SOCIAL MEDIA

Newsletter

PARTNER SITES
Select Language Select State

ಮೈಸೂರು ದಸರಾದಲ್ಲಿ ಸುದೀಪ್‌ ಎದುರು ಬಂದರೂ ಮಾತನಾಡದೇ ನಿರ್ಲಕ್ಷಿಸಿದ್ರಾ ಸಿಎಂ ಡಿಕೆ ಶಿವಕುಮಾರ್‌?

DK Shivakumar Sudeep viral video: ಮೈಸೂರು ದಸರಾ 2026ರ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಟ ಕಿಚ್ಚ ಸುದೀಪ್‌ಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Written By Chetana Devarmani
Published: Oct 22, 2026, 01:24 PM IST | Updated: Oct 22, 2026, 01:33 PM IST
Join

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್‌ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕುರಿತ ವಿಚಾರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ದಸರಾ ಕಾರ್ಯಕ್ರಮದ ವೇಳೆ ಸುದೀಪ್‌ ಎದುರಿಗೆ ಬಂದರೂ ಸಿಎಂ ಡಿಕೆ ಶಿವಕುಮಾರ್‌ ಅವರನ್ನು ಮಾತನಾಡಿಸದೆ ಮುಂದೆ ಸಾಗಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸುದೀಪ್‌ ಎದುರಲ್ಲೇ ಬಂದ್ರೂ ಅದನ್ನು ಡಿ.ಕೆ.ಶಿವಕುಮಾರ್‌ ಗಮನಸಿಲೇ ಇಲ್ವಾ ಎಂಬ ಪ್ರಶ್ನೆ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

ಮೈಸೂರು ದಸರಾ ಎಂದರೆ ಸಾಂಸ್ಕೃತಿಕ ವೈಭವದ ಜೊತೆಗೆ ರಾಜಕೀಯ ನಾಯಕರು, ಸಿನಿಮಾ ತಾರೆಯರು ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಿಂದಲೂ ಗಮನ ಸೆಳೆಯುವ ಉತ್ಸವ. ಈ ಬಾರಿಯ ದಸರಾ ಕಾರ್ಯಕ್ರಮದಲ್ಲೂ ಅನೇಕ ಗಣ್ಯರು ಭಾಗವಹಿಸಿದ್ದರು. ಈ ನಡುವೆ ಸುದೀಪ್‌ ಮತ್ತು ಸಿಎಂ ಡಿಕೆ ಶಿವಕುಮಾರ್‌ ಅವರ ಭೇಟಿಗೆ ಸಂಬಂಧಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ವೈರಲ್‌ ರೀಲ್ಸ್‌ನಲ್ಲಿ ಏನಿದೆ?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಆಧರಿಸಿ, ಸ್ಯಾಂಡಲ್‌ವುಡ್‌ ಬಾದ್‌ ಷಾ ನಟ ಸುದೀಪ್‌ ಎದುರಿಗೆ ಬಂದಾಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರತ್ತ ನೋಡದೇ, ಮಾತನ್ನೂ ಆಡಿಸದೇ ಹಾಗೆಯೇ ಮುಂದಕ್ಕೆ ಸಾಗುತ್ತಾರೆ. ಇದರಿಂದ ಸುದೀಪ್‌ ಅವರು ಬಂದಿದ್ದನ್ನು ಸಿಎಂ ಡಿಕೆ ಶಿವಕುಮಾರ್‌ ಗಮನಿಸಲೇ ಇಲ್ಲವೇ ಎಂಬ ಪ್ರಶ್ನೆಗಳನ್ನು ಕೆಲವರು ಎತ್ತಿದ್ದಾರೆ. ಈ ದೃಶ್ಯಕ್ಕೆ ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಆದರೆ, ವಿಡಿಯೋದಲ್ಲಿ ಕಂಡುಬರುವ ಕ್ಷಣ ಮಾತ್ರದಿಂದಲೇ ಇಬ್ಬರ ನಡುವೆ ಯಾವುದೇ ಅಸಮಾಧಾನವಿದೆ ಎಂದು ಹೇಳಲು ಸಾಧ್ಯವಿಲ್ಲ.

ಇಬ್ಬರ ನಡುವೆ ಮನಸ್ತಾಪವಿದೆಯೇ?

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗಣ್ಯರು ಪರಸ್ಪರ ಭೇಟಿಯಾಗುವ ಸಂದರ್ಭಗಳು ಕೆಲವೇ ಕ್ಷಣಗಳದ್ದಾಗಿರಬಹುದು. ಹಾಗಾಗಿ, ಒಂದು ವಿಡಿಯೋ ತುಣುಕನ್ನು ಆಧರಿಸಿ ಅವರ ನಡುವಿನ ಸಂಬಂಧದ ಬಗ್ಗೆ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ. ನಟ ಸುದೀಪ್‌ ಅವರನ್ನು ಸಿಎಂ ಡಿಕೆ ಶಿವಕುಮಾರ್‌ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ ಎಂಬುದನ್ನು ದೃಢಪಡಿಸುವ ಅಧಿಕೃತ ಮಾಹಿತಿ ಲಭ್ಯವಿಲ್ಲ. ದಸರಾ ಕಾರ್ಯಕ್ರಮದಲ್ಲಿ ಇಬ್ಬರೂ ಭಾಗವಹಿಸಿದ್ದ ಸಂದರ್ಭದ ಸಂಪೂರ್ಣ ದೃಶ್ಯಗಳು ಹಾಗೂ ಘಟನೆಯ ಹಿನ್ನೆಲೆ ಸ್ಪಷ್ಟವಾದರೆ ಮಾತ್ರ ಈ ಚರ್ಚೆಗೆ ನಿಖರವಾದ ಉತ್ತರ ಸಿಗಲಿದೆ. ಅಲ್ಲಿಯವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಆಧರಿಸಿ ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲ.

ಒಟ್ಟಿನಲ್ಲಿ, ಮೈಸೂರು ದಸರಾ ಸಂಭ್ರಮದ ನಡುವೆಯೇ ಸುದೀಪ್‌ ಮತ್ತು ಡಿಕೆ ಶಿವಕುಮಾರ್‌ ಕುರಿತ ಈ ಚರ್ಚೆ ಕುತೂಹಲ ಮೂಡಿಸಿದೆ. ವೈರಲ್‌ ರೀಲ್ಸ್‌ನಲ್ಲಿರುವ ದೃಶ್ಯದ ಹಿಂದಿನ ನೈಜ ಸಂದರ್ಭವೇನು ಎಂಬುದನ್ನು ತಿಳಿಯಲು ಅಭಿಮಾನಿಗಳು ಹಾಗೂ ನೆಟ್ಟಿಗರು ಕಾಯುತ್ತಿದ್ದಾರೆ.

 

 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES