• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಕಿರುಚಿತ್ರಗಳ ಸಂಭ್ರಮಕ್ಕೆ ಸಾಕ್ಷಿಯಾದ ‘ಸಿನಿಮಿನಿ’ ಎರಡನೇ ಆವೃತ್ತಿಯ ಕಿರುಚಿತ್ರೋತ್ಸವ

ಕಿರುಚಿತ್ರಗಳ ಸಂಭ್ರಮಕ್ಕೆ ಸಾಕ್ಷಿಯಾದ ‘ಸಿನಿಮಿನಿ’ ಎರಡನೇ ಆವೃತ್ತಿಯ ಕಿರುಚಿತ್ರೋತ್ಸವ

ಖ್ಯಾತ ಛಾಯಾಗ್ರಾಹಕ ಸತ್ಯ ಹೆಗಡೆ ಅವರ ಪರಿಕಲ್ಪನೆಯ ಸಿನಿಮಿನಿ, ಹೊಸ ಪ್ರತಿಭೆಗಳನ್ನು ಗುರುತಿಸುವುದು, ಸ್ವತಂತ್ರ ಚಿತ್ರನಿರ್ಮಾಣಕ್ಕೆ ಪ್ರೋತ್ಸಾಹ ನೀಡುವುದು ಹಾಗೂ ಉದಯೋನ್ಮುಖ ಚಿತ್ರನಿರ್ಮಾಪಕರಿಗೆ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಆರಂಭವಾದ ಕಿರುಚಿತ್ರೋತ್ಸವವಾಗಿದೆ.

Written ByChetana Devarmani
Published: Nov 24, 2026, 16:08 IST|Updated: Nov 24, 2026, 16:09 IST
joinshare
ಕಿರುಚಿತ್ರಗಳ ಸಂಭ್ರಮಕ್ಕೆ ಸಾಕ್ಷಿಯಾದ ‘ಸಿನಿಮಿನಿ’ ಎರಡನೇ ಆವೃತ್ತಿಯ ಕಿರುಚಿತ್ರೋತ್ಸವ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
₹20 ಕೋಟಿ ಬೆಂಗಳೂರು ಹಬ್ಬಕ್ಕೆ ಇದೆ ಹಣ.. ಆಶಾ ಕಾರ್ಯಕರ್ತೆಯರ ಕಣ್ಣೀರಿಗೆ ಬೆಲೆಯಿಲ್ಲವೇ? ಡಿಕೆಶಿಗೆ ಡಾ. ಮುಖ್ಯಮಂತ್ರಿ ಚಂದ್ರು ತರಾಟೆ!

₹20 ಕೋಟಿ ಬೆಂಗಳೂರು ಹಬ್ಬಕ್ಕೆ ಇದೆ ಹಣ.. ಆಶಾ ಕಾರ್ಯಕರ್ತೆಯರ ಕಣ್ಣೀರಿಗೆ ಬೆಲೆಯಿಲ್ಲವೇ? ಡಿಕೆಶಿಗೆ ಡಾ. ಮುಖ್ಯಮಂತ್ರಿ ಚಂದ್ರು ತರಾಟೆ!

2

ಕಿರುಚಿತ್ರಗಳ ಸಂಭ್ರಮಕ್ಕೆ ಸಾಕ್ಷಿಯಾದ ‘ಸಿನಿಮಿನಿ’ ಎರಡನೇ ಆವೃತ್ತಿಯ ಕಿರುಚಿತ್ರೋತ್ಸವ

3

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ರಾಕೇಶ್ ಶೆಟ್ಟಿ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

4

ಒಂದೇ ಒಂದು ತಪ್ಪಿನಿಂದ ₹1800 ಕೋಟಿ ಮೌಲ್ಯದ ಆಸ್ತಿ ಕಳೆದು ಕೊಂಡ ಖ್ಯಾತ ನಟ!

5

ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಚಿನ್ನದ ಸಾಲ ಪಡೆದವರಿಗೆ ಬ್ಯಾಂಕ್‌ ನೋಟಿಸ್!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಟೆಂಟ್ ಸಿನಿಮಾ ಮತ್ತು ಸತ್ಯ ಹೆಗಡೆ ಸ್ಟುಡಿಯೋಸ್ ಆಯೋಜನೆಯಲ್ಲಿ, ಡಾ. ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ನಡೆದ ‘ಸಿನಿಮಿನಿ’ ಕಿರುಚಿತ್ರೋತ್ಸವದ ಎರಡನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭವು ಇತ್ತೀಚೆಗೆ ಬೆಂಗಳೂರಿನ ಜಯನಗರದ ಎಎನ್‌ಕೆ ಕನ್ವೆನ್ಷನ್ ಸೆಂಟರ್‌ನ ಡಾ. ಪುನೀತ್ ರಾಜ್‌ಕುಮಾರ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.

ಖ್ಯಾತ ಛಾಯಾಗ್ರಾಹಕ ಸತ್ಯ ಹೆಗಡೆ ಅವರ ಪರಿಕಲ್ಪನೆಯ ಸಿನಿಮಿನಿ, ಹೊಸ ಪ್ರತಿಭೆಗಳನ್ನು ಗುರುತಿಸುವುದು, ಸ್ವತಂತ್ರ ಚಿತ್ರನಿರ್ಮಾಣಕ್ಕೆ ಪ್ರೋತ್ಸಾಹ ನೀಡುವುದು ಹಾಗೂ ಉದಯೋನ್ಮುಖ ಚಿತ್ರನಿರ್ಮಾಪಕರಿಗೆ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಆರಂಭವಾದ ಕಿರುಚಿತ್ರೋತ್ಸವವಾಗಿದೆ.

ಈ ಬಾರಿ ಸಿನಿಮಿನಿಗೆ ಒಟ್ಟು 280 ಚಿತ್ರಗಳ ಪ್ರವೇಶಗಳು ಬಂದಿದ್ದು, ಅವುಗಳಲ್ಲಿ 241 ಕಿರುಚಿತ್ರಗಳು, 26 ಎಐ ಚಿತ್ರಗಳು, 11 ವರ್ಟಿಕಲ್ ಚಿತ್ರಗಳು ಹಾಗೂ 2 ಮಿನಿ ಸರಣಿಗಳು ಸೇರಿದ್ದವು. ಆಯ್ಕೆಯಾದ 35 ಕಿರುಚಿತ್ರಗಳು ಹಾಗೂ ವರ್ಟಿಕಲ್ ಮತ್ತು ಎಐ ವಿಭಾಗಗಳಿಂದ ಕಿರುಪಟ್ಟಿಗೆ ಆಯ್ಕೆಯಾದ 4 ಚಿತ್ರಗಳನ್ನು ಪ್ರದರ್ಶಿಸಲಾಯಿತು. ವಿಭಿನ್ನ ಕಥಾವಸ್ತುಗಳು, ಹೊಸತನದ ನಿರೂಪಣೆ ಮತ್ತು ತಾಂತ್ರಿಕ ಸೃಜನಶೀಲತೆಯಿಂದ ಕೂಡಿದ ಚಿತ್ರಗಳು ಪ್ರೇಕ್ಷಕರ ಗಮನ ಸೆಳೆದವು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡದ ಜನಪ್ರಿಯ ನಟ ಧ್ರುವ ಸರ್ಜಾ, ನಿರ್ದೇಶಕ ತರುಣ್ ಸುಧೀರ್, ‘ಪ್ರೇಮದ ಊರಲಿ’ ಚಿತ್ರದ ನಿರ್ದೇಶಕ ಮನೋಜ್ ಕುಮಾರ್ ಹಾಗೂ ನಟ ಮಂಡ್ಯ ರಮೇಶ್ ಭಾಗವಹಿಸಿ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಖ್ಯಾತ ನಿರ್ದೇಶಕ ಮನ್ಸೋರೆ, ಅನಿರುದ್ಧ್ ಮಹೇಶ್, ರಂಜನಿ ರಾಘವನ್, ಶ್ರೀನಿಧಿ ಬೆಂಗಳೂರು, ಆದರ್ಶ ಈಶ್ವರಪ್ಪ, ಅದ್ವೈತ ಗುರುಮೂರ್ತಿ, ಸುನಯನಾ ಸುರೇಶ್, ಶ್ರೀ ಕ್ರೇಜಿ ಮೈಂಡ್ಸ್ ಹಾಗೂ ನಿಂಗರಾಜ್ ಸಿಂಗಾಡಿ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ಕಿರುಚಿತ್ರೋತ್ಸವದಲ್ಲಿ ಅತ್ಯುತ್ತಮ ಕಿರುಚಿತ್ರಕ್ಕೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಪ್ರಶಸ್ತಿಗಳೊಂದಿಗೆ ಅತ್ಯುತ್ತಮ ಕಥೆ, ನಿರ್ದೇಶನ, ಛಾಯಾಗ್ರಹಣ, ಸಂಕಲನ, ಸಂಗೀತ ನಿರ್ದೇಶನ, ನಟ, ನಟಿ ಹಾಗೂ ಬಾಲನಟ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು. ಮಹಿಳಾ ಚಿತ್ರನಿರ್ದೇಶಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅತ್ಯುತ್ತಮ ಮಹಿಳಾ ನಿರ್ದೇಶಕಿ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಯಿತು.

