• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ದರ್ಶನ್‌ಗೆ ಮತ್ತೆ ಕಾಡ್ತಿದ್ಯಾ ಆ ಒಂದು ಆರೋಗ್ಯ ಸಮಸ್ಯೆ!.. ಜೈಲಿನಲ್ಲಿ ಆರೋಗ್ಯ ತಪಾಸಣೆಗೆ ಮನವಿ

ದರ್ಶನ್‌ಗೆ ಮತ್ತೆ ಕಾಡ್ತಿದ್ಯಾ ಆ ಒಂದು ಆರೋಗ್ಯ ಸಮಸ್ಯೆ!.. ಜೈಲಿನಲ್ಲಿ ಆರೋಗ್ಯ ತಪಾಸಣೆಗೆ ಮನವಿ

Darshan health problem: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವಿನ ಸಮಸ್ಯೆ ಶುರುವಾಗಿದೆ. ಈ ಹಿಂದೆ ಬಳ್ಳಾರಿ ಜೈಲಿನಲ್ಲಿದ್ದಾಗಲೂ ಬೆನ್ನುನೋವಿನಿಂದ ಬಳಲಿದ್ದ ದರ್ಶನ್, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಮತ್ತೆ ಫಿಸಿಯೋಥೆರಪಿ ಚಿಕಿತ್ಸೆಗೆ ಮನವಿ ಮಾಡಿದ್ದಾರೆ. ಹಾಗಾದ್ರೆ, ದರ್ಶನ್‌ಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಏನು? ಕೋರ್ಟ್ ಹೇಳಿದ್ದೇನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

Written ByRamya. R. Gowda
Published: Oct 28, 2026, 05:23 PM IST|Updated: Oct 28, 2026, 05:33 PM IST
joinshare
ದರ್ಶನ್‌ಗೆ ಮತ್ತೆ ಕಾಡ್ತಿದ್ಯಾ ಆ ಒಂದು ಆರೋಗ್ಯ ಸಮಸ್ಯೆ!.. ಜೈಲಿನಲ್ಲಿ ಆರೋಗ್ಯ ತಪಾಸಣೆಗೆ ಮನವಿ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
ಸ್ಪೇನ್‌ನಲ್ಲಿ ಭೀಕರ ರೈಲು ಅಪಘಾತ.. ಮತ್ತೊಂದು ರೈಲಿನ ಹಿಂಭಾಗಕ್ಕೆ ಡಿಕ್ಕಿ, 40ಕ್ಕೂ ಹೆಚ್ಚು ಮಂದಿ ಸಾವು! ಅಪಘಾತಕ್ಕೆ ಬೆಚ್ಚಿಬಿದ್ದ Spain

ಸ್ಪೇನ್‌ನಲ್ಲಿ ಭೀಕರ ರೈಲು ಅಪಘಾತ.. ಮತ್ತೊಂದು ರೈಲಿನ ಹಿಂಭಾಗಕ್ಕೆ ಡಿಕ್ಕಿ, 40ಕ್ಕೂ ಹೆಚ್ಚು ಮಂದಿ ಸಾವು! ಅಪಘಾತಕ್ಕೆ ಬೆಚ್ಚಿಬಿದ್ದ Spain

2

ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ.. ಭಕ್ತರಿಗಾಗಿ ಭರ್ಜರಿ ಸಿದ್ಧತೆ!

3

ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಸಿಂಹಗರ್ಜನೆ

4

ದರ್ಶನ್‌ಗೆ ಮತ್ತೆ ಕಾಡ್ತಿದ್ಯಾ ಆ ಒಂದು ಆರೋಗ್ಯ ಸಮಸ್ಯೆ!.. ಜೈಲಿನಲ್ಲಿ ಆರೋಗ್ಯ ತಪಾಸಣೆಗೆ ಮನವಿ

5

ನವೆಂಬರ್ 1 ರಿಂದ “ವಾರ್ಡ್ ಒನ್” ಅಭಿಯಾನ: ತಳಮಟ್ಟದಿಂದ ಅಭಿವೃದ್ದಿಗೆ ಪ್ಲ್ಯಾನ್

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Darshan case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವಿನ ಸಮಸ್ಯೆ ಶುರುವಾಗಿದೆ. ಈ ಹಿಂದೆ ಬಳ್ಳಾರಿ ಜೈಲಿನಲ್ಲಿದ್ದಾಗಲೂ ಬೆನ್ನುನೋವಿನಿಂದ ಬಳಲಿದ್ದ ದರ್ಶನ್, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಮತ್ತೆ ಫಿಸಿಯೋಥೆರಪಿ ಚಿಕಿತ್ಸೆಗೆ ಮನವಿ ಮಾಡಿದ್ದಾರೆ. ಹಾಗಾದ್ರೆ, ದರ್ಶನ್‌ಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಏನು? ಕೋರ್ಟ್ ಹೇಳಿದ್ದೇನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ಜೈಲಿನಲ್ಲಿ ದರ್ಶನ್‌ಗೆ ಮತ್ತೆ ಬೆನ್ನುನೋವಿನ ಸಂಕಟ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಬೆನ್ನುನೋವು ಮತ್ತೆ ಕಾಣಿಸಿಕೊಂಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಪರೀತ ಚಳಿ ಇರುವುದರಿಂದ ನೋವು ಉಲ್ಬಣಗೊಂಡಿದೆ ಎಂದು ದರ್ಶನ್ ತಿಳಿಸಿದ್ದಾರೆ. ನೋವು ತೀವ್ರವಾಗಿರುವ ಹಿನ್ನೆಲೆಯಲ್ಲಿ ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್, ತಮ್ಮ ಆರೋಗ್ಯ ಸಮಸ್ಯೆಯನ್ನು ನ್ಯಾಯಾಧೀಶರ ಮುಂದೆ ವಿವರಿಸಿದ್ದಾರೆ. ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಕೋರಿದ್ದಾರೆ. ದರ್ಶನ್ ಮನವಿಯನ್ನು ಆಲಿಸಿದ ನ್ಯಾಯಾಲಯ, ಜೈಲು ನಿಯಮಗಳ ಪ್ರಕಾರ ಸೂಕ್ತ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.


ಅಷ್ಟಕ್ಕೂ ದರ್ಶನ್‌ಗೆ ಬೆನ್ನುನೋವಿನ ಸಮಸ್ಯೆ ಹೊಸದೇನಲ್ಲ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆಯಾದಾಗಲೂ ಅವರು ತೀವ್ರ ಬೆನ್ನುನೋವಿನಿಂದ ಬಳಲಿದ್ದರು. ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ ಎಂಬ ಕಾರಣ ನೀಡಿ ಹೈಕೋರ್ಟ್‌ನಿಂದ ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದಿದ್ದರು. ಆದರೆ ಆ ಅವಧಿಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿರಲಿಲ್ಲ ಎಂಬುದು ವರದಿಯಲ್ಲಿರುವ ಪ್ರಮುಖ ಅಂಶ.


ಮಧ್ಯಂತರ ಜಾಮೀನಿನ ಅವಧಿ ಮುಗಿದ ಬಳಿಕ ಮತ್ತೆ ನ್ಯಾಯಾಂಗ ಬಂಧನಕ್ಕೆ ಮರಳಿರುವ ದರ್ಶನ್‌ಗೆ ಈಗ ಮತ್ತೊಮ್ಮೆ ಬೆನ್ನುನೋವು ಕಾಡುತ್ತಿದೆ. ಹೀಗಾಗಿ ಫಿಸಿಯೋಥೆರಪಿ ಚಿಕಿತ್ಸೆಗೆ ಅವಕಾಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಜೈಲು ನಿಯಮಗಳ ಪ್ರಕಾರ ಚಿಕಿತ್ಸೆ ಪಡೆಯಲು ಅನುಮತಿ ಸಿಗುತ್ತದೆಯೇ ಎಂಬುದು ಈಗ ಕುತೂಹಲ ಮೂಡಿಸಿದೆ.


ಒಂದೆಡೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ, ಮತ್ತೊಂದೆಡೆ ಬೆನ್ನುನೋವಿನ ಸಮಸ್ಯೆ. ದರ್ಶನ್ ಅವರ ಆರೋಗ್ಯದ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಫಿಸಿಯೋಥೆರಪಿ ಚಿಕಿತ್ಸೆಗೆ ನ್ಯಾಯಾಲಯದ ಮೂಲಕ ಅವಕಾಶ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

 

 

Add Zee News as a Preferred Source
TAGS:
Sandalwood