• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ರೇಣುಕಾಸ್ವಾಮಿ ಪ್ರಕರಣದಲ್ಲಿ ಬಿಗ್‌ ಟ್ವಿಸ್ಟ್‌: ದರ್ಶನ್‌ ವಿರುದ್ಧದ ಮಾಫಿ ಸಾಕ್ಷಿ ಅರ್ಜಿ ವಾಪಸ್!!

ರೇಣುಕಾಸ್ವಾಮಿ ಪ್ರಕರಣದಲ್ಲಿ ಬಿಗ್‌ ಟ್ವಿಸ್ಟ್‌: ದರ್ಶನ್‌ ವಿರುದ್ಧದ ಮಾಫಿ ಸಾಕ್ಷಿ ಅರ್ಜಿ ವಾಪಸ್!!

ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಕಾನೂನು ಪ್ರಕ್ರಿಯೆ ಚುರುಕುಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಇತ್ತಿಚೆಗೆ ಅರ್ಜಿಯನ್ನು ಸಲ್ಲಿಸಿದ್ದರು.

Written ByChetana Devarmani
Published: Oct 14, 2026, 10:03 PM IST|Updated: Oct 14, 2026, 10:06 PM IST
joinshare
ರೇಣುಕಾಸ್ವಾಮಿ ಪ್ರಕರಣದಲ್ಲಿ ಬಿಗ್‌ ಟ್ವಿಸ್ಟ್‌: ದರ್ಶನ್‌ ವಿರುದ್ಧದ ಮಾಫಿ ಸಾಕ್ಷಿ ಅರ್ಜಿ ವಾಪಸ್!!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಅಭಿಷೇಕ್ ಶರ್ಮಾ ವಿಶ್ವ ದಾಖಲೆ! ಟಿ20 ಕ್ರಿಕೆಟ್ ನಲ್ಲಿ ಈ ಸಾಧನೆ ಗೈದ ಜಗತ್ತಿನ ಮೊದಲ ಕ್ರಿಕೆಟರ್

ಅಭಿಷೇಕ್ ಶರ್ಮಾ ವಿಶ್ವ ದಾಖಲೆ! ಟಿ20 ಕ್ರಿಕೆಟ್ ನಲ್ಲಿ ಈ ಸಾಧನೆ ಗೈದ ಜಗತ್ತಿನ ಮೊದಲ ಕ್ರಿಕೆಟರ್

2

ಧಾರವಾಡದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ತೆರವು; ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ವಾಹನ ಸಂಚಾರ ಪುನರಾರಂಭ

3

ತೆಂಗಿನಕಾಯಿಯನ್ನು ಹಸಿಯಾಗಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜನಗಳಿವೆಯೇ?

4

ಬೆಳಗ್ಗೆ ಎದ್ದ ತಕ್ಷಣ ಪಾದಗಳಲ್ಲಿ ಚುಚ್ಚಿದಂತೆ ನೋವಾಗುತ್ತಿದೆಯೇ? ನಿರ್ಲಕ್ಷ್ಯ ಬೇಡ, ಈ ಕಾಯಿಲೆಯ ಲಕ್ಷಣವಾಗಿರಬಹುದು!

5

ರೇಣುಕಾಸ್ವಾಮಿ ಪ್ರಕರಣದಲ್ಲಿ ಬಿಗ್‌ ಟ್ವಿಸ್ಟ್‌: ದರ್ಶನ್‌ ವಿರುದ್ಧದ ಮಾಫಿ ಸಾಕ್ಷಿ ಅರ್ಜಿ ವಾಪಸ್!!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ನಟ ದರ್ಶನ್‌ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ವರ್ಷಗಳೇ ಕಳೆದವು. ಈ ಪ್ರಕರಣ ದಿನದಿಂದ ದಿನಕ್ಕೆ ಹಲವು ತಿರುವುಗಳನ್ನು ಪಡೆಯುತ್ತಿದೆ. ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಕಾನೂನು ಪ್ರಕ್ರಿಯೆ ಚುರುಕುಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಇತ್ತಿಚೆಗೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಅಚ್ಚರಿಯ ವಿಚಾರ ಎಂದರೆ ಇದೀಗ ಈ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಪ್ರದೋಷ್ ಈಗಾಗಲೇ ಮಾಫಿ ಸಾಕ್ಷಿ ಹೇಳಿಕೆಯನ್ನು ಸಹ ದಾಖಲಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿದ್ದು, ಅವರ ಪರ ವಕೀಲರು ಈ ಕುರಿತು ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿದ್ದಾರೆ. ಇದನ್ನು ಪರಿಗಣಿಸಿದ 59ನೇ ಸಿಸಿಎಚ್ ನ್ಯಾಯಾಲಯವು ವಿನಯ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಇನ್ನೊಂದೆಡೆ, ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮಗೆ ಅಗತ್ಯ ಸೌಲಭ್ಯಗಳು ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೈಲಿನಲ್ಲಿನ ಪರಿಸ್ಥಿತಿ ಮತ್ತು ತಮ್ಮ ಅಹವಾಲುಗಳ ಕುರಿತು ನ್ಯಾಯಾಧೀಶರು ಖುದ್ದಾಗಿ ಪರಿಶೀಲನೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಆಲಿಸಿರುವ 59ನೇ ಸಿಸಿಎಚ್ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ.

ಇದೇ ಪ್ರಕರಣದಲ್ಲಿ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಅವರ ಜಾಮೀನು ಅರ್ಜಿಗಳ ವಿಚಾರಣೆಯೂ ಪೂರ್ಣಗೊಂಡಿದೆ. ಈ ಅರ್ಜಿಗಳ ಕುರಿತು ಅಕ್ಟೋಬರ್ 17ರಂದು ತೀರ್ಪು ಪ್ರಕಟಿಸಲು ನ್ಯಾಯಾಲಯ ನಿರ್ಧರಿಸಿದೆ. ಹೀಗಾಗಿ, ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ಫಲಿತಾಂಶದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಪ್ರಕರಣದ ವಿಚಾರಣೆಯನ್ನು ಮುಂದುವರಿಸಿರುವ ನ್ಯಾಯಾಲಯವು ಸಾಕ್ಷಿಗಳ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗುವಂತೆ ಪುನೀತ್ ಅವರಿಗೆ ಸೂಚಿಸಲಾಗಿದೆ. ಮತ್ತೊಬ್ಬ ಸಾಕ್ಷಿ ಕಿರಣ್ ಅವರು ಅಕ್ಟೋಬರ್ 28ರಂದು ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದು, ಸೆಕ್ಯುರಿಟಿ ಗಾರ್ಡ್ ನರೇಂದ್ರ ಸಿಂಗ್ ಅವರಿಗೆ ಅಕ್ಟೋಬರ್ 29ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿ ಅರ್ಜಿ, ಜೈಲಿನ ಸೌಲಭ್ಯಗಳ ಕುರಿತ ಮನವಿ ಹಾಗೂ ಜಾಮೀನು ಅರ್ಜಿಗಳ ವಿಚಾರಣೆ ಸೇರಿದಂತೆ ಹಲವು ಬೆಳವಣಿಗೆಗಳು ನ್ಯಾಯಾಲಯದಲ್ಲಿ ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ನ್ಯಾಯಾಲಯದ ಆದೇಶಗಳು ಮತ್ತು ಸಾಕ್ಷಿಗಳ ವಿಚಾರಣೆ ಪ್ರಕರಣದ ಮುಂದಿನ ಹಂತದ ಮೇಲೆ ಮಹತ್ವದ ಪರಿಣಾಮ ಬೀರಲಿವೆ.

ಏನಿದು ರೇಣುಕಾಸ್ವಾಮಿ ಕೊಲೆ ಪ್ರಕರಣ?

ಚಿತ್ರದುರ್ಗದ ನಿವಾಸಿಯಾಗಿದ್ದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣ 2024ರ ಜೂನ್‌ನಲ್ಲಿ ಬೆಳಕಿಗೆ ಬಂದಿತ್ತು. ನಟಿ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿದ್ದ ವಿಚಾರ ಈ ಪ್ರಕರಣದ ಹಿನ್ನೆಲೆಯಲ್ಲಿದೆ ಎಂದು ತನಿಖೆಯ ವೇಳೆ ಆರೋಪಿಸಲಾಗಿದೆ. ರೇಣುಕಾಸ್ವಾಮಿ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂಬುದು ಪ್ರಕರಣದ ಪ್ರಮುಖ ಆರೋಪವಾಗಿದೆ.

2024ರ ಜೂನ್‌ನಲ್ಲಿ ಬೆಂಗಳೂರಿನ ಸುಮ್ಮನಹಳ್ಳಿ ಸಮೀಪ ರೇಣುಕಾಸ್ವಾಮಿ ಅವರ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.

 

Add Zee News as a Preferred Source
TAGS:
Sandalwood