• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಡಾ. ವಿಷ್ಣುವರ್ಧನ್ 75ನೇ ಅಮೃತ ಮಹೋತ್ಸವ: ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ‘ದಾದಾ’ ನೆನಪಿನ ಸಂಭ್ರಮ

ಡಾ. ವಿಷ್ಣುವರ್ಧನ್ 75ನೇ ಅಮೃತ ಮಹೋತ್ಸವ: ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ‘ದಾದಾ’ ನೆನಪಿನ ಸಂಭ್ರಮ

ಡಾ.ವಿಷ್ಣುವರ್ಧನ್ ಅವರ 75ನೇ ಅಮೃತ ಮಹೋತ್ಸವವನ್ನ ಬೆಂಗಳೂರಿನ ಹೊಸಕೆರೆಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. 20 ಸಾವಿರಕ್ಕೂ ಹೆಚ್ಚು ಅಭಿಮಾನಿಗಳ ನಿರೀಕ್ಷೆಯೊಂದಿಗೆ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಮೆರವಣಿಗೆ, ಸಂಗೀತ, ಕಲಾ ಕಾರ್ಯಕ್ರಮ, ಗಣ್ಯರ ಸನ್ಮಾನ ಹಾಗೂ ಲೇಸರ್‌ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

Written ByPuttaraj K Alur
Published: Sep 27, 2026, 09:21 AM IST|Updated: Sep 27, 2026, 09:28 AM IST
joinshare
ಡಾ. ವಿಷ್ಣುವರ್ಧನ್ 75ನೇ ಅಮೃತ ಮಹೋತ್ಸವ: ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ‘ದಾದಾ’ ನೆನಪಿನ ಸಂಭ್ರಮ
Image Credit: Vishnuvardhan Birthday Celebration

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Dr Vishnuvardhan 75th Amrit Mahotsav: ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 75ನೇ ಅಮೃತ ಮಹೋತ್ಸವವನ್ನ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆದಿವೆ. ಹೊಸಕೆರೆಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಹಾಗೂ ಕಲಾ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದ್ದು, 20 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಡಾ. ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನ ಸ್ಮರಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು, ಕಲಾವಿದರು, ಅಭಿಮಾನಿಗಳು ಹಾಗೂ ಡಾ. ವಿಷ್ಣು ಸೇನಾ ಸಮಿತಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

1.5 ಕಿ.ಮೀ ಉದ್ದದ ಕನ್ನಡ ಧ್ವಜದೊಂದಿಗೆ ಮೆರವಣಿಗೆ

ಅಮೃತ ಮಹೋತ್ಸವದ ಕಾರ್ಯಕ್ರಮಗಳು ಬೆಳಗ್ಗೆ 6 ಗಂಟೆಗೆ ವಿಶೇಷ ಮೆರವಣಿಗೆಯೊಂದಿಗೆ ಆರಂಭವಾಗಲಿವೆ. ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನಂದಿ ಲಿಂಕ್ ಗ್ರೌಂಡ್‌ವರೆಗೆ ಭವ್ಯ ಮೆರವಣಿಗೆ ನಡೆಯಲಿದೆ. ಸುಮಾರು 1.5 ಕಿ.ಮೀ ಉದ್ದದ ಕನ್ನಡ ಧ್ವಜದೊಂದಿಗೆ ನಡೆಯಲಿರುವ ಈ ಮೆರವಣಿಗೆಯಲ್ಲಿ ಸುಮಾರು 2 ಸಾವಿರ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ. ನಟರು, ಕಲಾವಿದರು, ವಿಷ್ಣು ಸೇನಾ ಸಮಿತಿ ಕಾರ್ಯಕರ್ತರು ಸೇರಿದಂತೆ ಹಲವು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಷ್ಣುವರ್ಧನ್ ಅವರ ಕನ್ನಡಾಭಿಮಾನ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿದ ಸೇವೆಯನ್ನ ಸ್ಮರಿಸುವ ರೀತಿಯಲ್ಲಿ ಮೆರವಣಿಗೆಗೆ ವಿಶೇಷ ರೂಪ ನೀಡಲಾಗಿದೆ.

ಬೆಳಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ

ಬೆಳಗ್ಗೆ 9.30ಕ್ಕೆ ಅಮೃತ ಮಹೋತ್ಸವದ ಅಧಿಕೃತ ಉದ್ಘಾಟನಾ ಸಮಾರಂಭ ನಡೆಯಲಿದೆ. ಕನ್ನಡ ಚಿತ್ರರಂಗದ ಹಲವು ಹಿರಿಯರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಡಾ.ಶ್ರೀನಾಥ್, ಡಾ.ರಮೇಶ್ ಅರವಿಂದ್, ಶ್ರುತಿ, ಡಾ.ಜಯಮಾಲಾ, ಅವಿನಾಶ್, ಮಾಳವಿಕಾ ಅವಿನಾಶ್, ಎಸ್.ನಾರಾಯಣ್, ರಾಜೇಂದ್ರ ಸಿಂಗ್ ಬಾಬು, ಡಾ.ಸುಂದರರಾಜ್, ಅಭಿಜಿತ್, ಸಿಹಿಕಹಿ ಚಂದ್ರು, ಶ್ರೀಮುರಳಿ, ರಮೇಶ್ ಸೇರಿದಂತೆ ಹಲವು ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಬೆಳಗ್ಗೆ 11 ಗಂಟೆಯವರೆಗೆ ರಾಜೇಶ್ ಕೃಷ್ಣನ್ ನೇತೃತ್ವದಲ್ಲಿ ‘ಸಂಗೀತ ರಸ ಮಂಜರಿ’ ಕಾರ್ಯಕ್ರಮ ನಡೆಯಲಿದೆ. ವಿಷ್ಣುವರ್ಧನ್ ಅಭಿನಯದ ಸಿನಿಮಾಗಳ ಹಾಡುಗಳು ಹಾಗೂ ಅವರೊಂದಿಗೆ ಬೆಸೆದುಕೊಂಡಿರುವ ಸಂಗೀತ ನೆನಪುಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿವೆ.

‘ಸಂಪಾದಕರ ಕಣ್ಣಲ್ಲಿ ವಿಷ್ಣುವರ್ಧನ್’ ವಿಶೇಷ ಸಂವಾದ

ಸಂಗೀತ ಕಾರ್ಯಕ್ರಮದ ಬಳಿಕ ‘ಸಂಪಾದಕರ ಕಣ್ಣಲ್ಲಿ ವಿಷ್ಣುವರ್ಧನ್’ ಎಂಬ ವಿಶೇಷ ಸಂವಾದ ಆಯೋಜಿಸಲಾಗಿದೆ. ವಿಷ್ಣುವರ್ಧನ್ ಅವರ ಸಿನಿಮಾ ಪಯಣ, ವ್ಯಕ್ತಿತ್ವ, ಕಲಾ ಸೇವೆ ಮತ್ತು ಕನ್ನಡ ಚಿತ್ರರಂಗದ ಮೇಲಿನ ಪ್ರಭಾವದ ಕುರಿತು ಚರ್ಚೆ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ 75 ಕಲಾವಿದರಿಗೆ ಗೌರವ ಸಲ್ಲಿಸಲಾಗುತ್ತದೆ. ವಿಷ್ಣುವರ್ಧನ್ ಅವರ 75ನೇ ಅಮೃತ ಮಹೋತ್ಸವದ ಅಂಗವಾಗಿ ಈ ವಿಶೇಷ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಜೆ ಪ್ರಮುಖ ವೇದಿಕೆ ಕಾರ್ಯಕ್ರಮ

ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಪ್ರಮುಖ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಈ ವೇಳೆ ಕನ್ನಡ ಚಿತ್ರರಂಗದ ಹಲವು ಪ್ರಮುಖ ನಟರು ಹಾಗೂ ಕಲಾವಿದರು ಭಾಗವಹಿಸಲಿದ್ದಾರೆ. ಶಿವರಾಜ್‌ಕುಮಾರ್, ರವಿಚಂದ್ರನ್, ಸುದೀಪ್, ದುನಿಯಾ ವಿಜಯ್, ಗಣೇಶ್, ನೀನಾಸಂ ಸತೀಶ್, ನೆನಪಿರಲಿ ಪ್ರೇಮ್, ಶ್ರುತಿ, ಜಯಮಾಲಾ, ಶ್ರೀನಗರ ಕಿಟ್ಟಿ, ರಚಿತಾ ರಾಮ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ರಾತ್ರಿ ಲೇಸರ್ ಶೋ, ‘ದಾದಾ DJ’ ವಿಶೇಷ ನೃತ್ಯ ರೂಪಕ

ಸಂಜೆ 7 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿ ಮುಂದುವರಿಯಲಿದೆ. ವಸಿಷ್ಠ ಸಿಂಹ, ನವೀನ್ ಕೃಷ್ಣ, ಕಾರುಣ್ಯ ರಾಮ್, ಅಂಕುಶ್, ಏಕಲವ್ಯ ಸೇರಿದಂತೆ ಹಲವು ಕಲಾವಿದರು ವಿವಿಧ ಕಲಾ ಪ್ರದರ್ಶನಗಳನ್ನ ನೀಡಲಿದ್ದಾರೆ. ರಾತ್ರಿ 10 ಗಂಟೆಗೆ ವಿಶೇಷ ಲೇಸರ್ ಶೋ ಹಾಗೂ ‘ದಾದಾ DJ’ ನೃತ್ಯ ರೂಪಕ ಆಯೋಜಿಸಲಾಗಿದೆ. ವಿಷ್ಣುವರ್ಧನ್ ಅವರ ಜನಪ್ರಿಯ ಗೀತೆಗಳಿಗೆ ಅಭಿಮಾನಿಗಳು ಹೆಜ್ಜೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅದ್ಧೂರಿ ತೆರೆ ಬೀಳಲಿದೆ.

20 ಸಾವಿರಕ್ಕೂ ಹೆಚ್ಚು ಅಭಿಮಾನಿಗಳ ನಿರೀಕ್ಷೆ

ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ 20 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಭಾರೀ ಜನಸಂದಣಿ ಕಂಡುಬರುವ ಸಾಧ್ಯತೆಯಿದೆ. ಕಾರ್ಯಕ್ರಮದ ಸಂಪೂರ್ಣ ನೇತೃತ್ವವನ್ನ ಡಾ.ವಿಷ್ಣು ಸೇನಾ ಸಮಿತಿ ವಹಿಸಿಕೊಂಡಿದೆ. ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಈ ಅಮೃತ ಮಹೋತ್ಸವ ನಡೆಯಲಿದೆ. ವಿಷ್ಣುವರ್ಧನ್ ಅವರ ಸಿನಿಮಾ ಬದುಕು, ಕನ್ನಡ ಪ್ರೀತಿ ಮತ್ತು ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನ ಸ್ಮರಿಸುವ ಈ ಅಮೃತ ಮಹೋತ್ಸವವು ಅಭಿಮಾನಿಗಳಿಗೆ ವಿಶೇಷ ಅನುಭವ ನೀಡುವ ನಿರೀಕ್ಷೆಯಿದೆ.

Add Zee News as a Preferred Source
TAGS:
Cinema
Kannada News