• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಖ್ಯಾತ ನಟಿಯ ಮನೆ ಮೇಲೆ ಐಟಿ ದಾಳಿ

ಖ್ಯಾತ ನಟಿಯ ಮನೆ ಮೇಲೆ ಐಟಿ ದಾಳಿ

Bollywood actress: ಚಿತ್ರರಂಗದ ಸ್ಟಾರ್‌ ನಟಿಯ ಮನೆಯ ಮೇಲೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಹಿನ್ನಲೆ ಏನು ಅಂತಾ ತಿಳಿಯಲೂ ಈ ಸ್ಟೋರಿ ಓದಿ.

Written ByRamya. R. Gowda
Published: Sep 28, 2026, 04:13 PM IST|Updated: Sep 28, 2026, 04:22 PM IST
joinshare
ಖ್ಯಾತ ನಟಿಯ ಮನೆ ಮೇಲೆ ಐಟಿ ದಾಳಿ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Bollywood actress: ಚಿತ್ರರಂಗದ ಸ್ಟಾರ್‌ ನಟಿಯ ಮನೆಯ ಮೇಲೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಹಿನ್ನಲೆ ಏನು ಅಂತಾ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಹಾಗೂ ಹಿರಿಯ ನಿರ್ಮಾಪಕ ವಶು ಭಗ್ನಾನಿ ಕುಟುಂಬಕ್ಕೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ತೆರಿಗೆ ವಂಚನೆ ಮತ್ತು ಹಣಕಾಸಿನ ಅಕ್ರಮಗಳ ಶಂಕೆ ಹಿನ್ನೆಲೆಯಲ್ಲಿ ಮುಂಬೈ ಐಟಿ ಇಲಾಖೆ ಹಲವು ಕಡೆ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿದೆ. ಅಷ್ಟಕ್ಕೂ ಈ ರೈಡ್‌ಗೆ ಕಾರಣವೇನು? ವಿದೇಶಕ್ಕೆ ಹಣ ವರ್ಗಾವಣೆಯ ಆರೋಪದ ಹಿಂದಿನ ಸತ್ಯವೇನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ಸೆಪ್ಟೆಂಬರ್ 28, 2026ರಂದು ಮುಂಬೈ ಆದಾಯ ತೆರಿಗೆ ಇಲಾಖೆ ಮಹತ್ವದ ಶೋಧ ಕಾರ್ಯಾಚರಣೆ ನಡೆಸಿದೆ. ನಟಿ ರಾಕುಲ್ ಪ್ರೀತ್ ಸಿಂಗ್, ಅವರ ಮಾವ ಹಾಗೂ ಹಿರಿಯ ಚಿತ್ರ ನಿರ್ಮಾಪಕ ವಶು ಭಗ್ನಾನಿ ಮತ್ತು ಪನೋರಮಾ ಸ್ಟುಡಿಯೋಸ್‌ಗೆ ಸಂಬಂಧಿಸಿದ ಸುಮಾರು 12 ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

 ಚಿತ್ರರಂಗದ ಚಟುವಟಿಕೆಗಳ ಮೂಲಕ ತೆರಿಗೆ ವಂಚನೆ ಹಾಗೂ ಹಣಕಾಸಿನ ಅಕ್ರಮ ನಡೆದಿದೆ ಎಂಬ ಶಂಕೆ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ. ಚಿತ್ರೀಕರಣ, ವಿದೇಶಿ ವಿತರಣೆ ಮತ್ತು ನಿರ್ಮಾಣದ ಹೆಸರಿನಲ್ಲಿ ದೊಡ್ಡ ಪ್ರಮಾಣದ ಹಣವನ್ನು ವಿದೇಶಗಳಿಗೆ ವರ್ಗಾಯಿಸಲಾಗಿದೆ ಎಂಬ ಮಾಹಿತಿ ಇಲಾಖೆಗೆ ಲಭ್ಯವಾಗಿತ್ತು ಎನ್ನಲಾಗಿದೆ.

ಇದೇ ಹಿನ್ನೆಲೆಯಲ್ಲಿ ಮುಂಬೈ ಐಟಿ ಇಲಾಖೆಯ ಹಲವು ತಂಡಗಳು ವಿವಿಧ ಕಚೇರಿಗಳು ಹಾಗೂ ಸಂಬಂಧಿತ ಆವರಣಗಳಲ್ಲಿ ದಾಖಲೆಗಳು ಮತ್ತು ಹಣಕಾಸಿನ ವ್ಯವಹಾರಗಳನ್ನು ಪರಿಶೀಲಿಸುತ್ತಿವೆ ಎಂದು ವರದಿಯಾಗಿದೆ. ಆದರೆ, ಈ ಆರೋಪಗಳ ಕುರಿತು ಅಧಿಕೃತವಾಗಿ ಯಾವುದೇ ಅಂತಿಮ ನಿರ್ಣಯ ಹೊರಬಿದ್ದಿಲ್ಲ. ಪ್ರಸ್ತುತ ಆದಾಯ ತೆರಿಗೆ ಇಲಾಖೆಯ ತನಿಖೆ ಮುಂದುವರಿದಿದೆ. ಶೋಧ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಹಣಕಾಸಿನ ವ್ಯತ್ಯಾಸಗಳು ಅಥವಾ ತೆರಿಗೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ಹೆಚ್ಚಿನ ಮಾಹಿತಿ ಹೊರಬರುವ ಸಾಧ್ಯತೆಯಿದೆ.

ಇತ್ತ ರಾಕುಲ್ ಪ್ರೀತ್ ಸಿಂಗ್ ಅವರು ನಿರ್ಮಾಪಕ ಜಾಕಿ ಭಗ್ನಾನಿ ಅವರನ್ನು ವಿವಾಹವಾಗಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ಅವರು ಶೂರ್ಪಣಖಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ರವಿ ದುಬೆ ಲಕ್ಷ್ಮಣನಾಗಿ ಹಾಗೂ ಯಶ್ ರಾವಣನಾಗಿ ನಟಿಸುತ್ತಿದ್ದಾರೆ.

ವಶು ಭಗ್ನಾನಿ ಅವರ ನಿರ್ಮಾಣ ಸಂಸ್ಥೆಯೂ ಹಲವು ಪ್ರಮುಖ ಸಿನಿಮಾಗಳೊಂದಿಗೆ ಗುರುತಿಸಿಕೊಂಡಿದೆ. ಈ ನಡುವೆ ಐಟಿ ಶೋಧ ಕಾರ್ಯಾಚರಣೆ ಕುರಿತಂತೆ ರಾಕುಲ್ ಪ್ರೀತ್ ಸಿಂಗ್, ಜಾಕಿ ಭಗ್ನಾನಿ ಹಾಗೂ ವಶು ಭಗ್ನಾನಿ ಅವರಿಂದ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಒಟ್ಟಿನಲ್ಲಿ, ಚಿತ್ರರಂಗದ ಹಣಕಾಸಿನ ವ್ಯವಹಾರಗಳ ಮೇಲೆ ಐಟಿ ಇಲಾಖೆಯ ನಿಗಾ ಮತ್ತಷ್ಟು ಬಿಗಿಯಾಗಿರುವ ಬೆನ್ನಲ್ಲೇ ಈ ಶೋಧ ಕಾರ್ಯಾಚರಣೆ ನಡೆದಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಪ್ರಕರಣದ ಸಂಪೂರ್ಣ ಚಿತ್ರಣ ಸ್ಪಷ್ಟವಾಗಲಿದೆ.

 

Add Zee News as a Preferred Source
TAGS:
Cinema