• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು: ಮನೆಗೆ ಬಂದು ಬೆದರಿಕೆ ಹಾಕಿದ ಆರೋಪ!

ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು: ಮನೆಗೆ ಬಂದು ಬೆದರಿಕೆ ಹಾಕಿದ ಆರೋಪ!

ನಟ ದರ್ಶನ್‌ ಆಪ್ತನೆಂದೇ ಗುರುತಿಸಿಕೊಂಡಿದ್ದ ನಟ ಧನ್ವೀರ್‌ ಹಾಗೂ ವಿಜಯಲಕ್ಷ್ಮೀ ನಡುವೆ ಭುಗಿಲೆದ್ದ ಈ ಮನಸ್ತಾಪ ಹಲವು ರೀತಿಯ ಚರ್ಚೆಗಳಿಗೆ ನಾಂದಿ ಹಾಡಿದೆ.

Written ByChetana Devarmani
Published: Oct 24, 2026, 10:07 AM IST|Updated: Oct 24, 2026, 10:16 AM IST
joinshare
ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು: ಮನೆಗೆ ಬಂದು ಬೆದರಿಕೆ ಹಾಕಿದ ಆರೋಪ!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು: ಮನೆಗೆ ಬಂದು ಬೆದರಿಕೆ ಹಾಕಿದ ಆರೋಪ!

ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು: ಮನೆಗೆ ಬಂದು ಬೆದರಿಕೆ ಹಾಕಿದ ಆರೋಪ!

2

ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ: ವಿಶ್ವ ಪಾರಂಪರಿಕ ಸ್ಮಾರಕಗಳ ರಕ್ಷಣೆ ಕುರಿತು ಮಹತ್ವದ ಪರಿಶೀಲನೆ

3

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಹೇಳಿಕೆಗೆ ಖಂಡನೆ.. ಅನ್ನದಾನಿಗೂ ತಿರುಗೇಟು

4

ದಿನ ಭವಿಷ್ಯ 24-10-2026: ಶನಿವಾರದಂದು ವ್ಯಾಘಾತ ಯೋಗ.. ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ

5

ಅದೃಷ್ಟ ಅಂದ್ರೆ ಇದು! ಅಮ್ಮನ ಹುಟ್ಟಿದ ಡೇಟ್‌ನಿಂದ 240 ಕೋಟಿ ಒಡೆಯನಾದ ಭಾರತೀಯ ಯುವಕ.. ಹೇಗೆ ಗೊತ್ತೆ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಕನ್ನಡ ಚಿತ್ರರಂಗದಲ್ಲಿ ಇದೀಗ ಹೊಸ ವಿವಾದ ಸೃಷ್ಟಿಯಾಗಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ನಿನ್ನೆ ನಟ ಧನ್ವೀರ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಟ ಧನ್ವೀರ್ ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪವನ್ನು ಈ ದೂರಿನಲ್ಲಿ ಮಾಡಲಾಗಿತ್ತು. ಈ ಬೆನ್ನಲ್ಲೇ ನಟ ಧನ್ವೀರ್‌ ತಂದೆ ಕೂಡ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಾಗರಾಜ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವಿಚಾರ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಸಖತ್‌ ಚರ್ಚೆಗೆ ಗ್ರಾಸವಾಗಿದೆ. ನಟ ದರ್ಶನ್‌ ಆಪ್ತನೆಂದೇ ಗುರುತಿಸಿಕೊಂಡಿದ್ದ ನಟ ಧನ್ವೀರ್‌ ಹಾಗೂ ವಿಜಯಲಕ್ಷ್ಮೀ ನಡುವೆ ಭುಗಿಲೆದ್ದ ಈ ಮನಸ್ತಾಪ ಹಲವು ರೀತಿಯ ಚರ್ಚೆಗಳಿಗೆ ನಾಂದಿ ಹಾಡಿದೆ.

ನಟ ಧನ್ವೀರ್ ಗೌಡ ಅವರ ತಂದೆ, ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಾಗರಾಜ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂಬ ಸುದ್ದಿ ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಧನ್ವೀರ್ ಅವರ ಮನೆಗೆ ಬಂದು ರೌಡಿಗಳನ್ನು ಕರೆಸಿ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಿರುವುದಾಗಿ ವರದಿಯಾಗಿದೆ. ಮಾಹಿತಿಯ ಪ್ರಕಾರ, ಧನ್ವೀರ್ ಅವರೊಂದಿಗೆ ಮಾತನಾಡುವ ಉದ್ದೇಶದಿಂದ ಮನೆಗೆ ಬಂದಿದ್ದವರು ಬಳಿಕ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಗೌರವ್ ಶೆಟ್ಟಿ ಎಂಬಾತನ ಮೂಲಕ ಇಬ್ಬರನ್ನು ಮನೆಗೆ ಕರೆಸಿಕೊಂಡು ಧನ್ವೀರ್ ಕುಟುಂಬದವರಿಗೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಪ್ರಕರಣದಲ್ಲಿ ಗೌರವ್ ಶೆಟ್ಟಿ ಹೆಸರು ಪ್ರಸ್ತಾಪವಾಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಸಾಕ್ಷಿಗೆ ಬೆದರಿಕೆ ಹಾಕಿದ ಪ್ರಕರಣದ ಸಂದರ್ಭದಲ್ಲಿಯೂ ಗೌರವ್ ಶೆಟ್ಟಿ ಹೆಸರು ಕೇಳಿಬಂದಿತ್ತು ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು ಎಂಬ ಮಾಹಿತಿಯೂ ವರದಿಯಾಗಿದೆ. ಇದೀಗ ಧನ್ವೀರ್ ಅವರ ಮನೆಗೆ ಗೌರವ್ ಶೆಟ್ಟಿ ಮೂಲಕ ಇಬ್ಬರನ್ನು ಕರೆಸಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಧನ್ವೀರ್ ಅವರ ತಂದೆ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗಿದೆ.

ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಆದರೆ, ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳು ಇನ್ನೂ ಆರೋಪಗಳಷ್ಟೇ ಆಗಿದ್ದು, ಅವುಗಳ ಸತ್ಯಾಸತ್ಯತೆ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಈ ಕುರಿತು ಪೊಲೀಸ್ ಇಲಾಖೆಯ ಅಧಿಕೃತ ಮಾಹಿತಿ ಹಾಗೂ ಆರೋಪಿತ ವ್ಯಕ್ತಿಗಳ ಪ್ರತಿಕ್ರಿಯೆ ಲಭ್ಯವಾದ ಬಳಿಕ ಪ್ರಕರಣದ ಸಂಪೂರ್ಣ ಚಿತ್ರಣ ತಿಳಿದುಬರಬೇಕಿದೆ.

ಪ್ರಕರಣದ ಹಿನ್ನೆಲೆ ಏನು?

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ಅವರು ನಟ ಧನ್ವೀರ್ ಅವರ ಮನೆಗೆ ಕೆಲ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲು ತೆರಳಿದ್ದರಂತೆ. ಈ ಸಂದರ್ಭದಲ್ಲಿ ನಟ ಧನ್ವೀರ್  ಗೌಡ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ವಿಜಯಲಕ್ಷ್ಮಿ ಹಾಗೂ ನಾಗರಾಜ್ ಅವರು ಅಲ್ಲಿಂದ ವಾಪಸ್ ಬಂದಿದ್ದರಂತೆ.

ಮನೆಗೆ ಬಂದ ಬಳಿಕ ನಟ ಧನ್ವೀರ್ ಅವರು ನಾಗರಾಜ್ ಅವರಿಗೆ ಫೋನ್ ಕರೆ ಮಾಡಿದ್ದಾರೆ. ಆದರೆ ಫೋನ್ ಸಂಭಾಷಣೆಯಲ್ಲಿ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಫೋನ್‌ ಕರೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಬೇಸರಗೊಂಡಿರುವ ವಿಜಯಲಕ್ಷ್ಮಿ ಅವರ ಮ್ಯಾನೇಜರ್‌ ನಾಗರಾಜ್ ಅವರು ಆರ್.ಆರ್. ನಗರ ಪೊಲೀಸ್ ಠಾಣೆಗೆ ತೆರಳಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಆರ್.ಆರ್. ನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಧನ್ವೀರ್‌ ತಂದೆ ಕೂಡ ದೂರು ನೀಡಿದ್ದಾರೆ.  

Add Zee News as a Preferred Source
TAGS:
Sandalwood