• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಪವಿತ್ರ ಗೌಡ ಜೊತೆ ದರ್ಶನ್ ಹಾರ ಬದಲಿಸುವ ವಿಡಿಯೋ ವೈರಲ್‌; ಇಬ್ಬರೂ ಮದುವೆಯಾಗಿ ಒಂದೇ ಮನೆಯಲ್ಲೇ ಇದ್ರಾ?

ಪವಿತ್ರ ಗೌಡ ಜೊತೆ ದರ್ಶನ್ ಹಾರ ಬದಲಿಸುವ ವಿಡಿಯೋ ವೈರಲ್‌; ಇಬ್ಬರೂ ಮದುವೆಯಾಗಿ ಒಂದೇ ಮನೆಯಲ್ಲೇ ಇದ್ರಾ?

Darshan Pavithra Gowda video viral : ವೈರಲ್‌ ಆದ ವಿಡಿಯೋದಲ್ಲಿ ಪೂಜಾ ಕಾರ್ಯಕ್ರಮದಲ್ಲಿ ದರ್ಶನ್‌ ಮತ್ತು ಪವಿತ್ರಾ ಗೌಡ ಒಟ್ಟಿಗೆ ಕುಳಿತಿರುವುದು, ದರ್ಶನ್‌ ಅವರ ತಾಯಿ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವುದು ಇದೆ.

Written ByChetana Devarmani
Published: Sep 26, 2026, 11:34 AM IST|Updated: Sep 26, 2026, 11:43 AM IST
joinshare
ಪವಿತ್ರ ಗೌಡ ಜೊತೆ ದರ್ಶನ್ ಹಾರ ಬದಲಿಸುವ ವಿಡಿಯೋ ವೈರಲ್‌; ಇಬ್ಬರೂ ಮದುವೆಯಾಗಿ ಒಂದೇ ಮನೆಯಲ್ಲೇ ಇದ್ರಾ?

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಅವರ ಹೆಸರು ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಹಲವು ವರ್ಷಗಳ ಹಿಂದಿನದ್ದು ಎನ್ನಲಾಗುತ್ತಿರುವ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿಡಿಯೋದಲ್ಲಿರುವ ಕೆಲವು ದೃಶ್ಯಗಳು ನೆಟ್ಟಿಗರ ಗಮನ ಸೆಳೆದಿವೆ. ಪವಿತ್ರಾ ಗೌಡ ಅವರ ಮನೆಯ ಗೃಹಪ್ರವೇಶದ ಸಂದರ್ಭದಲ್ಲಿ ದರ್ಶನ್‌ ಭಾಗಿಯಾಗಿರುವ ದೃಶ್ಯಗಳು ಈ ವಿಡಿಯೋದಲ್ಲಿವೆ ಎನ್ನಲಾಗುತ್ತಿದೆ. ಅದರಲ್ಲೂ ಪೂಜಾ ಕಾರ್ಯಕ್ರಮದಲ್ಲಿ ದರ್ಶನ್‌ ಮತ್ತು ಪವಿತ್ರಾ ಗೌಡ ಒಟ್ಟಿಗೆ ಕುಳಿತಿರುವುದು, ದರ್ಶನ್‌ ಅವರ ತಾಯಿ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವುದು ಹಾಗೂ ಪವಿತ್ರಾ ಗೌಡ ಅವರ ಮಗಳೊಂದಿಗೆ ದರ್ಶನ್‌ ಆತ್ಮೀಯವಾಗಿ ಸಮಯ ಕಳೆಯುತ್ತಿರುವ ದೃಶ್ಯಗಳು ಚರ್ಚೆಗೆ ಕಾರಣವಾಗಿವೆ.

ವೈರಲ್ ಆಗಿರುವ ಹಳೆಯ ವಿಡಿಯೋದಲ್ಲಿ ಪವಿತ್ರಾ ಗೌಡ ಅವರ ಮನೆಯ ಗೃಹಪ್ರವೇಶದ ಕಾರ್ಯಕ್ರಮದ ದೃಶ್ಯಗಳು ಕಂಡುಬರುತ್ತವೆ ಎಂದು ಹೇಳಲಾಗುತ್ತಿದೆ. ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳು ನಡೆಯುತ್ತಿರುವ ಸಂದರ್ಭದಲ್ಲಿ ದರ್ಶನ್‌ ಕೂಡ ಅಲ್ಲಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಪೂಜೆಯ ವೇಳೆ ದರ್ಶನ್‌ ಮತ್ತು ಪವಿತ್ರಾ ಗೌಡ ಒಟ್ಟಿಗೆ ಕುಳಿತಿರುವ ದೃಶ್ಯವೂ ಇದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಈ ಹಳೆಯ ವಿಡಿಯೋ ಇದೀಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿನ ಮತ್ತೊಂದು ದೃಶ್ಯವೂ ನೆಟ್ಟಿಗರ ಗಮನ ಸೆಳೆದಿದೆ. ಪವಿತ್ರಾ ಗೌಡ ಅವರ ಮಗಳೊಂದಿಗೆ ದರ್ಶನ್‌ ನಗುತ್ತಾ ಮಾತನಾಡುತ್ತಿರುವುದು ಹಾಗೂ ತುಂಟಾಟ ಮಾಡುತ್ತಿರುವಂತೆ ಕಾಣಿಸುವ ಕ್ಷಣಗಳು ವಿಡಿಯೋದಲ್ಲಿವೆ ಎನ್ನಲಾಗುತ್ತಿದೆ. ಈ ದೃಶ್ಯವನ್ನು ಹಂಚಿಕೊಂಡಿರುವ ಕೆಲವರು ದರ್ಶನ್‌ ಮತ್ತು ಪವಿತ್ರಾ ಗೌಡ ಕುಟುಂಬದ ನಡುವಿನ ಆತ್ಮೀಯತೆಯ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ವಿಡಿಯೋದಲ್ಲಿ ದರ್ಶನ್‌ ಅವರ ತಾಯಿ ಕೂಡ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅವರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಇದನ್ನು ಆಧರಿಸಿ ಹಲವು ರೀತಿಯ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಕೇವಲ ಒಂದು ಕಾರ್ಯಕ್ರಮದಲ್ಲಿ ಯಾರಾದರೂ ಕಾಣಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರ ವೈಯಕ್ತಿಕ ಅಭಿಪ್ರಾಯ ಅಥವಾ ಒಪ್ಪಿಗೆಯನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂಬುದನ್ನೂ ಗಮನಿಸಬೇಕಿದೆ. ವೈರಲ್ ವಿಡಿಯೋ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ವಿಚಾರವೂ ಚರ್ಚೆಯಾಗುತ್ತಿದೆ. ದರ್ಶನ್‌ ಮತ್ತು ಪವಿತ್ರಾ ಗೌಡ ಪರಸ್ಪರ ಹಾರ ಹಾಕಿಕೊಂಡಿರುವ ದೃಶ್ಯವಿದೆ ಎಂದು ಕೆಲವರು ಹೇಳುತ್ತಿದ್ದಾರೆ.

ಇದರ ಬೆನ್ನಲ್ಲೇ, “ಇದು ಕೇವಲ ಗೃಹಪ್ರವೇಶದ ಕಾರ್ಯಕ್ರಮವೇ ಅಥವಾ ಬೇರೆ ಯಾವುದಾದರೂ ವಿಶೇಷ ಕಾರ್ಯಕ್ರಮವೇ?” ಎಂಬ ಪ್ರಶ್ನೆಗಳು ಎದ್ದಿವೆ. ಕೆಲವು ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ಪವಿತ್ರಾ ಗೌಡ ಅವರ ಕುತ್ತಿಗೆಯಲ್ಲಿ ತಾಳಿ ಕಾಣಿಸುತ್ತಿದೆ ಎಂಬ ಹೇಳಿಕೆಯೂ ಹರಿದಾಡುತ್ತಿದೆ. ಹೀಗಾಗಿ ಹಳೆಯ ವಿಡಿಯೋ ಇದೀಗ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಈ ದೃಶ್ಯಗಳ ಆಧಾರದ ಮೇಲೆ ದರ್ಶನ್‌ ಮತ್ತು ಪವಿತ್ರಾ ಗೌಡ ಮದುವೆಯಾಗಿದ್ದರು ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಯಾವುದೇ ಮದುವೆಯ ವಿಚಾರವನ್ನು ದೃಢಪಡಿಸಲು ಅಧಿಕೃತ ದಾಖಲೆ ಅಥವಾ ಸಂಬಂಧಪಟ್ಟವರ ಸ್ಪಷ್ಟ ಹೇಳಿಕೆ ಅಗತ್ಯ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಯಾವ ದಿನಾಂಕದ್ದು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಇದು 2018ರ ಅವಧಿಯ ಗೃಹಪ್ರವೇಶದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು ಇರಬಹುದು ಎಂಬ ಚರ್ಚೆ ನಡೆಯುತ್ತಿದೆ. ಪವಿತ್ರಾ ಗೌಡ ಅವರು 2018ರಲ್ಲಿ ಬೆಂಗಳೂರಿನ ಕೆಂಚೇನಹಳ್ಳಿ ಪ್ರದೇಶದಲ್ಲಿ ಮನೆ ಖರೀದಿಸಿದ್ದ ವಿಚಾರವೂ ಹಿಂದೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲೇ ವೈರಲ್ ಆಗಿರುವ ವಿಡಿಯೋ ಅದೇ ಸಮಯದ ಗೃಹಪ್ರವೇಶದ್ದಾಗಿರಬಹುದೇ ಎಂಬ ಕುತೂಹಲ ಮೂಡಿದೆ. ಆದರೆ ವಿಡಿಯೋ ಚಿತ್ರೀಕರಣದ ನಿಖರ ದಿನಾಂಕವನ್ನು ಸ್ವತಂತ್ರವಾಗಿ ದೃಢಪಡಿಸದೆ ಅದನ್ನು ನಿರ್ದಿಷ್ಟ ವರ್ಷದ ಕಾರ್ಯಕ್ರಮ ಎಂದು ಹೇಳುವುದು ಸರಿಯಲ್ಲ.

ಪವಿತ್ರಾ ಗೌಡ ಅವರ ಮನೆಗೆ ಸಂಬಂಧಿಸಿದಂತೆ ₹2 ಕೋಟಿ ಹಣ ವರ್ಗಾವಣೆಯ ವಿಚಾರವೂ ಹಿಂದೆ ಸುದ್ದಿಯಾಗಿತ್ತು. ವರದಿಗಳ ಪ್ರಕಾರ, ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಖಾತೆಯಿಂದ ಪವಿತ್ರಾ ಗೌಡ ಅವರ ಖಾತೆಗೆ ₹2 ಕೋಟಿ ಹಣ ವರ್ಗಾವಣೆಯಾಗಿತ್ತು ಎಂದು ಹೇಳಲಾಗಿತ್ತು. ಈ ಹಣದ ವಿಚಾರವನ್ನು ಕೆಲವರು ದರ್ಶನ್‌ ಅವರೊಂದಿಗೆ ಸಂಪರ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ. ಆದರೆ ಲಭ್ಯವಿರುವ ವರದಿಗಳ ಆಧಾರದಲ್ಲಿ ‘ದರ್ಶನ್‌ ಪವಿತ್ರಾ ಗೌಡಗೆ ₹2 ಕೋಟಿ ಮೌಲ್ಯದ ಮನೆ ಕೊಡಿಸಿದ್ದಾರೆ’ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.  

ಪವಿತ್ರಾ ಗೌಡ ಮತ್ತು ದರ್ಶನ್‌ ಹಲವು ವರ್ಷಗಳಿಂದ ಸಾರ್ವಜನಿಕ ಚರ್ಚೆಯಲ್ಲಿರುವ ಜೋಡಿ. ಇಬ್ಬರ ಫೋಟೋಗಳು, ವಿಡಿಯೋಗಳು ಮತ್ತು ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ಈ ಹಿಂದೆಯೂ ಹಲವು ಬಾರಿ ವೈರಲ್ ಆಗಿವೆ. ಆದರೆ ಈಗ ವೈರಲ್ ಆಗಿರುವ ಗೃಹಪ್ರವೇಶದ ವಿಡಿಯೋ ನೋಡಿದ ಟ್ರೋಲಿಗರು ಇಬ್ಬರೂ ಮದುವೆಯಾಗಿದ್ದಾರೇ ಎಂಬ ಪ್ರಶ್ನೆ ಮಾಡುತ್ತಿದ್ದಾರೆ. ಅಲ್ಲದೇ ಇಬ್ಬರೂ ಒಟ್ಟಿಗೆ ಒಂದೇ ಮನೆಯಲ್ಲಿ ಇದ್ರಾ? ದರ್ಶನ್‌ ಮತ್ತು ಪವಿತ್ರಾ ಗೌಡ ಹಾರ ಬದಲಿಸುವಾರ ದರ್ಶನ್‌ ತಾಯಿ ಕೂಡ ಅಲ್ಲೇ ಇರುವ ದೃಶ್ಯವಿರುವುದರಿಂದ ಇವರಿಬ್ಬರ ಈ ಸಂಬಂಧಕ್ಕೆ ಮೀನಾ ತೂಗುದೀಪ ಅವರ ಸಮ್ಮತಿಯೂ ಇತ್ತಾ ಎಂಬ ಪ್ರಶ್ನೆ ಕೂಡ ಈಗ ಕೇಳಿಬರುತ್ತಿದೆ. 
 

Add Zee News as a Preferred Source
TAGS:
Kannada News