SOCIAL MEDIA

Newsletter

PARTNER SITES
Select Language Select State

ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆ ದಾಖಲು : ದರ್ಶನ್‌, ಪವಿತ್ರಾ ಗೌಡ ಬಗ್ಗೆ ಹೇಳಿದ್ದೇನು.. ಮುಂದೆನಾಗುತ್ತೆ?

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರದೋಷ್‌ ಹೇಳಿಕೆಯನ್ನು ತಡೆಯಲು ನಟ ದರ್ಶನ್‌ ಪರ ವಕೀಲರು ಹರಸಾಹಸ ಮಾಡುತ್ತಿದ್ದಾರೆ. ಇದರ ನಡುವೆ ಪ್ರದೋಷ್‌ ಮಾಫಿ ಸಾಕ್ಷಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿಸಲು ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಸೆಷನ್ಸ್‌ ಕೋರ್ಟ್‌ ವಜಾಗೊಳಿಸಿದೆ.. ಇದರಿಂದ ಆರೋಪಿಗಳಿಗೆ ಮತಷ್ಟು ಸಂಕಷ್ಟ ಹೆಚ್ಚಿದೆ.. ಅಷ್ಟೇ ಅಲ್ಲದೆ, ಈಗಾಗಲೇ ಪ್ರದೋಷ್‌ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ..

Reported By Krishna NK Written By Krishna NK
Published: Sep 28, 2026, 03:47 PM IST | Updated: Sep 28, 2026, 03:52 PM IST
Image Credit: Renukaswamy case
Join

Renukaswamy Case : ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿ ಡಿಗ್ಯಾಂಗ್‌ಗೆ ಇದೀಗ ಸಂಕಷ್ಟ ಎದುರಾಗಿದೆ. ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಸಿದ್ಧವಾದಾಗಿನಿಂದ ಆರೋಪಿಗಳಾದ ಪವಿತ್ರ ಗೌಡ ಮತ್ತು ದರ್ಶನ್‌ ಎದೆಯಲ್ಲಿ ಢವ ಢವ ಶುರುವಾಗಿದೆ. ಅಷ್ಟೇ ಅಲ್ಲದೆ, ಹೇಳಿಕೆಯನ್ನು ಮುಂದೂಡಲು ಪ್ರಯತ್ನಿಸಿದ ಎಲ್ಲಾ ಪ್ರಯತ್ನಗಳೂ ವಿಫಲವಾಗುತ್ತಿವೆ..

ಪ್ರದೋಷ್ ಅವರ ಹೇಳಿಕೆ ದಾಖಲಿಸುವುದನ್ನು ಮುಂದೂಡಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಹಾಗೂ ಪ್ರಕರಣದ ಇತರೆ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೆ 10 ದಿನಗಳ ಕಾಲ ಸಮಯ ನೀಡಬೇಕೆಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಇದಕ್ಕೆ ಸರ್ಕಾರಿ ಅಭಿಯೋಜಕರು (ಪಬ್ಲಿಕ್ ಪ್ರಾಸಿಕ್ಯೂಟರ್‌) ತೀವ್ರ ವಿರೋಧ ವ್ಯಕ್ತಪಡಿಸಿದರು.

ಸೆಪ್ಟೆಂಬರ್ 24ರಂದೇ ಹೈಕೋರ್ಟ್ ಆದೇಶದಂತೆ ಪ್ರದೋಷ್‌ಗೆ ಸಮನ್ಸ್ ಜಾರಿಯಾಗಿದೆ, ಹೀಗಾಗಿ ಈ ಅರ್ಜಿಯನ್ನು ಪುರಸ್ಕರಿಸಬಾರದು ಎಂದು ವಾದಿಸಿದರು. ಸರ್ಕಾರದ ವಾದವನ್ನು ಮಾನ್ಯ ಮಾಡಿದ ನ್ಯಾಯಾಲಯವು ದರ್ಶನ್ ಅರ್ಜಿಯನ್ನು ತಳ್ಳಿಹಾಕಿದೆ. ಇದರಿಂದಾಗಿ ಮಾಫಿ ಸಾಕ್ಷಿಯಾಗುವುದನ್ನು ತಡೆಯಲು ದರ್ಶನ್ ಬಳಿಯಿದ್ದ ಕೊನೆಯ ಅವಕಾಶವೂ ಕೈತಪ್ಪಿದಂತಾಗಿದೆ.

ಪ್ರದೋಷ್‌ ಹೇಳಿಕೆ ದಾಖಲು
ಸದ್ಯ ಪ್ರದೋಷ್‌ ರಾವ್‌ ಅವರು ನ್ಯಾಯಾಧೀಶರಾದ ಸುಜಾತಾ ಸಾಂಬ್ರಾಣಿ ಅವರ ಸಮಕ್ಷಮ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಲಿದ್ದಾರೆ. ಈ ಹೇಳಿಕೆಯನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿರುವ ಸಾಕ್ಷ್ಯಾಧಾರಗಳೊಂದಿಗೆ ಹೋಲಿಕೆ ಮಾಡಿ ಪರಿಶೀಲಿಸಲಾಗುತ್ತದೆ. ಹೇಳಿಕೆ ಮತ್ತು ಸಾಕ್ಷ್ಯಗಳು ಸರಿಹೊಂದಿದರೆ, ಅವರನ್ನು ಮುಂದಿನ ವಿಚಾರಣೆಗಳಲ್ಲಿ ಅಧಿಕೃತವಾಗಿ 'ಮಾಫಿ ಸಾಕ್ಷಿ' ಎಂದು ಪರಿಗಣಿಸಿ ತೀರ್ಪಿನ ವೇಳೆ ವಿನಾಯಿತಿ ನೀಡಲಾಗುತ್ತದೆ.

ಒಂದು ವೇಳೆ ಪ್ರದೋಷ್ ಅವರ ಹೇಳಿಕೆ ಮತ್ತು ಸಾಕ್ಷ್ಯಾಧಾರಗಳಲ್ಲಿ ವ್ಯತ್ಯಾಸ ಕಂಡುಬಂದರೆ, ಅವರನ್ನು ಮತ್ತೆ ಈ ಪ್ರಕರಣದಲ್ಲಿ ಆರೋಪಿಯನ್ನಾಗಿಯೇ ವಿಚಾರಣೆಗೆ ಒಳಪಡಿಸಲಾಗುತ್ತದೆ. ಪ್ರದೋಷ್ ನೀಡುವ ಹೇಳಿಕೆಯು ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ಕಾನೂನಾತ್ಮಕವಾಗಿ ಭಾರಿ ಅಡ್ಡಿಯಾಗುವ ಸಾಧ್ಯತೆಯಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES