ದರ್ಶನ್‌ಗೆ ಮತ್ತೆ ಕಾಡ್ತಿದ್ಯಾ ಆ ಒಂದು ಆರೋಗ್ಯ ಸಮಸ್ಯೆ!.. ಜೈಲಿನಲ್ಲಿ ಆರೋಗ್ಯ ತಪಾಸಣೆಗೆ ಮನವಿ
Darshan health problem: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವಿನ ಸಮಸ್ಯೆ ಶುರುವಾಗಿದೆ. ಈ ಹಿಂದೆ ಬಳ್ಳಾರಿ ಜೈಲಿನಲ್ಲಿದ್ದಾಗಲೂ ಬೆನ್ನುನೋವಿನಿಂದ ಬಳಲಿದ್ದ ದರ್ಶನ್, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಮತ್ತೆ ಫಿಸಿಯೋಥೆರಪಿ ಚಿಕಿತ್ಸೆಗೆ ಮನವಿ ಮಾಡಿದ್ದಾರೆ. ಹಾಗಾದ್ರೆ, ದರ್ಶನ್‌ಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಏನು? ಕೋರ್ಟ್ ಹೇಳಿದ್ದೇನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.
Darshan case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವಿನ ಸಮಸ್ಯೆ ಶುರುವಾಗಿದೆ. ಈ ಹಿಂದೆ ಬಳ್ಳಾರಿ ಜೈಲಿನಲ್ಲಿದ್ದಾಗಲೂ ಬೆನ್ನುನೋವಿನಿಂದ ಬಳಲಿದ್ದ ದರ್ಶನ್, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಮತ್ತೆ ಫಿಸಿಯೋಥೆರಪಿ ಚಿಕಿತ್ಸೆಗೆ ಮನವಿ ಮಾಡಿದ್ದಾರೆ. ಹಾಗಾದ್ರೆ, ದರ್ಶನ್‌ಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಏನು? ಕೋರ್ಟ್ ಹೇಳಿದ್ದೇನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.
ಜೈಲಿನಲ್ಲಿ ದರ್ಶನ್‌ಗೆ ಮತ್ತೆ ಬೆನ್ನುನೋವಿನ ಸಂಕಟ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಬೆನ್ನುನೋವು ಮತ್ತೆ ಕಾಣಿಸಿಕೊಂಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಪರೀತ ಚಳಿ ಇರುವುದರಿಂದ ನೋವು ಉಲ್ಬಣಗೊಂಡಿದೆ ಎಂದು ದರ್ಶನ್ ತಿಳಿಸಿದ್ದಾರೆ. ನೋವು ತೀವ್ರವಾಗಿರುವ ಹಿನ್ನೆಲೆಯಲ್ಲಿ ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್, ತಮ್ಮ ಆರೋಗ್ಯ ಸಮಸ್ಯೆಯನ್ನು ನ್ಯಾಯಾಧೀಶರ ಮುಂದೆ ವಿವರಿಸಿದ್ದಾರೆ. ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಕೋರಿದ್ದಾರೆ. ದರ್ಶನ್ ಮನವಿಯನ್ನು ಆಲಿಸಿದ ನ್ಯಾಯಾಲಯ, ಜೈಲು ನಿಯಮಗಳ ಪ್ರಕಾರ ಸೂಕ್ತ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಅಷ್ಟಕ್ಕೂ ದರ್ಶನ್‌ಗೆ ಬೆನ್ನುನೋವಿನ ಸಮಸ್ಯೆ ಹೊಸದೇನಲ್ಲ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆಯಾದಾಗಲೂ ಅವರು ತೀವ್ರ ಬೆನ್ನುನೋವಿನಿಂದ ಬಳಲಿದ್ದರು. ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ ಎಂಬ ಕಾರಣ ನೀಡಿ ಹೈಕೋರ್ಟ್‌ನಿಂದ ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದಿದ್ದರು. ಆದರೆ ಆ ಅವಧಿಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿರಲಿಲ್ಲ ಎಂಬುದು ವರದಿಯಲ್ಲಿರುವ ಪ್ರಮುಖ ಅಂಶ.
ಮಧ್ಯಂತರ ಜಾಮೀನಿನ ಅವಧಿ ಮುಗಿದ ಬಳಿಕ ಮತ್ತೆ ನ್ಯಾಯಾಂಗ ಬಂಧನಕ್ಕೆ ಮರಳಿರುವ ದರ್ಶನ್‌ಗೆ ಈಗ ಮತ್ತೊಮ್ಮೆ ಬೆನ್ನುನೋವು ಕಾಡುತ್ತಿದೆ. ಹೀಗಾಗಿ ಫಿಸಿಯೋಥೆರಪಿ ಚಿಕಿತ್ಸೆಗೆ ಅವಕಾಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಜೈಲು ನಿಯಮಗಳ ಪ್ರಕಾರ ಚಿಕಿತ್ಸೆ ಪಡೆಯಲು ಅನುಮತಿ ಸಿಗುತ್ತದೆಯೇ ಎಂಬುದು ಈಗ ಕುತೂಹಲ ಮೂಡಿಸಿದೆ.
ಒಂದೆಡೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ, ಮತ್ತೊಂದೆಡೆ ಬೆನ್ನುನೋವಿನ ಸಮಸ್ಯೆ. ದರ್ಶನ್ ಅವರ ಆರೋಗ್ಯದ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಫಿಸಿಯೋಥೆರಪಿ ಚಿಕಿತ್ಸೆಗೆ ನ್ಯಾಯಾಲಯದ ಮೂಲಕ ಅವಕಾಶ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.