• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಈ ಖ್ಯಾತ ನಟಿ ಯಾರು ನೆನಪಿದೆಯೇ? ಪುನೀತ್‌ ಜೊತೆ ನಟಿಸಿದ ಬ್ಯೂಟಿ ದಿಢೀರ್‌ ನಾಪತ್ತೆ ಆಗಿದ್ದೆಲ್ಲಿ!

ಈ ಖ್ಯಾತ ನಟಿ ಯಾರು ನೆನಪಿದೆಯೇ? ಪುನೀತ್‌ ಜೊತೆ ನಟಿಸಿದ ಬ್ಯೂಟಿ ದಿಢೀರ್‌ ನಾಪತ್ತೆ ಆಗಿದ್ದೆಲ್ಲಿ!

ಹಲವು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವ ಅನು ಮೆಹ್ತಾ ಅವರ ಇಂದಿನ ಜೀವನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಅವರು ದಿಢೀರ್ ಚಿತ್ರರಂಗದಿಂದ ದೂರವಾಗಿದ್ದು ಏಕೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

Written ByChetana Devarmani
Published: Nov 25, 2026, 07:29 IST|Updated: Nov 25, 2026, 07:30 IST
joinshare
ಈ ಖ್ಯಾತ ನಟಿ ಯಾರು ನೆನಪಿದೆಯೇ? ಪುನೀತ್‌ ಜೊತೆ ನಟಿಸಿದ ಬ್ಯೂಟಿ ದಿಢೀರ್‌ ನಾಪತ್ತೆ ಆಗಿದ್ದೆಲ್ಲಿ!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆಯಲ್ಲಿ ಕುದಿಸಿ ಹಚ್ಚಿ... ಒಂದೇ ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸುತ್ತೆ !

ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆಯಲ್ಲಿ ಕುದಿಸಿ ಹಚ್ಚಿ... ಒಂದೇ ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸುತ್ತೆ !

2

ಈ ಖ್ಯಾತ ನಟಿ ಯಾರು ನೆನಪಿದೆಯೇ? ಪುನೀತ್‌ ಜೊತೆ ನಟಿಸಿದ ಬ್ಯೂಟಿ ದಿಢೀರ್‌ ನಾಪತ್ತೆ ಆಗಿದ್ದೆಲ್ಲಿ!

3

ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್‌ ನೋಟಿಸ್ ಬಂದರೆ ಏನು ಮಾಡಬೇಕು? ಚಿನ್ನ ಹರಾಜಾಗುವುದನ್ನು ತಪ್ಪಿಸಲು ಇದೊಂದೇ ದಾರಿ

4

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಅಪರಿಚಿತರಿಂದಲೇ ಸಹಾಯ, ಕೆಲವರಿಗೆ ಅನಿರೀಕ್ಷಿತ ಬೇಸರ!

5

ಭೀಕರ ರಸ್ತೆ ಅಪಘಾತ; ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Anu Mehta Life Story : ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಕೆಲವೇ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ನಟಿ ಅನು ಮೆಹ್ತಾ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ನೆನಪಿರಲಿ ಪ್ರೇಮ್ ಅವರಂತಹ ಜನಪ್ರಿಯ ನಟರ ಜೊತೆ ತೆರೆ ಹಂಚಿಕೊಂಡಿದ್ದ ಈ ನಟಿ, 2008ರಲ್ಲಿ ಬಿಡುಗಡೆಯಾದ ‘ಹೊಂಗನಸು’ ಚಿತ್ರದ ಬಳಿಕ ಚಿತ್ರರಂಗದಿಂದ ದೂರವಾಗಿದ್ದಾರೆ. ಹಲವು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವ ಅನು ಮೆಹ್ತಾ ಅವರ ಇಂದಿನ ಜೀವನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಅವರು ದಿಢೀರ್ ಚಿತ್ರರಂಗದಿಂದ ದೂರವಾಗಿದ್ದು ಏಕೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಅನು ಮೆಹ್ತಾ ಅವರ ನಿಜವಾದ ಹೆಸರು ಅನುರಾಧಾ ಮೆಹ್ತಾ. ಆಂಧ್ರಪ್ರದೇಶ ಮೂಲದವರಾದ ಅವರು ದೆಹಲಿಯಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದರು. ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರಿಗೆ ಅನಿರೀಕ್ಷಿತವಾಗಿ ಸಿನಿಮಾ ಅವಕಾಶಗಳು ಒಲಿದುಬಂದಿದ್ದವು. 2004ರಲ್ಲಿ ಬಿಡುಗಡೆಯಾದ ತೆಲುಗಿನ ‘ಆರ್ಯ’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಪ್ರವೇಶಿಸಿದರು. ಸುಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ಶಿವ ಬಾಲಾಜಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಅನು ಮೆಹ್ತಾ ನಾಯಕಿಯಾಗಿ ನಟಿಸಿದ್ದರು. ಚಿತ್ರದಲ್ಲಿನ ಹಾಡುಗಳು, ಪ್ರೇಮಕಥೆ ಮತ್ತು ಅಲ್ಲು ಅರ್ಜುನ್ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನಿಮಾ ಅಲ್ಲು ಅರ್ಜುನ್ ಅವರ ವೃತ್ತಿಜೀವನಕ್ಕೆ ಮಹತ್ವದ ತಿರುವು ನೀಡಿತು. ಬಳಿಕ ಈ ಚಿತ್ರವನ್ನು ಹಲವು ಭಾಷೆಗಳಲ್ಲಿ ರಿಮೇಕ್ ಮಾಡಲಾಯಿತು.

‘ಆರ್ಯ’ ಚಿತ್ರದ ಯಶಸ್ಸಿನ ನಂತರ ಅನು ಮೆಹ್ತಾ ಅವರಿಗೆ ತೆಲುಗು ಚಿತ್ರರಂಗದಲ್ಲಿ ಮತ್ತಷ್ಟು ಅವಕಾಶಗಳು ದೊರೆತವು. ಅವರ ಎರಡನೇ ಸಿನಿಮಾ ‘ನುವ್ವಂಟೆ ನಾಕಿಷ್ಟಂ’. 2005ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಆರ್ಯನ್ ರಾಜೇಶ್ ನಾಯಕನಾಗಿ ನಟಿಸಿದ್ದರು. ಕನ್ನಡದ ದರ್ಶನ್ ಅಭಿನಯದ ‘ನೀನಂದ್ರೆ ಇಷ್ಟ’ ಚಿತ್ರದ ಕಥೆಯನ್ನು ಆಧರಿಸಿ ಈ ಸಿನಿಮಾ ನಿರ್ಮಿಸಲಾಗಿತ್ತು. ಈ ಚಿತ್ರದ ಮೂಲಕವೂ ಅನು ಪ್ರೇಕ್ಷಕರ ಗಮನ ಸೆಳೆದಿದ್ದರು.

ನಂತರ ಪುನೀತ್ ರಾಜ್‌ಕುಮಾರ್ ಅಭಿನಯದ ‘ಅಜಯ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು. ಇದು ತೆಲುಗಿನ ಮಹೇಶ್ ಬಾಬು ಮತ್ತು ಭೂಮಿಕಾ ಚಾವ್ಲಾ ಅಭಿನಯದ ‘ಒಕ್ಕಡು’ ಚಿತ್ರದ ರಿಮೇಕ್ ಆಗಿತ್ತು. ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ನಾಯಕನಾಗಿ ನಟಿಸಿದ್ದರೆ, ಅನು ಮೆಹ್ತಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಪ್ರಕಾಶ್ ರಾಜ್, ಶ್ರೀನಾಥ್ ಮತ್ತು ದೊಡ್ಡಣ್ಣ ಸೇರಿದಂತೆ ಹಲವು ಹಿರಿಯ ಕಲಾವಿದರು ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ಈ ಸಿನಿಮಾದ ಯಶಸ್ಸಿನಿಂದ ಅನು ಕನ್ನಡ ಪ್ರೇಕ್ಷಕರಿಗೂ ಪರಿಚಿತರಾದರು. ಚಿತ್ರದ ಹಾಡುಗಳು ಕೂಡ ಜನಪ್ರಿಯತೆ ಗಳಿಸಿದ್ದವು.

ಕನ್ನಡದಲ್ಲಿ ಗುರುತಿಸಿಕೊಂಡ ಬಳಿಕ ಅನು ಮೆಹ್ತಾ ತೆಲುಗಿನ ‘ಮಹಾರಾಜಶ್ರೀ’ ಮತ್ತು ‘ವೇದುಕ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದರು. ನಂತರ ನೆನಪಿರಲಿ ಪ್ರೇಮ್ ನಾಯಕನಾಗಿ ಅಭಿನಯಿಸಿದ್ದ ‘ಹೊಂಗನಸು’ ಚಿತ್ರದಲ್ಲಿ ಕಾಣಿಸಿಕೊಂಡರು. ಈ ಸಿನಿಮಾದಲ್ಲಿ ಹಿರಿಯ ನಟ ಅನಂತ್ ನಾಗ್ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಚಿತ್ರಕ್ಕೆ ಸಂಗೀತ ನೀಡಿದ್ದರು. ಆದರೆ ಬಿಡುಗಡೆಯಾದ ಸಮಯದಲ್ಲಿ ನಿರೀಕ್ಷಿತ ಯಶಸ್ಸು ಪಡೆಯಲು ಚಿತ್ರಕ್ಕೆ ಸಾಧ್ಯವಾಗಲಿಲ್ಲ. ವಿಶೇಷವಾಗಿ ‘ಗಜ’ ಮತ್ತು ‘ಗಾಳಿಪಟ’ದಂತಹ ಯಶಸ್ವಿ ಸಿನಿಮಾಗಳ ನಂತರ ತೆರೆಕಂಡಿದ್ದರಿಂದ ‘ಹೊಂಗನಸು’ ಚಿತ್ರಕ್ಕೆ ಹೆಚ್ಚಿನ ಪ್ರೇಕ್ಷಕರನ್ನು ಸೆಳೆಯಲು ಸಾಧ್ಯವಾಗಲಿಲ್ಲ.