ಇದರ ಜೊತೆಗೆ 10 ವಿಶೇಷ ತೀರ್ಪುಗಾರರ ಪ್ರಶಸ್ತಿಗಳು ಮತ್ತು 14 ವಿಶೇಷ ಮೆಚ್ಚುಗೆ ಪ್ರಶಸ್ತಿಗಳನ್ನು ನೀಡಿ ಪ್ರತಿಭಾವಂತ ಚಿತ್ರನಿರ್ಮಾಪಕರು ಹಾಗೂ ಕಲಾವಿದರನ್ನು ಗೌರವಿಸಲಾಯಿತು.

ಸಿನಿಮಿನಿಯ ಎರಡನೇ ಆವೃತ್ತಿಯು ಸ್ವತಂತ್ರ ಚಿತ್ರನಿರ್ಮಾಣಕ್ಕೆ ಉತ್ತೇಜನ ನೀಡುವ, ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಹಾಗೂ ವಿಭಿನ್ನ ಕಥೆಗಳನ್ನು ಪ್ರೇಕ್ಷಕರ ಮುಂದೆ ತರುವ ತನ್ನ ಆಶಯವನ್ನು ಮತ್ತೊಮ್ಮೆ ಯಶಸ್ವಿಯಾಗಿ ಮುಂದುವರಿಸಿದೆ. ಹಿರಿಯರು, ಯುವ ನಿರ್ದೇಶಕರು, ಕಲಾವಿದರು ಮತ್ತು ತಂತ್ರಜ್ಞರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಈ ಕಾರ್ಯಕ್ರಮವು ಸಿನಿಮಾ ಮೇಲಿನ ಪ್ರೀತಿ, ಸೃಜನಶೀಲತೆ ಮತ್ತು ಪ್ರತಿಭೆಯ ಸಂಭ್ರಮವಾಗಿ ಮೂಡಿಬಂದಿತು.

ಟೆಂಟ್ ಸಿನಿಮಾ ಮತ್ತು ಸತ್ಯ ಹೆಗಡೆ ಸ್ಟುಡಿಯೋಸ್ ಅರ್ಪಿಸುವ ಸಿನಿಮಿನಿ ಕಿರುಚಿತ್ರೋತ್ಸವವು ಉದಯೋನ್ಮುಖ ಚಿತ್ರನಿರ್ಮಾಪಕರಿಗೆ ವೇದಿಕೆ ಕಲ್ಪಿಸುವ, ಹೊಸ ಕಥೆಗಾರರನ್ನು ಪ್ರೋತ್ಸಾಹಿಸುವ ಹಾಗೂ ಸ್ವತಂತ್ರ ಚಲನಚಿತ್ರ ನಿರ್ಮಾಣಕ್ಕೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ವಿವಿಧ ವಿಭಾಗಗಳ ಸ್ಪರ್ಧೆ, ಚಿತ್ರ ಪ್ರದರ್ಶನ ಮತ್ತು ಪ್ರಶಸ್ತಿಗಳ ಮೂಲಕ ಹೊಸ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ಸಿನಿಮಿನಿಯ ಆಶಯವಾಗಿದೆ.
 

Add Zee News as a Preferred Source
TAGS:
Sandalwood