• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಬಿಡದಿ ಟೌನ್‌ಶಿಪ್‌ಗೆ ರೈತರ ತೀವ್ರ ವಿರೋಧ : ರಾಷ್ಟ್ರಪತಿಗೆ ದಯಾಮರ*ಣ ಕೋರಿ ಪತ್ರ

ಬಿಡದಿ ಟೌನ್‌ಶಿಪ್‌ಗೆ ರೈತರ ತೀವ್ರ ವಿರೋಧ : ರಾಷ್ಟ್ರಪತಿಗೆ ದಯಾಮರ*ಣ ಕೋರಿ ಪತ್ರ

ಸರ್ಕಾರದ ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಅನ್ನದಾತರು ಮತ್ತೆ ಸಿಡಿದೆದ್ದಿದ್ದಾರೆ. ಯೋಜನೆ ಕೈ ಬಿಡುವವರೆಗೂ ರೈತರು ಉಪವಾಸ ಸತ್ಯಾಗ್ರಹ ಮಾಡ್ತಿದ್ದಾರೆ. ಇದರ ಮಧ್ಯೆ ದಯಾಮರಣ ನೀಡುವಂತೆ ರಾಷ್ಟ್ರಪತಿಗೆ ಪತ್ರ ಬರೆಯಲಾಗಿದ್ದು, ಪ್ರತಿಭಟನಾ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌. ಡಿ ಕುಮಾರಸ್ವಾಮಿ ಭೇಟಿ ಕೊಟ್ಟಿದ್ದರು. ಈ ಕುರಿತ ವರದಿ ಇಲ್ಲಿದೆ ನೋಡಿ...

Reported ByKrishna NKEdited ByKrishna NK
Published: Sep 26, 2026, 09:10 PM IST|Updated: Sep 26, 2026, 09:20 PM IST
joinshare
ಬಿಡದಿ ಟೌನ್‌ಶಿಪ್‌ಗೆ ರೈತರ ತೀವ್ರ ವಿರೋಧ : ರಾಷ್ಟ್ರಪತಿಗೆ ದಯಾಮರ*ಣ ಕೋರಿ ಪತ್ರ
Image Credit: Bidadi News

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ಬಿಡದಿ ಟೌನ್‌ಶಿಪ್‌.. ಇದು ಸರ್ಕಾರದ ಮಹತ್ವದ ಯೋಜನೆ.. ಆದ್ರೆ ಇದೇ ಯೋಜನೆ ರೈತರ ಕೆಂಗಣ್ಣಿಗೆ ಗುರಿಯಾಗಿದೆ.. ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ವಿರೋಧಿಸಿ ರೈತರು ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬೈರಮಂಗಲ, ಚನ್ನಪಟ್ಟಣದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ.. ಬೈರಮಂಗಲದಲ್ಲಿ ರೈತರು ಯೋಜನೆ ಕೈಬಿಡೋವರೆಗೂ ಉಪವಾಸ ಸತ್ಯಾಗ್ರಹದ ಪಟ್ಟು ಹಿಡಿದಿದ್ದಾರೆ.. ಹೀಗಾಗಿ 5-6 ಮಹಿಳೆಯರು ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ...

ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿರುವ ರೈತರು, ದಯಾಮರಣ ನೀಡುವಂತೆ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.. 'ಬಿಡದಿ ಟೌನ್ ಶಿಪ್ ಯೋಜನೆಗೆ ಫಲವತ್ತಾದ ಕೃಷಿ ಭೂಮಿಯನ್ನ ಸ್ವಾಧೀನಪಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ರದ್ದುಗೊಳಿಸಿಬೇಕು. ಇಲ್ಲವಾದಲ್ಲಿ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ಬೈರಮಂಗಲ, ಕಂಚುಗಾರನಹಳ್ಳಿ ಭಾಗದ ರೈತರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ..

ಇನ್ನು ಪ್ರತಿಭಟನಾ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಭೇಟಿ ನೀಡಿದ್ದರು.. ಚನ್ನಪಟ್ಟಣದ DAR ಮೈದಾನದಲ್ಲಿ ರೈತರು ಪ್ರತಿಭಟನೆ ಮಾಡಿದ್ರು. ನಿನ್ನೆ ಪೊಲೀಸರು ರಸ್ತೆ ತೆರವು ನೆಪದಲ್ಲಿ ರೈತ ಮಹಿಳೆಯರು ಮೇಲೆ ದೌರ್ಜನ್ಯ ಎಸಗಿದ್ರು.. ಪೊಲೀಸರ ಜೊತೆಗಿನ ತಳ್ಳಾಟದಲ್ಲಿ ಹಲವರು ಅಸ್ವಸ್ಥರಾಗಿದ್ರು.. ಯಾವುದೇ ಕಾರಣಕ್ಕೂ ಭೂಮಿ ಬಿಡಲ್ಲ ಅಂತ ರೈತರು ಪಟ್ಟು ಹಿಡಿದಿದ್ರು.. ಇತ್ತ ಪ್ರತಿಭಟನಾ ನಿರತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಭೇಟಿ ನೀಡಿದ್ದರು.. ಈ ವೇಳೆ ರೈತರು ಹಾಗೂ ರೈತ ಮಹಿಳೆಯರು ತಮ್ಮ ನೋವನ್ನ ಹೆಚ್‌ಡಿಕೆ ಮುಂದೆ ತೋಡಿಕೊಂಡರು.. ಪ್ರತಿಭಟನೆ ಮಾಡ್ತಿದ್ದ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಲಾಗಿದೆ. ಇದು ಅನಾಗರೀಕ ಸರ್ಕಾರ ಅಂತ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಒಟ್ಟಾರೆ, ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ರೈತರ ಆಕ್ರೋಶ ಮತ್ತೆ ಹೆಚ್ಚಾಗಿದೆ.. ಕಾವೇರಿ ನೀರಿನ ವಿಚಾರದಲ್ಲಿ ರೈತರ ಕೆಂಗಣ್ಣಿಗೆ ಗುರಿಯಾಗಿರುವ ಸರ್ಕಾರ, ಮತ್ತೆ ಟೌನ್‌ಶಿಪ್‌ ವಿಚಾರದಲ್ಲೂ ರೈತರನ್ನ ಎದುರು ಹಾಕಿಕೊಂಡಿದೆ... ಇದೆಲ್ಲಾ ಬೆಳವಣಿಗೆ ಯಾವ ಹಂತಕ್ಕೆ ಹೋಗಿ ತಲುಪುತ್ತೋ ಅನ್ನೋದನ್ನ ಕಾದು ನೋಡಬೇಕಿದೆ..

Add Zee News as a Preferred Source
TAGS:
Kannada News