ನಟ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲು
Actor Dhanveer: ನಟ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.. ಬೆದರಿಕೆ ಹಾಕಿರುವ ಆರೋಪದ ಮೇಲೆ ಬೋಜರಾಜ್ ಎಂಬುವವರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
Actor Dhanveer: ನಟ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಬೋಜರಾಜ್ ಎಂಬುವವರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ನಟ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಬೆದರಿಕೆ ಹಾಕಿರುವ ಆರೋಪದ ಮೇಲೆ ಬೋಜರಾಜ್ ಎಂಬುವವರು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಧನ್ವೀರ್ ಅವರ ಮೊಬೈಲ್ ನಂಬರ್‌ನಿಂದ ಬೆದರಿಕೆ ಸಂದೇಶ ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈಗಾಗಲೇ ಧನ್ವೀರ್ ತಂದೆ ಬೋಜರಾಜ್ ವಿರುದ್ಧ ದೂರು ನೀಡಿದ್ದು, ಇದೀಗ ಪರಸ್ಪರ ದೂರುಗಳ ಮೂಲಕ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ನಟ ಧನ್ವೀರ್ ಹಾಗೂ ಬೋಜರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಧನ್ವೀರ್ ವಿರುದ್ಧ ಬೋಜರಾಜ್ ನೀಡಿದ ದೂರಿನ ಮೇರೆಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಧನ್ವೀರ್ ಅವರ ನಂಬರ್‌ನಿಂದ ಬೆದರಿಕೆ ಸಂದೇಶ ಬಂದಿರುವುದಾಗಿ ಬೋಜರಾಜ್ ಆರೋಪಿಸಿದ್ದಾರೆ.ನಾಗರಾಜ್ ಎಂಬುವವರು ಕರೆ ಮಾಡಿ, ರಾಜಾಜಿನಗರದಲ್ಲಿರುವ ಧನ್ವೀರ್ ಮನೆಗೆ ಬರುವಂತೆ ತಿಳಿಸಿದ್ದರು. ಅದರಂತೆ ಅಲ್ಲಿಗೆ ತೆರಳಿ ನಾಗರಾಜ್ ಅವರನ್ನು ಕರೆದುಕೊಂಡು ಬಂದಿದ್ದಾಗಿ ಬೋಜರಾಜ್ ದೂರಿನಲ್ಲಿ ತಿಳಿಸಿದ್ದಾರೆ. ಆದರೆ, ಧನ್ವೀರ್ ಅವರ ಮೊಬೈಲ್ ನಂಬರ್‌ನಿಂದ ತಮಗೆ ಬೆದರಿಕೆ ಸಂದೇಶ ಬಂದಿದೆ ಎಂಬುದು ಆರೋಪಿಸಲಾಗಿದೆ
‘ನೀನು ಇರುವ ಲೊಕೇಶನ್ ಕಳುಹಿಸು’ ಎಂದು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.ಇನ್ನು, ಇದಕ್ಕೂ ಮುನ್ನ ಬೋಜರಾಜ್ ವಿರುದ್ಧ ಧನ್ವೀರ್ ಅವರ ತಂದೆ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಟಿ ವಿಜಯಲಕ್ಷ್ಮೀ ಅವರೊಂದಿಗೆ ಮನೆಗೆ ಬಂದು ಗಲಾಟೆ ಮಾಡಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು ಎನ್ನಲಾಗಿದೆ. ಇದೀಗ ಬೋಜರಾಜ್ ಅವರು ಧನ್ವೀರ್ ವಿರುದ್ಧ ದೂರು ನೀಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಒಟ್ಟಿನಲ್ಲಿ, ಧನ್ವೀರ್ ಹಾಗೂ ಬೋಜರಾಜ್ ನಡುವಿನ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಎರಡೂ ಕಡೆಯಿಂದ ದೂರುಗಳು ದಾಖಲಾಗಿವೆ. ಆರೋಪಗಳ ಕುರಿತು ಪೊಲೀಸರ ಮುಂದಿನ ಕ್ರಮ ಏನು ಎಂಬುದನ್ನು ಕಾದು ನೋಡಬೇಕಿದೆ.