SOCIAL MEDIA

Newsletter

PARTNER SITES
Select Language Select State

bigg boss kannada elimination: ಹುಟ್ಟುಹಬ್ಬದ ದಿನವೇ ಬಿಗ್‌ ಬಾಸ್‌ನಿಂದ ಮಂಜನಿಗೆ ಗೇಟ್‌ಪಾಸ್‌

bigg boss kannada elimination:ಸಹಸ್ಪರ್ಧಿಗಳ ಜೊತೆ ಜಗಳವಾಡುವ ಸಂದರ್ಭದಲ್ಲಿ ಅಸಭ್ಯ ಭಾಷೆ ಬಳಸಿದ್ದ ಮಂಜಗೆ ಬಿಗ್ ಬಾಸ್ ಖಡಕ್ ಆದೇಶ ನೀಡಿದ್ದಾರೆ. ಈ ಕುರಿತ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

Written By Chetana Devarmani
Published: Oct 11, 2026, 11:47 AM IST | Updated: Oct 11, 2026, 11:48 AM IST
Join

Bigg Boss Kannada Season 13: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಸ್ಪರ್ಧಿ ಮಂಜ ಅವರ ವರ್ತನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೀಗ ಅವರನ್ನು ಮನೆಯಿಂದ ಹೊರಗೆ ಕಳುಹಿಸಲಾಗಿದೆ. ವಿಪರ್ಯಾಸ ಎಂದರೆ ಮಾಡರನ್‌ ಮಹಾಕವಿ ಮಂಜ ಅವರ ಹುಟ್ಟು ಹಬ್ಬದಂದೇ ಇಂಥದ್ದೊಂದು ಶಾಕ್‌ ನೀಡಲಾಗಿದೆ. ಸಹಸ್ಪರ್ಧಿಗಳ ಜೊತೆ ಜಗಳವಾಡುವ ಸಂದರ್ಭದಲ್ಲಿ ಅಸಭ್ಯ ಭಾಷೆ ಬಳಸಿದ್ದ ಮಂಜಗೆ ಬಿಗ್ ಬಾಸ್ ಖಡಕ್ ಆದೇಶ ನೀಡಿದ್ದಾರೆ. ಈ ಕುರಿತ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಜಗಳ, ವಾಗ್ವಾದಗಳು ಹೆಚ್ಚಾಗುತ್ತಿವೆ. ಟಾಸ್ಕ್‌ಗಳ ವಿಚಾರವಾಗಿ ಆರಂಭವಾಗುವ ಮಾತಿನ ಚಕಮಕಿ ಕೆಲವೊಮ್ಮೆ ವೈಯಕ್ತಿಕ ನಿಂದನೆಗಳ ಹಂತಕ್ಕೂ ತಲುಪುತ್ತಿದೆ. ಅದರಲ್ಲೂ ಮಂಜ ಅವರು ಯಶಸ್, ಸೌಂದರ್ಯಾ ಶೆಟ್ಟಿ ಸೇರಿದಂತೆ ಇತರ ಸ್ಪರ್ಧಿಗಳ ಜೊತೆ ಜಗಳವಾಡುವಾಗ ಕೀಳುಮಟ್ಟದ ಭಾಷೆ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಮಂಜ ಅವರ ಈ ವರ್ತನೆಗೆ ಮನೆಯೊಳಗೆ ಮಾತ್ರವಲ್ಲದೆ ವೀಕ್ಷಕರಿಂದಲೂ ವಿರೋಧ ವ್ಯಕ್ತವಾಗಿತ್ತು. ಇದೀಗ ಬಿಗ್ ಬಾಸ್ ಈ ವಿಚಾರದಲ್ಲಿ ಕಠಿಣ ನಿರ್ಧಾರ ಕೈಗೊಂಡಿರುವುದನ್ನು ಪ್ರೋಮೋದಲ್ಲಿ ತೋರಿಸಲಾಗಿದೆ.

ಮನೆಯ ಸದಸ್ಯರ ಜೊತೆ ವಾಗ್ವಾದ ನಡೆಸುವಾಗ ಮಂಜ ಅಸಭ್ಯವಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಬಿಗ್ ಬಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದ ನಂತರವೂ ಮನೆಯ ಸದಸ್ಯರ ವ್ಯಕ್ತಿತ್ವದ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪ್ರೋಮೋದಲ್ಲಿ ಬಿಗ್ ಬಾಸ್, ಮನೆಯ ನಿಯಮಗಳನ್ನು ಉಲ್ಲಂಘಿಸುವ ವರ್ತನೆಯನ್ನು ಸಹಿಸುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಸ್ಪರ್ಧಿಗಳು ತಮ್ಮ ಮಾತು ಮತ್ತು ನಡವಳಿಕೆಯ ಮೇಲೆ ನಿಯಂತ್ರಣ ಹೊಂದಿರಬೇಕು ಎಂಬುದನ್ನು ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಲಾಗಿದೆ.

ಮಂಜ ಅವರ ವರ್ತನೆಯ ಕುರಿತು ಬಿಗ್ ಬಾಸ್ ಕಠಿಣ ಎಚ್ಚರಿಕೆ ನೀಡಿದ್ದು, ಮನೆಯ ಮೂಲ ನಿಯಮ ಉಲ್ಲಂಘಿಸಿದ ಕಾರಣದಿಂದ ಅವರನ್ನು ಹೊರಗೆ ಕಳುಹಿಸುವ ಆದೇಶ ನೀಡಿದ್ದಾರೆ ಎಂದು ಪ್ರೋಮೋದಲ್ಲಿ ತೋರಿಸಲಾಗಿದೆ. ಇದರ ಬೆನ್ನಲ್ಲೇ ಬಿಗ್ ಬಾಸ್ ಮನೆಯ ಮುಖ್ಯದ್ವಾರ ತೆರೆಯಲಾಗಿದ್ದು, ಮಂಜ ಆ ದ್ವಾರದ ಮೂಲಕ ಹೊರಗೆ ತೆರಳಿದ್ದಾರೆ. ಈ ದೃಶ್ಯ ಇದೀಗ ಬಿಗ್ ಬಾಸ್ ವೀಕ್ಷಕರ ಗಮನ ಸೆಳೆದಿದೆ.

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಜಗಳ ನಡೆಯುವುದು ಸಾಮಾನ್ಯವಾದರೂ, ಅಸಭ್ಯ ಭಾಷೆ ಮತ್ತು ವೈಯಕ್ತಿಕ ನಿಂದನೆಗಳಿಗೆ ಅವಕಾಶವಿದೆಯೇ ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಮಂಜ ಅವರನ್ನು ಹೊರಗೆ ಕಳುಹಿಸಿರುವ ಕ್ರಮವು ಮನೆಯ ನಿಯಮಗಳ ಪಾಲನೆಯ ಮಹತ್ವವನ್ನು ಎತ್ತಿ ತೋರಿಸಿದೆ.  
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES