• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮನವಿ

ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮನವಿ

Karnataka Ratna award Actor Ambareesh: ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ರಾಜ್ಯಾದ್ಯಂತ ಅಭಿಮಾನಿಗಳು ಹಾಗೂ ಗಣ್ಯರಿಂದ ತೀವ್ರ ಒತ್ತಾಯ ಕೇಳಿಬರುತ್ತಿದೆ.

Written ByRamya. R. Gowda
Published: Oct 06, 2026, 03:25 PM IST|Updated: Oct 06, 2026, 03:28 PM IST
joinshare
ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮನವಿ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
ಜಿಮ್ ಟ್ರೈನರ್ ಕೊ*ಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌ : ಎದೆ ಮೇಲೆ ಕಚ್ಚಿದ ಗುರುತು, ಬಾತ್‌ರೂಮ್‌ನಲ್ಲಿ ಒಟ್ಟಿಗೆ

ಜಿಮ್ ಟ್ರೈನರ್ ಕೊ*ಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌ : ಎದೆ ಮೇಲೆ ಕಚ್ಚಿದ ಗುರುತು, ಬಾತ್‌ರೂಮ್‌ನಲ್ಲಿ ಒಟ್ಟಿಗೆ

2

Train Ticket Booking: ದಶಕಗಳ ಹಿಂದಿನ ಪಿಎನ್‌ಆರ್‌ ನಿಯಮ ಬದಲಿಸಲು ಮುಂದಾದ ಭಾರತೀಯ ರೈಲ್ವೆ

3

ಆಧಾರ್ ಕಾರ್ಡ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ನಿಯಮ: 2026ರ ಹೊಸ SOP ಜಾರಿ

4

ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮನವಿ

5

ರಾಜಕೀಯ ಕೆಸರಾಟಕ್ಕೆ ಸಾಕ್ಷಿ ಆಗ್ತಿದೆ ಮನ್ಮುಲ್ ಹಗರಣ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Karnataka Ratna award Actor Ambareesh:ರೆಬಲ್ ಸ್ಟಾರ್ ದಿವಂಗತ ಅಂಬರೀಶ್‌ಗೆ ಮರಣೋತ್ತರ ಕರ್ನಾಟ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 

ಕನ್ನಡ ಚಿತ್ರರಂಗದ ದೈತ್ಯ ಪ್ರತಿಭೆ, ಜನಪ್ರಿಯ ನಟ ಹಾಗೂ ಮಾಜಿ ಕೇಂದ್ರ ರಾಜ್ಯ ಸಚಿವರಾಗಿದ್ದ ದಿವಂಗತ ಶ್ರೀ ಎಂ. ಹೆಚ್. ಅಂಬರೀಶ್ (ಮಂಡ್ಯದ ಗಂಡು) ಅವರು ನಾಡಿನ ಕಲೆ, ಸಾಹಿತ್ಯ ಹಾಗೂ ರಾಜಕೀಯ ರಂಗಕ್ಕೆ ನೀಡಿದ ನಿಸ್ಸಾರ ಸೇವೆ ಅಪಾರವಾದದ್ದು.ಅಂಬರೀಶ್ ಅವರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ, ತಮ್ಮ ವಿಶಿಷ್ಟ ಅಭಿನಯ ಶೈಲಿಯಿಂದ 'ರೆಬೆಲ್ ಸ್ಟಾರ್' ಆಗಿ ಕೋಟ್ಯಂತರ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ಚಿತ್ರರಂಗದ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಮತ್ತು ಕಲಾವಿದರ ಹಿತ ಕಾಯುವಲ್ಲ ಅವರು ಯಾವಾಗಲೂ ಮುಂಚೂಣಿಯಲ್ಲಿದ್ದರು.  ರಾಜಕೀಯ ರಂಗದಲ್ಲೂ ಶಾಸಕರಾಗಿ, ಸಂಸದರಾಗಿ, ರಾಜ್ಯ ಹಾಗೂ ಕೇಂದ್ರ ಸಚಿವರಾಗಿ ನಾಡಿನ ಅಭಿವೃದ್ಧಿಗೆ, ವಿಶೇಷವಾಗಿ ಮಂಡ್ಯ ಹಾಗೂ ಕಾವೇರಿ ಕೊಳ್ಳದ ರೈತರ ಹಿತರಕ್ಷಣೆಗೆ ಸದಾ ಶ್ರಮಿಸಿದ್ದಾರೆ.

ಅವರ ಕೊಡುಗೆ, ಜನಪ್ರಿಯತೆ ಹಾಗೂ ನಾಡಿನ ಮೇಲಿನ ಪ್ರೀತಿಯನ್ನು ಗೌರವಿಸಿ, ಅವರಿಗೆ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಕರ್ನಾಟಕ ರತ್ನ'ವನ್ನು (ಮರಣೋತ್ತರವಾಗಿ) ನೀಡಿ ಗೌರವಿಸುವುದು ಅತ್ಯಂತ ಸೂಕ್ತವಾಗಿದೆ ಎಂಬುದು ನನ್ನ ಹಾಗೂ ನಾಡಿನ ಸಮಸ್ತ ಜನತೆಯ ತೀವ್ರ ಆಶಯವಾಗಿದೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸರ್ಕಾರಕ್ಕೆ ಪತ್ರ ಈ ವಿಷಯವಾಗಿ ಅಖಿಲ ಕರ್ನಾಟಕ ನ್ಯಾಯ ನೀತಿ ಧರ್ಮ ಡಾ: ಅಂಬರೀಶ್ ‌ ಅಭಿಮಾನಿಗಳ ಸಂಘದವರು ನನಗೆ ಸಲ್ಲಿಸಿರುವ ಸ್ವಯಂವೇದ್ಯ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 
 

Add Zee News as a Preferred Source
TAGS:
Cinema