• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /‘ಲಂಬೋದರ 2.0’ ಚಿತ್ರದ ಗ್ರ್ಯಾಂಡ್ ರೆಡ್ ಕಾರ್ಪೆಟ್ ಪ್ರದರ್ಶನ; ಸಿನಿಮಾ ತಾರೆಯರು, ಜಾಗತಿಕ ಉದ್ಯಮಿಗಳ ದಂಡು ಭಾಗಿ!

‘ಲಂಬೋದರ 2.0’ ಚಿತ್ರದ ಗ್ರ್ಯಾಂಡ್ ರೆಡ್ ಕಾರ್ಪೆಟ್ ಪ್ರದರ್ಶನ; ಸಿನಿಮಾ ತಾರೆಯರು, ಜಾಗತಿಕ ಉದ್ಯಮಿಗಳ ದಂಡು ಭಾಗಿ!

ಇವರೊಂದಿಗೆ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಕೂಡ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಂಡು ಅನಿಲ್ ಶೆಟ್ಟಿ ಹಾಗೂ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೆ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಆಗಮಿಸಿ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದರು.

Written ByChetana Devarmani
Published: Nov 15, 2026, 13:47 IST|Updated: Nov 15, 2026, 13:48 IST
joinshare
‘ಲಂಬೋದರ 2.0’ ಚಿತ್ರದ ಗ್ರ್ಯಾಂಡ್ ರೆಡ್ ಕಾರ್ಪೆಟ್ ಪ್ರದರ್ಶನ; ಸಿನಿಮಾ ತಾರೆಯರು, ಜಾಗತಿಕ ಉದ್ಯಮಿಗಳ ದಂಡು ಭಾಗಿ!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಅನಿಲ್ ಶೆಟ್ಟಿ ನಿರ್ಮಿಸಿ, ಪ್ರಮುಖ ಪಾತ್ರದಲ್ಲಿ ನಟಿಸಿರುವ ಹಾಗೂ ‘ಸಿಂಪಲ್’ ಸುನಿ ನಿರ್ದೇಶನದ ಬಹುನಿರೀಕ್ಷಿತ ‘ಲಂಬೋದರ 2.0’ ಸಿನಿಮಾದ ಭವ್ಯ ರೆಡ್ ಕಾರ್ಪೆಟ್ ಪ್ರದರ್ಶನ ನಗರದ ಬ್ರಿಗೇಡ್ ರಸ್ತೆಯಲ್ಲಿರುವ ಫೋರಮ್ ರೆಕ್ಸ್ ವಾಕ್‌ನ ಪಿವಿಆರ್ ಡೈರೆಕ್ಟರ್ಸ್ ಕಟ್‌ನಲ್ಲಿ ಅತ್ಯಂತ ವೈಭವದಿಂದ ನಡೆಯಿತು. ವಿಶೇಷವೆಂದರೆ ಈ ಸಮಾರಂಭಕ್ಕೆ ಕೇವಲ ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ತಾರೆಯರು ಮಾತ್ರವಲ್ಲದೆ, ದೇಶ-ವಿದೇಶಗಳ ಖ್ಯಾತ ಉದ್ಯಮಿಗಳು ಹಾಗೂ ಗಣ್ಯರು ಆಗಮಿಸಿ ಚಿತ್ರತಂಡಕ್ಕೆ ಸಾಥ್ ನೀಡಿದ್ದು ಕಾರ್ಯಕ್ರಮಕ್ಕೆ ಮೆರುಗು ನೀಡಿತು.

ಈ ಚಿತ್ರದ ಪ್ರಮುಖ ಆಕರ್ಷಣೆಯಾಗಿರುವ ಬಾಲಿವುಡ್ ನಟ ಕುನಾಲ್ ಕಪೂರ್ ಅವರು ವಿಶೇಷವಾಗಿ ಬೆಂಗಳೂರಿಗೆ ಆಗಮಿಸಿ ಪ್ರದರ್ಶನದಲ್ಲಿ ಪಾಲ್ಗೊಂಡರು. ಚಿತ್ರದಲ್ಲಿ ಅವರು ‘ರಾಘವ್ ಕಶ್ಯಪ್’ ಎಂಬ ಖಳನಾಯಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇವರೊಂದಿಗೆ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಕೂಡ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಂಡು ಅನಿಲ್ ಶೆಟ್ಟಿ ಹಾಗೂ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೆ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಆಗಮಿಸಿ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದರು.

ಸ್ಯಾಂಡಲ್‌ವುಡ್ ತಾರೆಯರಾದ ಶ್ರೀಮುರಳಿ, ನಿಶ್ವಿಕಾ ನಾಯ್ಡು, ಶಾನ್ವಿ ಶ್ರೀವಾಸ್ತವ, ಮೇಘನಾ ಗಾಂವ್ಕರ್, ಶುಭ್ರಾ ಅಯ್ಯಪ್ಪ, ಐಶ್ವರ್ಯಾ ನಾಗ್, ಕಾರ್ತಿಕ್ ಮಹೇಶ್, ಕಿಶನ್ ಬಿಳಗಲಿ, ನಿರೂಪಕಿ ಚೈತ್ರಾ ವಾಸುದೇವನ್ ಹಾಗೂ ರಾಜಕಾರಣಿ-ಉದ್ಯಮಿ ಮೊಹಮ್ಮದ್ ನಲಪಾಡ್ ಸೇರಿದಂತೆ ಅನೇಕರು ಈ ವಿಶೇಷ ಪ್ರದರ್ಶನವನ್ನು ವೀಕ್ಷಿಸಿದರು.

ಮತ್ತೊಂದೆಡೆ, ಕಾರ್ಪೊರೇಟ್ ಮತ್ತು ಜಾಗತಿಕ ಮಟ್ಟದ ಗಣ್ಯರ ಉಪಸ್ಥಿತಿ ಈ ಸಿನಿಮಾ ಸಮಾರಂಭದ ವಿಶೇಷತೆಯಾಗಿತ್ತು. ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ವಿಪ್ರೋ ಅಧ್ಯಕ್ಷ ರಿಷದ್ ಪ್ರೇಮ್‌ಜಿ, ಲಂಡನ್ ಮೂಲದ ಇಂಡಿಯಾ ಗ್ಲೋಬಲ್ ಫೋರಮ್ ಸ್ಥಾಪಕ ಪ್ರೊ. ಮನೋಜ್ ಲಾಡ್ವಾ ಹಾಗೂ ಬೆಂಗಳೂರಿನಲ್ಲಿರುವ ಇಸ್ರೇಲ್ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್‌ಮನ್ ಅವರು ಆಗಮಿಸಿ ಅನಿಲ್ ಶೆಟ್ಟಿ ಅವರ ಪ್ರಯತ್ನಕ್ಕೆ ಬೆನ್ನುತಟ್ಟಿದರು.

ಮಹಾವೀರ್ ಜೈನ್ ಫಿಲ್ಮ್ಸ್ ಅರ್ಪಿಸಿರುವ ಈ ಚಿತ್ರವನ್ನು ‘ಮಾಸ್ ಪ್ರೊಡಕ್ಷನ್’ ಬ್ಯಾನರ್ ಅಡಿಯಲ್ಲಿ ಅನಿಲ್ ಶೆಟ್ಟಿ ನಿರ್ಮಿಸಿದ್ದಾರೆ. ಕೃತಕ ಬುದ್ಧಿಮತ್ತೆ, ಅಲ್ಗಾರಿದಮ್ ಮತ್ತು ಡಿಜಿಟಲ್ ತಂತ್ರಜ್ಞಾನವು ಇಂದಿನ ಮನುಷ್ಯನ ದೈನಂದಿನ ಬದುಕಿನ ಮೇಲೆ ಬೀರುತ್ತಿರುವ ಪರಿಣಾಮಗಳ ಸುತ್ತ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ಚಿತ್ರದಲ್ಲಿ ಅನಿಲ್ ಶೆಟ್ಟಿ, ಕುನಾಲ್ ಕಪೂರ್, ಸಾಚಿ ಬಿಂದ್ರಾ ಮುಖ್ಯ ಭೂಮಿಕೆಯಲ್ಲಿದ್ದು, ‘ಜಿಯಾ’ ಎಂಬ ನೈಜ ಹ್ಯೂಮನಾಯ್ಡ್ ರೋಬೋಟ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ಮತ್ತೊಂದು ವಿಶೇಷ. ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಂಡಿರುವ ‘ಲಂಬೋದರ 2.0’ ತನ್ನ ವಿಭಿನ್ನ ಕಥಾವಸ್ತುವಿನ ಮೂಲಕ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

 

Add Zee News as a Preferred Source
TAGS:
Sandalwood