• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಪವನ್ ಕಲ್ಯಾಣ್ ಮೊದಲ ಇಬ್ಬರು ಪತ್ನಿಯರಿಗೆ ವಿಚ್ಛೇದನದ ಬಳಿಕ ಕೊಟ್ಟ ಜೀವನಾಂಶ ಎಷ್ಟು ಕೋಟಿ ಗೊತ್ತೇ?

ಪವನ್ ಕಲ್ಯಾಣ್ ಮೊದಲ ಇಬ್ಬರು ಪತ್ನಿಯರಿಗೆ ವಿಚ್ಛೇದನದ ಬಳಿಕ ಕೊಟ್ಟ ಜೀವನಾಂಶ ಎಷ್ಟು ಕೋಟಿ ಗೊತ್ತೇ?

ಪವನ್ ಕಲ್ಯಾಣ್ ಅವರು 1997ರಲ್ಲಿ ನಂದಿನಿ ಅವರನ್ನು ವಿವಾಹವಾಗಿದ್ದರು. ಆದರೆ, ಈ ದಾಂಪತ್ಯ ಹೆಚ್ಚು ಕಾಲ ಉಳಿಯಲಿಲ್ಲ. ಹಲವು ವರ್ಷಗಳ ಬಳಿಕ ಇಬ್ಬರೂ ಬೇರೆಯಾಗಿದ್ದು, 2008ರಲ್ಲಿ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದರು.

Written ByChetana Devarmani
Published: Nov 10, 2026, 16:19 IST|Updated: Nov 10, 2026, 16:22 IST
joinshare
ಪವನ್ ಕಲ್ಯಾಣ್ ಮೊದಲ ಇಬ್ಬರು ಪತ್ನಿಯರಿಗೆ ವಿಚ್ಛೇದನದ ಬಳಿಕ ಕೊಟ್ಟ ಜೀವನಾಂಶ ಎಷ್ಟು ಕೋಟಿ ಗೊತ್ತೇ?

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Pawan Kalyan Divorce News: ಟಾಲಿವುಡ್‌ನ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನ ಆಗಾಗ್ಗೆ ಸುದ್ದಿಯಾಗುತ್ತಿರುತ್ತದೆ. ಅದರಲ್ಲೂ ಅವರ ವೈವಾಹಿಕ ಜೀವನ, ವಿಚ್ಛೇದನ ಹಾಗೂ ಮಾಜಿ ಪತ್ನಿಯರಿಗೆ ನೀಡಿದ ಜೀವನಾಂಶದ ವಿಚಾರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಪವನ್ ಕಲ್ಯಾಣ್ ಅವರು ಈ ಹಿಂದೆ ಇಬ್ಬರು ಪತ್ನಿಯರಿಂದ ವಿಚ್ಛೇದನ ಪಡೆದಿದ್ದು, ಮೊದಲ ಪತ್ನಿಗೆ ಎಷ್ಟು ಕೋಟಿ ರೂಪಾಯಿ ನೀಡಿದ್ದಾರೆ? ಎರಡನೇ ಪತ್ನಿ ರೇಣು ದೇಸಾಯಿ ಅವರಿಗೆ 40 ಕೋಟಿ ರೂ. ಜೀವನಾಂಶ ನೀಡಿದ್ದಾರೆಯೇ? ಎಂಬ ಪ್ರಶ್ನೆಗಳು ಆಗಾಗ್ಗೆ ಚರ್ಚೆಯಾಗುತ್ತವೆ.

ಮೊದಲ ಪತ್ನಿ ನಂದಿನಿಗೆ ನೀಡಿದ್ದು 5 ಕೋಟಿ ರೂ.?

ಪವನ್ ಕಲ್ಯಾಣ್ ಅವರು 1997ರಲ್ಲಿ ನಂದಿನಿ ಅವರನ್ನು ವಿವಾಹವಾಗಿದ್ದರು. ಆದರೆ, ಈ ದಾಂಪತ್ಯ ಹೆಚ್ಚು ಕಾಲ ಉಳಿಯಲಿಲ್ಲ. ಹಲವು ವರ್ಷಗಳ ಬಳಿಕ ಇಬ್ಬರೂ ಬೇರೆಯಾಗಿದ್ದು, 2008ರಲ್ಲಿ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದರು. ಈ ಸಂದರ್ಭದಲ್ಲಿ ನಂದಿನಿ ಅವರಿಗೆ ಪವನ್ ಕಲ್ಯಾಣ್ ಅವರು 5 ಕೋಟಿ ರೂಪಾಯಿಗಳನ್ನು ಜೀವನಾಂಶವಾಗಿ ಒನ್‌ಟೈಮ್ ಸೆಟಲ್‌ಮೆಂಟ್ ಮೂಲಕ ಚೆಕ್ ರೂಪದಲ್ಲಿ ನೀಡಿದ್ದರು ಎಂಬ ಮಾಹಿತಿ ವರದಿಯಾಗಿದೆ. ಈ ವಿಚಾರವನ್ನು ಪವನ್ ಕಲ್ಯಾಣ್ ಅವರೇ ರಾಜಕೀಯ ಸಭೆಯೊಂದರಲ್ಲಿ ಪ್ರಸ್ತಾಪಿಸಿದ್ದರು ಎನ್ನಲಾಗಿದೆ. ಹೀಗಾಗಿ ಅವರ ಮೊದಲ ವಿಚ್ಛೇದನದ ಸಂದರ್ಭದಲ್ಲಿ ನೀಡಿದ 5 ಕೋಟಿ ರೂಪಾಯಿ ಮೊತ್ತ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಎರಡನೇ ಪತ್ನಿ ರೇಣು ದೇಸಾಯಿಗೆ 40 ಕೋಟಿ ರೂ. ಕೊಟ್ಟಿದ್ದಾರಾ?

ನಂದಿನಿ ಅವರಿಂದ ದೂರವಾದ ಬಳಿಕ ಪವನ್ ಕಲ್ಯಾಣ್ ಅವರು ನಟಿ ರೇಣು ದೇಸಾಯಿ ಅವರೊಂದಿಗೆ ಜೀವನ ಆರಂಭಿಸಿದ್ದರು. ಇಬ್ಬರೂ 2009ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಅಕಿರಾ ನಂದನ್ ಹಾಗೂ ಆದ್ಯಾ ಎಂಬ ಇಬ್ಬರು ಮಕ್ಕಳಿದ್ದಾರೆ. ಆದರೆ, ಈ ಸಂಬಂಧವೂ ಹೆಚ್ಚು ಕಾಲ ಮುಂದುವರಿಯಲಿಲ್ಲ. 2012ರಲ್ಲಿ ಇಬ್ಬರೂ ವಿಚ್ಛೇದನ ಪಡೆದರು. ಇವರ ವಿಚ್ಛೇದನದ ಬಳಿಕ ಪವನ್ ಕಲ್ಯಾಣ್ ಅವರು ರೇಣು ದೇಸಾಯಿ ಅವರಿಗೆ ಬರೋಬ್ಬರಿ 40 ಕೋಟಿ ರೂಪಾಯಿ ಜೀವನಾಂಶ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ವತಃ ರೇಣು ದೇಸಾಯಿ ಅವರೇ ಸ್ಪಷ್ಟನೆ ನೀಡಿದ್ದರು.

ತಮ್ಮ ವಿಚ್ಛೇದನದ ಬಳಿಕ 40 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಸುದ್ದಿಯನ್ನು ರೇಣು ದೇಸಾಯಿ ನಿರಾಕರಿಸಿದ್ದರು. ಪವನ್ ಕಲ್ಯಾಣ್ ಅವರಿಂದ ತಮಗೆ ಯಾವುದೇ ಮಾಸಿಕ ಜೀವನಾಂಶ ಅಥವಾ ಪ್ರತ್ಯೇಕವಾಗಿ ಹಣ ದೊರೆತಿಲ್ಲ ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದರು. ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪವನ್ ಕಲ್ಯಾಣ್ ಅವರು ಒಂದು ಫ್ಲಾಟ್ ಅಥವಾ ಆಸ್ತಿಯನ್ನು ನೀಡಿದ್ದರು. ಅದನ್ನು ಬಳಿಕ ಮಾರಾಟ ಮಾಡಿ ಬೇರೆಡೆ ಹೂಡಿಕೆ ಮಾಡಿರುವುದಾಗಿ ಅವರು ವಿವರಿಸಿದ್ದರು. ಹೀಗಾಗಿ 40 ಕೋಟಿ ರೂಪಾಯಿ ಜೀವನಾಂಶ ಪಡೆದಿದ್ದಾರೆ ಎಂಬುದು ಸತ್ಯವಲ್ಲ ಎಂದು ರೇಣು ದೇಸಾಯಿ ಸ್ಪಷ್ಟಪಡಿಸಿದ್ದರು.

ಮೂರನೇ ಪತ್ನಿಗೂ ಡಿವೋರ್ಸ್‌

ಎರಡನೇ ಮದುವೆಯ ನಂತರ ಪವನ್ ಕಲ್ಯಾಣ್ ಅವರು ರಷ್ಯಾ ಮೂಲದ ಮಾಡೆಲ್ ಹಾಗೂ ನಟಿ ಅನ್ನಾ ಲೆಜ್ನೆವಾ ಅವರನ್ನು ಭೇಟಿಯಾದರು. 2011ರಲ್ಲಿ ಬಿಡುಗಡೆಯಾದ ‘ತೀನ್ ಮಾರ್’ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಇಬ್ಬರ ಪರಿಚಯವಾಗಿತ್ತು ಎನ್ನಲಾಗಿದೆ. ಪರಿಚಯ ಪ್ರೀತಿಗೆ ತಿರುಗಿ 2013ರ ಸೆಪ್ಟೆಂಬರ್‌ನಲ್ಲಿ ಇಬ್ಬರೂ ವಿವಾಹವಾದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮದುವೆಯ ನಂತರ ಅನ್ನಾ ಲೆಜ್ನೆವಾ ಅವರು ಅನ್ನಾ ಕೊನಿಡೇಲಾ ಎಂಬ ಹೆಸರಿನಿಂದಲೂ ಗುರುತಿಸಿಕೊಂಡಿದ್ದರು. ಸುಮಾರು 13 ವರ್ಷಗಳ ಕಾಲ ಒಟ್ಟಿಗೆ ಜೀವನ ನಡೆಸಿದ ಈ ಜೋಡಿ ಇದೀಗ ಬೇರೆಯಾಗುವ ನಿರ್ಧಾರ ಪ್ರಕಟಿಸಿದೆ.

ಪವನ್ ಕಲ್ಯಾಣ್ ಮತ್ತು ಅನ್ನಾ ಕೊನಿಡೇಲಾ ಅವರ ಡಿವ ಸುದ್ದಿ ನವೆಂಬರ್ 9, 2026ರಂದು ಅಧಿಕೃತವಾಗಿ ಹೊರಬಿದ್ದಿದೆ. ಇಬ್ಬರೂ ಜಂಟಿ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಪರಸ್ಪರ ಒಪ್ಪಿಗೆ ಹಾಗೂ ಗೌರವದೊಂದಿಗೆ ಬೇರೆಯಾಗಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಈ ವೈಯಕ್ತಿಕ ನಿರ್ಧಾರದ ಸಂದರ್ಭದಲ್ಲಿ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಆದರೆ ಪ್ರತ್ಯೇಕತೆಗೆ ನಿಖರವಾದ ಕಾರಣವೇನು ಎಂಬುದನ್ನು ಇಬ್ಬರೂ ಬಹಿರಂಗಪಡಿಸಿಲ್ಲ.
 

Add Zee News as a Preferred Source
TAGS:
Cinema