗೆ ಮಹತ್ವದ ತಿರುವು

ರಾಖಿ ಸಾವಂತ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್‌ ವಾರೆಂಟ್‌ ಜಾರಿ..! 16 ವರ್ಷದ ಹಳೆ ಕೇಸ್‌ಗೆ ಮಹತ್ವದ ತಿರುವು

2

ಸಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ, ಫಂಡಿಂಗ್ ಆರೋಪಕ್ಕೆ ಹರಿಪ್ರಸಾದ್ ತಿರುಗೇಟು

3

ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಕೆ.. ಈ ಜಿಲ್ಲೆಗಳಿಗೆ ಅ.19ರವರೆಗೆ ಎಲ್ಲೊ ಅಲರ್ಟ್ ಘೋಷಣೆ!

4

ಹಸೆಮಣೆ ಏರಲು ಸಜ್ಜಾದ ಕಾವ್ಯಾ ಮಾರನ್‌ ರಿಯಲ್‌ ವಯಸ್ಸು ಎಷ್ಟು ಗೊತ್ತಾ?

5

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಧಾರವಾಡದಲ್ಲಿ ಬಿ.ಕೆ.ಹರಿಪ್ರಸಾದ್ ಪ್ರಚಾರ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Kavya Maran and  Anirudh age gap: ಸಿನಿಮಾ ಮತ್ತು ಕ್ರಿಕೆಟ್ ಜಗತ್ತಿನಲ್ಲಿ ಸದಾ ಸುದ್ದಿಯಲ್ಲಿರುವ ಹೆಸರುಗಳೆಂದರೆ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್. ಇಬ್ಬರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಚರ್ಚೆಗಳು ನಡೆಯುತ್ತಿರುತ್ತವೆ. ಈ ನಡುವೆ ಇಬ್ಬರ ವಯಸ್ಸಿನ ಅಂತರ ಎಷ್ಟು ಎಂಬ ಕುತೂಹಲವೂ ಅಭಿಮಾನಿಗಳಲ್ಲಿ ಮೂಡಿದೆ.

IPLನ ಸನ್‌ರೈಸರ್ಸ್ ಹೈದರಾಬಾದ್‌ನ ಸಹ-ಮಾಲಕಿ ಕಾವ್ಯಾ ಮಾರನ್ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಕಾಲಿವುಡ್‌ ಸ್ಟಾರ್ ಮ್ಯೂಸಿಕ್​​ ಡೈರೆಕ್ಟರ್​​​ ಅನಿರುದ್ಧ್​ ರವಿಚಂದರ್ ಮತ್ತು ಕಾವ್ಯಾ ಮಾರನ್ ಅವರ ಮದುವೆ ದಿನಾಂಕ ಫಿಕ್ಸ್​​ ಆಗಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಅನಿರುದ್ಧ್ ಮತ್ತು ಕಾವ್ಯಾ ಮಾರನ್ ನವೆಂಬರ್ 11, 2026 ರಂದು ಗ್ರೀಸ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿದೆ.

ತಮಿಳು ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಹಾಗೂ ಗಾಯಕ ಅನಿರುದ್ಧ್ ರವಿಚಂದರ್ ಅವರು 1990ರ ಅಕ್ಟೋಬರ್ 16ರಂದು ಜನಿಸಿದ್ದಾರೆ ಅವರಿಗೆ ಈಗ 36 ವರ್ಷ ವಯಸ್ಸು. ತಮ್ಮ ವಿಭಿನ್ನ ಸಂಗೀತ ಶೈಲಿ, ಆಕರ್ಷಕ ಹಿನ್ನೆಲೆ ಸಂಗೀತ ಮತ್ತು ಹಿಟ್ ಹಾಡುಗಳ ಮೂಲಕ ಅವರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ‘ವೈ ದಿಸ್ ಕೊಲವೆರಿ ಡಿ’ ಹಾಡಿನ ಮೂಲಕ ದೇಶಾದ್ಯಂತ ಗಮನ ಸೆಳೆದಿದ್ದ ಅನಿರುದ್ಧ್, ಬಳಿಕ ಹಲವು ಯಶಸ್ವಿ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಮತ್ತೊಂದೆಡೆ, ಕಾವ್ಯಾ ಮಾರನ್ ಅವರು 1992ರ ಆಗಸ್ಟ್ 6ರಂದು ಜನಿಸಿದ್ದಾರೆ, ಅವರಿಗೆ ಈಗ 34 ವರ್ಷ. ಸನ್ ಗ್ರೂಪ್ ಮುಖ್ಯಸ್ಥ ಕಲಾನಿಧಿ ಮಾರನ್ ಅವರ ಪುತ್ರಿಯಾಗಿರುವ ಕಾವ್ಯಾ, ಇಂಡಿಯನ್ ಪ್ರೀಮಿಯರ್ ಲೀಗ್‌ನ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲೀಕತ್ವದೊಂದಿಗೆ ಗುರುತಿಸಿಕೊಂಡಿದ್ದಾರೆ. ಐಪಿಎಲ್ ಪಂದ್ಯಗಳ ವೇಳೆ ತಂಡಕ್ಕೆ ಬೆಂಬಲ ನೀಡುವ ಅವರ ಉಪಸ್ಥಿತಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯುತ್ತದೆ.