ಚೆನ್ನೈ ರೆಸಾರ್ಟ್ ವಿವಾದದ ಬಳಿಕ ಏನಾಯಿತು?

ಅನು ಮೆಹ್ತಾ ಅವರ ಚಿತ್ರರಂಗದ ಬದುಕಿನ ಜೊತೆಗೆ ಚೆನ್ನೈನ ರೆಸಾರ್ಟ್‌ನಲ್ಲಿ ನಡೆದಿತ್ತು ಎನ್ನಲಾದ ಘಟನೆಯೂ ಆಗ ಸುದ್ದಿಯಾಗಿತ್ತು. ಸ್ನೇಹಿತರೊಂದಿಗೆ ರೆಸಾರ್ಟ್‌ಗೆ ತೆರಳಿದ್ದ ಸಂದರ್ಭದಲ್ಲಿ ಮದ್ಯಪಾನದ ಬಳಿಕ ರೆಸಾರ್ಟ್ ಸಿಬ್ಬಂದಿಯೊಂದಿಗೆ ಜಗಳ ನಡೆದಿತ್ತು ಎಂಬ ವರದಿಗಳು ಹರಿದಾಡಿದ್ದವು. ಈ ಘಟನೆಯ ಸಂಬಂಧ ರೆಸಾರ್ಟ್ ಮ್ಯಾನೇಜರ್ ಸ್ನೇಹಿತರ ವಿರುದ್ಧ ದೂರು ದಾಖಲಿಸಿದ್ದರು ಎನ್ನಲಾಗಿದೆ. ಈ ವಿವಾದದ ಬಳಿಕ ಅನು ಮೆಹ್ತಾ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ ಎಂಬ ಚರ್ಚೆ ಇದೆ.

ಆದರೆ ಈ ಘಟನೆಗೂ ಅವರು ಚಿತ್ರರಂಗದಿಂದ ದೂರವಾದ ನಿರ್ಧಾರಕ್ಕೂ ನೇರ ಸಂಬಂಧವಿದೆ ಎಂಬುದಕ್ಕೆ ಸ್ಪಷ್ಟವಾದ ಮಾಹಿತಿ ಲಭ್ಯವಿಲ್ಲ. ಪ್ರಸ್ತುತ ಅನು ಮೆಹ್ತಾ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಮತ್ತು ಮತ್ತೆ ಸಿನಿಮಾಗಳಲ್ಲಿ ನಟಿಸುವ ಆಸಕ್ತಿ ಹೊಂದಿದ್ದಾರೆಯೇ ಎಂಬ ಬಗ್ಗೆ ಅಧಿಕೃತ ಮಾಹಿತಿ ಇಲ್ಲ.

ಒಟ್ಟಿನಲ್ಲಿ, ‘ಆರ್ಯ’ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಗಮನ ಸೆಳೆದು, ಪುನೀತ್ ರಾಜ್‌ಕುಮಾರ್ ಜೊತೆ ‘ಅಜಯ್’ ಚಿತ್ರದಲ್ಲಿ ನಟಿಸಿ ಕನ್ನಡಿಗರಿಗೂ ಪರಿಚಿತರಾಗಿದ್ದ ಅನು ಮೆಹ್ತಾ ಅವರ ಸಿನಿಮಾ ಪಯಣ ಅಲ್ಪಾವಧಿಯಲ್ಲೇ ಅಂತ್ಯಗೊಂಡಿದೆ. ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿರುವ ಅವರ ಬಗ್ಗೆ ಈಗಲೂ ಅಭಿಮಾನಿಗಳಲ್ಲಿ ಕುತೂಹಲ ಮುಂದುವರಿದಿದೆ.

Add Zee News as a Preferred Source
TAGS:
Sandalwood