• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಎಷ್ಟು ಮುದ್ದಾಗಿದ್ದಾನೆ ನೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಪುತ್ರ!

ಎಷ್ಟು ಮುದ್ದಾಗಿದ್ದಾನೆ ನೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಪುತ್ರ!

ದಂಪತಿ ಹಂಚಿಕೊಂಡಿರುವ ಈ ಸುಂದರ ಚಿತ್ರ ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಫೋಟೋಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

Written ByChetana Devarmani
Published: Nov 08, 2026, 21:33 IST|Updated: Nov 08, 2026, 21:34 IST
joinshare
ಎಷ್ಟು ಮುದ್ದಾಗಿದ್ದಾನೆ ನೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಪುತ್ರ!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬಾಲಿವುಡ್‌ನ ಜನಪ್ರಿಯ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ವಿಶೇಷ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಮುದ್ದು ಮಗ ವಿಹಾನ್‌ನ ಮುಖವನ್ನು ಇದೇ ಮೊದಲ ಬಾರಿಗೆ ಸ್ಪಷ್ಟವಾಗಿ ತೋರಿಸುವ ಫ್ಯಾಮಿಲಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದಂಪತಿ ಹಂಚಿಕೊಂಡಿರುವ ಈ ಸುಂದರ ಚಿತ್ರ ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಫೋಟೋಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ಕತ್ರಿನಾ ಕೈಫ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ‘ನಮ್ಮ ಪಾಲಿನ ಅತ್ಯಂತ ಪ್ರಕಾಶಮಾನವಾದ ದೀಪಾವಳಿ ಇದು. ಎಲ್ಲರಿಗೂ ಪ್ರೀತಿ, ಬೆಳಕು ಮತ್ತು ಸಂತೋಷ ಸಿಗಲಿ’ ಎಂಬ ಹಾರೈಕೆಯೊಂದಿಗೆ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ. ವಿಶೇಷವೆಂದರೆ, ಮಗ ವಿಹಾನ್‌ನ ಮೊದಲ ಹುಟ್ಟುಹಬ್ಬದ ಮರುದಿನವೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಚಿತ್ರದಲ್ಲಿ ಕತ್ರಿನಾ, ವಿಕ್ಕಿ ಮತ್ತು ವಿಹಾನ್ ಮೂವರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕ್ರೀಮ್ ಬಣ್ಣದ ಕುರ್ತಾ-ಪೈಜಾಮ ಹಾಗೂ ಹಳದಿ ಬಣ್ಣದ ನೆಹರೂ ಜಾಕೆಟ್ ಧರಿಸಿರುವ ಪುಟ್ಟ ವಿಹಾನ್ ಕ್ಯಾಮೆರಾ ಕಡೆಗೆ ನಗುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದಾನೆ. ಹಳದಿ ಬಣ್ಣದ ಕಸೂತಿ ಉಡುಪಿನಲ್ಲಿ ಕಂಗೊಳಿಸುತ್ತಿರುವ ಕತ್ರಿನಾ ಮಗನನ್ನು ಪ್ರೀತಿಯಿಂದ ಹಿಡಿದುಕೊಂಡಿದ್ದಾರೆ. ಮತ್ತೊಂದೆಡೆ, ಕ್ರೀಮ್ ಬಣ್ಣದ ಕುರ್ತಾ ಧರಿಸಿರುವ ವಿಕ್ಕಿ ಮಗನ ಪಕ್ಕದಲ್ಲಿ ಕುಳಿತು ಸಂತಸದಿಂದ ಫೋಟೋಗೆ ಪೋಸ್ ನೀಡಿದ್ದಾರೆ.

ಕತ್ರಿನಾ ಮತ್ತು ವಿಕ್ಕಿ ದಂಪತಿಯ ಪುತ್ರ ವಿಹಾನ್‌ಗೆ ನವೆಂಬರ್ 7ರಂದು ಒಂದು ವರ್ಷ ತುಂಬಿದೆ. 2025ರ ನವೆಂಬರ್ 7ರಂದು ಈ ದಂಪತಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದರು. ಇದಕ್ಕೂ ಮುನ್ನ 2025ರ ಸೆಪ್ಟೆಂಬರ್‌ನಲ್ಲಿ ಕತ್ರಿನಾ ತಮ್ಮ ಗರ್ಭಧಾರಣೆಯ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.

ಮಗುವಿನ ಜನನದ ಬಳಿಕ ದಂಪತಿ ಆತನ ಖಾಸಗಿತನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಮಗನ ಮುಖವನ್ನು ಬಹಿರಂಗಪಡಿಸದೆ ಕೆಲವೊಮ್ಮೆ ಆತನ ಪುಟ್ಟ ಕೈಗಳ ಫೋಟೋಗಳನ್ನು ಮಾತ್ರ ಹಂಚಿಕೊಳ್ಳುತ್ತಿದ್ದರು. 2026ರ ಜನವರಿಯಲ್ಲಿ ಮಗನ ಪುಟ್ಟ ಕೈ ಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದ ಕತ್ರಿನಾ, ಆತನಿಗೆ ‘ವಿಹಾನ್ ಕೌಶಲ್’ ಎಂದು ಹೆಸರಿಟ್ಟಿರುವುದಾಗಿ ಅಧಿಕೃತವಾಗಿ ತಿಳಿಸಿದ್ದರು.

ವಿಹಾನ್ ಎಂಬ ಹೆಸರು ಕೇಳಿದಾಗ ಅಭಿಮಾನಿಗಳಿಗೆ ವಿಕ್ಕಿ ಕೌಶಲ್ ಅಭಿನಯದ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾ ನೆನಪಾಗುತ್ತಿದೆ. 2019ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರದಲ್ಲಿ ವಿಕ್ಕಿ ಅವರು ಮೇಜರ್ ವಿಹಾನ್ ಸಿಂಗ್ ಶೇರ್‌ಗಿಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ತಮ್ಮ ಮಗನಿಗೂ ವಿಹಾನ್ ಎಂದು ಹೆಸರಿಟ್ಟಿರುವುದರಿಂದ, ವಿಕ್ಕಿ ತಮ್ಮ ನೆಚ್ಚಿನ ಸಿನಿಮಾದ ಪಾತ್ರದ ಹೆಸರನ್ನೇ ಆಯ್ಕೆ ಮಾಡಿಕೊಂಡಿದ್ದಾರೆಯೇ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.

 

 

 

 

 

View this post on Instagram

 

 

 

 

 

 

 

 

 

 

 

A post shared by Katrina Kaif (@katrinakaif)


 

Add Zee News as a Preferred Source
TAGS:
Cinema