SOCIAL MEDIA

Newsletter

PARTNER SITES
Select Language Select State

ಬಿಗ್‌ ಬಾಸ್ ಕನ್ನಡ ಫಿನಾಲೆ ತಲುಪಬಹುದು ಎಂದು ಕೊಂಡಿದ್ದ ಈ ಸ್ಪರ್ಧಿಯೇ ಔಟ್...‌ ಕೊನೆ ಕ್ಷಣದಲ್ಲಿ ಎಲ್ಲವೂ ಬದಲಾಯ್ತೇ?

Bigg boss Kannada Season 13 Elimination:ಈ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಆಸಿಯಾ ಫಿರ್ದೋಸ್, ಘಾಟಿ ಗಾನವಿ, ಜಗದೀಶ್, ಕಿರಣ್ ಶಾಸ್ತ್ರಿ, ಪ್ರಶಾಂತ್ ಗೌಡ, ಸೋನಿಕಾ ಗೌಡ, ತಾಂಡವ್ ರಾಮ್ ಸೇರಿದಂತೆ ಹಲವು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ನಾಮಿನೇಷನ್ ಬಳಿಕ ಸ್ಪರ್ಧಿಗಳ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಉಳಿಸಿಕೊಳ್ಳಲು ಭರ್ಜರಿ ವೋಟಿಂಗ್‌ ಮಾಡಿದ್ದಾರೆ.

Written By Chetana Devarmani
Published: Nov 15, 2026, 07:48 IST | Updated: Nov 15, 2026, 07:50 IST
Join

Bigg boss Kannada Season 13 Elimination: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 13 ದಿನದಿಂದ ದಿನಕ್ಕೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮನೆಯೊಳಗಿನ ಜಗಳ, ವಾದ-ವಿವಾದ, ಟಾಸ್ಕ್‌ಗಳ ಪೈಪೋಟಿ ಹಾಗೂ ಸ್ಪರ್ಧಿಗಳ ನಡುವಿನ ಮನಸ್ತಾಪಗಳು ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿವೆ. ಇದರ ನಡುವೆ ಈ ವಾರದ ಎಲಿಮಿನೇಷನ್ ವಿಚಾರ ಈಗ ಎಲ್ಲರ ಗಮನ ಸೆಳೆದಿದೆ. ವಾರವಿಡೀ ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಬೆಂಬಲ ಸೂಚಿಸಿರುವ ಅಭಿಮಾನಿಗಳು, ಇಂದು ಯಾರು ಬಿಗ್‌ಬಾಸ್ ಮನೆಯಿಂದ ಹೊರಬರಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಈ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಆಸಿಯಾ ಫಿರ್ದೋಸ್, ಘಾಟಿ ಗಾನವಿ, ಜಗದೀಶ್, ಕಿರಣ್ ಶಾಸ್ತ್ರಿ, ಪ್ರಶಾಂತ್ ಗೌಡ, ಸೋನಿಕಾ ಗೌಡ, ತಾಂಡವ್ ರಾಮ್ ಸೇರಿದಂತೆ ಹಲವು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ನಾಮಿನೇಷನ್ ಬಳಿಕ ಸ್ಪರ್ಧಿಗಳ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಉಳಿಸಿಕೊಳ್ಳಲು ಭರ್ಜರಿ ವೋಟಿಂಗ್‌ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅನಧಿಕೃತ ವೋಟಿಂಗ್ ಸಮೀಕ್ಷೆಗಳ ಪ್ರಕಾರ, ಆಸಿಯಾ ಫಿರ್ದೋಸ್ ಉತ್ತಮ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ ಎನ್ನಲಾಗುತ್ತಿದೆ. ಘಾಟಿ ಗಾನವಿ ಮತ್ತು ತಾಂಡವ್ ರಾಮ್ ನಂತರದ ಸ್ಥಾನದಲ್ಲಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇನ್ನು ಕಿರಣ್ ಶಾಸ್ತ್ರಿ ಹಾಗೂ ಜಗದೀಶ್ ಮಧ್ಯಮ ಹಂತದಲ್ಲಿದ್ದಾರೆ ಎಂದು ಕೆಲವು ಆನ್‌ಲೈನ್ ಸಮೀಕ್ಷೆಗಳು ಸೂಚಿಸುತ್ತಿವೆ. ಆದರೆ ಮತ್ತೊಂದೆಡೆ ಇಬ್ಬರು ಸ್ಪರ್ಧಿಗಳಿಗೆ ಮತಗಳ ವಿಚಾರದಲ್ಲಿ ಹಿನ್ನಡೆಯಾಗಿದೆ ಎನ್ನಲಾಗುತ್ತಿದೆ. ಅದರಲ್ಲೂ ಒಬ್ಬ ಸ್ಪರ್ಧಿಯ ಮತಗಳ ಪ್ರಮಾಣ ತೀರಾ ಕಡಿಮೆ ಇರುವುದರಿಂದ ಎಲಿಮಿನೇಷನ್ ಭೀತಿ ಹೆಚ್ಚಾಗಿದೆ. ಈ ಬೆಳವಣಿಗೆ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಬಿಗ್‌ ಬಾಸ್‌ ನಲ್ಲಿ ಕೊನೆಯ ಕ್ಷಣದ ಮತದಾನ ಕೂಡ ಸಾಕಷ್ಟು ಮಹತ್ವ ಪಡೆದುಕೊಳ್ಳುತ್ತದೆ. ಆರಂಭದಲ್ಲಿ ಹಿನ್ನಡೆಯಲ್ಲಿದ್ದ ಸ್ಪರ್ಧಿಗಳು ಅಭಿಮಾನಿಗಳ ಬೆಂಬಲದಿಂದ ಸುರಕ್ಷಿತ ವಲಯಕ್ಕೆ ತಲುಪಿದ ಉದಾಹರಣೆಗಳಿವೆ. ಹೀಗಾಗಿ ಈಗ ಹರಿದಾಡುತ್ತಿರುವ ಆನ್‌ಲೈನ್ ಸಮೀಕ್ಷೆಗಳನ್ನೇ ಅಂತಿಮ ಫಲಿತಾಂಶ ಎಂದು ಪರಿಗಣಿಸಲು ಸಾಧ್ಯವಿಲ್ಲ.

ಈ ವಾರ ಮನೆಯೊಳಗೆ ನಡೆದ ಟಾಸ್ಕ್‌ಗಳು, ಸ್ಪರ್ಧಿಗಳ ನಡುವಿನ ವಾಗ್ವಾದಗಳು ಹಾಗೂ ನಾಯಕತ್ವದ ವಿಚಾರವಾಗಿ ನಡೆದ ಚರ್ಚೆಗಳು ಕೂಡ ಪ್ರೇಕ್ಷಕರ ಅಭಿಪ್ರಾಯದ ಮೇಲೆ ಪ್ರಭಾವ ಬೀರಿರುವ ಸಾಧ್ಯತೆಯಿದೆ. ವಿಶೇಷವಾಗಿ ಗಾನವಿ ಮತ್ತು ತಾಂಡವ್ ನಡುವಿನ ಮಾತಿನ ಚಕಮಕಿ ಸೇರಿದಂತೆ ಹಲವು ಬೆಳವಣಿಗೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿವೆ.

ವೋಟಿಂಗ್ ಟ್ರೆಂಡ್‌ಗಳನ್ನು ಗಮನಿಸಿದರೆ ಪ್ರಶಾಂತ್ ಗೌಡ ಮತ್ತು ಸೋನಿಕಾ ಗೌಡ ಇಬ್ಬರೂ ಅತಿ ಕಡಿಮೆ ಮತಗಳನ್ನು ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಪೈಕಿ ಒಬ್ಬರಿಗೆ ಅತ್ಯಂತ ಕಡಿಮೆ ಮತಗಳು ಲಭಿಸಿರುವುದು ಎಲಿಮಿನೇಷನ್ ಸಾಧ್ಯತೆಯನ್ನು ಹೆಚ್ಚಿಸಿದೆ. ಹೀಗಾಗಿ ಈ ವಾರದ ಎಲಿಮಿನೇಷನ್ ಸಾಕಷ್ಟು ಕುತೂಹಲ ಮೂಡಿಸಿದೆ.

ಸದ್ಯದ ವೋಟಿಂಗ್ ಟ್ರೆಂಡ್‌ಗಳನ್ನು ಗಮನಿಸಿದರೆ ಈ ವಾರದ ಎಲಿಮಿನೇಷನ್‌ನಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಕಡಿಮೆ ಮತಗಳನ್ನು ಪಡೆದಿರುವ ಸ್ಪರ್ಧಿಯೇ ಮನೆಯಿಂದ ಹೊರಬರುವ ಸಾಧ್ಯತೆ ಹೆಚ್ಚಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ಆ ಸ್ಪರ್ಧಿ ಬೇರಾರೂ ಅಲ್ಲ ಸೋನಿಕಾ ಗೌಡ. ವೈರಲ್‌ ಆದ ವೋಟಿಂಗ್ ಟ್ರ್ಯಾಕರ್‌ಗಳ ಪ್ರಕಾರ, ಸೋನಿಕಾ ಗೌಡ ಅತ್ಯಂತ ಕಡಿಮೆ ಮತಗಳನ್ನು ಪಡೆದಿದ್ದು ಇಂದು ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್‌ ಆಗಬಹುದು ಎನ್ನಲಾಗುತ್ತಿದೆ. ಆದರೆ ಬಿಗ್‌ ಬಾಸ್‌ನ ಅಧಿಕೃತ ಘೋಷಣೆಯೇ ಅಂತಿಮವಾಗಿದ್ದು, ಇಂದಿನ ಸಂಚಿಕೆಯಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES