• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಗುಬ್ಬಿ ವೀರಣ್ಣ ಮೊಮ್ಮಗಳು, ಹಿರಿಯ ನಟಿ ಸುಂದರಶ್ರೀ ಆರೋಗ್ಯ ಸ್ಥಿತಿ ಗಂಭೀರ : ಆರ್ಥಿಕ ನೆರವಿಗೆ ಮನವಿ

ಗುಬ್ಬಿ ವೀರಣ್ಣ ಮೊಮ್ಮಗಳು, ಹಿರಿಯ ನಟಿ ಸುಂದರಶ್ರೀ ಆರೋಗ್ಯ ಸ್ಥಿತಿ ಗಂಭೀರ : ಆರ್ಥಿಕ ನೆರವಿಗೆ ಮನವಿ

ರಂಗಭೂಮಿ ದಂತಕಥೆ ಗುಬ್ಬಿ ವೀರಣ್ಣ ಅವರ ಮೊಮ್ಮಗಳಾದ ನಟಿ ಸುಂದರಶ್ರೀ ಅವರು, ಕಳೆದ ಎರಡು-ಮೂರು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಪ್ರಸ್ತುತ ತುರ್ತು ಆರ್ಥಿಕ ಹಾಗೂ ವೈದ್ಯಕೀಯ ನೆರವಿನ ಅಗತ್ಯವಿದ್ದು, ಸಹಕಾರವನ್ನು ಎದುರುನೋಡುತ್ತಿದ್ದಾರೆ.

Reported ByKrishna NKEdited ByKrishna NK
Published: Sep 29, 2026, 08:15 PM IST|Updated: Sep 29, 2026, 08:17 PM IST
joinshare
ಗುಬ್ಬಿ ವೀರಣ್ಣ ಮೊಮ್ಮಗಳು, ಹಿರಿಯ ನಟಿ ಸುಂದರಶ್ರೀ ಆರೋಗ್ಯ ಸ್ಥಿತಿ ಗಂಭೀರ : ಆರ್ಥಿಕ ನೆರವಿಗೆ ಮನವಿ
Image Credit: Actress Sundarashree

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಕನ್ನಡ ರಂಗಭೂಮಿ ಹಾಗೂ ಚಿತ್ರರಂಗದ ದಂತಕಥೆ ನಟರತ್ನ ರಂಗಭೂಮಿ ದಿಗ್ಗಜ ಗುಬ್ಬಿ ವೀರಣ್ಣ ಅವರ ಮೊಮ್ಮಗಳು, ಹಿರಿಯ ನಟಿ ಸುಂದರಶ್ರೀ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕಳೆದ ಎರಡು-ಮೂರು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ತಮ್ಮ ವೈದ್ಯಕೀಯ ವೆಚ್ಚಕ್ಕೆ ನೆರವಾಗುವಂತೆ ಚಿತ್ರರಂಗ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸುಂದರಶ್ರೀ ಅವರು ಕನ್ನಡ ಚಿತ್ರರಂಗ ಹಾಗೂ ಧಾರಾವಾಹಿಗಳಲ್ಲಿ ಪ್ರಮುಖ ಪೋಷಕ ಪಾತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದವರು. ಆದರೆ, ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. "ಕಳೆದ ಎರಡು ಮೂರು ತಿಂಗಳಿಂದ ನನ್ನ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸ ವೆಚ್ಚ ಹೆಚ್ಚಾಗುತ್ತಿದೆ. ದಯವಿಟ್ಟು ನನಗೆ ಸಹಾಯ ಮಾಡಿ" ಎಂದು ನಟಿ ಸುಂದರಶ್ರೀ ಅವರು ವಿನಂತಿಸಿದ್ದಾರೆ.

ರಂಗಭೂಮಿಯ ದೊಡ್ಡ ಪರಂಪರೆಯಿಂದ ಬಂದ ಸುಂದರಶ್ರೀ ಅವರಿಗೆ ಈಗ ತುರ್ತು ವೈದ್ಯಕೀಯ ಹಾಗೂ ಆರ್ಥಿಕ ನೆರವಿನ ಅಗತ್ಯವಿದ್ದು, ಚಿತ್ರರಂಗದ ಕಲಾವಿದರು, ಸಂಘ-ಸಂಸ್ಥೆಗಳು ಮತ್ತು ಸರ್ಕಾರದ ಕಡೆಯಿಂದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

Add Zee News as a Preferred Source
TAGS:
Kannada News