• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಶಿವಣ್ಣ–ಗಣೇಶ್ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದ ‘ಬೃಂದಾವಿಹಾರಿ’ ಸಂಭ್ರಮ

ಶಿವಣ್ಣ–ಗಣೇಶ್ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದ ‘ಬೃಂದಾವಿಹಾರಿ’ ಸಂಭ್ರಮ

Brindavihari celebrations : ಶಾಸಕ ಹಾಗೂ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ಆಯೋಜನೆಯಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ಮತ್ತು ಕನ್ನಡ ರಾಜ್ಯೋತ್ಸವ ಸಂಭ್ರಮ – ನವೆಂಬರ್ 20ರಂದು ವಿಶ್ವದಾದ್ಯಂತ ‘ಬೃಂದಾವಿಹಾರಿ’ ಬಿಡುಗಡೆಯಾಗಿದೆ.

Written ByRamya. R. Gowda
Published: Nov 15, 2026, 17:02 IST|Updated: Nov 15, 2026, 17:09 IST
joinshare
ಶಿವಣ್ಣ–ಗಣೇಶ್ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದ ‘ಬೃಂದಾವಿಹಾರಿ’ ಸಂಭ್ರಮ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಶಾಸಕ ಹಾಗೂ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ಆಯೋಜನೆಯಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ಮತ್ತು ಕನ್ನಡ ರಾಜ್ಯೋತ್ಸವ ಸಂಭ್ರಮ – ನವೆಂಬರ್ 20ರಂದು ‘ಬೃಂದಾವಿಹಾರಿ’ ಬಿಡುಗಡೆಯಾಗಿದೆ.. 

ಮುಳಬಾಗಿಲಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದೊಂದಿಗೆ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಸ್ಥಳೀಯ ಶಾಸಕ ಹಾಗೂ ಚಿತ್ರದ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭಕ್ಕೆ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು. ಕನ್ನಡ ಚಿತ್ರರಂಗದ ಗಣ್ಯರು, ಕಲಾವಿದರು ಹಾಗೂ ಚಿತ್ರತಂಡದ ಸದಸ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶಿವರಾಜ್‌ಕುಮಾರ್, ಮುಳಬಾಗಿಲಿನೊಂದಿಗಿನ ತಮ್ಮ ಕುಟುಂಬದ ಆತ್ಮೀಯ ಒಡನಾಟವನ್ನು ಸ್ಮರಿಸಿದರು. ಮುಳಬಾಗಿಲಿನ ಆಂಜನೇಯ ಸ್ವಾಮಿ ದೇವಸ್ಥಾನ ತಮ್ಮ ತಂದೆ, ವರನಟ ಡಾ. ರಾಜ್‌ಕುಮಾರ್ ಅವರಿಗೆ ಅತ್ಯಂತ ಪ್ರಿಯವಾದ ಸ್ಥಳವಾಗಿತ್ತು ಎಂದು ನೆನಪಿಸಿಕೊಂಡರು. ಚೆನ್ನೈನಿಂದ ಬೆಂಗಳೂರಿಗೆ ಅಥವಾ ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುವ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ, ಮುಳಬಾಗಿಲಿನ ಪ್ರಸಿದ್ಧ ದೋಸೆಯನ್ನು ಸವಿಯುತ್ತಿದ್ದ ದಿನಗಳ ನೆನಪುಗಳನ್ನು ಹಂಚಿಕೊಂಡರು.

ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ತಮ್ಮ ಸಹೋದರನಿದ್ದಂತೆ. ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಕೂಡ ತಮಗೆ ಆತ್ಮೀಯರಾಗಿದ್ದು, ನಿರ್ದೇಶಕ ಶ್ರೀನಿವಾಸ ರಾಜು ಅವರ ಪರಿಚಯವೂ ಹಲವು ವರ್ಷಗಳದ್ದು. ಇಂತಹ ಆತ್ಮೀಯರ ಸಮಾಗಮದಲ್ಲಿ ಮೂಡಿಬಂದಿರುವ ‘ಬೃಂದಾವಿಹಾರಿ’ ಚಿತ್ರಕ್ಕೆ ಕನ್ನಡಿಗರು ಹಾಗೂ ಸಿನಿಪ್ರೇಮಿಗಳು ಪ್ರೀತಿ, ಪ್ರೋತ್ಸಾಹ ನೀಡಬೇಕೆಂದು ಮನವಿ ಮಾಡಿದರು.

ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಮಾತನಾಡಿ, ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಮುಳಬಾಗಿಲಿನಲ್ಲಿ ತಮ್ಮ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಸುಮಾರು ಹತ್ತು ದಿನಗಳ ಕಾಲ ಚಿತ್ರೀಕರಿಸಿರುವುದನ್ನು ಸಂತಸದಿಂದ ಸ್ಮರಿಸಿದರು. ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಅವರ ಅಪೇಕ್ಷೆಯ ಮೇರೆಗೆ ಮುಳಬಾಗಿಲಿನಲ್ಲಿಯೇ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಸಲಾಗಿದೆ ಎಂದು ತಿಳಿಸಿದರು.

ನಿರ್ದೇಶಕ ಶ್ರೀನಿವಾಸ ರಾಜು ಚಿತ್ರವನ್ನು ಅತ್ಯಂತ ಸುಂದರವಾಗಿ ಕಟ್ಟಿಕೊಟ್ಟಿದ್ದು, ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ಅವರ ಸಹಕಾರ ಹಾಗೂ ಪ್ರೋತ್ಸಾಹ ಚಿತ್ರ ನಿರ್ಮಾಣಕ್ಕೆ ಹೆಚ್ಚಿನ ಬಲ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಂಗಾಯಣ ರಘು, ಮಾಳವಿಕಾ ಶರ್ಮಾ, ದೇವಿಕಾ ಭಟ್ ಸೇರಿದಂತೆ ಅನೇಕ ಪ್ರತಿಭಾವಂತ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದು, ‘ಬೃಂದಾವಿಹಾರಿ’ ಉತ್ತಮ ಕೌಟುಂಬಿಕ ಮನರಂಜನಾ ಚಿತ್ರವಾಗಿ ಮೂಡಿಬಂದಿದೆ ಎಂದು ಹೇಳಿದರು.

ಇದೇ ನವೆಂಬರ್ 20ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದ್ದು, ಪ್ರೇಕ್ಷಕರು ಚಿತ್ರಮಂದಿರಗಳಿಗೆ ಆಗಮಿಸಿ ಸಿನಿಮಾ ವೀಕ್ಷಿಸುವ ಮೂಲಕ ಚಿತ್ರತಂಡವನ್ನು ಪ್ರೋತ್ಸಾಹಿಸಿ, ಹರಸಿ ಹಾರೈಸಬೇಕೆಂದು ಮನವಿ ಮಾಡಿದರು.

ನಿರ್ಮಾಪಕ ಹಾಗೂ ಶಾಸಕ ಸಮೃದ್ಧಿ ವಿ ಮಂಜುನಾಥ್ ಮಾತನಾಡಿ, ‘ಬೃಂದಾವಿಹಾರಿ’ ತಮ್ಮ ನಿರ್ಮಾಣದ ನಾಲ್ಕನೇ ಚಿತ್ರವಾಗಿದ್ದು, ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅವರ ಅಭಿನಯ ಹಾಗೂ ಇಡೀ ಚಿತ್ರತಂಡದ ಸಹಕಾರದೊಂದಿಗೆ ಚಿತ್ರವನ್ನು ನಿರ್ಮಿಸಿರುವುದಾಗಿ ತಿಳಿಸಿದರು. ನಿರ್ದೇಶಕ ಶ್ರೀನಿವಾಸ ರಾಜು ಅವರ ನಿರ್ದೇಶನದಲ್ಲಿ ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದ್ದು, ಪ್ರೇಕ್ಷಕರಿಗೆ ಇಷ್ಟವಾಗುವ ವಿಶ್ವಾಸವಿದೆ ಎಂದು ಹೇಳಿದರು.

ತಮ್ಮ ಸ್ವಕ್ಷೇತ್ರವಾದ ಮುಳಬಾಗಿಲಿನಲ್ಲಿಯೇ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದ ಜೊತೆಗೆ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವುದು ವಿಶೇಷ ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಹಾಗೂ ಕರ್ನಾಟಕದ ಜನತೆ ಚಿತ್ರಕ್ಕೆ ಬೆಂಬಲ ನೀಡಬೇಕೆಂದು ಕೋರಿದರು.ನವೆಂಬರ್ 20ರಂದು ‘ಬೃಂದಾವಿಹಾರಿ’ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದ್ದು, ಕನ್ನಡಿಗರ ಪ್ರೀತಿ, ವಿಶ್ವಾಸ ಹಾಗೂ ಪ್ರೋತ್ಸಾಹವೇ ನಮ್ಮ ಚಿತ್ರತಂಡಕ್ಕೆ ದೊಡ್ಡ ಶಕ್ತಿ. ಪ್ರತಿಯೊಬ್ಬರೂ ಚಿತ್ರಮಂದಿರಗಳಿಗೆ ಬಂದು ಸಿನಿಮಾ ವೀಕ್ಷಿಸಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ನಿರ್ದೇಶಕ ಶ್ರೀನಿವಾಸ ರಾಜು ಮಾತನಾಡಿ, ‘ಬೃಂದಾವಿಹಾರಿ’ ಚಿತ್ರ ನವೆಂಬರ್ 20ರಂದು ವಿಶ್ವದಾದ್ಯಂತ ತೆರೆಕಾಣಲಿದ್ದು, ಪ್ರೇಕ್ಷಕರು ಚಿತ್ರವನ್ನು ವೀಕ್ಷಿಸಿ ಚಿತ್ರತಂಡಕ್ಕೆ ತಮ್ಮ ಪ್ರೀತಿ ಮತ್ತು ಬೆಂಬಲ ನೀಡಬೇಕೆಂದು ಕೋರಿದರು. ಚಿತ್ರದ ನಾಯಕಿಯರಾದ ಮಾಳವಿಕಾ ಶರ್ಮಾ ಹಾಗೂ ದೇವಿಕಾ ಭಟ್, ಹಿರಿಯ ನಟ ರಂಗಾಯಣ ರಘು, ಕುರಿ ಪ್ರತಾಪ್, ಪಾವಗಡ ಮಂಜು, ಜಗ್ಗಪ್ಪ ಸೇರಿದಂತೆ ಹಲವು ಕಲಾವಿದರು ಸಮಾರಂಭದಲ್ಲಿ ಭಾಗವಹಿಸಿ ಚಿತ್ರದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು. ಚಿತ್ರದ ಗೀತೆಗಳಿಗೆ ಸಾಹಿತ್ಯ ಬರೆದಿರುವ ಡಾ. ವಿ. ನಾಗೇಂದ್ರ ಪ್ರಸಾದ್ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಗಿಲ್ಲಿ ನಟ, ಕಾವ್ಯ ಶೈವ ಸೇರಿದಂತೆ ಹಲವು ಕಲಾವಿದರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ‘ಪ್ರೇಮದ ಊರಲಿ’ ಚಿತ್ರದ ಚಿತ್ರತಂಡದ ಸದಸ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿರುವುದು ಮತ್ತೊಂದು ವಿಶೇಷವಾಗಿತ್ತು.

ಒಟ್ಟಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ, ಚಿತ್ರರಂಗದ ಗಣ್ಯರ ಸಮಾಗಮ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ‘ಬೃಂದಾವಿಹಾರಿ’ ಚಿತ್ರದ ಪ್ರೀ-ರಿಲೀಸ್ ಸಮಾರಂಭ ಮುಳಬಾಗಿಲಿನಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು.

 

Add Zee News as a Preferred Source
TAGS:
Sandalwood