SOCIAL MEDIA

Newsletter

PARTNER SITES
Select Language Select State

ಒಂದು ಹೊತ್ತು ಊಟಕ್ಕೂ ಕಷ್ಟ: ‘ಮಾಡ್ರನ್ ಮಹಾಕವಿ’ ಮಂಜ ಮಾಡುತ್ತಿದ್ದ ಕೆಲಸವೇನು? ಎಂಥವರ ಕಣ್ಣಲ್ಲೂ ನೀರು ಬರುತ್ತೆ

ಮಂಜ ಅವರ ತಾಯಿ ಗುಣಮ್ಮ ಹಾಗೂ ಅಕ್ಕ ಮಾತನಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಂಜಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Written By Chetana Devarmani
Published: Sep 30, 2026, 11:03 PM IST | Updated: Sep 30, 2026, 11:04 PM IST
Join

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ‘ಮಾಡ್ರನ್ ಮಹಾಕವಿ’ ಎಂದೇ ಗುರುತಿಸಿಕೊಂಡಿರುವ ಮಂಜ ಸದ್ಯ ಭಾರೀ ಚರ್ಚೆಯಲ್ಲಿದ್ದಾರೆ. ಮನೆಯೊಳಗೆ ಹೆಚ್ಚು ಮಾತನಾಡುವುದು, ಆಗಾಗ್ಗೆ ಜಗಳಗಳಲ್ಲಿ ಕಾಣಿಸಿಕೊಳ್ಳುವುದು ಸೇರಿದಂತೆ ಹಲವು ಕಾರಣಗಳಿಂದ ಮಂಜ ಗಮನ ಸೆಳೆಯುತ್ತಿದ್ದಾರೆ. ಇದೇ ವೇಳೆ, ಮಂಜ ಅವರ ವೈಯಕ್ತಿಕ ಹಾಗೂ ಕುಟುಂಬದ ಹಿನ್ನೆಲೆಯ ಕುರಿತ ಮಾಹಿತಿಯೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಂಜ ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಕಷ್ಟದಲ್ಲಿದೆ ಎಂದು ಹೇಳಲಾಗುತ್ತಿದೆ. ಮಂಜ ಅವರ ತಾಯಿ ಗುಣಮ್ಮ ಹಾಗೂ ಅಕ್ಕ ಮಾತನಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಂಜಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮಂಜ ಅವರ ತಂದೆಯೂ ಕುಟುಂಬದ ಜೀವನ ನಿರ್ವಹಣೆಗೆ ದುಡಿಮೆ ಅನಿವಾರ್ಯವಾಗಿತ್ತು ಎಂದು ಹೇಳಿರುವ ವಿಡಿಯೋಗಳು ಹರಿದಾಡುತ್ತಿವೆ.

ಮಂಜ ‘ಅಗ್ನಿಪರೀಕ್ಷೆ’ ಕಾರ್ಯಕ್ರಮದಲ್ಲಿದ್ದಾಗ ಎದುರಿಸಿದ ಕಷ್ಟದ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಬೆಂಗಳೂರಿನ ನಾಗರಬಾವಿ ಸಮೀಪದ ಅಕ್ಷಯ ಸ್ಟುಡಿಯೋದಲ್ಲಿ ಕಾರ್ಯಕ್ರಮದ ಶೂಟಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ, ಜೆಪಿ ನಗರದಲ್ಲಿರುವ ಮನೆಯಿಂದ ಸ್ಟುಡಿಯೋವರೆಗೆ ಹಣದ ಕೊರತೆಯಿಂದಾಗಿ ಕೆಲವೊಮ್ಮೆ ಕಾಲ್ನಡಿಗೆಯಲ್ಲೇ ಬರುತ್ತಿದ್ದರು ಎಂದು ‘ಅಗ್ನಿಪರೀಕ್ಷೆ’ಯ ಸಹ ಸ್ಪರ್ಧಿಗಳು ಹೇಳಿರುವುದಾಗಿ ವರದಿಯಾಗಿದೆ.

ಮಂಜ ಅವರ ಕುಟುಂಬದ ಆರ್ಥಿಕ ಸ್ಥಿತಿ ಸರಳವಾಗಿದ್ದು, ಜೀವನ ಸಾಗಿಸಲು ಅವರು ಕೆಲಸ ಮಾಡುತ್ತಿದ್ದರೆಂದು ‘ಅಗ್ನಿಪರೀಕ್ಷೆ’ ಸ್ಪರ್ಧಿ ದೀಪಕ್ ರಾಜ್ ಹೇಳಿರುವುದಾಗಿ ವರದಿಯಾಗಿದೆ. ಮಂಜ ಡೆಂಟಲ್ ಕ್ಲಿನಿಕ್‌ವೊಂದರಲ್ಲಿ ರಿಸೆಪ್ಷನಿಸ್ಟ್ ಹಾಗೂ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಕುಟುಂಬದ ದಿನನಿತ್ಯದ ಖರ್ಚುಗಳನ್ನು ನಿರ್ವಹಿಸಲು ಅವರ ದುಡಿಮೆಯೂ ಮುಖ್ಯವಾಗಿತ್ತು ಎಂದು ಹೇಳಲಾಗುತ್ತಿದೆ. ಮಂಜ ತಮ್ಮನ್ನು ತಾವು ‘ಮಾಡ್ರನ್ ಮಹಾಕವಿ’ ಎಂದು ಕರೆದುಕೊಳ್ಳುತ್ತಾರೆ. ಕನ್ನಡ ಮತ್ತು ಇಂಗ್ಲಿಷ್ ಪದಗಳನ್ನು ಬೆರೆಸಿ, ರೈಮಿಂಗ್ ಪದಗಳೊಂದಿಗೆ ರ‍್ಯಾಪ್ ಶೈಲಿಯಲ್ಲಿ ಕವನ ಹೇಳುವುದು ಅವರ ವಿಶೇಷ ಪ್ರತಿಭೆ.

ಆದರೆ ಬಿಗ್ ಬಾಸ್ ಮನೆಯೊಳಗೆ ತಮ್ಮ ಈ ಪ್ರತಿಭೆಯನ್ನು ಸಂಪೂರ್ಣವಾಗಿ ಪ್ರದರ್ಶಿಸುವ ಅವಕಾಶವನ್ನು ಮಂಜ ಇನ್ನೂ ಬಳಸಿಕೊಂಡಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ಮಾತು, ವಾದ-ವಿವಾದ ಹಾಗೂ ಜಗಳಗಳಿಗಿಂತ ತಮ್ಮ ಕವನ ಮತ್ತು ಸೃಜನಶೀಲತೆಯ ಮೂಲಕ ಗಮನ ಸೆಳೆದರೆ ಮಂಜನ ಆಟಕ್ಕೆ ಮತ್ತೊಂದು ಆಯಾಮ ಸಿಗಬಹುದು. ಈ ನಡುವೆ, ಮಹಿಳಾ ಸ್ಪರ್ಧಿಗಳೊಂದಿಗೆ ಮಾತನಾಡುವಾಗ ಮಂಜ ಬಳಸಿದ ಕೆಲವು ಪದಗಳ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಇದರಿಂದ ಅವರ ಬಗ್ಗೆ ಪರ-ವಿರೋಧ ಚರ್ಚೆ ಮತ್ತಷ್ಟು ಹೆಚ್ಚಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಮಂಜ ಈ ವಾರದ ನಾಮಿನೇಷನ್ ಪಟ್ಟಿಯಲ್ಲಿದ್ದಾರೆ. ಇದೇ ವೇಳೆ ಟಾಸ್ಕ್‌ಗಳಿಂದ ಮಂಜ ಹಾಗೂ ಲಿಖಿತ್ ಅವರನ್ನು ಹೊರಗಿಡಲಾಗಿದೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಮಂಜ ತಮ್ಮ ಆಟದ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು, ತಮ್ಮ ಪ್ರತಿಭೆಯನ್ನು ಹೆಚ್ಚು ಪ್ರದರ್ಶಿಸುತ್ತಾರಾ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES