• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಮನರಂಜನೆ
  • /ಮದುವೆಯ ಫೋಟೋ ಹಂಚಿಕೊಂಡ ಅನಿರುದ್ಧ್ ರವಿಚಂದರ್ - ಕಾವ್ಯಾ ಮಾರನ್

ಮದುವೆಯ ಫೋಟೋ ಹಂಚಿಕೊಂಡ ಅನಿರುದ್ಧ್ ರವಿಚಂದರ್ - ಕಾವ್ಯಾ ಮಾರನ್

Kavya Maran Anirudh Ravichander Wedding : ಗ್ರೀಸ್‌ನಲ್ಲಿ ಅದ್ಧೂರಿಯಾಗಿ ನಡೆದ ವಿವಾಹ ಸಮಾರಂಭದ ಸುಂದರ ಕ್ಷಣಗಳನ್ನು ಅನಿರುದ್ಧ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Written ByChetana Devarmani
Published: Nov 11, 2026, 22:51 IST|Updated: Nov 11, 2026, 22:52 IST
joinshare
ಮದುವೆಯ ಫೋಟೋ ಹಂಚಿಕೊಂಡ ಅನಿರುದ್ಧ್ ರವಿಚಂದರ್ - ಕಾವ್ಯಾ ಮಾರನ್

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Kavya Maran Anirudh Ravichander Wedding : ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಒಡತಿ, ಸನ್ ಗ್ರೂಪ್ ಮುಖ್ಯಸ್ಥ ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗ್ರೀಸ್‌ನಲ್ಲಿ ಅದ್ಧೂರಿಯಾಗಿ ನಡೆದ ವಿವಾಹ ಸಮಾರಂಭದ ಸುಂದರ ಕ್ಷಣಗಳನ್ನು ಅನಿರುದ್ಧ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ನವಜೋಡಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಅನಿರುದ್ಧ್ ತಮ್ಮ ಮದುವೆಯ ಫೋಟೋಗಳೊಂದಿಗೆ ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ. ‘ನನ್ನ ಜೀವನದ ಏಕೈಕ ಮತ್ತು ಜೀವಮಾನದ ಪಯಣ (11.11)’ ಎಂಬ ಶೀರ್ಷಿಕೆಯ ಮೂಲಕ ತಮ್ಮ ಹೊಸ ಜೀವನದ ಆರಂಭವನ್ನು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.

ಗ್ರೀಸ್‌ನಲ್ಲಿ ಎರಡು ದಿನಗಳ ಅದ್ಧೂರಿ ವಿವಾಹ ಸಮಾರಂಭ

ನವೆಂಬರ್ 10 ಮತ್ತು 11ರಂದು ಯುರೋಪ್‌ನ ಗ್ರೀಸ್‌ನಲ್ಲಿ ಈ ಜೋಡಿಯ ವಿವಾಹದ ವಿವಿಧ ಕಾರ್ಯಕ್ರಮಗಳು ನಡೆದಿವೆ ಎಂದು ವರದಿಯಾಗಿದೆ. ಕುಟುಂಬದ ಆಪ್ತರು, ಚಿತ್ರರಂಗದ ಗಣ್ಯರು ಹಾಗೂ ವಿಶೇಷ ಅತಿಥಿಗಳನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿತ್ತು. ಅತಿಥಿಗಳಿಗಾಗಿ ವಿಶೇಷ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು ಎನ್ನಲಾಗಿದೆ.

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಸೇರಿದಂತೆ ಹಲವು ಗಣ್ಯರು ಹಾಗೂ ರಾಜಕೀಯ ಕ್ಷೇತ್ರದ ಪ್ರಮುಖರು ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ವಿಶೇಷ ಉಡುಗೆಯಲ್ಲಿ ಮಿಂಚಿದ ನವಜೋಡಿ

ಮದುವೆಯ ಸಂದರ್ಭದಲ್ಲಿ ಅನಿರುದ್ಧ್ ಮತ್ತು ಕಾವ್ಯಾ ಇಬ್ಬರೂ ವಿಭಿನ್ನ ಉಡುಗೆಗಳಲ್ಲಿ ಕಂಗೊಳಿಸಿದ್ದಾರೆ. ಅನಿರುದ್ಧ್ ಕ್ರೀಮ್ ಹಾಗೂ ಬೀಜ್ ಬಣ್ಣದ ಕುರ್ತಾ ಜೊತೆಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಜಾಕೆಟ್ ಧರಿಸಿದ್ದರು. ಇತ್ತ ಕಾವ್ಯಾ ಮಾರನ್ ರೋಸ್ ಪಿಂಕ್ ಬಣ್ಣದ ಗೌನ್‌ನಲ್ಲಿ ಮಿಂಚಿದ್ದು, ಅದರ ಮೇಲಿನ ಬೆಳ್ಳಿಯ ಹೂವಿನ ಎಂಬ್ರಾಯ್ಡರಿ ವಿನ್ಯಾಸ ಅವರ ಉಡುಗೆಯ ಸೌಂದರ್ಯವನ್ನು ಹೆಚ್ಚಿಸಿತ್ತು.

ನವೆಂಬರ್ 21ರಂದು ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ

ಗ್ರೀಸ್‌ನಲ್ಲಿ ವಿವಾಹ ಸಮಾರಂಭ ಮುಗಿಸಿರುವ ಈ ಜೋಡಿಗೆ ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ನವೆಂಬರ್ 21ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ ಚಿತ್ರರಂಗ, ಉದ್ಯಮ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ಇತ್ತೀಚೆಗೆ ಸನ್ ಗ್ರೂಪ್ ಮುಖ್ಯಸ್ಥ ಕಲಾನಿಧಿ ಮಾರನ್ ಮತ್ತು ಕಾವೇರಿ ಮಾರನ್ ಅವರು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಆರತಕ್ಷತೆಗೆ ಆಹ್ವಾನಿಸಿದ್ದರು ಎನ್ನಲಾಗಿದೆ.

ಅನಿರುದ್ಧ್ ಹಂಚಿಕೊಂಡಿರುವ ಮದುವೆಯ ಫೋಟೋಗಳಿಗೆ ಅಭಿಮಾನಿಗಳು ಮಾತ್ರವಲ್ಲದೆ ಹಲವು ಸಿನಿಮಾ ಸೆಲೆಬ್ರಿಟಿಗಳೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ತಮ್ಮ ಸಂಗೀತದ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ರಂಜಿಸಿರುವ ಅನಿರುದ್ಧ್ ಇದೀಗ ಜೀವನದ ಹೊಸ ಅಧ್ಯಾಯ ಆರಂಭಿಸಿದ್ದು, ಅವರ ವೈವಾಹಿಕ ಜೀವನ ಸುಖಮಯವಾಗಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

Add Zee News as a Preferred Source
TAGS:
Cinema