ಇಬ್ಬರ ನಡುವಿನ ವಯಸ್ಸಿನ ಅಂತರ ಎಷ್ಟು?

ಕಾವ್ಯಾ ಮಾರನ್ ಮತ್ತು ಅನಿರುದ್ಧ ಅವರ ಜನ್ಮದಿನಾಂಕಗಳನ್ನು ಹೋಲಿಸಿದರೆ ಇಬ್ಬರ ನಡುವಿನ ವಯಸ್ಸಿನ ಅಂತರ ಸರಿಸುಮಾರು ಎರಡು ವರ್ಷಗಳು. ಅನಿರುದ್ಧ್ ರವಿಚಂದರ್ ಅವರು ಕಾವ್ಯಾ ಮಾರನ್ ಅವರಿಗಿಂತ ಸುಮಾರು ಒಂದು ವರ್ಷ, ಒಂಬತ್ತು ತಿಂಗಳು ಹಿರಿಯರು ಎಂದು ಹೇಳಬಹುದಾಗಿದೆ. ಅನಿರುದ್ಧ್ ಅವರು ಅಕ್ಟೋಬರ್ 16ರಂದು ಜನಿಸಿದ್ದರೆ, ಕಾವ್ಯಾ ಆಗಸ್ಟ್ 6ರಂದು ಜನಿಸಿದ್ದಾರೆ. ಹೀಗಾಗಿ ಅನಿರುದ್ಧ್ ಹಿರಿಯರಾಗಿದ್ದು, ಕಾವ್ಯಾ ಅವರಿಗಿಂತ ಸುಮಾರು ಎರಡು ವರ್ಷ ದೊಡ್ಡವರಾಗಿದ್ದಾರೆ.

ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಕಾವ್ಯಾ ಮಾರನ್ ಮತ್ತು ಅನಿರುದ್ಧ  ವಿವಾಹದ ಬಗ್ಗೆ ಮತ್ತೆ ಗಮನ ಸೆಳೆದಿದ್ದು, ನವೆಂಬರ್ 21 ರಂದು ಚೆನ್ನೈನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವರದಿಯಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಹ್ಯಾಂಡಲ್ 'ಎಕ್ಸ್' ಪೋಸ್ಟ್‌ ನಲ್ಲಿ ಕಾವ್ಯಾ ಮಾರನ್‌ ಅವರ ಪೋಷಕರು, ಸನ್ ಗ್ರೂಪ್ ಅಧ್ಯಕ್ಷೆ ಕಲಾನಿಧಿ ಮಾರನ್ ಮತ್ತು ಕಾವೇರಿ ಮಾರನ್ ಅವರು ಜುಬಿಲಿ ಹಿಲ್ಸ್‌ನಲ್ಲಿರುವ ರೇವಂತ್ ರೆಡ್ಡಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಫೋಟೋಗಳನ್ನು ಶೇರ್‌ ಮಾಡಲಾಗಿದೆ. ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕಾವ್ಯಾ ಮಾರನ್ ವಿವಾಹ ಆರತಕ್ಷತೆಗೆ ಆಹ್ವಾನಿಸಿದ್ದಾರೆ ಎಂದು ಪೋಸ್ಟ್ ಮಾಡಲಾಗಿದೆ.

ಅನಿರುದ್ಧ್ ಮತ್ತು ಕಾವ್ಯ ಮಾರನ್‌ ಡೇಟಿಂಗ್‌ ಕುರಿತು ಹಲವಾರು ವರ್ಷಗಳಿಂದ ವದಂತಿಗಳು ಹರಡುತ್ತಿವೆ. ಲಾಸ್ ವೇಗಾಸ್‌ನಲ್ಲಿ ನಡೆದ ಭೋಜನಕೂಟದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡ ಬಳಿಕ ಅವರ ಸಂಬಂಧದ ಬಗ್ಗೆ ಸುದ್ದಿಗಳು ಹರಡಲು ಆರಂಭವಾಯಿತು. ಆದರೆ ಇದುವರೆಗೂ ಅನಿರುದ್ಧ್ ಅಥವಾ ಕಾವ್ಯಾ ಮಾರನ್‌ ಅವರ ಸಂಬಂಧದ ವದಂತಿಗಳನ್ನು ಸಾರ್ವಜನಿಕವಾಗಿ ದೃಢಪಡಿಸಿಲ್ಲ. 

Add Zee News as a Preferred Source
TAGS:
Cricket