ಸಿಂಗರ್ ಚಂದನ್ ಶೆಟ್ಟಿ ಅವರ ಇತ್ತೀಚಿನ MAIMATA ಹಾಡು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಲ್ಲಿದೆ. ಈ ಹಾಡನ್ನು ಚಂದನ್ ಶೆಟ್ಟಿ ಅವರ ವೈಯಕ್ತಿಕ ಜೀವನಕ್ಕೆ ಹೋಲಿಸಿ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ಚಂದನ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಹಾಡಿಗೂ ತಮ್ಮ ವೈಯಕ್ತಿಕ ಜೀವನಕ್ಕೂ ಸಂಬಂಧ ಕಲ್ಪಿಸಬೇಡಿ ಎಂದು ಮನವಿ ಮಾಡಿದ್ದಾರೆ. ಅಷ್ಟಕ್ಕೂ ಚಂದನ್ ಶೆಟ್ಟಿ ಹೇಳಿದ್ದೇನು ಅಂತಾ ತಿಳಿಯಲು ಈ ಸ್ಟೋರಿ ಓದಿ
ಚಂದನ್ ಶೆಟ್ಟಿ ಅವರ ಇತ್ತೀಚಿನ ಹಾಡು ಇದೀಗ ಸುದ್ದಿಯಲ್ಲಿದೆ. ಹಾಡಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಚರ್ಚೆಗಳು ನಡೆಯುತ್ತಿದ್ದು, ಕೆಲವರು ಇದನ್ನು ಅವರ ವೈಯಕ್ತಿಕ ಜೀವನದ ಘಟನೆಗಳಿಗೆ ಹೋಲಿಸುತ್ತಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಚಂದನ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
MAIMATA ಹಾಡನ್ನು ಕೇವಲ ಮನರಂಜನೆಗಾಗಿ ರಚಿಸಲಾಗಿದೆ. ಯಾರನ್ನೂ ನೋಯಿಸುವ ಅಥವಾ ಯಾರನ್ನಾದರೂ ಗುರಿಯಾಗಿಸುವ ಉದ್ದೇಶ ನನಗಿಲ್ಲ ಎಂದು ಚಂದನ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲ, ತಮ್ಮ ವೈಯಕ್ತಿಕ ಜೀವನದಲ್ಲಿ ಕೆಲವು ಘಟನೆಗಳು ನಡೆಯುವುದಕ್ಕೂ ಮೊದಲೇ ಈ ಹಾಡನ್ನು ಸಿದ್ಧಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.ಹೊಸ ಸಂಗೀತ ಶೈಲಿಯಲ್ಲಿ ಪ್ರಯೋಗ ಮಾಡಬೇಕೆಂಬ ಆಸೆ ಬಹಳ ಹಿಂದಿನಿಂದಲೂ ಇತ್ತು. ಅದರ ಭಾಗವಾಗಿಯೇ ಈ ಹಾಡನ್ನು ರೂಪಿಸಲಾಗಿದೆ. ಆದರೆ ಕೆಲವು ಸುದ್ದಿ ಮಾಧ್ಯಮಗಳು, ಯೂಟ್ಯೂಬ್ ಚಾನೆಲ್‌ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಾಡನ್ನು ವೈಯಕ್ತಿಕ ಜೀವನದೊಂದಿಗೆ ಹೋಲಿಸಲಾಗುತ್ತಿದೆ. ಇದರಿಂದ ಅನಗತ್ಯ ಪ್ರಶ್ನೆಗಳು ಮತ್ತು ಊಹಾಪೋಹಗಳು ಸೃಷ್ಟಿಯಾಗುತ್ತಿವೆ ಎಂದು ಚಂದನ್ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಂದು ಹಾಡೂ ಕಲಾವಿದನ ವೈಯಕ್ತಿಕ ಜೀವನದ ಕಥೆಯಾಗಿರಬೇಕೆಂದಿಲ್ಲ. ಹೀಗಾಗಿ ತಮ್ಮ ಹಾಡನ್ನು ವೈಯಕ್ತಿಕ ವಿಚಾರಗಳಿಗೆ ತಳುಕು ಹಾಕಿ ನಕಾರಾತ್ಮಕತೆ ಹರಡಬೇಡಿ ಎಂದು ಚಂದನ್ ಶೆಟ್ಟಿ ಮನವಿ ಮಾಡಿದ್ದಾರೆ. ಇದೇ ವೇಳೆ, ಹಾಡಿಗೆ ಅಪಾರ ಪ್ರೀತಿ, ಪ್ರೋತ್ಸಾಹ ಮತ್ತು ಬೆಂಬಲ ನೀಡುತ್ತಿರುವ ಅಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.ಒಟ್ಟಿನಲ್ಲಿ, MAIMATA ಹಾಡಿನ ಬಗ್ಗೆ ನಡೆಯುತ್ತಿರುವ ಚರ್ಚೆಗಳಿಗೆ ತೆರೆ ಎಳೆಯಲು ಚಂದನ್ ಶೆಟ್ಟಿ ಮುಂದಾಗಿದ್ದಾರೆ. ತಮ್ಮ ಸಂಗೀತ ಪ್ರಯೋಗವನ್ನು ಸಂಗೀತದ ದೃಷ್ಟಿಯಿಂದಲೇ ನೋಡಿ, ವೈಯಕ್ತಿಕ ಜೀವನದೊಂದಿಗೆ ಹೋಲಿಕೆ ಮಾಡಬೇಡಿ ಎಂಬುದು ಅವರ ಮನವಿಯಾಗಿದೆ. ಅಭಿಮಾನಿಗಳ ಪ್ರೀತಿಯೇ ಇನ್ನಷ್ಟು ಹೊಸ ಪ್ರಯೋಗಗಳನ್ನು ಮಾಡಲು ಸ್ಫೂರ್ತಿ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.
ಅಷ್ಟಕ್ಕೂ ಚಂದನ್ ಶೆಟ್ಟಿ ಹೇಳಿದ್ದೇನು?
ಎಲ್ಲರಿಗೂ ಒಂದು ಸಣ್ಣ ಸ್ಪಷ್ಟನೆ
ನನ್ನ ಇತ್ತೀಚಿನ MAIMATA ಹಾಡಿನ ಆರಂಭದಲ್ಲೇ ತಿಳಿಸಿರುವಂತೆ, ಈ ಹಾಡನ್ನು ಕೇವಲ ಮನರಂಜನೆಗಾಗಿ ರಚಿಸಲಾಗಿದ್ದು, ಯಾರನ್ನೂ ನೋಯಿಸುವ ಅಥವಾ ಗುರಿಯಾಗಿಸುವ ಉದ್ದೇಶ ಹೊಂದಿಲ್ಲ.
ಈ ರೀತಿಯ ಹೊಸ ಸಂಗೀತ ಶೈಲಿಯನ್ನು ಪ್ರಯತ್ನಿಸಬೇಕೆಂಬ ಆಸೆ ನನಗೆ ಬಹಳ ಹಿಂದಿನಿಂದಲೂ ಇತ್ತು. ನನ್ನ ವೈಯಕ್ತಿಕ ಜೀವನದಲ್ಲಿ ನಡೆದ ಕೆಲವು ಘಟನೆಗಳಿಗೂ ಮೊದಲೇ ಈ ಹಾಡನ್ನು ಸಿದ್ಧಪಡಿಸಲಾಗಿತ್ತು.
ಆದರೆ ಇತ್ತೀಚೆಗೆ ಕೆಲವು ಸುದ್ದಿ ಮಾಧ್ಯಮಗಳಲ್ಲಿ, ಯೂಟ್ಯೂಬ್ ಚಾನೆಲ್‌ಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡನ್ನು ನನ್ನ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಬಿಂಬಿಸಲಾಗುತ್ತಿದೆ. ಈ ಬಗ್ಗೆ ಅನೇಕ ಪ್ರಶ್ನೆಗಳು ಹಾಗೂ ಊಹಾಪೋಹಗಳು ಕೇಳಿಬರುತ್ತಿರುವುದರಿಂದ ಈ ಸ್ಪಷ್ಟನೆ ನೀಡುತ್ತಿದ್ದೇನೆ.ದಯವಿಟ್ಟು ಈ ಹಾಡನ್ನು ನನ್ನ ವೈಯಕ್ತಿಕ ಜೀವನದೊಂದಿಗೆ ಹೋಲಿಸಿ ಅನಗತ್ಯ ಊಹಾಪೋಹಗಳು ಹಾಗೂ ನಕಾರಾತ್ಮಕತೆಯನ್ನು ಹರಡಬೇಡಿ ಎಂದು ಎಲ್ಲರಲ್ಲೂ ವಿನಂತಿಸಿಕೊಳ್ಳುತ್ತೇನೆ.ಸಂಗೀತ ಎನ್ನುವುದು ಸೃಜನಶೀಲತೆಯ ಅಭಿವ್ಯಕ್ತಿ ಪ್ರತಿಯೊಂದು ಹಾಡೂ ಕಲಾವಿದನ ವೈಯಕ್ತಿಕ ಜೀವನದ ಕಥೆಯಾಗಿರಬೇಕೆಂದಿಲ್ಲ.
ಈ ಹಾಡಿಗೆ ನೀವು ತೋರಿಸುತ್ತಿರುವ ಅಪಾರ ಪ್ರೀತಿ, ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಯೇ ನನಗೆ ಇನ್ನಷ್ಟು ಹೊಸ ಪ್ರಯೋಗಗಳನ್ನು ಮಾಡಲು ಸ್ಫೂರ್ತಿ.
ಎಲ್ಲರಿಗೂ ಪ್ರೀತಿ ಮತ್ತು ಗೌರವ.
ನಿಮ್ಮ ಚಂದನ್ ಶೆಟ್ಟಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ..