SOCIAL MEDIA

Newsletter

PARTNER SITES
Select Language Select State

ಬಾತ್‌ರೂಮ್‌ನಲ್ಲಿ ಬಿದ್ದು ಬಾಲಿವುಡ್ ನಿರ್ದೇಶಕ ನಿಧನ

ನಿರ್ದೇಶಕ ಸಂಜಯ್ ಗುಪ್ತಾ ನಿಧನದ ಸುದ್ದಿ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ.

Written By Chetana Devarmani
Published: Nov 01, 2026, 11:19 AM IST | Updated: Nov 01, 2026, 11:21 AM IST
Join

Bollywood Director Sanjay Gupta Death: ಬಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಸಂಜಯ್ ಗುಪ್ತಾ (57) ಅವರು ಅಕ್ಟೋಬರ್ 30ರಂದು ನಿಧನರಾಗಿದ್ದಾರೆ. ತಮ್ಮ ನಿವಾಸದ ಬಾತ್‌ರೂಂನಲ್ಲಿ ಆಕಸ್ಮಿಕವಾಗಿ ಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರ ನಿಧನದ ಸುದ್ದಿ ಹಿಂದಿ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ.

ಕ್ರೈಂ ಥ್ರಿಲ್ಲರ್ ಮತ್ತು ಆಕ್ಷನ್ ಕಥಾಹಂದರದ ಸಿನಿಮಾಗಳ ಮೂಲಕ ಸಂಜಯ್ ಗುಪ್ತಾ ಅವರು ಚಿತ್ರರಂಗದಲ್ಲಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಂಡಿದ್ದರು. ವಿಶೇಷವಾಗಿ ನಟ ಸಂಜಯ್ ದತ್ ಅವರೊಂದಿಗೆ ಅವರು ಹಲವು ಯಶಸ್ವಿ ಚಿತ್ರಗಳಲ್ಲಿ ಕೆಲಸ ಮಾಡಿದ್ದರು. ಇವರಿಬ್ಬರ ಸಹಯೋಗದಲ್ಲಿ ಮೂಡಿಬಂದ ‘ಕಾಂಟೇ’, ‘ಮುಸಾಫಿರ್’ ಮತ್ತು ‘ಝಿಂದಾ’ ಸಿನಿಮಾಗಳು ಪ್ರೇಕ್ಷಕರ ಗಮನ ಸೆಳೆದಿದ್ದವು.

1991ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸಲಾದ ‘ಶೂಟೌಟ್ ಎಟ್ ಲೋಖಂಡ್ವಾಲಾ’ ಸಿನಿಮಾ ಅವರ ವೃತ್ತಿಜೀವನದ ಪ್ರಮುಖ ಚಿತ್ರಗಳಲ್ಲಿ ಒಂದಾಯಿತು. ಬಳಿಕ ಬಂದ ‘ಶೂಟೌಟ್ ಎಟ್ ವಡಾಲ’ ಕೂಡ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಕ್ರೈಂ ಚಿತ್ರಗಳ ಜೊತೆಗೆ ವಿಭಿನ್ನ ಕಥಾವಸ್ತುಗಳಿಗೂ ಅವರು ಆದ್ಯತೆ ನೀಡುತ್ತಿದ್ದರು. ಐಶ್ವರ್ಯಾ ರೈ ಅಭಿನಯದ ‘ಜಜ್ಬಾ’ ಹಾಗೂ ಹೃತಿಕ್ ರೋಷನ್ ನಟನೆಯ ‘ಕಾಬಿಲ್’ ಅವರ ನಿರ್ದೇಶನದ ಪ್ರಮುಖ ಸಿನಿಮಾಗಳಾಗಿವೆ.

ಇದಲ್ಲದೆ, ‘ದಸ್ ಕಹಾನಿಯಾ’ ಆಂಥಾಲಜಿ ಸಿನಿಮಾ ಮತ್ತು ಜಾನ್ ಅಬ್ರಹಾಂ ಅಭಿನಯದ ‘ಮುಂಬೈ ಸಾಗಾ’ ಮೂಲಕವೂ ಅವರು ಗಮನ ಸೆಳೆದಿದ್ದರು. ತಮ್ಮದೇ ಆದ ‘ವೈಟ್ ಫೆದರ್ ಫಿಲ್ಮ್ಸ್’ ನಿರ್ಮಾಣ ಸಂಸ್ಥೆಯ ಮೂಲಕ ಹಲವು ಸಿನಿಮಾಗಳನ್ನು ನಿರ್ಮಿಸಿದ್ದರು. 2024ರಲ್ಲಿ ಬಿಡುಗಡೆಯಾದ ‘ದಿ ಮಿರಾಂಡಾ ಬ್ರದರ್ಸ್’ ಅವರ ನಿರ್ದೇಶನದ ಕೊನೆಯ ಚಿತ್ರವಾಗಿತ್ತು. ತಮ್ಮ ವಿಶಿಷ್ಟ ಸಿನಿಮಾ ಶೈಲಿ ಮತ್ತು ವಿಭಿನ್ನ ಕಥೆಗಳ ಮೂಲಕ ಗುರುತಿಸಿಕೊಂಡಿದ್ದ ಸಂಜಯ್ ಗುಪ್ತಾ ಅವರ ನಿಧನಕ್ಕೆ ಚಿತ್ರರಂಗದ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES